Breaking News

Uncategorized

ಡಿ.1 ರಿಂದ ಬೆಂಬಲ ಬೆಲೆಯಡಿ ಮಡಿಕೇರಿಯಲ್ಲಿ ಭತ್ತ ಖರೀದಿ ಪ್ರಕ್ರಿಯೆ ಆರಂಭ: ಜಿಲ್ಲಾಧಿಕಾರಿ

ಮಡಿಕೇರಿ: ಡಿ.1ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಜಿಲ್ಲೆಯ 5 ಕಡೆಗಳಲ್ಲಿ ಆರಂಭವಾಗಲಿದೆ. ಮಡಿಕೇರಿ, ಕುಶಾಲನಗರ, ಗೋಣಿಕೊಪ್ಪ ಹಾಗೂ ಸೋಮವಾರಪೇಟೆಯ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಹಾಗೂ ವಿರಾಜಪೇಟೆ ಪಟ್ಟಣದಲ್ಲಿ ಖರೀದಿ ಕೇಂದ್ರ ತೆರೆಯಲು ಇಲ್ಲಿ ಗುರುವಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಪಡೆ ಸಮಿತಿ ಸಭೆ ನಿರ್ಧರಿಸಿತು. ಸಾಮಾನ್ಯ ಭತ್ತ ಪ್ರತಿ ಕ್ವಿಂಟಲ್‌ಗೆ ₹ 2,300 ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್‌ಗೆ ₹ 4,290 …

Read More »

ನಬಾರ್ಡ್ ಅಲ್ಪಾವಧಿ ಕೃಷಿ ಸಾಲದ ಮಿತಿ ಹೆಚ್ಚಿಸಲು ಸಾಧ್ಯವಿಲ್ಲ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ನವದೆಹಲಿ: ನಬಾರ್ಡ್‌ನಿಂದ ರಿಯಾಯಿತಿ ಬಡ್ಡಿದರದಲ್ಲಿ ನೀಡಲಾಗುವ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ನಿಯೋಗವು ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ಕೃಷಿಗೆ ನೆರವು ನೀಡುವ ಉದ್ದೇಶಕ್ಕಾಗಿ ಸಹಕಾರಿ ಸಂಸ್ಥೆಗಳಿಗೆ ನೀಡುವ ಸಾಲದ ಮೊತ್ತವನ್ನು ನಬಾರ್ಡ್‌ ಕಡಿತಗೊಳಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಸಾಲದ ಮೊತ್ತವನ್ನು ಹೆಚ್ಚಿಸುವಂತೆಯೂ ಮನವಿ ಸಲ್ಲಿಸಿತು. ರಾಷ್ಟ್ರೀಕೃತ ಬ್ಯಾಂಕ್‌ಗಳು ಜನರಿಗೆ …

Read More »

ಅಂಗವಿಕಲರ ಕಲ್ಯಾಣ ಯೋಜನೆಗಳಿಗೆ ಶೇ.5 ರಷ್ಟು ಅನುದಾನ ಕಡ್ಡಾಯವಾಗಿ ಬಳಸಬೇಕು

ಬೀದರ್: ಸರ್ಕಾರದ ಆದೇಶದಂತೆ ಎಲ್ಲ ಇಲಾಖೆಗಳಲ್ಲಿ ಶೇ 5 ರಷ್ಟು ಅನುದಾನ ಕಡ್ಡಾಯವಾಗಿ ಅಂಗವಿಕಲರ ಕಲ್ಯಾಣ ಯೋಜನೆಗಳಿಗೆ ಬಳಸಬೇಕು ಎಂದು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ವಿವಿಧ ಇಲಾಖೆಗಳ ಅಂಗವಿಕಲರ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗದಲ್ಲಿಯೂ ಅಂಗವಿಕಲರಿಗೆ ಶೇ 5ರಷ್ಟು ಮೀಸಲಿಡಬೇಕು. ಕೇಂದ್ರ ಸರ್ಕಾರದ …

Read More »

ವೈವಾಹಿಕ ಸಂಬಂಧ ಫಲಪ್ರದವಾಗದಿದ್ದಾಗ ಕ್ರಿಮಿನಲ್ ವಿಚಾರಣೆ ಪ್ರಾರಂಭಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ : ಆರಂಭಿಕ ಹಂತಗಳಲ್ಲಿ ಪಕ್ಷಗಳ ನಡುವಿನ ಒಮ್ಮತದ ಸಂಬಂಧವು ವಿವಾಹವಾಗಿ ಫಲಪ್ರದವಾಗದಿದ್ದಾಗ ಅಪರಾಧದ ಬಣ್ಣವನ್ನ ನೀಡಲು ಸಾಧ್ಯವಿಲ್ಲ. ಇನ್ನು ಸಮ್ಮತಿಸುವ ದಂಪತಿಗಳ ನಡುವಿನ ಸಂಬಂಧವನ್ನ ಮುರಿಯುವುದರಿಂದ ಕ್ರಿಮಿನಲ್ ವಿಚಾರಣೆಯನ್ನು ಪ್ರಾರಂಭಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಎನ್.ಕೋಟಿಶ್ವರ್ ಸಿಂಗ್ ಅವರ ನ್ಯಾಯಪೀಠವು ಪ್ರಶಾಂತ್ ವಿರುದ್ಧ 2019 ರ ಎಫ್‌ಐಆರ್ ಮತ್ತು ಕ್ರಿಮಿನಲ್ ವಿಚಾರಣೆಯನ್ನು ರದ್ದುಗೊಳಿಸಿತು. ಪಕ್ಷಗಳ ನಡುವಿನ ಸಂಬಂಧವು ಸೌಹಾರ್ದಯುತ ಮತ್ತು ಒಮ್ಮತದ …

Read More »

2ನೇ ಬೆಳೆಗೆ ಮಾರ್ಚ್ ಅಂತ್ಯದವರೆಗೆ ತುಂಗಭದ್ರ ನೀರು ಒದಗಿಸಲು ತೀರ್ಮಾನ: ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಕುಡಿಯುವ ನೀರು ಸೇರಿದಂತೆ ಹಿಂಗಾರು ಹಂಗಾಮಿನ ಬೆಳೆಗಳಿಗೆ ಮಾರ್ಚ್ ಅಂತ್ಯದವರೆಗೆ ನೀರು ಒದಗಿಸಲು ತುಂಗಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಸಚಿವ ಶಿವರಾಜ್ ತಂಗಡಗಿ ಅವರು ತಿಳಿಸಿದ್ದಾರೆ. ವಿಕಾಸಸೌಧಲ್ಲಿ ಇಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಎರಡನೇ ಬೆಳೆಗೆ ಮಾರ್ಚ್ ತಿಂಗಳ ಅಂತ್ಯದವರೆಗೆ ನೀರು ಒದಗಿಸಲು …

Read More »

ನೂತನ ಮಹಾ ಲೆಕ್ಕ ಪರಿಶೋಧಕ, ಮಹಾಲೇಖಪಾಲರಾಗಿ ಸಂಜಯ್ ಮೂರ್ತಿ ಅಧಿಕಾರ ಸ್ವೀಕಾರ

ನವದೆಹಲಿ: ನೂತನ ಮಹಾ ಲೆಕ್ಕ ಪರಿಶೋಧಕ ಮತ್ತು ಮಹಾಲೇಖಪಾಲರಾಗಿ (ಸಿಎಜಿ) ಕೆ. ಸಂಜಯ್‌ ಮೂರ್ತಿ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದ್ದಾರೆ ಎಂದು ರಾಷ್ಟ್ರಪತಿ ಕಚೇರಿ ತಿಳಿಸಿದೆ. 1989ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಅವರು, ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಸಿಎಜಿ ಗಿರೀಶ್‌ ಚಂದ್ರ ಮುರ್ಮು ಅವರ ಅಧಿಕಾರಾವಧಿ ಬುಧವಾರ ಮುಕ್ತಾಯಗೊಂಡಿದೆ. ಹಾಗಾಗಿ, ಕೇಂದ್ರ …

Read More »

ಬ್ಯಾಂಕ್ ಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಕಾರಜೋಳ ಅಸಮಾಧಾನ

ಚಿತ್ರದುರ್ಗ: ಸರ್ಕಾರ ಬಡವರಿಗಾಗಿ ರೂಪಿಸಿರುವ ಸಹಾಯಧನ ಹಾಗೂ ಸಾಲ ಸೌಲಭ್ಯದ ಸ್ಕೀಂಗಳನ್ನು ಜಾರಿ ಮಾಡುವಲ್ಲಿ ನಿರ್ಲಕ್ಷ್ಯ ತೋರುವ ಬ್ಯಾಂಕುಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ ಅಸಮಾಧಾನ ವ್ಯಕ್ತಪಡಿಸಿದರು. ಇದೇ ಪರಿಸ್ಥಿತಿ ಮುಂದುವರೆದರೆ ಸಂಬಂಧಪಟ್ಟ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆಯುವುದಾಗಿ ಅವರು ಎಚ್ಚರಿಸಿದರು. ನಗರದ ಜಿ.ಪಂ. ಸಭಾಂಗಣದಲ್ಲಿ ಇಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನೇತೃತ್ವದಲ್ಲಿ ಜರುಗಿದ ಸಲಹಾ ಸಮಿತಿ ಹಾಗೂ …

Read More »

ಪರಿವರ್ತಿತ, ಅಭಿವೃದ್ದಿಗೊಳ್ಳದ ಭೂಮಿ ನೋಂದಣಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ಪರಿವರ್ತಿತ ಹಾಗೂ ಅಭಿವೃದ್ಧಿಗೊಳ್ಳದ ಭೂಮಿಯನ್ನು ಆರ್ಟಿಸಿ ಆಧಾರದಲ್ಲಿ ನೋಂದಣಿ ಮಾಡುವ ಹಾಗೂ ಸಂಬಂಧಿತ ಯೋಜನಾ ಪ್ರಾಧಿಕಾರದಿಂದ ಅನುಮೋದಿತ ಬಡಾವಣೆಗಳಲ್ಲಿನ ರಸ್ತೆ, ಉದ್ಯಾನವನ ಹಾಗೂ ಆಟದ ಮೈದಾನಗಳಿಗೂ ಇ-ಖಾತಾ ಮಾಡಿಕೊಳ್ಳುವ ಸಂಬಂಧ ಇದ್ದ ಕೆಲ ಗೊಂದಲಗಳಿಗೆ ಪರಿಹಾರ ನೀಡಲಾಗಿದೆ. ಕಂದಾಯ ಇಲಾಖೆ, ಗ್ರಾಮೀಣ ಅಭಿವೃದ್ಧಿ- ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ-ಪೌರಾಡಳಿತ ಇಲಾಖೆ ಒಟ್ಟಾಗಿ ಕೆಲವು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುವ ಮೂಲಕ ನಗರ ಅಭಿವೃದ್ಧಿಗೆ ಸಂಬಂಧಿಸಿ ಇ-ಖಾತಾ ಹಾಗೂ ನೋಂದಣಿಗೆ …

Read More »

ಕ್ಷೇತ್ರದ ಶಾಸಕರು ಶೇ.40 ಕಮಿಷನ್ ಪಡೆಯುವ ದಂಧೆಯಲ್ಲಿ ತೊಡಗಿದ್ದಾರೆ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಆರೋಪ

ಕೊಟ್ಟೂರು: ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಬಹುತೇಕ ಅಭಿವೃದ್ಧಿ ಕಾಮಗಾರಿಗಳನ್ನು ಯಾವುದೇ ಇಲಾಖೆಗೆ ವಹಿಸಿದೇ ಕರ್ನಾಟಕ ನೇರವಾಗಿ ರಾಜ್ಯ ಹ್ಯಾಬಿಟೆಡ್ ಸಂಸ್ಥೆಗೆ ವಹಿಸಿ ಮೂಲಕ ಶೇ.40 ಕಮೀಷನ್ ಪಡೆಯುವ ದಂಧೆಯಲ್ಲಿ ಕ್ಷೇತ್ರದ ಶಾಸಕರು ತೊಡಗಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಎಸ್.ಭೀಮಾನಾಯ್ಕ ಆರೋಪಿಸಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ನಾನಾ ಯೋಜನೆಯಡಿ ಮಂಜೂರಾದ ಅಭಿವೃದ್ಧಿ ಕಾಮಗಾರಿಗಳನ್ನು ಯಾವುದೇ ಇಲಾಖೆಯಿಂದ ಟೆಂಡರ್‌ ಮೂಲಕ ಗುತ್ತಿಗೆದಾರರಿಗೆ ನೀಡದೇ ನೇರವಾಗಿ ಹ್ಯಾಬಿಟೆಡ್ ಸಂಸ್ಥೆಗೆ ನೀಡಿ ಅವರಿಂದ ಶೇ.40 ಕಮೀಷನ್ ದಂಧೆಗೆ …

Read More »

ರಷ್ಯಾದಿಂದ ಮೊದಲ ಬಾರಿಗೆ ಉಕ್ರೇನ್ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ

ಉಕ್ರೇನ್: ರಷ್ಯಾ-ಉಕ್ರೇನ್ ನಡುವಿನ ಯುದ್ಧವನ್ನು ಅಂತ್ಯಗೊಳಿಸಲು ಭಾರತ ಸೇರಿದಂತೆ ಕೆಲವು ದೇಶಗಳು ಪ್ರಯತ್ನಿಸುತ್ತಲೇ ಇವೆ. ಭಾರತ ಶಾಂತಿಯುತ ಮಾತುಕತೆಯ ಮೂಲಕ ಸಂಘರ್ಷಕ್ಕೆ ಅಂತ್ಯ ಹಾಡಲು ಹಲವು ಬಾರಿ ಮನವಿ ಮಾಡಿದೆ. ಅಮೆರಿಕ, ಫ್ರಾನ್ಸ್ ಸೇರಿದಂತೆ ಇತರೆ ದೇಶಗಳು ಕೂಡ ಇದಕ್ಕೆ ಧ್ವನಿ ಸೇರಿಸಿದ್ದವು. ಆದರೆ, ಈ ಎರಡು ರಾಷ್ಟ್ರಗಳ ಯುದ್ಧ ಭೀಕರ ಹಂತಕ್ಕೆ ಹೋಗಿದ್ದು, ರಷ್ಯಾ ಮೊದಲ ಬಾರಿಗೆ ಉಕ್ರೇನ್ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ಅಥವಾ ಐಸಿಬಿಎಂ ಪ್ರಯೋಗ ಮಾಡಿದೆ. …

Read More »