Breaking News

Uncategorized

ರಾಜ್ಯ ಸರ್ಕಾರದ ಅಲ್ಪಾವಧಿ ಕೃಷಿ ಸಾಲದ ಮಿತಿ ಹೆಚ್ಚಿಸುವಂತೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಮನವಿ

ಬೆಂಗಳೂರು: ಕರ್ನಾಟಕ ರಾಜ್ಯಸರ್ಕಾರದ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಕಳೆದ ಆರು ವರ್ಷದ ಕೃಷಿ ಸಾಲದ ವಹಿವಾಟನ್ನು ನಿರ್ವಹಿಸಿದ್ದಾರೆ. 2024-25ನೇ ಸಾಲಿನಲ್ಲಿ 9,162 ಕೋಟಿ ರೂ.ಗಳ ರಿಯಾಯಿತಿ ಸಾಲದ ಮಿತಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ನಬಾರ್ಡ್‌ 2,340 ಕೋಟಿ ರೂ.ಗಳಿಗೆ ಮಾತ್ರ ಅನುಮೋದನೆ ನೀಡಿದೆ. ಇದು …

Read More »

ಬಿಪಿಎಲ್ ಕಾರ್ಡ್ ಫಲಾನುಭವಿಗಳ ಅರ್ಹರ ಹೆಸರು ಪುನರ್ ಸೇರ್ಪಡೆ: ರಾಜ್ಯ ಆಹಾರ ಆಯೋಗ

ಮಂಡ್ಯ: ಬಿಪಿಎಲ್ ಕಾರ್ಡ್‍ದಾರರ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳ ಹೆಸರು ಕೈಬಿಟ್ಟು ಹೋಗಿದ್ದು, ಇನ್ನೊಂದು ವಾರದ ಒಳಗೆ ಅವರ ಹೆಸರುಗಳನ್ನು ಪುನರ್ ಸೇರ್ಪಡೆ ಮಾಡಲಾಗುವುದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಗರದಲ್ಲಿ ಸ್ವಂತ ಮನೆಯುಳ್ಳವರು, ಕಾರು ಹೊಂದಿರುವವರು, ಆದಾಯ ತೆರಿಗೆ ಪಾವತಿಸುವ ಲಕ್ಷಾಂತರ ಜನರು ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿದ್ದರು. ಇಂಥವರನ್ನು ಅನರ್ಹಗೊಳಿಸುವ ಸಂದರ್ಭದಲ್ಲಿ ಕೆಲ ಅರ್ಹ ಫಲಾನುಭವಿಗಳ ಹೆಸರುಗಳು ಸಹ ಬಿಪಿಎಲ್ …

Read More »

ಯಾವುದೇ ಪಡಿತರ ಚೀಟಿ ರದ್ದು ಪಡಿಸದಂತೆ ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಅನರ್ಹ ಬಿಪಿಎಲ್‌ ಪಡಿತರ ಚೀಟಿಗಳ ರದ್ದತಿ ಸಂಬಂಧ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕ್ರಮ ಕೈಗೊಂಡಿರುವುದು ಬಿಜೆಪಿಗೆ ರಾಜಕೀಯ ಅಸ್ತ್ರವಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಕಾಂಗ್ರೆಸ್‌ ಸರ್ಕಾರ ಯಾವುದೆ ಪಡಿತರ ಚೀಟಿ ರದ್ದು ಪಡಿಸದಂತೆ ಆದೇಶ ನೀಡಿದೆ. ಇಂದು ಬೆಳಿಗ್ಗೆ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿ ಸಚಿವಾಲಯ “ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ,” ಸ್ಪಷ್ಟ ಸೂಚನೆ …

Read More »

ಗಯಾನಾದ ಸಂಸತ್ತಿನಲ್ಲಿ ಅಧಿವೇಶನವನ್ನುದ್ದೇಶಿಸಿ ಪ್ರಧಾನಿ ಮೋದಿ ವಿಶೇಷ ಭಾಷಣ

ಗಯಾನಾ: ಪ್ರಧಾನಿ ನರೇಂದ್ರ ಮೋದಿ ಗಯಾನಾ ಪ್ರವಾಸದಲ್ಲಿದ್ದಾರೆ, ಇಂದು ಗಯಾನಾದ ಸಂಸತ್ತಿನಲ್ಲಿ ವಿಶೇಷ ಅಧಿವೇಶನವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ವಿದೇಶಿ ರಾಷ್ಟ್ರಗಳ ಸಂಸತ್ತಿನಲ್ಲಿ ಭಾರತದ ಜನರ ಪರವಾಗಿ ಮಾಡುತ್ತಿರುವ 14 ಭಾಷಣ ಇದಾಗಿದೆ. ವಿದೇಶಿ ಸಂಸತ್ತುಗಳಿಗೆ ಅತಿ ಹೆಚ್ಚು ಭಾಷಣ ಮಾಡಿದ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮನಮೋಹನ್​ ಸಿಂಗ್ ವಿದೇಶಿ ಸಂಸತ್ತುಗಳಲ್ಲಿ 7 ಬಾರಿ ಭಾಷಣ ಮಾಡಿದ್ದರು. ಇಂದಿರಾಗಾಂಧಿ ವಿದೇಶಿ ಶಾಸಕರನ್ನು ಉದ್ದೇಶಿಸಿ ನಾಲ್ಕು …

Read More »

ಪಿಡಿಒ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಕೆಪಿಎಸ್‌ಸಿ ಸ್ಪಷ್ಟನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗಳ ನೇಮಕಾತಿಗೆ ನವೆಂಬರ್ 17ರಂದು ನಡೆದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ಕಾರ್ಯದರ್ಶಿ ರಮಣದೀಪ್ ಚೌಧರಿ ತಿಳಿಸಿದ್ದಾರೆ. ಈ ಬಗ್ಗೆ ನಡೆಸಲಾದ ಪ್ರಾಥಮಿಕ ವಿಚಾರಣೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎನ್ನುವ ಅಂಶ ತಿಳಿದು ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರಿನ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆ …

Read More »

ಇಂದು ಚಾಕಲಬ್ಬಿ ಗ್ರಾಮದಲ್ಲಿ ಖಾಲಿ ಗಾಡಿ ಓಡಿಸುವ ಸ್ಪರ್ಧೆ

ಕುಂದಗೋಳ : ಚಾಕಲಬ್ಬಿ ಗ್ರಾಮದಲ್ಲಿ ಎರಡನೇ ಬಾರಿ ಖಾಲಿ ಗಾಡಾ ಓಡಿಸುವ ಭಾರಿ ಷರತ್ತು ನಾಳೆ ನವೆಂಬರ್ 21 ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಖಾಲಿ ಗಾಡಾ ಓಡಿಸುವ ಸ್ಪರ್ಧೆ ಸರ್ಕಾರಿ ಶಾಲೆಯ ಹಿಂಭಾಗದಲ್ಲಿ ಪೋಲಿಸಗೌಡ್ರ ಇವರ ಜಮೀನಿನಲ್ಲಿ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಜೋಡೆತ್ತಿಗೆ ಪ್ರಥಮ 50 ಸಾವಿರ ದ್ವಿತೀಯ 40 ಸಾವಿರ ತೃತೀಯ 30 ಸಾವಿರ ಚತುರ್ಥ 25 ಸಾವಿರ ಸೇರಿ ಕ್ರಮವಾಗಿ 20 ಬಹುಮಾನಗಳಿವೆ.

Read More »

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ಶೀಘ್ರವೇ 15 ಸಾವಿರ ಹುದ್ದೆಗಳ ನೇಮಕಾತಿ

ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಶೀಘ್ರವೇ 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಮೂಲಕ ಮಾಹಿತಿ ನೀಡಿರುವ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದ ಕಾಲೇಜುಗಳಲ್ಲಿ 800 ವಿಜ್ಞಾನ ಉಪನ್ಯಾಸಕರ ಹುದ್ದೆಗಳು ಹಾಗೂ 15000 ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ …

Read More »

ಮಹಾರಾಷ್ಟ್ರದಲ್ಲಿ ನಮಗೆ ಒಳ್ಳೆಯ ರಿಸ್ಪಾನ್ಸ್ ಇದೆ : ಶೆಟ್ಟರ್

ಹುಬ್ಬಳ್ಳಿ: ಮಹಾರಾಷ್ಟ್ರ, ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ವಿಧಾನ ಸಭೆಯ ಮತದಾನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಂಸದ ಜಗದೀಶ್ ಶೆಟ್ಟರ್, ಮಹಾರಾಷ್ಟ್ರದಲ್ಲಿ ನಮಗೆ ಒಳ್ಳೆಯ ರಿಸ್ಪಾನ್ಸ್ ಇದೆ ಎಂದಿದ್ದಾರೆ. ನಾನು ಎರಡು ದಿನಗಳ ಕಾಲ ಮಹಾರಾಷ್ಟ್ರದ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದೇನೆ. ಜತ್ತ, ಸೊಲ್ಲಾಪುರ, ಅಕ್ಕಲಕೋಟೆಯ ಭಾಗಗಳಲ್ಲಿ ಒಳ್ಳೆಯ ವಾತಾವರಣ ಇದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಾರ್ಖಂಡ್ …

Read More »

ಕೋವಿಡ್ ಹಗರಣದ ಮಧ್ಯಂತರ ವರದಿ ತರಾತುರಿಯಲ್ಲಿ ಮಂಡನೆ ಮಾಡತ್ತಾರೆ : ಶೆಟ್ಟರ್

ಹುಬ್ಬಳ್ಳಿ: ಕೋವೀಡ್‌ ಹಗರಣದಲ್ಲಿ ನೇಮಕ ಮಾಡಿದ ಕುನ್ಹಾ ವರದಿ ಸಿಎಂ ಕಚೇರಿಯಿಂದೇ ಸೋರಿಕೆ ಆಗತಾ ಇದೆ ಎಂಬ ವಿಚಾರ, ಯಾವುದಾದರೂ ಒಂದು ಹಗರಣ ಕುರಿತು ತನಿಖಾ ವರದಿ ಬಂದಿಲ್ಲಾ. ಅದರಲ್ಲೂ ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಆದರೆ ಬಹಳಷ್ಟು ಸೂಕ್ಷ್ಮ ಇರುತ್ತದೆ. ಇದರಲ್ಲಿ ಏನಾದರೂ ಮಾಡುವುದಾದರೆ ಮಾಡಿ ಸಚಿವ ಸಂಪುಟದ ಮುಂದೆ ಇಡುತ್ತಾರೆಂದು ಸಂಸದ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಯಲ್ಲಿ ಮಾತನಾಡಿದ ಅವರು, ಇನ್ನು ಕೋವಿಡ್ ಹಗರಣದ ಮಧ್ಯಂತರ …

Read More »

ಟಿಪ್ಪು ಸುಲ್ತಾನ್ ಜಯಂತಿ ಆಚರಣೆ: 31 ಕಾರ್ಯಕರ್ತರ ಬಂಧನ

ಹುಬ್ಬಳ್ಳಿ: 270ನೇ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ, ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಎಸ್‌ಡಿಪಿಐ ಸಂಘಟನೆಯ ಕಾರ್ಯಕರ್ತರು ಆಚರಣೆ ಮಾಡಿದರು. ಆದ್ರೆ ಮೆರವಣಿಗೆ ಮಾಡುವ ವೇಳೆ 31 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ, SDPI ಕಾರ್ಯಕರ್ತರು ಟಿಪ್ಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದರು. ಬಳಿಕ ಟಿಪ್ಪು ಮೆರವಣಿಗೆಗೆ ಕಾರ್ಯಕರ್ತರು ಮುಂದಾದರು. ಈ ವೇಳೆ ಮೆರವಣಿಗೆಗೆ ಅನುಮತಿಯಿಲ್ಲದ ಕಾರಣ 31 ಜನ ಎಸ್‌ಡಿಪಿಐ ಕಾರ್ಯಕರ್ತರನ್ನು …

Read More »