Breaking News

Uncategorized

ಕರ್ನಾಟಕ ಲೋಕಾಯುಕ್ತದಿಂದ ಕುಂದುಕೊರತೆ ಅಹವಾಲು ಸ್ವೀಕಾರ

ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ. ಎನ್. ಫಣೀಂದ್ರ ಅವರು ನವೆಂಬರ 21 ರಿಂದ 23 ವರೆಗೆ ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನವೆಂಬರ 21, ರಂದು ಬೆಳಿಗ್ಗೆ 10 ರಿಂದ 1: 30 ರವರೆಗೆ ಮತ್ತು ಮಧ್ಯಾಹ್ನ 2: 30 ರಿಂದ 5 ರವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಅಹವಾಲುಗಳನ್ನು ಸ್ವೀಕರಿಸಿ, ವಿಚಾರಣೆ ನಡೆಸಲಿದ್ದಾರೆ. ಆದಕಾರಣ ಸಾರ್ವಜನಿಕರು ಕುಂದು ಕೊರತೆ ದೂರಗಳನ್ನು ಸಲ್ಲಿಸಬಹುದು.

Read More »

ರೈತರಿಗೆ ಸಿಹಿಸುದ್ದಿ: ಅಕ್ರಮ ಸಕ್ರಮ ಯೋಜನೆ ಅರ್ಜಿಗಳ ವಿಲೇವಾರಿಗೆ ಕ್ರಮ

ಚಾಮರಾಜನಗರ: ರೈತರ ಕೃಷಿ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಬೇರೆ ಕಡೆಯಿಂದ ವಿದ್ಯುತ್ ಖರೀದಿಸಿ ರೈತರಿಗೆ ನೀಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ವಿದ್ಯುತ್ ಕಳವು ತಪ್ಪಿಸಲು ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಕಡ್ಡಾಯ ಮಾಡಲಾಗಿದೆ. ಇದರಿಂದ ರೈತರಿಗೆ ಅನುಕೂಲವಾಗುತ್ತದೆ, ಯಾರೋ ವಿದ್ಯುತ್ ಕಳ್ಳತನ ಮಾಡಿ ರೈತರ ಮೇಲೆ ಹಾಕುತ್ತಿದ್ದು, ಆಧಾರ್ ಜೋಡಣೆಯಿಂದ ಅದು ತಪ್ಪಲಿದೆ. ಇಂಧನ ಇಲಾಖೆಗೂ ಲೆಕ್ಕ ಸಿಗಲಿದೆ ಎಂದು …

Read More »

ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದರು. ಇದೀಗ ರಾಜ್ಯದ ಬಡಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಯಾವ ಬಡ ಕುಟುಂಬದವರು ಅನ್ನಭಾಗ್ಯ ಯೋಜನೆಯಿಂದ ವಂಚಿತವಾಗಬಾರದು. ಇದಕ್ಕಾಗಿ ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಭಾರತ್ ಜೋಡೋ ಭವನದಲ್ಲಿರುವ ಇಂದಿರಾಗಾಂಧಿ ಅಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ …

Read More »

ರಾಜ್ಯದಲ್ಲಿ ಒಬ್ಬರೇ ಒಬ್ಬ ಅರ್ಹ ಬಿಪಿಎಲ್ ಕಾರ್ಡ್ ದಾರರನ್ನು ತಪ್ಪಿಸಬೇಡಿ: ಸಚಿವ ಮುನಿಯಪ್ಪಗೆ ಸಿಎಂ ಸೂಚನೆ

ಬೆಂಗಳೂರು : ಸದ್ಯ ರಾಜ್ಯದಲ್ಲಿ ವಕ್ಫ್ ವಿವಾದ ಬೆನ್ನಲ್ಲೆ, ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದೆ. ಇದರಿಂದ ರಾಜ್ಯದ ಅರ್ಹ ಬಿಪಿಎಲ್ ಕಾರ್ಡ್ ಗಳು ಸಹ ಕ್ಯಾನ್ಸಲ್ ಆಗಿವೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ಕೆಎಚ್ ಮುನಿಯಪ್ಪ ಅವರಿಗೆ ಒಬ್ಬರೇ ಒಬ್ಬ ಅರ್ಹ ಬಿಪಿಎಲ್ ಕಾರ್ಡ್ದಾರರನ್ನು ತಪ್ಪಿಸಬೇಡಿ ಕಾರ್ಡ್ ಒದಗಿಸಿ ಎಂದು ಸೂಚನೆ ನೀಡಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದಿರಾಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ …

Read More »

ಕೇಂದ್ರ ತೆರಿಗೆ ಹಣ ಸರಿಯಾಗಿ ನೀಡದ ಕಾರಣ ರೈತರಿಗೆ ಸಾಲ ನೀಡಲು ಸಾಧ್ಯವಾಗುತ್ತಿಲ್ಲ: ಸಚಿವ ರಾಜಣ್ಣ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ ಟಿ ಹಣದಲ್ಲಿ ನಮ್ಮ ಪಾಲು ಸರಿಯಾಗಿ ನೀಡದೇ ಇರುವುದರಿಂದ ರೈತರಿಗೆ ಸಾಲ ನೀಡಲು ಆಗುತ್ತಿಲ್ಲ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ 9300 ಕೋಟಿ ರೂ.ಜಿಎಸ್ ಟಿ ಪಾಲು ಬರಬೇಕಿತ್ತು. ಆದರೆ 2340 ಕೋಟಿ ರೂ. ಮಾತ್ರ ಬಂದಿದೆ ಎಂದು ಹೇಳಿದರು. ನಮ್ಮ ಪಾಲಿನ 9300 ಕೋಟಿ ರೂ. ನೀಡಲು ಕೇಂದ್ರ ಸರ್ಕಾರಕ್ಕೆ ಮುಖ್ಯ …

Read More »

ಬೆಂಗಳೂರು ಟೆಕ್ ಸಮ್ಮಿಟ್-2024 ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ 27 ನೇ ಆವೃತಿಯ ಬೆಂಗಳೂರು ಟೆಕ್ ಸಮ್ಮಿಟ್ -2024ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ನಿಪುಣ ಕರ್ನಾಟಕ ಯೋಜನೆಯನ್ನು ಲೋಕಾರ್ಪಣೆ ಮಾಡಿ, ನವೋದ್ಯಮ ಸಾಧಕರನ್ನು ಸನ್ಮಾನಿಸಿದರು.

Read More »

ದೇಶದಲ್ಲಿ ಹೊಸದಾಗಿ 500 ಎಸ್ ಬಿ ಐ ಶಾಖೆಗಳ ಪ್ರಾರಂಭ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಮುಂಬೈ: 2024-25ರ ಹಣಕಾಸು ವರ್ಷದ ಅಂತ್ಯದ ವೇಳೆಗೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಹೊಸದಾಗಿ 500 ಶಾಖೆಗಳನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. 1921ರಲ್ಲಿ ಬ್ಯಾಂಕ್‌ 250 ಶಾಖೆಗಳನ್ನು ಹೊಂದಿತ್ತು, ಅದು ಈಗ 22,500ಕ್ಕೆ ಏರಿಕೆಯಾಗಿದೆ. ಹೊಸ ಶಾಖೆಗಳ ಸೇರ್ಪಡೆಯೊಂದಿಗೆ ಶಾಖೆಗಳ ಸಂಖ್ಯೆ 23 ಸಾವಿರಕ್ಕೆ ತಲುಪಲಿದೆ ಎಂದು ಬ್ಯಾಂಕ್‌ನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಹೇಳಿದರು. ಎಸ್‌ಬಿಐನ ಈ ಬೆಳವಣಿಗೆಯು ಜಾಗತಿಕ ದಾಖಲೆ, ದೇಶದಲ್ಲಿನ …

Read More »

ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ಬಿಪಿಎಲ್ ಕಾರ್ಡ್ ಪರಿಷ್ಕರಣೆ ಇಂದಿನಿಂದ ಶುರುವಾಗಲಿದೆ. ಇದರಿಂದ ಬಡವರಿಗೂ ಅನ್ಯಾಯವಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿರಲು ರಾಜ್ಯ ಸರ್ಕಾರ ಕೆಲವೊಂದು ನಿಯಮಗಳನ್ನು ಹಾಕಿದೆ. ಅದರಂತೆ ಆದಾಯ ಮಿತಿ, ತೆರಿಗೆ ಕಟ್ಟುವವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಇದರಿಂದಾಗಿ ರಾತ್ರೋ ರಾತ್ರಿ ಹಲವು ಬಿಪಿಎಲ್ ಕಾರ್ಡ್ ಗಳು ಎಪಿಎಲ್ ಆಗಿ ಬದಲಾಗಿದೆ. ಇದರ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. …

Read More »

ದೇಶದಲ್ಲಿಯೇ ಪರಿಶುದ್ಧ ಗಾಳಿಯಲ್ಲಿ ಮಡಿಕೇರಿ ಪ್ರಥಮ ಸ್ಥಾನ, ಗದಗಕ್ಕೆ 8 ನೇ ಸ್ಥಾನ

ಕೊಡಗು: ಐಷಾರಾಮಿ ಬದುಕಿಗೆ ಮಾರು ಹೋಗಿರುವ ಮನುಷ್ಯ ಎಲ್ಲಾ ಸೌಲಭ್ಯಗಳನ್ನು ಅನುಭವಿಸುವುದಕ್ಕಾಗಿ ಪರಿಸರವನ್ನು ಇನ್ನಿಲ್ಲದಂತೆ ಮಾಲಿನ್ಯ ಮಾಡುತ್ತಿದ್ದಾನೆ. ಹೀಗಾಗಿ ದೇಶದ ಪ್ರಮುಖ ನಗರಗಳಲ್ಲಿ ಶುದ್ಧಗಾಳಿ ಸಿಗುವುದೇ ದುಸ್ಥರ ಎನ್ನುವಂತೆ ಆಗಿದೆ. ಇಂತಹ ಸಂದರ್ಭದಲ್ಲಿ ದೇಶದಲ್ಲಿಯೇ ಕೊಡಗು ಜಿಲ್ಲೆಯಲ್ಲಿ ಪರಿಶುದ್ಧ ಗಾಳಿ ದೊರೆಯುವುದರಲ್ಲಿ ಅಗ್ರಸ್ಥಾನದಲ್ಲಿ ಇದೆ. ಕೇಂದ್ರ ಪರಿಸರ ಮಾಲಿನ್ಯ ಮಂಡಳಿಯು ಪರಿಶುದ್ಧ ಗಾಳಿ ಹೊಂದಿರುವ ಟಾಪ್ 10 ನಗರಗಳ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಅದರಲ್ಲಿ ಮಡಿಕೇರಿ ನಗರಕ್ಕೆ ಪ್ರಥಮ …

Read More »

ಪಾರಂಪರಿಕ ತಾಣಗಳ ರಕ್ಷಣೆಗೆ ಅಗತ್ಯ ಕ್ರಮ: ಸಚಿವ ಎಚ್.ಕೆ.ಪಾಟೀಲ್‌

ಲಕ್ಷ್ಮೇಶ್ವರ: ನಮ್ಮ ನಾಡಿನ ಪುರಾತನ ಇತಿಹಾಸ ಸಾರುವ ಪಾರಂಪರಿಕ ತಾಣಗಳಾದ ದೇವಸ್ಥಾನ, ಮಸೀದಿ, ಶಿಲಾ ಶಾಸನಗಳನ್ನು ರಕ್ಷಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ನಡೆದ ಲಕ್ಷ ದೀಪೋತ್ಸವ ಕಾರ್ಯಕ್ರಮದ ನಿಮಿತ್ತ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ 25 ಸಾವಿರ ಪಾರಂಪರಿಕ ತಾಣಗಳು ಇದ್ದು ಅವುಗಳಲ್ಲಿ ಕೇವಲ 850 ತಾಣಗಳು …

Read More »