Breaking News

Uncategorized

ಏಕಾಏಕಿ ವಾಹನ ಡಿಕ್ಕಿ: ಯುವಕ ಸಾವು

ಹುಬ್ಬಳ್ಳಿ: ಯುವಕನೊಬ್ಬ ರೋಡ್ ಕ್ರಾಸ್ ಮಾಡುತ್ತಿರುವಾಗ ಏಕಾಏಕಿ ಟಿಟಿ ವಾಹನ ಬಂದು ಗುದ್ದಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಹುಬ್ಬಳ್ಳಿಯ ಅದರಗುಂಚಿ ಬಳಿ ನಡೆದಿದೆ. ಅಪರಿಚಿತ ಯುವಕನೊಬ್ಬ ರಾಷ್ಟ್ರೀಯ ಹೆದ್ದಾರಿ ದಾಟುತ್ತಿರುವಾಗ ವೇಗವಾಗಿ ಬಂದಿದ್ದ ಟಿಟಿ ವಾಹನ ಆತನಿಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆ ಯುವಕ ಯಾರು ಎಂಬುದು ತಿಳಿದು ಬಂದಿಲ್ಲ, ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು,. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು …

Read More »

ಹೊಸ ಬಾಂಬ್ ಸಿಡಿಸಿದ ಜೋಶಿ

ಹುಬ್ಬಳ್ಳಿ: ಕಳೆದ ಬಾರಿ ಬಿಜೆಪಿ ಸರ್ಕಾರ ರಚನೆ ಮಾಡೋವಾಗ ಶಾಸಕರನ್ನು ಕಳಸಿದ್ದೆ ಕಾಂಗ್ರೆಸ್‌, ಸಿದ್ದರಾಮಯ್ಯನವರೇ ಕೆಲ ಶಾಸಕರನ್ನು ಕಳಸಿದ್ರು, ಇವರಿಗೆ ಆಳೋಕೆ ನೈತಿಕತೆ ಇರಲಿಲ್ಲ, ಹೀಗಾಗಿ ನಾವು ಸರ್ಕಾರ ರಚನೆ ಮಾಡಿದ್ದೀ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ ಅವರು, ಈ ಬಾರಿ ಅವರಿಗೆ ಬಹುಮತ ಇದೆ. ಈ ಬಾರಿ ನಾವು ವಿರೋಧ ಪಕ್ಷವಾಗಿ ಕೆಲಸ ಮಾಡೋದು ನಮ್ಮ ಪಕ್ಷದ …

Read More »

50 ಸಿಎಪಿಎಫ್ ತುಕಡಿಗಳನ್ನು ಮಣಿಪುರಕ್ಕೆ ಕಳುಹಿಸಲು ಕೇಂದ್ರ ನಿರ್ಧಾರ

ನವದೆಹಲಿ : ಈಶಾನ್ಯ ರಾಜ್ಯದಲ್ಲಿ ಸವಾಲಿನ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯನ್ನ ಗಮನದಲ್ಲಿಟ್ಟುಕೊಂಡು 5,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ಒಳಗೊಂಡ ಹೆಚ್ಚುವರಿ 50 ಸಿಎಪಿಎಫ್ ತುಕಡಿಗಳನ್ನು ಮಣಿಪುರಕ್ಕೆ ಕಳುಹಿಸಲು ಕೇಂದ್ರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜಿರಿಬಾಮ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದು ಇತರ ಸ್ಥಳಗಳಿಗೆ ಹರಡಿದ ನಂತರ ನವೆಂಬರ್ 12 ರಂದು ಹೊರಡಿಸಿದ ಆದೇಶದ ನಂತರ ಗೃಹ ಸಚಿವಾಲಯ (ಎಂ ಎಚ್ಎ) 20 ಹೆಚ್ಚುವರಿ ಸಿಎಪಿಎಫ್ ತುಕಡಿಗಳನ್ನು ಸಿಆರ್ಪಿಎಫ್ನ 15 …

Read More »

3 ಹೊಸ ಬಸ್ ಗಳಿಗೆ ಶಾಸಕ ಎನ್.ಎಚ್.ಕೋನರಡ್ಡಿ ಚಾಲನೆ

ನವಲಗುಂದ : ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಸಾರಿಗೆ ಸಂಸ್ಥೆಯ ನವಲಗುಂದ ಘಟಕಕ್ಕೆ ಪ್ರತಿನಿತ್ಯ ಸಂಚರಿಸಲು 3 ಹೊಸ ಬಸ್ ಗಳಿಗೆ ಶಾಸಕ ಎನ್.ಎಚ್.ಕೋನರಡ್ಡಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕ್ಷೇತ್ರದ ಹಲವಾರು ಗ್ರಾಮಸ್ಥರು ತಮ್ಮ ಹಳ್ಳಿಗಳಿಗೆ ಬಸ ಬಿಡುವಂತೆ ಜನಸಂಪರ್ಕ ಸಭೆಯಲ್ಲಿ ಮನವಿಯನ್ನು ಸಲ್ಲಿಸಿದ್ದರು. ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಾಗೂ ಸಾರಿಗೆ ಇಲಾಖೆ ಸಚಿವರಾದ ರಾಮಲಿಂಗರೆಡ್ಡಿ ಅವರ ಗಮನಕ್ಕೆ ತಂದು ನವಲಗುಂದ ಘಟಕಕ್ಕೆ ಹೊಸ ಬಸ್‌ …

Read More »

516 ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ : ಡಾ.ಆರ್.ಡಿ.ಪಾಟೀಲ್‌

ಕುಂದಗೋಳ : ಕಾಲು ಮತ್ತು ಬಾಯಿ ಬೇನೆ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲಾದ್ಯಂತ ಶೇ.50% 6ನೇ ಸುತ್ತಿನ ಸಾಧನೆಯಾಗಿದೆ, ಅದರಲ್ಲೂ ಕುಂದಗೋಳ ತಾಲೂಕು ಶೇ. 91% ಪ್ರತಿಶತ ಸಾಧನೆ ಮಾಡಿ ಮುಂದಿದೆ ಎಂದು ಪಾಲಿ ಕ್ಲಿನಿಕ್ ಉಪ ನಿರ್ದೇಶಕ ಡಾ.ಆರ್.ಡಿ.ಪಾಟೀಲ್‌ ಹೇಳಿದರು. ಅವರು ಕುಂದಗೋಳ ಪಶು ಆಸ್ಪತ್ರೆಯಲ್ಲಿ ಮಾಧ್ಯಮ ಉದ್ದೇಶಿಸಿ ಮಾತನಾಡಿ ಇಂದು ಕುಂದಗೋಳ ತಾಲೂಕಿನ ಶಿರೂರು ಗ್ರಾಮಕ್ಕೆ ಲಸಿಕೆ ಕಾರ್ಯಕ್ರಮ ಪರಿಶೀಲನೆ ನಡೆಸಿ ಮಾತನಾಡಿ ಶಿರೂರುನಲ್ಲಿ ಒಟ್ಟು 548 ಜಾನುವಾರುಗಳಿದ್ದು, …

Read More »

ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು ರಾತ್ರೋರಾತ್ರಿ ಬೆಂಕಿ

ಧಾರವಾಡ: ಮನೆಯ ಹಿಂಭಾಗದಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು ರಾತ್ರೋರಾತ್ರಿ ಬೆಂಕಿ ಇಟ್ಟಿರುವ ಘಟನೆ ಧಾರವಾಡ ತಾಲೂಕಿನ ಹೊಸ ತೇಗೂರು ಗ್ರಾಮದಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ಹೊಸತೇಗೂರು ಗ್ರಾಮದ ರಮೇಶ ಗಳಗಿ ಎಂಬುವವರಿಗೆ ಸೇರಿದ ಒಂದು ಕಾರು ಹಾಗೂ ಎರಡು ಬೈಕ್‌ಗಳಿಗೆ ಕಿಡಿಗೇಡಿಗಳು ರಾತ್ರೋರಾತ್ರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ಮೂರೂ ವಾಹನಗಳು ಸುಟ್ಟಿವೆ. ಇದನ್ನು ಉದ್ದೇಶಪೂರ್ವಕವಾಗಿಯೇ ಮಾಡಲಾಗಿದೆ ಎಂದು ವಾಹನಗಳ ಮಾಲೀಕರು ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಗರಗ …

Read More »

ರಾಜ್ಯದಲ್ಲಿ ಕರ್ನಾಟಕ ರಾಜ್ಯ ಕೃಷಿ ಅಭಿವೃದ್ದಿ ಏಜೆನ್ಸಿ ಸ್ಥಾಪನೆ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಕೃಷಿ ಇಲಾಖೆಯ ತರಬೇತಿ ಕೇಂದ್ರ, ಬೀಜೋತ್ಪಾದನ ವಿಭಾಗ ಸೇರಿದಂತೆ ವಿವಿಧ ಶಾಖೆಗ‌ಳನ್ನು ಒಂದೇ ಸೂರಿನಡಿ ತರುವುದಕ್ಕಾಗಿ ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ ಸ್ಥಾಪನೆ ಮಾಡುವುದಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಬೀಜೋತ್ಪಾದನೆ ಕೇಂದ್ರ, ಜಿಲ್ಲಾಕೃಷಿ ತರಬೇತಿ ಕೇಂದ್ರ, ಜೈವಿಕ ನಿಯಂತ್ರಣ, ಪರತಂತ್ರ ಜೀವಿ ಪ್ರಯೋಗಾಲಯಗಳನ್ನು ಒಂದೇ ಸೂರಿನಡಿ ತರಲಾಗಿದೆ. ಈ ಮೂಲಕ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಾಗುವುದು ಎಂದು ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ …

Read More »

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಯಲಹಂಕ ಪ್ರಥಮ: 2.13 ಲಕ್ಷ ನೂತನ ಸದಸ್ಯರ ನೋಂದಣಿ

ಬೆಂಗಳೂರು: ಭಾರತೀಯ ಜನತಾ ಪಕ್ಷ ದೇಶಾದ್ಯಂತ ಕೈಗೊಂಡಿರುವ ಸದಸ್ಯತ್ವ ಅಭಿಯಾನದಲ್ಲಿ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರ ಇಡೀ ದೇಶಕ್ಕೆ ಪ್ರಥಮ ಸ್ಥಾನದಲ್ಲಿದೆ. ಕ್ಷೇತ್ರದಲ್ಲಿ 2 ಲಕ್ಷದ 13 ಸಾವಿರಕ್ಕೂ ಅಧಿಕ ನೂತನ ಸದಸ್ಯರು ಬಿಜೆಪಿಗೆ ನೋಂದಣಿ ಮಾಡಿಕೊಳ್ಳುವ ಮೂಲಕ ಈ ಸಾಧನೆ ಮಾಡಿದೆ. ಕಳೆದ ಹಲವಾರು ದಿನಗಳಿಂದ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡು 2 ಲಕ್ಷಕ್ಕೂ ಅಧಿಕ ನೂತನ …

Read More »

ತುಂಗಭದ್ರಾ ನದಿಗೆ 1 ಲಕ್ಷ ಕ್ಯುಸೆಕ್ ನೀರು ಬಿಡುಗಡೆ: ಗಂಗಾವತಿ ಕಂಪ್ಲಿ ಸೇತುವೆ ಮೇಲೆ ಸಂಚಾರಕ್ಕೆ ನಿರ್ಬಂಧ

ಬಳ್ಳಾರಿ: ತುಂಗಭದ್ರಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ಗಂಗಾವತಿ ಕಂಪ್ಲಿ ಸೇತುವೆ ಮುಳುಗಡೆ ಹಂತ ತಲುಪಿದೆ. ಸೇತುವೆ ಮೇಲೆ ವಾಹನ ಸವಾರರಿಗೆ ನಿರ್ಭಂದ ಏರಲಾಗಿದ್ದು, ಬ್ಯಾರಿಕೇಡ್ ಅಳವಡಿಸಿ ಪೊಲೀಸರು ಪ್ರವೇಶ ನಿರ್ಭಂದಿಸಿದ್ದಾರೆ. ಕಂಪ್ಲಿ ತಾಲೂಕಿನ ಕಂಪ್ಲಿ ಕೋಟೆ ಬಳಿಯ ಕಂಪ್ಲಿ ಸೇತುವೆ ಇದಾಗಿದ್ದು, ಈ ವರ್ಷ ಐದನೆ ಬಾರಿಗೆ ಸೇತುವೆ ಮೇಲೆ ಸಂಚಾರ ನಿರ್ಭಂದ ವಿಧಿಸಲಾಗಿದೆ. ನದಿಗೆ ಹೆಚ್ಚಿನ ಪ್ರಮಾಣದ ನೀರು ಇದ್ದು, ಪ್ರತಿ ಬಾರಿ …

Read More »

ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಗದಗ: ವಿಜಯನಗರ ಜಿಲ್ಲೆ ಹೂವಿನ ಹಡಗಲಿ ವ್ಯಾಪ್ತಿಯ ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕ ದಿನೇಶ್ ಮೃತದೇಹ‌ ಇಂದು ತೀರದಲ್ಲಿ ಪತ್ತೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಬ್ಯಾರೇಜ್ ಮೇಲಿಂದ ತುಂಗಭದ್ರಾ ನದಿಗೆ ಹಾರಿ ದಿನೇಶ್ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ವರದಿ ತಿಳಿಸಿದೆ. ಮುಂಡರಗಿ ತಾಲೂಕು ಮುರಡಿ ತಾಂಡಾದ ಯುವಕ ದಿನೇಶ ಸಾಲದ ಸುಳಿಗೆ ಸಿಲುಕಿದ್ದು, ಇದರಿಂದಾಗಿ ಅಕ್ಟೋಬರ್ 20 (ಭಾನುವಾರ)ದಂದು ನದಿಗೆ ಹಾರಿದ್ದ. ನೀರಿನ ಸೆಳೆತ ಹೆಚ್ಚಾಗಿದ್ದರಿಂದ …

Read More »