bigtvnews22
October 21, 2024
Uncategorized
ಬೆಂಗಳೂರು: ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದ್ದು, ಅದೇ ಇನ್ಮುಂದೆ ಆಹಾರ ಕಿಟ್ ವಿತರಣೆ ಮಾಡಲು ಮುಂದಾಗಿರುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ಸುಳಿವು ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಹಣವನ್ನು ಪಾವತಿ ಮಾಡಲಾಗುತ್ತಿದೆ. ಇನ್ಮುಂದೆ ಇದರ ಬದಲಿಗೆ ಎಣ್ಣೆ, ಬೇಳೆಯನ್ನು ಒಳಗೊಂಡಂತೆ ಆಹಾರ ಕಿಟ್ ವಿತರಣೆ ಮಾಡೋದಕ್ಕೆ ಚಿಂತನೆ …
Read More »
bigtvnews22
October 20, 2024
Uncategorized
ಶಿವಮೊಗ್ಗ: ನಗರದಲ್ಲಿ ಮೊಟ್ಟಮೊದಲ ಬಾರಿಗೆ ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆಯು 2024-25 ನೇ ಸಾಲಿನ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಕ್ಸಿಂಗ್ ಕ್ರೀಡಾಕೂಟವನ್ನು ದಿನಾಂಕ 21 ಮತ್ತು 22 ರಂದು ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದೆ. ಇದಕ್ಕೆ ಅವಶ್ಯಕತೆ ಇರುವ ಬಾಕ್ಸಿಂಗ್ ರಿಂಗ್ ಅನ್ನು ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್(ಕಾಬಾ) ಬೆಂಗಳೂರು ಇವರು ಶಿವಮೊಗ್ಗ ಜಿಲ್ಲೆಗೆ ಒದಗಿಸಿರುತ್ತಾರೆ. ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಅತ್ಯಾಧುನಿಕ ಅಂತರಾಷ್ಟ್ರೀಯ ಮಾದರಿಯ ಬಾಕ್ಸಿಂಗ್ ರಿಂಗ್ ಇದಾಗಿರುತ್ತದೆ. …
Read More »
bigtvnews22
October 20, 2024
Uncategorized
ಕಾರವಾರ: ಜಿಲ್ಲೆಯ ಎಲ್ಲ ಹೋಮ್ ಸ್ಟೇಗಳ ಪರಿಶೀಲನೆ ನಡೆಸಿ, ಸರ್ಕಾರದ ಮಾರ್ಗಸೂಚಿ ಪಾಲಿಸುತ್ತಿರುವ ಬಗ್ಗೆ ವರದಿ ಸಲ್ಲಿಸಬೇಕು ಅನಧಿಕೃತವಾಗಿರುವ ಹೋಮ್ ಸ್ಟೇಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೂಚಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಅನಧಿಕೃತ ಹೋಮ್ ಸ್ಟೇಗಳ ಹಾವಳಿ ನಿಯಂತ್ರಣಕ್ಕೆ ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯ ಕಡಲತೀರಗಳಲ್ಲಿ ಪ್ರವಾಸಿಗರ …
Read More »
bigtvnews22
October 20, 2024
Uncategorized
ವಿಜಯಪುರ: ತಾಯಿಯ ಹಾಲಿನ ಕೊರತೆಯಿಂದ ಬಳಲುವ ನವಜಾತ ಶಿಶುಗಳಿಗಾಗಿ ಇದೀಗ ಎದೆಹಾಲಿನ ಬ್ಯಾಂಕ್ ಓಪನ್ ಆಗಿದೆ ಮಕ್ಕಳಿಗೆ ಮೊದಲ ಅಮೃತ ನೀಡುವ ಬ್ಯಾಂಕ್ ಇದಾಗಿದ್ದು, ಎಷ್ಟೋ ಕಂದಮ್ಮಗಳ ಆರೋಗ್ಯಕ್ಕಾಗಿ ಬ್ಯಾಂಕ್ ಸಹಾಯ ಮಾಡಲಿದೆ. ವಿಜಯಪುರ ಸರ್ಕಾರಿ ಆಸ್ಪತ್ರೆಯು ಉತ್ತರ ಕರ್ನಾಟಕದಲ್ಲಿ ಮೊದಲ ಎದೆಹಾಲು ಬ್ಯಾಂಕ್ ಸ್ಥಾಪಿಸಲು ಮುಂದಾಗಿದೆ. ಇದು ವಾರ್ಷಿಕವಾಗಿ 2 ಸಾವಿರ ನವಜಾತ ಶಿಶುಗಳಿಗೆ ಸೇವೆ ಸಲ್ಲಿಸಲಿದೆ. ಸುಶೇನಾ ಹೆಲ್ತ್ ಫೌಂಡೇಶನ್ನ ಪ್ರಧಾನ ಕಾರ್ಯದರ್ಶಿ ಡಾ ಸಂತೋಷ್ ಕರ್ಲೆಟ್ಟಿ …
Read More »
BigTv News
October 19, 2024
Uncategorized
ದಾವಣಗೆರೆ: ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಸಾಮಾನ್ಯ ಜ್ಞಾನ ಕಲಿಕೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶಿವಮೊಗ್ಗದಲ್ಲಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ನವುಲೆಕೃಷಿ ಕಾಲೇಜು ಆವರಣದಲ್ಲಿ ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಲಾಗಿದ್ದ ಕೃಷಿ-ತೋಟಗಾರಿಕ ಮೇಳದಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ …
Read More »
bigtvnews22
October 19, 2024
Uncategorized
ಬೆಂಗಳೂರು: ಸಮನ್ವಯತೆ, ಸಮಯಪ್ರಜ್ಞ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಸಮಸ್ಯೆಗೆ ಸ್ಪಂದನೆ ಹಾಗೂ ಹೊಣೆಗಾರಿಕೆ ಈ ಪಂಚ ಸೂತ್ರ ಅಳವಡಿಸಿಕೊಂಡು ಅಧಿಕಾರಿಗಳು ಕಾರ್ಯನಿರ್ವಹಿಸಿದರೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಲಹೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ, ಖಾಸಗಿ ಹೋಟೆಲ್ನಲ್ಲಿ ಇಂದು ಆಯೋಜಿಸಲಾಗಿದ್ದ ಪಂಚಾಯತ್ರಾಜ್ ಅಧಿಕಾರಿಗಳ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಮ್ಮ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರ ಜತೆ ಚೆನ್ನಾಗಿ ಸಮನ್ವಯತೆ ಹೊಂದಿದ್ದಾರೆ ಆದರೆ, ಅಧಿಕಾರಿಗಳ …
Read More »
bigtvnews22
October 19, 2024
Uncategorized
ಕೊಲಂಬೊ: ಲಕ್ಷಗಟ್ಟಲೆ ಪೆಟ್ರೋಲ್ ಸಾಗಿಸುತ್ತಿದ್ದ ರೈಲು ಭಾರಿ ಅಪಘಾತಕ್ಕೀಡಾಗಿದ್ದು, ಕೊಲಂಬೊದಿಂದ ಬ್ಯಾಟಿಕಲೋವಾಕ್ಕೆ ತೆರಳುತ್ತಿದ್ದ ರೈಲು ಮಿನ್ನೇರಿಯಾ ರೈಲು ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದೆ. ಹಳಿಗಳ ಮೇಲೆ ಆನೆಗಳ ಗುಂಪನ್ನು ನೋಡಿದ ಲೊಕೊ ಪೈಲಟ್ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದರು. ರೈಲಿನ ನಾಲ್ಕು ಬೋಗಿಗಳು ಹಳಿ ತಪ್ಪಿವೆ ಎರಡು ಬೋಗಿಗಳು ಸಂಪೂರ್ಣವಾಗಿ ಪೆಟ್ರೋಲ್ ಸೋರಿಕೆಯಾಗಿ ನೆಲಕ್ಕೆ ಬಿದ್ದವು. ಉಳಿದ ಬೋಗಿಗಳಿಂದ ಇಂಧನ ತೆಗೆಯಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಈ ಅವಘಡದಲ್ಲಿ ಎರಡು ಆನೆಗಳು ಸಾವನ್ನಪ್ಪಿದ್ದು, …
Read More »
BigTv News
October 18, 2024
Uncategorized
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡುವ ಸಂಬಂಧ ಸರ್ಕಾರದಿಂದ ಯಾವುದೇ ಭರವಸೆ ಸಿಕ್ಕಿಲ್ಲ. ಈ ಹಿನ್ನೆಲೆ ಮತ್ತೆ ಹೋರಾಟ ರೂಪಿಸುವ ಸಂಬಂಧ ಜಯ ಮೃತ್ಯುಂಜಯ ಸ್ವಾಮೀಜಿ ಸುಳಿವು ನೀಡಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿಂದು ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗ ಸಿಎಂ ಸಿದ್ದರಾಮಯ್ಯ ಜೊತೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿತು. ಸಭೆ ಬಳಿಕ ಮಾತನಾಡಿದ ಜಯ ಮೃತ್ಯುಂಜಯ ಸ್ವಾಮೀಜಿ, ಸಿಎಂ ಅವರು ನಮ್ಮ ಬಳಿ ಒಂದೂವರೆ …
Read More »
bigtvnews22
October 18, 2024
Uncategorized
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅವರ ನೆನಪಿನಾರ್ಥ ರಾಜ್ಯದ ಎಲ್ಲಾ ಪರಿಶಿಷ್ಟ ಪಂಗಡ ವಸತಿ ಶಾಲೆಗಳು ಮತ್ತು ರಾಯಚೂರು ವಿಶ್ವವಿದ್ಯಾಲಯಕ್ಕೆ ವಾಲ್ಮೀಕಿ ಹೆಸರಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ರಾಜನಹಳ್ಳಿ ವಾಲ್ಮೀಕಿ ಸಮುದಾಯ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ, ರಾಯಚೂರು ವಿವಿಗೆ ವಾಲ್ಮೀಕಿ ಹೆಸರಿಡಬೇಕು. ಹಾವನೂರು ಹೆಸರಲ್ಲಿ ಪ್ರಶಸ್ತಿ …
Read More »
bigtvnews22
October 17, 2024
Uncategorized
ಅಳವಂಡಿ: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಜಿಟಿ-ಜಿಟಿ ಮಳೆಗೆ ಸಮೀಪದ ಹನಕುಂಟಿ ಗ್ರಾಮದ ರೈತರ ಜಮೀನಿಗಳಲ್ಲಿ ಕಟಾವು ಮಾಡಿರುವ ಈರುಳ್ಳಿ ಕೊಳೆಯುತ್ತಿದ್ದು, ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಈರುಳ್ಳಿ ಬಿತ್ತನೆ ಮಾಡಿದ್ದು, ಮಳೆಯಿಂದ ಈರುಳ್ಳಿ ಕೊಳೆತು ಹಾಳಾಗುತ್ತಿದೆ. ಸಂಬಂಧ ಪಟ್ಟ ಅಧಿಕಾರಿಗಳು ನಮ್ಮ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿ ರೈತರ ಕಷ್ಟಗಳನ್ನು ಪರಿಹರಿಸಬೇಕು ಎಂದು ಹನಕುಂಟಿ ಗ್ರಾಮದ ಗೋಣೆಪ್ಪ ಕೋಳಿ ಹಾಗೂ ನಾಗಪ್ಪ ಮರಿಬಸಣ್ಣರ …
Read More »