bigtvnews22
October 15, 2024
Uncategorized
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳಗ್ಗೆಯಿಂದಲೂ ಕಳಸ, ಕುದುರೆಮುಖ, ಹೊರನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಕಾಫಿನಾಡ ವಾಣಿಜ್ಯ ಬೆಳೆ ಕಾಫಿ, ಅಡಿಕೆ, ಮೆಣಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬಿರುವಂತಾಗಿದೆ. ನಿರಂತರ ಮಳೆಯಿಂದ ಗುಡ್ಡಗಾಡು ತಪ್ಪಲಿನ ಗ್ರಾಮಗಳ ಜನರಲ್ಲಿ ಆತಂಕ ಹೆಚ್ಚಾಗಿದೆ.
Read More »
bigtvnews22
October 15, 2024
Uncategorized
ನವದೆಹಲಿ: ವಿಶ್ವದ ಜಾಗತಿಕ ಸಂಸ್ಥೆಗಳು ಡಿಜಿಟಲ್ ತಂತ್ರಜ್ಞಾನಗಳಿಗಾಗಿ ಸಾಮಾನ್ಯ ಜಾಗತಿಕ ಆಡಳಿತ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು, ವಿಶೇಷವಾಗಿ ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಗೌಪ್ಯತೆಯ ನೈತಿಕ ಬಳಕೆಯ ಬಗ್ಗೆ, ವಿವಿಧ ದೇಶಗಳ ವೈವಿಧ್ಯತೆಯನ್ನು ಗೌರವಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ವಿಶ್ವದ ಜಾಗತಿಕ ಸಂಸ್ಥೆಗಳು ಡಿಜಿಟಲ್ ತಂತ್ರಜ್ಞಾನಗಳ ಚೌಕಟ್ಟಿನಲ್ಲಿ ಕೆಲಸ ಮಾಡುವ ಸಮಯ ಬಂದಿದೆ, ಚೌಕಟ್ಟು ಮಾಡಬೇಕಾದ ಮತ್ತು ಮಾಡಬಾರದ ಅಂಶಗಳನ್ನು ಒಳಗೊಂಡಿರಬೇಕು. ಹೆಚ್ಚಿನ ಡಿಜಿಟಲ್ ಕೊಳಗಳು …
Read More »
bigtvnews22
October 15, 2024
Uncategorized
ಹೊಸಪೇಟೆ : ತುಂಗಭದ್ರಾ ಅಣೆಕಟ್ಟೆಯಿಂದ 80 ಸಾವಿರ ಕ್ಯುಸೆಕ್‌ಗೂ ಅಧಿಕ ನೀರನ್ನು 20 ಕ್ರಸ್ಟ್‌ಗೇಟ್‌ಗಳ ಮೂಲಕ ನದಿಗೆ ಹರಿಸುತ್ತಿರುವ ಕಾರಣ ಹಂಪಿಯ ಪುರಂದರ ಮಂಟಪ ಸಂಪೂರ್ಣ ಮುಳುಗಡೆಯಾಗಿದೆ. ಈ ವರ್ಷ ಮೂರನೇ ಬಾರಿಗೆ ಈ ಮಂಟಪ ಮುಳುಗಡೆಯಾಗಿದೆ. ಹಿಂಗಾರು ಮಳೆಯಿಂದ ಕೂಡ್ಲಿಗಿ,ಕೊಟ್ಟೂರು, ಹರಪನಹಳ್ಳಿ ಭಾಗದಲ್ಲಿ ಹಲವು ಕೆರೆಗಳು ತುಂಬಿವೆ. ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ಜಲಾಶಯ 20 ಅಡಿ ಎತ್ತರವಿದ್ದು, ಸದ್ಯ 14 ಅಡಿ ನೀರು ತುಂಬಿದೆ. ಈ ಜಲಾಶಯ ಭರ್ತಿಯಾದರೆ …
Read More »
bigtvnews22
October 14, 2024
Uncategorized
ಕೊಪ್ಪಳ: ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಾಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಲಾಶಯಕ್ಕೆ 84,000 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ ನದಿಗೆ 78,000 ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಇದರಿಂದಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಒಳಹರಿವು ಹೆಚ್ಚಾದರೆ ಹೊರಹರಿವನ್ನು ಹೆಚ್ಚಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಒಟ್ಟು 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನು ಜಲಾಶಯ ಹೊಂದಿದೆ. ಆ.10 ರಂದು ಜಲಾಶಯದ …
Read More »
BigTv News
October 13, 2024
Uncategorized
ಹೊಸಪೇಟೆ : ಹಿಂಗಾರು ಮಳೆ ಉತ್ತಮವಾಗಿ ಸುರಿಯುತ್ತಿರುವುದರಿಂದ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ 84,504 ಕ್ಯುಸೆಕ್‌ನಷ್ಟಿದ್ದು, 82,504 ಕ್ಯುಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಈ ಪೈಕಿ ಸುಮಾರು 11 ಸಾವಿರ ಕ್ಯುಸೆಕ್‌ನಷ್ಟು ನೀರು ಕಾಲುವೆಗಳಿಗೆ ಹರಿಯುತ್ತಿದ್ದು, 71 ಸಾವಿರ ಕ್ಯುಸೆಕ್‌ನಷ್ಟು ನೀರು 20 ಕ್ರಸ್ಟ್‌ಗೇಟ್‌ಗಳ ಮೂಲಕ ನದಿಗೆ ಹರಿಯುತ್ತಿದೆ. ತುಂಗಭದ್ರಾ ಮಂಡಳಿ ಶನಿವಾರ ಮೊದಲಿಗೆ 18 ಗೇಟ್‌ಗಳನ್ನು ತೆರೆದಿತ್ತು. ಬಳಿಕ ಇನ್ನೂ ಎರಡು ಗೇಟ್‌ಗಳನ್ನು ತೆರೆಯುವ ಮೂಲಕ ಅಧಿಕ ನೀರು …
Read More »
bigtvnews22
October 11, 2024
Uncategorized
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದಾಗಿ ಹಲವು ಬಡ ಮಹಿಳೆಯರಿಗೆ ಅನುಕೂಲವಾಗುತ್ತಿದೆ. ಅನೇಕ ಮಹಿಳೆಯರು ಗೃಹಲಕ್ಷ್ಮೀ ಹಣದಿಂದ ಫ್ರಿಜ್ಡ್, ವಾಷಿಮ್ಗ್ ಮಷಿನ್, ಒಡವೆ, ವಸ್ತ್ರ, ಬಟ್ಟೆ ಅಂಗಡಿಗಳನ್ನು ತೆರೆದಿದ್ದಾರೆ. ಇಲ್ಲೋರ್ವ ಮಹಿಳೆ ಗೃಹಲಕ್ಷ್ಮೀ ಯೋಜನೆ ಹಣದಿಂದ ಮಗನಿಗೆ ಬೈಕ್ ಕೊಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿದ ದಸರಾ ಸಂದರ್ಭದಲ್ಲಿ …
Read More »
bigtvnews22
October 11, 2024
Uncategorized
ನವದೆಹಲಿ : 2024 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಜಪಾನಿನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆ ನಿಹಾನ್ ಹಿಡಾಂಕ್ಯೊಗೆ ನೀಡಲಾಗುತ್ತಿದೆ. ನಿಹಾನ್ ಹಿಡಾಂಕ್ಯೊ ಹಿರೋಷಿಮಾ ಮತ್ತು ನಾಗಸಾಕಿಯ ಮೇಲಾದ ಪರಮಾಣು ಬಾಂಬ್ ಬದುಕುಳಿದವರನ್ನು (ಹಿಬಾಕುಶಾ) ಪ್ರತಿನಿಧಿಸುತ್ತದೆ. 47 ಜಪಾನೀಸ್ ಸದಸ್ಯರ ಗುಂಪು ಬಹುತೇಕ ಎಲ್ಲಾ ಸಂಘಟಿತ ಹಿಬಾಕುಶಾವನ್ನು ಒಂದುಗೂಡಿಸಿದೆ. ಸಂಸ್ಥೆಯ ನಾಯಕರು ಮತ್ತು ಸದಸ್ಯರೆಲ್ಲರೂ ದಾಳಿಯಲ್ಲಿ ಬದುಕುಳಿದವರಾಗಿದ್ದಾರೆ. ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತ ಜಗತ್ತನ್ನು ಸಾಧಿಸುವ ಪ್ರಯತ್ನಗಳಿಗಾಗಿ ಮತ್ತು ಪರಮಾಣು ಶಸ್ತ್ರಾಸ್ತ್ರಗಳನ್ನು …
Read More »
BigTv News
October 9, 2024
Uncategorized
ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಕಂಪನಿ ತನ್ನ 3ನೇ ಘಟಕವನ್ನು ಕರ್ನಾಟಕದ ಬದಲು ಮಹಾರಾಷ್ಟ್ರದಲ್ಲಿ ಸ್ಥಾಪಿಸಲು ಮುಂದಾಗಿದೆ. ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಕಿಡಿಕಾರಿದೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿತ್ತು. ಇದೀಗ ಆ ಸ್ಥಾನವನ್ನು ಭ್ರಷ್ಟ ಕಾಂಗ್ರೆಸ್ ಸರ್ಕಾರ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುತ್ತಿದೆ. ಜತೆಗೆ 21 ಸಾವಿರ ಕೋಟಿ ರೂ.ಗಳ ಬೃಹತ್ ಉದ್ಯಮವನ್ನು ಕೈ ಚೆಲ್ಲಿದೆ ಎಂದು …
Read More »
bigtvnews22
October 8, 2024
Uncategorized
ಚನ್ನಮ್ಮನ ಕಿತ್ತೂರು: ಕಿತ್ತೂರು ಕೋಟೆಯನ್ನು ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಯೋಜನೆ ರೂಪಿಸಲಾಗಿದ್ದು, ₹30 ಕೋಟಿ ಅನುದಾನದಲ್ಲಿ ಹೊಸ ತಂತ್ರಜ್ಞಾನ ಬಳಕೆಯ ಮೂಲಕ ವಿದ್ಯುನ್ಮಾನ ಮಾದರಿಯ ಉದ್ಯಾನ (ಥೀಮ್ ಪಾರ್ಕ್) ನಿರ್ಮಾಣ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಶ್ರಯದಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಮಂಗಳವಾರ, ಚನ್ನಮ್ಮನ ಕಿತ್ತೂರಿನ ಕೋಟೆ, ಅರಮನೆ ಸಂರಕ್ಷಣಾ ಕಾಮಗಾರಿಗಳ …
Read More »
bigtvnews22
October 8, 2024
Uncategorized
ಬೆಂಗಳೂರು: ರಾಜ್ಯದಲ್ಲಿ ನಮ್ಮ ಸರ್ಕಾರವು ಜಾತಿಗಣತಿ ವರದಿಯನ್ನು ಜಾರಿಗೊಳಿಸಲು ಮುಂದಾಗಿರುವುದು ವಿಪಕ್ಷದವರಿಗೆ ನುಂಗಲಾರದ ತುತ್ತಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಜಾತಿಗಣತಿಯ ವರದಿಯನ್ನು ತರದೇ ಇದ್ದಾಗ ಅದನ್ನು ಕೋಲ್ಡ್ ಸ್ಟೋರೆಜ್‌ನಲ್ಲಿಟ್ಟುಬಿಟ್ಟರು ಎಂದು ವಿಪಕ್ಷ ನಾಯಕರು ಟೀಕಿಸುತ್ತಿದ್ದರು. ಯಾಕೆ ಅಷ್ಟೊಂದು ಹಣ ಖರ್ಚು ಮಾಡಿದರು, ಯಾಕೆ ಪೆಟ್ಟಿಗೆಯೊಳಗೆ ಇಡಬೇಕಿತ್ತು ಎಂದೆಲ್ಲ ಪ್ರಶ್ನಿಸಿದರು. ಇದೀಗ ಅದನ್ನು ಜಾರಿಗೊಳಿಸುತ್ತೇವೆ ಎಂದಾಗ ನುಂಗಲಾರದ ತುತ್ತಾಗಿದೆ. …
Read More »