Breaking News

Uncategorized

ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 32 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇಮಕಾತಿ ಮಾಡುವ ಕುರಿತಂತೆ ತಾತ್ಕಾಲಿಕ 1:1 ಆಯ್ಕೆಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜ.23 ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ ಸ್ಪರ್ಧಾತ್ಮಕ ಪರೀಕ್ಷೆಯ …

Read More »

ಕೊಪ್ಪಳ ಗವಿಮಠ ಜಾತ್ರೆ: 15 ಲಕ್ಷ ಸಾವಯವ ಬೆಲ್ಲದ ಜಿಲೇಬಿ ತಯಾರು

ಕೊಪ್ಪಳ: ಇಲ್ಲಿನ ಪ್ರಸಿದ್ಧ ಗವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವದಲ್ಲಿ ತರಹೇವಾರಿ ದಾಸೋಹವೇ ವಿಶೇಷ. ಪ್ರತಿವರ್ಷವೂ ಒಂದೊಂದು ರೀತಿಯಲ್ಲಿ ಸಿಹಿ ತಿನಿಸು ತಯಾರಿಸುವ ಸಿಂಧನೂರಿನ ಸಮಾನ ಮನಸ್ಕ ಗೆಳೆಯರ ಬಳಗದವರು ಈ ಬಾರಿ ಲಕ್ಷಾಂತರ ಜನರಿಗೆ ಸಾವಯವ ಬೆಲ್ಲದ ಜಿಲೇಬಿಗಳನ್ನು ಉಣಬಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಸ್ನೇಹಿತರ ತಂಡದ ಸದಸ್ಯರು ಹಿಂದಿನ ಎರಡು ವರ್ಷಗಳಿಂದ ಐದು ಲಕ್ಷಕ್ಕೂ ಹೆಚ್ಚು ಶೇಂಗಾ ಹೋಳಿಗೆಗಳನ್ನು ತಮ್ಮೂರಿನಲ್ಲಿ ತಯಾರಿಸಿಕೊಂಡು ಬಂದು ಇಲ್ಲಿನ ದಾಸೋಹಕ್ಕೆ ನೀಡಿದ್ದರು. ಈ ಸಲ …

Read More »

ಜಾತಿ ವ್ಯವಸ್ಥೆ ತೊಲಗಿ ಸಮ ಸಮಾಜ ನಿರ್ಮಾಣಕ್ಕೆ ಅಂತರ್ಜಾತಿ ವಿವಾಹ ಹೆಚ್ಚಾಗಲಿ: ಸಿಎಂ ಸಿದ್ದರಾಮಯ್ಯ

ಹಗರಿಬೊಮ್ಮನಹಳ್ಳಿ: ಬಸವಣ್ಣ ನವರು ಅಂತರ್ಜಾತಿ ವಿವಾಹ ಉತ್ತೇಜಿಸಿದ್ದರು, ಆದೇ ರೀತಿ ಈಗ ನಾವೆಲ್ಲ ಅಂತಹ ವಿವಾಹ ಉತ್ತೇಜಿಸುವ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿರಾಜ್ ಶೇಖ್ ಅವರ ಮಗನ ಮದುವೆ ಜತೆಗೆ ಹಮ್ಮಿಕೊಂಡ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾತಿ ವ್ಯವಸ್ಥೆ ತೊಲಗಿ ಸಮ ಸಮಾಜ ನಿರ್ಮಾಣವಾಗಲು ಅಂತರ್ಜಾತಿ ವಿವಾಹ ಹೆಚ್ಚಬೇಕು ಎಂದರು. ಲಂಬಾಣಿ ಸಮುದಾಯ …

Read More »

ಕೇಂದ್ರ ಸರ್ಕಾರದಿಂದ ಜಾತಿ ಗಣತಿ ಮಾಡಲು ತೀರ್ಮಾನ: ಕೇಂದ್ರ ಸಚಿವ ಎಚ್ಡಿಕೆ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದಿಂದ ಈಗಾಗಲೇ ಜಾತಿ ಗಣತಿ ಮಾಡಿ ಸುಮಾರು 12 ವರ್ಷಗಳು ಕಳೆದಿವೆ. ಈಗ ಸಾಕಷ್ಟು ಬದಲಾವಣೆ ಆಗಿದೆ. ಈಗ ಆ ವರದಿ ಅಪ್ರಸ್ತುತ. ಹೀಗಾಗಿ ಕೇಂದ್ರ ಸರ್ಕಾರದಿಂದ ಜಾತಿ ಗಣತಿ ಮಾಡಲು ತೀರ್ಮಾನಿಸಲಾಗಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ತಾಲ್ಲೂಕಿನ ಹಾಡೋನಹಳ್ಳಿಯಲ್ಲಿ ಮಾತನಾಡಿ, 10 ವರ್ಷಕ್ಕೊಮ್ಮೆ ಜಾತಿ ಗಣತಿ ಮಾಡಬೇಕು. ಅದನ್ನು ಈಗಿನ ಕಾಂಗ್ರೆಸ್‌ ಸರ್ಕಾರ ಮಾಡಿಲ್ಲ. ಹೊಸದಾಗಿ ರಾಜ್ಯ ಸರ್ಕಾರ ಜಾತಿ …

Read More »

ಕಲಬುರಗಿ: ಗಣರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಕ್ರಮ ವಹಿಸಿ; ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ : 76ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ತಿಳಿಸಿದರು. ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲಿ 76ನೇ ಗಣರಾಜ್ಯೋತ್ಸವನ್ನು ಆಚರಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾರಂಭವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಗುವುದು. ಜ.26 ರಂದು ಬೆಳಿಗ್ಗೆ 9ಗಂಟೆಗೆ ಪೋಲಿಸ್ ಗ್ರೌಂಡ್ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ …

Read More »

ನನಗೆ ಯಾರ ಬೆಂಬಲವು ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿಕೆಶಿ

ಶೃಂಗೇರಿ: ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಗಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ ಎಂದು ಕೇಳಿದಾಗ, ‘ನನ್ನ ಪರವಾಗಿ ಯಾರೂ ಒತ್ತಾಯ ಮಾಡುವುದು ಬೇಡ. ನನಗೆ ಯಾರ ಬೆಂಬಲವೂ …

Read More »

2024-25ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ವಿಮೆ ಮಾಡಿಸಿದವರು ಬೆಳೆ ಸಮೀಕ್ಷೆ ಆಯಪ್ ನಲ್ಲಿ ನೋಂದಾಯಿಸುವುದು ಕಡ್ಡಾಯ

ಬೆಂಗಳೂರು: 2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಆಯಪ್ ಬಿಡುಗಡೆ ಮಾಡಿದ್ದು ರೈತರು ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಬೆಳೆ ಸಮೀಕ್ಷೆ ಆಯಪ್‍ನಲ್ಲಿ ನೋಂದಾಯಿಸಬೇಕು. ಸರಕಾರದ ವಿವಿಧ ಯೋಜನೆಗಳಾದ ಫಸಲ ಭೀಮಾ ಯೋಜನೆ, ಬೆಳೆ ಪರಿಹಾರ, ಬೆಂಬಲ ಬೆಲೆ ಯೋಜನೆಗಳ ಸೌಲಭ್ಯವನ್ನು ಪಡೆಯಲು ಬೆಳೆ ಸಮೀಕ್ಷೆ ಮಾಡುವುದು ಅವಶ್ಯಕವಾಗಿರುತ್ತದೆ. ಬೆಳೆ ವಿಮೆ ಮಾಡಿಸಿದ ರೈತರು ಕಡ್ಡಾಯವಾಗಿ ತಾವು ಬೆಳೆದ ಬೆಳೆಯನ್ನು ಬೆಳೆ ಸಮೀಕ್ಷೆಯಡಿ ನೋಂದಾಯಿಸಬೇಕು. ಬೆಳೆ ಸಮೀಕ್ಷೆ …

Read More »

ಆಂಧ್ರ ಪ್ರದೇಶದಲ್ಲಿ 2 ಲಕ್ಷ ಕೋಟಿ ರೂ.ಗಳ ಬಹು ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ವಿಶಾಖಪಟ್ಟಣ: ಆಂಧ್ರಪ್ರದೇಶದಲ್ಲಿ ಪ್ರಧಾನಿ ಮೋದಿ ಇಂದು 2 ಲಕ್ಷ ಕೋಟಿ ರೂ.ಗಳ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಈ ವೇಳೆ ಮಾತನಾಡಿದ ಮೋದಿ, ನಾವು ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತೇವೆ ಎಂದಿದ್ದಾರೆ. ಆಂಧ್ರಪ್ರದೇಶವು ಸಾಧ್ಯತೆಗಳು ಮತ್ತು ಅವಕಾಶಗಳ ರಾಜ್ಯವಾಗಿದೆ. ಆಂಧ್ರದಲ್ಲಿನ ಈ ಸಾಧ್ಯತೆಗಳನ್ನು ಅರಿತುಕೊಂಡಾಗ ಆಂಧ್ರವೂ ಅಭಿವೃದ್ಧಿ ಹೊಂದುತ್ತದೆ ಮತ್ತು ಆಗ ಮಾತ್ರ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತದೆ ಎಂದು …

Read More »

ಯುಜಿಸಿ ನೇಮಕಾತಿ ನಿಯಮಗಳಿಗೆ ತಿದ್ದುಪಡಿ: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ …

Read More »

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು. ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು …

Read More »