Breaking News

Uncategorized

ಸರ್ಕಾರಿ ಭೂಮಿ ಮತ್ತು ಅರಣ್ಯಗಳಲ್ಲಿ ಯಾವುದೇ ಅನಧಿಕೃತ ನಿರ್ಮಾಣಗಳು ತಲೆಯೆತ್ತುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಆಸ್ತಿ ಧ್ವಂಸ ವಿಚಾರದಲ್ಲಿ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಮೀಸಲಾಗಿರದೆ ಎಲ್ಲಾ ಧರ್ಮದ ನಾಗರಿಕರಿಗೆ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಕೋರ್ಟ್ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಹೊರತು ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು ಆಸ್ತಿ ಧ್ವಂಸಕ್ಕೆ ಆಧಾರವಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ನಮ್ಮದು ಜಾತ್ಯತೀತ ರಾಷ್ಟ್ರ ಇಲ್ಲಿ ನ್ಯಾಯಾಲಯ ಹೊರಡಿಸುವ ಆದೇಶ ಎಲ್ಲಾ ನಾಗರಿಕರಿಗೂ, ಸಂಸ್ಥೆಗಳಿಗೂ ಅನ್ವಯವಾಗುತ್ತವೆ ಹೊರತು ನಿರ್ದಿಷ್ಟ …

Read More »

ಶ್ರೀಲಂಕಾದಲ್ಲಿ ಕೇವಲ ಮೂರು ಮಂತ್ರಿಗಳೊಂದಿಗೆ ನಡೆದ ಮೊದಲ ಸಚಿವ ಸಂಪುಟ ಸಭೆ

ಕೊಲಂಬೊ: ನ್ಯಾಷನಲ್‌ ಪೀಪಲ್ಸ್‌ ಪವರ್‌ ಪಕ್ಷದ ನೇತೃತ್ವದಲ್ಲಿ ನೂತನವಾಗಿ ರಚನೆಯಾದ ಸರ್ಕಾರದಲ್ಲಿ ಕೇವಲ ಮೂವರು ಮಂತ್ರಿಗಳೊಂದಿಗೆ ಮೊದಲ ಸಚಿವ ಸಂಪುಟ ಸಭೆ ನಡೆದಿದೆ. ನೂತನವಾಗಿ ನೇಮಕಗೊಂಡ ಅಧ್ಯಕ್ಷ ಅನುರ ಕುಮಾರ ಡಿಸಾನಾಯಕೆ ಮತ್ತು ಪ್ರಧಾನ ಮಂತ್ರಿ ಡಾ.ಹರಿಣಿ ಅಮರಸೂರ್ಯ ಅವರೊಂದಿಗೆ ಸಚಿವ ಸಂಪುಟದ ವಕ್ತಾರ ವಿಜಿತ್‌ ಹೆರಾತ್‌ ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಇದು ಅತ್ಯಂತ ಚಿಕ್ಕ ಸಚಿವ ಸಂಪುಟ ಸಭೆ ಎಂದು ವಿಜಿತ್ ಅವರು ತಿಳಿಸಿದ್ದಾರೆ. ನ.14 ರಂದು …

Read More »

ಎಡಿಜಿಪಿ ಚಂದ್ರಶೇಖ‌ರ್ ಅವರಿಗೂ ತಕ್ಕ ಪಾಠ ಕಲಿಸಬೇಕಾಗುತ್ತದೆ : ಅರವಿಂದ ಬೆಲ್ಲದ್

ಧಾರವಾಡ: ಉದ್ದಟತನ ಪ್ರದರ್ಶಿಸಿದ ಹಲವು ಅಧಿಕಾರಿಗಳು ಈ ದೇಶದಲ್ಲಿ ಪಾಠ ಕಲಿತಿದ್ದಾರೆ. ಎಡಿಜಿಪಿ ಚಂದ್ರಶೇಖ‌ರ್ ಅವರಿಗೂ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಎಡಿಜಿಪಿ ಚಂದ್ರಶೇಖರ ಅವರು ಜಾರ್ಜ್ ಫರ್ನಾಂಡಿಸ್ ಹೆಸರು ಉಲ್ಲೇಖ ಮಾಡಿ, ಅವರು ಬಳಸಿದಂತ ಪದ ಯಾರೂ ಒಪ್ಪುವಂತದ್ದಲ್ಲ. ಅವರು ಹಿರಿಯ ಐಪಿಎಸ್ ಅಧಿಕಾರಿ ಎಂದು ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದಾರೆ. ಉದ್ದಟತನ ತೋರಿದ …

Read More »

ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ವಶಪಡಿಸಿಕೊಳ್ಳುವುದು ಮುಖ್ಯ: ಕೇಂದ್ರ ಸಚಿವ ಎಸ್ ಜೈಶಂಕರ್‌

ನವದೆಹಲಿ: ಕಾಶ್ಮೀರ ವಿಷಯದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಈಗ ಉಭಯ ದೇಶಗಳ ನಡುವೆ ಪರಿಹರಿಸಬೇಕಾದ ಸಮಸ್ಯೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಭಾರತ ವಶಪಡಿಸಿಕೊಳ್ಳುವುದು ಮಾತ್ರ ಎಂದು ಹೇಳಿದ್ದಾರೆ. ವಿಶ್ವಸಂಸ್ಥೆಯ 79 ನೇ ಸಾಮಾನ್ಯ ಸಭೆಯ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ನಾವು ನಿನ್ನೆ ಇದೇ ವೇದಿಕೆಯಿಂದ ಕೆಲವು ವಿಲಕ್ಷಣ ಪ್ರತಿಪಾದನೆಗಳನ್ನು ಕೇಳಿದ್ದೇವೆ. ನಾನು ಭಾರತದ ನಿಲುವನ್ನು ಸ್ಪಷ್ಟಪಡಿಸುತ್ತೇನೆ. ಗಡಿಯಾಚೆಗಿನ ಭಯೋತ್ಪಾದನೆಯ ಪಾಕಿಸ್ತಾನದ ನೀತಿ …

Read More »

ಪೇಪರ್ ಖಾತಾಗಳಲ್ಲಿ ನಕಲಿ ನೋಂದಣಿ ತಡೆಗಟ್ಟಲು ಇ-ಖಾತಾ ಕಡ್ಡಾಯ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಪೇಪರ್ ಖಾತಾಗಳ ಆಧಾರದಲ್ಲಿ ಆಗುತ್ತಿರುವ ನಕಲಿ ನೋಂದಣಿಗಳನ್ನು ತಡೆಗಟ್ಟಲು ಇ-ಖಾತಾ ಕಡ್ಡಾಯ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಕೃಷಿಯೇತರ ಚಟುವಟಿಕೆಗಳಿಗೆ ಬಳಸಲಾಗುವ ಜಮೀನನ್ನು ಇ-ಸ್ವತ್ತು ಎಂದು ಕರೆದರೆ ನಗರ ಭಾಗರದಲ್ಲಿ ಇ-ಆಸ್ತಿ ಎನ್ನಲಾಗುತ್ತದೆ. ಈ ತಿಂಗಳಿನಿಂದ ನೋಂದಣಿ ಪ್ರಕ್ರಿಯೆಗೆ ಇ-ಖಾತಾ ಕಡ್ಡಾಯ ಎಂದು 12 ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಮುಂದಿನ ವಾರದಿಂದ ರಾಜ್ಯದ …

Read More »

ರಾಜಭವನದ ವಿರುದ್ಧ ನೇರ ಸಂಘರ್ಷಕ್ಕೆ ಇಳಿದ ಕಾಂಗ್ರೆಸ್ ಸರ್ಕಾರ

ಬೆಂಗಳೂರು: ರಾಜ್ಯಪಾಲರಿಂದ ಬರುವ ಯಾವುದೇ ಪತ್ರಗಳಿಗೆ ಮುಖ್ಯ ಕಾರ್ಯದರ್ಶಿ ಸೇರಿದಂತೆ ಯಾವುದೇ ಅಧಿಕಾರಿ ಉತ್ತರ ಕೊಡುವಂತಿಲ್ಲ ಎಂದು ಸರ್ಕಾರ ತಾಕೀತು ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರಾಜಭವನದ ವಿರುದ್ಧ ನೇರ ಸಂಘರ್ಷಕ್ಕೆ ಇಳಿದಿದೆ. ರಾಜ್ಯಪಾಲರು ಬಯಸುವ ಯಾವುದೇ ಮಾಹಿತಿ, ವರದಿಗಳನ್ನು ಸರ್ಕಾರದ …

Read More »

ಚೀನಾದ ಜಲಾಂತರ್ಗಾಮಿ ಹಡಗು ಮುಳುಗಡೆ

ಚೀನಾ: ಚೀನಾದ ಪರಮಾಣು ಸಾಮರ್ಥ್ಯದ ಜಲಾಂತರ್ಗಾಮಿ ಸಮುದ್ರದಲ್ಲಿ ಮುಳುಗಡೆ ಆಗಿದೆ ಎಂದು ಅಮೆರಿಕ ಹೇಳಿದೆ. ಇತ್ತೀಚೆಗೆ ಭಾರತ ಸೇರಿದಂತೆ ನೆರೆಯ ರಾಜ್ಯಗಳ ಮೇಲೆ ಸೇನಾ ಸಾಮರ್ಥ್ಯ ಬಲ ಪ್ರದರ್ಶನಕ್ಕೆ ಮುಂದಾಗಿರುವ ಚೀನಾದ ಪರಮಾಣು ದಾಳಿ ನಡೆಸುವ ಸಾಮರ್ಥ್ಯದ ಜಲಂತರ್ಗಾಮಿ ಹಡಗು ಮುಳುಗಡೆ ಆಗಿದೆ. ಆದರೆ ಮುಳುಗಡೆಯ ವಿವರ ಬಹಿರಂಗಗೊಂಡಿಲ್ಲ. ವಿಶ್ವದ ಅತಿದೊಡ್ಡ ನೌಕಾಪಡೆ ಹೊಂದಿರುವ ಚೀನಾ ಬಳಿ ಈಗಾಗಲೇ 370ಕ್ಕೂ ಹೆಚ್ಚು ಜಲಂತಾರ್ಗಾಮಿ ಹಡಗು ಇದೆ. ಇತ್ತೀಚೆಗೆ ಹೊಸ ಪೀಳಿಗೆಯ …

Read More »

ರೈಲ್ವೆ ಕಾಮಗಾರಿಗಳ ನಿರ್ಮಾಣ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರೈಲ್ವೇ ಕಾಮಗಾರಿಗಳ ನಿರ್ಮಾಣ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ನಡೆಸಿ ಹಾವೇರಿಯಲ್ಲಿ ವಂದೇ ಭಾರತ ರೈಲು ನಿಲುಗಡೆಗೆ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಹುಬ್ಬಳ್ಳಿಯ ರೈಲ್ ಸೌಧದಲ್ಲಿ ನಡೆದ ಸಭೆಯಲ್ಲಿ ಗದಗ ಹಾವೇರಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಚಾಲನೆಯಲ್ಲಿರುವ ರೈಲ್ವೆ ಯೋಜನೆಗಳ …

Read More »

ಜಿಲ್ಲೆಯಾದ್ಯಂತ ಮಳೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸಚಿವ ಎಂ ಬಿ ಪಾಟೀಲ್ ಸೂಚನೆ

ವಿಜಯಪುರ: ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಡೀ ಸುರಿದ ಧಾರಕಾರ ಮಳೆಯ ಹಿನ್ನೆಲೆಯಲ್ಲಿ ಕೂಡಲೇ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ. ಎಲ್ಲ ತಾಲೂಕುಗಳ ತಹಸೀಲ್ದಾರರಿಂದ ಮಳೆಯ ಪ್ರಮಾಣ ಮತ್ತು ಅದರಿಂದ ಉಂಟಾಗಿರುವ ಆಸ್ತಿ ಪಾಸ್ತಿ ಹಾನಿಯ ಕುರಿತು ಕೂಡಲೇ …

Read More »

ಕಲ್ಯಾಣ ಕರ್ನಾಟಕಕ್ಕೆ ಶೀಘ್ರದಲ್ಲೆ 5 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಶೀಘ್ರದಲ್ಲೇ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ತಾಲ್ಲೂಕಿನ ಅರಕೇರಾ (ಕೆ) ಮಕ್ಕಳ ಪೌಷ್ಟಿಕತೆ ವೃದ್ಧಿಸಲು ಹಮ್ಮಿಕೊಂಡ ಮೊಟ್ಟೆ ವಿತರಣೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಲ್ಯಾಣ ಭಾಗದಲ್ಲಿ ಶೇ 80 ರಷ್ಟು ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುವುದು. ಮೂರನೇ ಶನಿವಾರ ಬ್ಯಾಗ್ ಇಲ್ಲದ ದಿನವನ್ನು ಮಾಡಿದ್ದು, ಡಿಡಿಪಿಐಯವರು …

Read More »