Breaking News

Uncategorized

ಕಾಂಗ್ರೆಸ್‌ ನಾಯಕರು ರಾಜಕೀಯ ನಿರುದ್ಯೋಗಿಗಳಾಗಿದ್ದಾರೆ : ಸುಧಾಕರ್ ಕಿಡಿ

ಬೆಂಗಳೂರು: “ಕಾಂಗ್ರೆಸ್‌ ನಾಯಕರು ರಾಜಕೀಯ ನಿರುದ್ಯೋಗಿಗಳಾಗಿದ್ದಾರೆ. ಹೀಗಾಗಿಯೇ ಅವರೆಲ್ಲ ನಾಯಕತ್ವ ಬದಲಾವಣೆ ಕುರಿತು ಸುಳ್ಳು ಸುದ್ದಿ ಹರಡುವ ಮೂಲಕ ತಾವು ಸುದ್ದಿಯಲ್ಲಿರುವ ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕಿಡಿ ಕಾರಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನಾಯಕತ್ವ ಬದಲಾವಣೆ ಕುರಿತು ಸುಳ್ಳು ಸುದ್ದಿ ಹೇಳುವ ಮೂಲಕ ರಾಜಕೀಯ ನಿರುದ್ಯೋಗಿಗಳಾಗಿರುವ ಕಾಂಗ್ರೆಸ್‌ ನಾಯಕರು ತಾವು ಸುದ್ದಿಯಲ್ಲಿರಲು ಪ್ರಯತ್ನಿಸುತ್ತಿದ್ದಾರೆ. ರಾಜಕೀಯವಾಗಿ ಕ್ರಿಯಾಶೀಲರಾಗಿರಲು ಕಾಂಗ್ರೆಸ್‌ ನಾಯಕರು …

Read More »

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಬೆಂಗಳೂರು : ಕಾಡು ಕುದುರೆ ಓಡಿ ಬಂದಿತ್ತ ಖ್ಯಾತಿಯ, ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಸುಬ್ಬಣ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರನ್ನು ಜಯನಗರದ ಶಾಂತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಹೃದಯಾಘಾತ ಆಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲು ಆಯಂಬುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಆಗ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

Read More »

ರಾಜ್ಯದಲ್ಲಿ ಕೋವಿಡ್ ಮೂರನೇ ಡೋಸ್ ಉಚಿತವಾಗಿ ನೀಡುತ್ತಿದ್ದರೂ ಜನ ಪಡೆದುಕೊಳ್ಳುತ್ತಿಲ್ಲ : ಡಾ.ಕೆ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಮೂರನೇ ಡೋಸ್ ಉಚಿತವಾಗಿ ನೀಡುತ್ತಿದ್ದರೂ ಜನ ಪಡೆದುಕೊಳ್ಳುತ್ತಿಲ್ಲ. ಮೂರನೇ ಡೋಸ್ ಪಡೆದವರು ಶೇಕಡ 17ರಷ್ಟು ಜನ ಮಾತ್ರ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಜನ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಸಚಿವರು, ಲಸಿಕೆ ಪಡೆದರೆ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾದರೂ ಸಾವು ಸಂಭವಿಸುವ ಸ್ಥಿತಿ ಸೃಷ್ಟಿಯಾಗಲ್ಲ. ಉತ್ತಮ ಆರೋಗ್ಯಕ್ಕಾಗಿ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಮೊದಲ ಮತ್ತು ಎರಡನೇ …

Read More »

ಹಾಸ್ಯನಟ ರಾಜು ಶ್ರೀವಾಸ್ತವ್ ಗೆ ಹೃದಯಾಘಾತ : ಸ್ಥಿತಿ ಗಂಭೀರ

ನವದೆಹಲಿ: ಹಾಸ್ಯ ನಟ ಎಲ್ಲರ ಪ್ರೀತಿಗೆ ಪಾತ್ರವಾಗಿರುವ ರಾಜು ಶ್ರೀವಾಸ್ತವ್ ಸ್ಥಿತಿ ಗಂಭೀರವಾಗಿದ್ದು ಅಭಿಮಾನಿಗಳಿಗೆ ಸಂಕಷ್ಟ ಉಂಟಾಗಿದೆ. ನಿನ್ನೆ ಜಿಮ್‌ ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್ ಗೆ ಹೃದಯಾಘಾತ ಸಂಭವಿಸಿತ್ತು ಹೀಗಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರಾಜು ಶ್ರೀವಾಸ್ತವ್ ಅವರ ಆರೋಗ್ಯ …

Read More »

ಪ್ರಧಾನಿ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕಾಲಾ ಜಾದು(ಬ್ಲಾಕ್ ಮ್ಯಾಜಿಕ್) ಗೇಲಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ನಿರುದ್ಯೋಗ ಮತ್ತು ಬೆಲೆ ಏರಿಕೆ ವಿರುದ್ಧ ಆಗಸ್ಟ್ 5 ರಂದು ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯನ್ನು ಗುರಿಯಾಗಿಟ್ಟುಕೊಂಡು ಪ್ರಧಾನಿ ಮೋದಿ ‘ಕಾಲಾ ಜಾದು’ ಎಂದು ಗೇಲಿ ಮಾಡಿದ್ದರು. ‘ನಿಮ್ಮ ಶೋಷಣೆಗಳನ್ನು ಮರೆಮಾಚಲು ‘ಕಾಲ ಜಾದು’ ಎಂಬ ಮೂಢನಂಬಿಕೆಯ ಪದಗಳನ್ನು ಬಳಸುವುದನ್ನು ನಿಲ್ಲಿಸಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. “ಪ್ರಧಾನ ಮಂತ್ರಿ ಜೀ, …

Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : 3 ಜನ ಬಂಧನ

ಪುತ್ತೂರು: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ವರದಿಯಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದ ಪ್ರಮುಖ ಆರೋಪಿಗಳಾದ ಶಿಯಾಬ್, ಬಶೀರ್ ಮತ್ತು ರಿಯಾಜ್ ರನ್ನು ಬಂಧನ ಮಾಡಲಾಗಿದ್ದು, ಮೂವರು ಸುಳ್ಯ ಮೂಲದವರು ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಪೊಲೀಸರು ಆರೋಪಿಗಳನ್ನು ಸುಳ್ಯದಿಂದ ಮಂಗಳೂರಿಗೆ ಕರೆದುಕೊಂಡು ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.‌ ಮಧ್ಯಾಹ್ನ …

Read More »

ರಾಜ್ಯದಲ್ಲಿ ಕೊರೋನಾ ಸಾವಿನ್ನ ಪ್ರಕರಣ ಏರಿಕೆ

ಬೆಂಗಳೂರು : ಕಳೆದೊಂದು ತಿಂಗಳಿನಿಂದ ಕೋವಿಡ್‌ ಪ್ರಕರಣಗಳಲ್ಲಿ ಏರಿಕೆ ಕಂಡಿದ್ದ ರಾಜ್ಯದಲ್ಲಿ ಇದೀಗ ಸೋಂಕಿತರ ಸಾವಿನ ಪ್ರಮಾಣವೂ ಏರುತ್ತಿದೆ. ಯಾವುದೇ ಸಹ ಅಸ್ವಸ್ಥತೆ ಹೊಂದಿಲ್ಲದ 20 ವರ್ಷದ ಯುವತಿಯೊಬ್ಬಳು ಸೇರಿದಂತೆ ಬುಧವಾರ ಒಟ್ಟು ಐವರು ಸೋಂಕಿತರು ಮರಣವನ್ನಪ್ಪಿದ್ದಾರೆ. 24,504 ಮಂದಿ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದು 1,680 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಪಾಸಿಟಿವಿಟಿ ದರ ಶೇ.6.80ಕ್ಕೆ ಏರಿದೆ. 10,351 ಸಕ್ರಿಯ ಪ್ರಕರಣಗಳಿವೆ. ಮಾರ್ಚ್‌ 18 ರಂದು ಐವರು ಸೋಂಕಿತರು ಮರಣವನ್ನಪ್ಪಿದ್ದರು. ಇದಾಗಿ …

Read More »

ರಾಷ್ಟ್ರಧ್ವಜಕ್ಕೆ ಅಪಮಾನ : ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ವಿರುದ್ಧ ದೂರು ದಾಖಲಾಗಿದೆ. ರಾಷ್ಟ್ರಧ್ವಜಕ್ಕೆ  ಅಪಮಾನ ಮಾಡಿದ್ದಾರೆ ಅಂತಾ ಆರೋಪಿಸಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಲಾಗಿದೆ. ಚಿಕ್ಕಮಗಳೂರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ಮುಖಂಡ  ಸಿ.ಟಿ.ರವಿ ಸ್ವಗ್ರಾಮ ಚಿಕ್ಕಮಾಗರಹಳ್ಳಿಯ ಯುವಕರು ದೂರು ದಾಖಲಿಸಿದ್ದಾರೆ. ರಾಷ್ಟ್ರಧ್ವಜದ ಬಣ್ಣ  ವಿವರಿಸುವ ವೇಳೆ ಸಿದ್ದರಾಮಯ್ಯ ಕೇಸರಿ, ಬಿಳಿ, ಹಸಿರು ಎನ್ನುವ ಬದಲು ಕೇಸರಿ ಜಾಗದಲ್ಲಿ ಕೆಂಪು  ಎಂದಿದ್ದರು. ಇದು ಆಕ್ರೋಶಕ್ಕೆ ಕಾರಣವಾಗಿದ್ದು ಈಗ ದೂರು ದಾಖಲಾಗಿದೆ. …

Read More »

ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್​ ಪಾಟೀಲ್ ಅವರ ತಂದೆ ನಿಧನ

ಮುದ್ದೇಬಿಹಾಳ: ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್​ ಪಾಟೀಲ್ ಅವರ ತಂದೆ ಸಂಗನಗೌಡ ಭೀಮನಗೌಡ ಪಾಟೀಲ್ (98) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಪತ್ನಿ ಚನ್ನಮಗೌಡತಿ, ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧು – ಬಳಗವನ್ನು ಮೃತರು ಅಗಲಿದ್ದಾರೆ. ಸಂಗನಗೌಡರು ಮುದ್ದೇಬಿಹಾಳ ತಾಲೂಕಿನ ಪಡೇಕನೂರ ಗ್ರಾಮದ ಪ್ರಗತಿ ಪರ ರೈತರಾಗಿದ್ದರು. ಕಳೆದ ಕೆಲವು ತಿಂಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆ.11ರಂದು ಮಧ್ಯಾಹ್ನ ಪಡೇಕನೂರ ಗ್ರಾಮದ ತೋಟದಲ್ಲಿ ಅಂತ್ಯಕ್ರಿಯೆ …

Read More »

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿ.ಟಿ. ರವಿ ನೇಮಕ‌‌ ಸಾಧ್ಯತೆ

ಬೆಂಗಳೂರು: ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬಿಜೆಪಿ ಕೇಂದ್ರ ಸಮಿತಿಯಲ್ಲಿ ಈಗಾಗಲೇ 8 ಮಂದಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಿದ್ದು, ಬುಧವಾರ ಉತ್ತರ ಪ್ರದೇಶದ ಸುನಿಲ್ ಬನ್ಸಾಲ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಹೀಗಾಗಿ, ಸಿ.ಟಿ. ರವಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ನಿರ್ಗಮಿಸಿ ರಾಜ್ಯ ಅಧ್ಯಕ್ಷರಾಗಿ ನೇಮಕವಾಗುವ ಸಾಧ್ಯತೆ ಇದೆ. ಪ್ರಸ್ತುತ …

Read More »