Breaking News

Uncategorized

ಮಣಿಪುರ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ: 7ನೇ ವೇತನ ಆಯೋಗ ಅನ್ವಯ ಡಿಎ ಏರಿಕೆ

ನವದೆಹಲಿ: ಹೊಸ ವರ್ಷ ಆರಂಭವಾಗುವ ಕೆಲವೇ ಹೊತ್ತಿಗೆ ಮೊದಲು ಮಣಿಪುರ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯನ್ನು ನೀಡಿದೆ. 7ನೇ ವೇತನ ಆಯೋಗದ ವರದಿಯ ಅನ್ವಯ ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ತುಟ್ಟಿ ಭತ್ಯೆಯ ದರಗಳನ್ನು ಪರಿಷ್ಕರಣೆ ಮಾಡಿ ಆದೇಶವನ್ನು ಹೊರಡಿಸಿದೆ. ಇನ್ನು ಮುಂದೆ ರಾಜ್ಯ ಸರ್ಕಾರಿ ನೌಕರರು ಶೇ 32ರ ಬದಲು ಶೇ 39ರಷ್ಟು ತುಟ್ಟಿಭತ್ಯೆಯನ್ನು ಪಡೆಯಲಿದ್ದಾರೆ. ಈ ಕುರಿತ ಕಡತಕ್ಕೆ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ …

Read More »

ಶೀಘ್ರವೇ ರೈಲ್ವೆ, ಜಲಶಕ್ತಿ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ: ಕೇಂದ್ರ ಸಚಿವ ಸೋಮಣ್ಣ

ಬೆಂಗಳೂರು : ರೈಲ್ವೇ, ಜಲಶಕ್ತಿ ಇಲಾಖೆಯಲ್ಲಿ ಶೀಘ್ರವೇ 60,000 ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಇಲಾಖೆ ಸಚಿವ ವಿ. ಸೋಮಣ್ಣ ಘೋಷಣೆ ಮಾಡಿದ್ದಾರೆ. ಅರಮನೆ ಮೈದಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೈಲ್ವೇ, ಜಲಶಕ್ತಿ ಇಲಾಖೆಯಲ್ಲಿ ಶೀಘ್ರವೇ 60,000 ಉದ್ಯೋಗಿಗಳ ನೇಮಕ ಮಾಡಲಾಗುತ್ತದೆ, ಕನ್ನಡಿಗರು ಇದರ ಸದುಪಯೋಗ ಪಡೆಯಬೇಕು ಎಂದರು. ರೈಲ್ವೆ ಇಲಾಖೆಯ ನೇಮಕಾತಿಗಳಿಗೆ ಹಿಂದಿ ಭಾಷೆಯಲ್ಲಿ …

Read More »

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಇಂದು ಪಂಜಾಬ್ ಬಂದ್: ರಸ್ತೆ, ರೈಲು ಸಂಚಾರ ಸ್ಥಗಿತ

ಚಂಡೀಗಢ: ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನು ಖಾತ್ರಿಗೆ ಆಗ್ರಹಿಸಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಬಂದ್ ಆಚರಿಸುತ್ತಿರುವ ಕಾರಣ ರಾಜ್ಯದ ಹಲವೆಡೆ ರಸ್ತೆ ಮತ್ತು ರೈಲು ಸಂಚಾರ ಸ್ಥಗಿತಗೊಂಡಿದ್ದು, ವಾಣಿಜ್ಯ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ರೈತರು ತಮ್ಮ ಬಂದ್ ಕರೆ ಅಂಗವಾಗಿ ಹಲವು ರಸ್ತೆಗಳಲ್ಲಿ ಧರಣಿ ನಡೆಸಿ, ಪ್ರಯಾಣಿಕರ ಸಂಚಾರಕ್ಕೆ ಅಡ್ಡಿಪಡಿಸಿದರು. ಪ್ರತಿಭಟನಾನಿರತ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ …

Read More »

ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ನ್ಯಾಯ ಸಿಗಲು ಸಿಬಿಐ ತನಿಖೆ ಆಗಬೇಕು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ನ್ಯಾಯಕ್ಕಾಗಿ ಸಿಬಿಐ ತನಿಖೆ ಆಗಬೇಕು ಎಂದು ಸಚಿನ್ ಕುಟುಂಬವೂ ಒತ್ತಾಯಿಸಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಹಿಂದೆ, ಇದೇ ಸರಕಾರದ ಸಚಿವ ನಾಗೇಂದ್ರ ಅವರೂ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ರಾಜೀನಾಮೆ ಕೊಟ್ಟಿದ್ದಾರೆ. …

Read More »

ಬಜೆಟ್ ಸಿದ್ಧತೆಗಾಗಿ ಇಂದು ವಿವಿಧ ಉದ್ಯಮ ವಲಯದ ಪ್ರತಿನಿಧಿಗಳ ಜೊತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸಭೆ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಸಿದ್ಧತೆ ಭರದಿಂದ ಸಾಗುತ್ತಿದ್ದು ಬಹುತೇಕ ಅಂತಿಮ ಹಂತಕ್ಕೆ ಬಂದಿದೆ. ಉದ್ಯಮ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಪ್ರಮುಖ ಭಾಗಿದಾರರು ಮತ್ತು ಪ್ರತಿನಿಧಿಗಳ ಜೊತೆ ಅವರು ಬಜೆಟ್ ಪೂರ್ವಭಾವಿ ಚರ್ಚೆಗಳನ್ನು ನಡೆಸಲಿದ್ದಾರೆ. ವರದಿಗಳ ಪ್ರಕಾರ ಇವತ್ತು ಈ ಮಹತ್ವದ ಸಭೆ ನಡೆಯಲಿದೆ. ಔದ್ಯಮಿಕ ಬೆಳವಣಿಗೆಯನ್ನು ಉತ್ತೇಜಿಸುವ, ಗುಣಮಟ್ಟದ ಆರೋಗ್ಯ ಉಪಚಾರದ ಸೌಲಭ್ಯ ಹೆಚ್ಚಿಸುವ ಹಾಗೂ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ನೀತಿಗಳನ್ನು ರೂಪಿಸಲು …

Read More »

ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ

ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಜಿಲ್ಲಾ ಬಂದ್ ಗೆ ಕರೆ ನೀಡಿವೆ. ನಗರದಲ್ಲಿ ಸಾರಿಗೆ ಬಸ್ ಸಂಚಾರ ಸ್ಥಗಿತವಾಗಿದ್ದು, ಅಂಗಡಿ ಮುಂಗಟ್ಟುಗಳು ಸಹ ಬಂದ್ ಆಗಿವೆ. ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಅಹಿಂದ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಅಂಬೇಡ್ಕರ್ ವಿಚಾರವಾದಿಗಳ …

Read More »

ಸಿಎಂ ನೇತೃತ್ವದಲ್ಲಿ ಸಾರಿಗೆ ಅಧಿಕಾರಿಗಳೊಂದಿಗೆ ಸಭೆ: ಮುಷ್ಕರ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೌಕರರ ಸಮಸ್ಯೆಗಳ ಬಗ್ಗೆ ಸಂಘಟನೆಗಳೊಂದಿಗೆ ಸಂಕ್ರಾಂತಿ ಬಳಿಕ ಸಭೆ ನಡೆಸುವುದಾಗಿ ಭರವಸೆ ನೀಡಿದ ಕಾರಣ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿ.31ರಂದು ನಡೆಸಲು ಉದ್ದೇಶಿಸಿದ ಮುಷ್ಕರವನ್ನು ಹಿಂದಕ್ಕೆ ಪಡೆದಿದೆ. 2020ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿತ್ತು. 2023ರ ಫೆಬ್ರುವರಿ 28ರವರೆಗೆ ಪರಿಷ್ಕರಣೆಯ ಹಿಂಬಾಕಿಯನ್ನು ಆಗಿನ ಸರ್ಕಾರ ನೀಡಿಲ್ಲ. ನೌಕರರ ಮತ್ತು …

Read More »

ಸ್ಟ್ಯಾಂಪ್ ಪೇಪರ್ ಗಳ ನಕಲಿ ಹಾವಳಿ ತಡೆಗೆ ಎ.1 ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿಗೆ ನಿರ್ಧಾರ

ಬೆಂಗಳೂರು: ನೋಂದಣಿಯೇತರ ಒಡಂಬಡಿಕೆಗಳಿಗಾಗಿ ಬಳಸುವ ಸ್ಟ್ಯಾಂಪ್ ಪೇಪರ್‌ಗಳ ನಕಲಿ ಹಾವಳಿ ಹೆಚ್ಚುತ್ತಿರುವುದನ್ನು ಪತ್ತೆ ಹಚ್ಚಿರುವ ಕಂದಾಯ ಇಲಾಖೆಯು ಎ. 1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿಗೆ ನಿರ್ಧರಿಸಿದ್ದು, ಸಬ್‌ ರಿಜಿಸ್ಟ್ರಾರ್‌ಗಳ ವಿಶೇಷ ಅಧಿಕಾರವನ್ನು ಮೊಟಕುಗೊಳಿಸಲು ಕಾನೂನು ತಿದ್ದುಪಡಿಗೆ ನಿರ್ಧರಿಸಿದೆ. ಸುಮಾರು 54 ಬಗೆಯ ನೋಂದಣಿಯೇತರ ಒಡಂಬಡಿಕೆ ಗಳಿಗಾಗಿ ಸ್ಟಾಂಪ್‌ ಪೇಪರ್‌ಗಳು ಬಳಕೆಯಾಗುತ್ತವೆ. ಮನೆ, ವಾಣಿಜ್ಯ ಮಳಿಗೆ ಒಪ್ಪಂದ ಪತ್ರ, ಸಾಲ, ಟೆಂಡರ್‌, ಸಾಮಗ್ರಿ ಸರಬರಾಜು ಸಹಿತ ಅನೇಕ ವಿಧದ ದಸ್ತಾವೇಜುಗಳು, ಎಸ್ಕಾಂಗಳಿಂದ …

Read More »

ಕೆಪಿಎಸ್‌ಸಿ ಯಿಂದ ಡಿ.29 ರಂದು ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ಹುದ್ದೆಗಳ ಪರೀಕ್ಷೆ

ಕೊಪ್ಪಳ: ಕರ್ನಾಟಕ ಲೋಕಸೇವಾ ಆಯೋಗದಿಂದ ಡಿಸೆಂಬರ್ 29 ರಂದು ಬೆಳ್ಳಿಗೆ 10 ರಿಂದ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ಕೊಪ್ಪಳ ತಾಲ್ಲೂಕಿನಲ್ಲಿ ನಡೆಯಲಿರುವ ಗೆಜೆಟೆಡ್ ಪ್ರೋಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ …

Read More »

ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟ: ಆರ್.ಅಶೋಕ್

ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟವಾಗಿದ್ದು, ಸಾರಿಗೆ ನೌಕರರು ಪ್ರತಿಭಟಿಸುತ್ತಿದ್ದಾರೆ. ನಾಮ ಹಾಕುವುದರಲ್ಲಿ ಕಾಂಗ್ರೆಸ್ಸಿಗರು ಪಳಗಿದವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ. ಬಸವರಾಜ ರಾಯರೆಡ್ಡಿ ಅವರು ಹಲವು ಬಾರಿ ಹೇಳಿದರೂ ಸಿಎಂ ಸಿದ್ದರಾಮಯ್ಯ ಕೇಳಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟು ನಷ್ಟ ಉಂಟಾಗಿದೆ. ಸಾರಿಗೆ ನೌಕರರು ಧರಣಿ …

Read More »