BigTv News
August 2, 2022
Uncategorized
ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದು, ಮನೆ ಸಂಪೂರ್ಣ ನೆಲಸಮವಾಗಿದೆ. ದುರಂತದಲ್ಲಿ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದುದೆ. ಲಕ್ಷ್ಮಿ ನಾರಾಯಣ ನಾಯ್ಕ, ಮಗ ಅನಂತ ನಾರಾಯಣ ನಾಯ್ಕ್, ಮಗಳು ಲಕ್ಷ್ಮಿ ಸೇರಿ ನಾಲ್ವರು …
Read More »
BigTv News
August 2, 2022
Uncategorized
ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಕೋರಿದ ಪ್ರಕರಣದಲ್ಲಿ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ‘ನನ್ನ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸಬೇಕು’ ಎಂದು ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಬಿ.ವಿ.ಆಚಾರ್ಯ …
Read More »
BigTv News
August 2, 2022
Uncategorized
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ಹುಟ್ಟುಹಬ್ಬಕ್ಕಾಗಿ ‘ಮೈಸೂರು ಹುಲಿಯಾ…’ ಮತ್ತು ‘ಸೆಲ್ಫ್ ಮೇಡ್ ಸಿದ್ದಣ್ಣ..!’ ಎಂಬ ಸಿನಿಮಾ ಮಾದರಿಯ ಎರಡು ಹಾಡುಗಳು ಸಿದ್ಧಗೊಂಡಿದ್ದು, ಆ.3 ರಂದು ಬಿಡುಗಡೆಯಾಗುತ್ತಿವೆ. ಎರಡೂ ಹಾಡುಗಳಿಗೂ ಜೇಮ್ಸ್ ಚಿತ್ರದ ನಿರ್ದೇಶಕ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದು, ಒಂದು ಹಾಡು ಸಲಗ ಸಿನಿಮಾದ ‘ಟಿಣಿಂಗ ಮಿಣಿಂಗ ಟಿಶ್ಯಾ’ ಖ್ಯಾತಿಯ ಗಿರಿಜಾ ಸಿದ್ದಿ, ಮತ್ತೊಂದು ಹಾಡು ‘ಚುಟುಚುಟು ಅಂತೈತಿ’ ಖ್ಯಾತಿಯ ರವೀಂದ್ರ ಸೊರಗಾವಿ ದನಿಯಲ್ಲಿ ಮೂಡಿಬರುತ್ತಿರುವುದು …
Read More »
BigTv News
August 2, 2022
Uncategorized
ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಕುಣಿಗಲ್ ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಬೆಂಗಾವಲು ವಾಹನ ರಸ್ತೆಯ ತಡೆಗೋಡೆಗೆ ಗುದ್ದಿ ರಸ್ತೆಯಿಂದಾಚೆಗೆ ನುಗ್ಗಿದೆ. ಪರಿಣಾಮ ವಾಹನದಲ್ಲಿದ್ದ ಐವರಲ್ಲಿ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೋಲಿಸ್ ಸಿಬ್ಬಂದಿ ಮಹೇಶ್, ಮಂಜುನಾಥ್ ಹಾಗೂ …
Read More »
BigTv News
August 2, 2022
Uncategorized
ಕೊಪ್ಪಳ : ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಕಾರಣ, ಮಕ್ಕಳ ಸುರಕ್ಷತಾ ದೃಷ್ಟಿಯಿಂದ, ಆ. 02 ರಂದು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ಅವರು ತಿಳಿಸಿದ್ದಾರೆ. ಸೋಮವಾರದಿಂದಲೇ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
Read More »
BigTv News
August 2, 2022
Uncategorized
ಬೆಂಗಳೂರು: ದಾವಣಗೆರೆಯಲ್ಲಿ ಗುರುವಾರ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿರುವ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದೆ. ರಾಹುಲ್ ಗಾಂಧಿ, ಮಲ್ಲಿ ಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, 6 ರಿಂದ 8 ಲಕ್ಷ ಜನ ಸೇರುವ ನಿರೀಕ್ಷೆಯಿದೆ.ಸಮಾವೇಶಕ್ಕೆ ಬರುವವರಿಗಾಗಿ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ 224 ವಿಧಾನಸಭೆ ಕ್ಷೇತ್ರ ಗಳಿಂದ ಶಾಸಕರು, ಮಾಜಿ ಶಾಸಕರು, ಪಕ್ಷದ ಘಟಕಗಳ …
Read More »
BigTv News
August 2, 2022
Uncategorized
ಬೆಂಗಳೂರು : ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಕ್ಷದ ವಿರುದ್ಧವೇ ಸಿಟ್ಟು ಹೊರ ಹಾಕುತ್ತಿರುವ ಬೆನ್ನಲ್ಲೇ ಈಗ ಗೃಹ ಸಚಿವ ಅಮಿತ್ ಶಾ ಶೀಘ್ರವೇ ಕರ್ನಾಟಕಕ್ಕೆ ಬರುವ ಸಾಧ್ಯತೆಯಿದೆ. ಆಗಸ್ಟ್ 4ರಂದು ರಾಜ್ಯಕ್ಕೆ ದಿಢೀರ್ ಭೇಟಿ ನೀಡಲು ಅಮಿತ್ ಶಾ ಪ್ಲ್ಯಾನ್ ಮಾಡಿದ್ದಾರೆ. ಮಂಗಳವಾರ ಸಂಜೆಯೊಳಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ಅಧಿಕೃತಗೊಳ್ಳುವ ಸಾಧ್ಯತೆಯಿದೆ. ಸಾಧಾರಣವಾಗಿ ಅಮಿತ್ ಶಾ ರಾಜ್ಯಕ್ಕೆ ಬರುವ …
Read More »
BigTv News
August 2, 2022
Uncategorized
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಸೋಮವಾರ ಸುರಿದ ಧಾರಾಕಾರ ಮಳೆಯಿಂದಾಗಿ ದರ್ಪಣತೀರ್ಥ ನದಿಯು ತುಂಬಿ ಹರಿದಿದ್ದು, ಕುಕ್ಕೆಯ ಆದಿಸುಬ್ರಹ್ಮಣ್ಯ ದೇವಳದ ಒಳಗೆ ನೀರು ಪ್ರವೇಶಿಸಿದೆ. ಹೀಗಾಗಿ ಕುಕ್ಕೆ ದೇಗುಲಕ್ಕೆ ಎರಡು ದಿನ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಭಕ್ತರು ಸಹಕರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಕೋರಿದ್ದಾರೆ. ಕುಕ್ಕೆ ದೇವಳದ ಸಮೀಪ ಇರುವ ದರ್ಪಣತೀರ್ಥ ನದಿಯ ಸ್ನಾನ ಘಟ್ಟವು ಮುಳುಗಡೆಯಾಗಿದೆ. ಸಮೀಪದ ರುದ್ರಪಾದ ಸೇತುವೆಯು ಜಲಾವೃತಗೊಂಡಿದೆ. ಈ ಮಧ್ಯೆ ಸುಬ್ರಹ್ಮಣ್ಯ- ಪುತ್ತೂರು- …
Read More »
BigTv News
August 1, 2022
Uncategorized
ಹುಬ್ಬಳ್ಳಿ: ಸಾರ್ವಜನಿಕರಿಗೆ ಗುಣಮಟ್ಟದ ಸಾರಿಗೆ ಸೇವೆ ನೀಡುವ ಉದ್ದೇಶ ಹೊಂದಿರುವ ಸಾರಿಗೆ ಸಂಸ್ಥೆ ಸಾರ್ವಜನಿಕ ಜೊತೆಗೆ ಆಟ ಆಡುತ್ತಿದೆ. ಮಾಡಿದ ತಪ್ಪಿಗೆ ಪರಿಹಾರ ನೀಡದೆ ಇರುವ ಹಿನ್ನೆಲೆಯಲ್ಲಿ ಈಗ ಸಾರಿಗೆ ಸಂಸ್ಥೆಯ ಬಸ್ ಗಳನ್ನು ಜಪ್ತಿ ಮಾಡುವ ಮಟ್ಟಿಗೆ ಬಂದು ನಿಂತಿದೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ನಡೆದಿದ್ದ ಪ್ರಕರಣ ಮಾಸುವ ಮುನ್ನವೇ ಪರಿಹಾರ ನೀಡದಿರುವ ಬಸ್ ಜಪ್ತಿ ಮಾಡಲಾಗಿದೆ. 2017ರ ನವೆಂಬರ್ 08ರಂದು ಕಾರವಾರ ರಸ್ತೆಯಲ್ಲಿರುವ ಇಎಸ್ಐ ಆಸ್ಪತ್ರೆಯ …
Read More »
Shaikh BigTv
August 1, 2022
Uncategorized
ಹುಬ್ಬಳ್ಳಿ: ಸಾರ್ವಜನಿಕರಿಗೆ ಗುಣಮಟ್ಟದ ಸಾರಿಗೆ ಸೇವೆ ನೀಡುವ ಉದ್ದೇಶ ಹೊಂದಿರುವ ಸಾರಿಗೆ ಸಂಸ್ಥೆ ಸಾರ್ವಜನಿಕ ಜೊತೆಗೆ ಆಟ ಆಡುತ್ತಿದೆ. ಮಾಡಿದ ತಪ್ಪಿಗೆ ಪರಿಹಾರ ನೀಡದೆ ಇರುವ ಹಿನ್ನೆಲೆಯಲ್ಲಿ ಈಗ ಸಾರಿಗೆ ಸಂಸ್ಥೆಯ ಬಸ್ ಗಳನ್ನು ಜಪ್ತಿ ಮಾಡುವ ಮಟ್ಟಿಗೆ ಬಂದು ನಿಂತಿದೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ನಡೆದಿದ್ದ ಮಾಸುವ ಮುನ್ನವೇ ಪರಿಹಾರ ನೀಡದಿರುವ ಬಸ್ ಜಪ್ತಿ ಮಾಡಲಾಗಿದೆ. 2017ರ ನವೆಂಬರ್ 08ರಂದು ಕಾರವಾರ ರಸ್ತೆಯಲ್ಲಿರುವ ಇಎಸ್ಐ ಆಸ್ಪತ್ರೆಯ ಬಳಿಯಲ್ಲಿ …
Read More »