Breaking News

Uncategorized

ಪ್ರವೀಣ್ ಹತ್ಯೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

ಧಾರವಾಡ: ಮಂಗಳೂರು ಮೂಲದ ಪ್ರವೀಣ್ ಹತ್ಯೆ ಖಂಡಿಸಿ ಎಬಿವಿಪಿ ವತಿಯಿಂದ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು. SDPI, PFI, SFI ಸಂಘಟನೆ ಬ್ಯಾನ್ ಮಾಡುವಂತೆ ಮನವಿ ಮಾಡಲಾಯಿತು.ಹಲವು ದಿನಗಳಿಂದ ನಿರಂತರವಾಗಿ ಹತ್ಯೆ ನಡೆಯುತ್ತಿವೆ, ಇಂತಹ ಘಟನೆ ಮತ್ತೆ ಮರುಕಳಿಸದಂತೆ ಮಾಡಬೇಕು. ಬಿಜೆಪಿ ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯ‌ ಮಾಡಿದರು.

Read More »

ಜೂಜಾಟದಲ್ಲಿ ಪೊಲೀಸರೇ ಅಂದರ್:ಗೋಕುಲ ರೋಡ್ ಪೊಲೀಸ್ ಖಡಕ್ ಕಾರ್ಯಾಚರಣೆ

ಹುಬ್ಬಳ್ಳಿ: ರಾಜ್ಯದಲ್ಲಿಯೇ ಶಿಸ್ತಿನ ವಿಷಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಹೆಸರುವಾಸಿಯಾಗಿರುವ ಹು-ಧಾ ಪೊಲೀಸ್ ಕಮೀಷನರೇಟ್ ಈಗ ಅಪರೂಪದ ಪ್ರಕರಣದಲ್ಲಿ ಪೊಲೀಸರೇ ಪೋಲೀಸರನ್ನು ವಶಕ್ಕೆ ಪಡೆದಿದ್ದಾರೆ. ಅಕ್ಷಯ ಕಾಲೋನಿಯ ಮನೆಯೊಂದರಲ್ಲಿ ಕುಳಿತು ಎಕ್ಕ-ರಾಜ-ರಾಣಿ ಎಲೆ ತಟ್ಟುತ್ತಿದ್ದ ಪೊಲೀಸ್ ಅಧಿಕಾರಿ- ಸಿಬ್ಬಂದಿ ತಂಡದ ಮೇಲೆ ಪೊಲೀಸರೇ ದಾಳಿ ನಡೆಸಿ, ನಾಲ್ವರನ್ನು ಬಂಧಿಸಿದ ಘಟನೆಯೊಂದು ನಡೆದಿದೆ. ಬೇಲಿಯೇ ಎದ್ದು ಹೊಲ ಮೇಯ್ದಂಥ ಪ್ರಕರಣವಾಗಿದ್ದು, ಜೂಜುಕೋರರ ವಿರುದ್ಧ ಸಮರ ಸಾರಬೇಕಿದ್ದ ಶಿಸ್ತಿನ ಇಲಾಖೆಯ ಸಿಪಾಯಿಗಳೇ ಇಲ್ಲಿ …

Read More »

ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದವರನು ಬಂಧನ

ಹುಬ್ಬಳ್ಳಿ: ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಆರ್‌ಪಿಎಫ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ . ಆರ್‌ಪಿಎಫ್ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ನೇತೃತ್ವದ ವಿಶೇಷ ತಂಡ ಧಾರವಾಡದ ರೈಲ್ವೆ ಮೈದಾನ ಹಾಗೂ ವಿವಿಧ ಸ್ಥಳಗಳಲ್ಲಿ ನಿರಂತರವಾಗಿ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದರು . ಖಚಿತ ಮಾಹಿತಿ ಮೇರೆಗೆ ಮರಗಳ್ಳರನ್ನು ಪೊಲೀಸರು ಬಂಧನ ಮಾಡಿದ್ದಾರೆ . ಈ ಮರಗಳ್ಳರು ತಡರಾತ್ರಿ ವೇಳೆಯಲ್ಲೇ ಕಳ್ಳತನ ಮಾಡುತ್ತಿದ್ದರು . ಆರೋಪಿಗಳು ಮರಗಳನ್ನು ಕಡಿಯುವುದು …

Read More »

ಎಚ್ಚರಿಕೆಗೆ ಎಚ್ಚರ ಆಗದಿದ್ದರೇ ವಚನ ತಪ್ಪಿದ ಸರ್ಕಾರ ಸಮಸ್ಯೆ ಅನುಭವಿಸುತ್ತೇ: ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಪಂಚಮಸಾಲಿ ಸಮುದಾಯದ ಕೊಡುಗೆ ಸಾಕಷ್ಟಿದೆ. ಈ ಸಮುದಾಯವನ್ನು ನಿರ್ಲಕ್ಷ್ಯ ಮಾಡಿದರೇ ನಿಜಕ್ಕೂ ಬಹುದೊಡ್ಡ ತೊಂದರೆಯನ್ನು ರಾಜ್ಯ ಬಿಜೆಪಿ ಸರ್ಕಾರ ಅನುಭವಿಸುವುದು ಖಂಡಿತ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ನಗರದಲ್ಲಿಂದು ಪಂಚಮಸಾಲಿ ಸಮಾಜದ ಹೋರಾಟದಲ್ಲಿ ಮಾತನಾಡಿದ ಅವರು, ಈಗಾಗಲೇ ಸಾಕಷ್ಟು ಬಾರಿ ಮನವಿ ಸಲ್ಲಿಸಿ ಗಡುವು ನೀಡಿದ್ದೇವೆ ಹೀಗಿದ್ದರೂ ಸರ್ಕಾರ ಮಾತ್ರ ಸೂಕ್ತ ನಿರ್ಧಾರವನ್ನು ಕೈಗೊಂಡಿಲ್ಲ. ಈ ನಿಟ್ಟಿನಲ್ಲಿ …

Read More »

ಪ್ರವೀಣ್ ಹತ್ಯೆ ಪ್ರಕರಣವನ್ನ NIAಗೆ ಹಸ್ತಾಂತರ ಮಾಡಲಾಗುವುದು : ಸಿಎಂ

ಬೆಂಗಳೂರು : ಪ್ರವೀಣ್ ಹತ್ಯೆ ಪ್ರಕರಣವನ್ನ NIAಗೆ ಹಸ್ತಾಂತರ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣ  ಸಂಬಂಧ ಡಿಜಿ ಐಜಿಪಿ ಪ್ರವೀಣ್ ಸೂದ್ ಜೊತೆ ಚರ್ಚೆ ನಿರ್ಧಾರ ಕೈಗೊಂಡಿರೋದಾಗಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ. ಪ್ರವೀಣ್ ಹತ್ಯೆ ಕೇಸ್ ಒಂದು ವ್ಯವಸ್ಥಿತವಾಗಿ ನಡೆದಿರೋ ಹತ್ಯೆ. ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ಪ್ರಕರಣದ ತನಿಖೆ ತ್ವರಿತಗತಿಯಾಗಿ ನಡೆಯುತ್ತಿದೆ. ಪ್ರಕರಣ 2 ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ NIAಗೆ …

Read More »

ಇರಾನ್ ನಲ್ಲಿ ಭೂ ಕುಸಿತ: 53 ಜನರು ಸಾವು

ಇರಾನ್ : ಭಾರಿ ಮಳೆಯಾಗುತ್ತಿದ್ದು, ಭೂಕುಸಿತ ಮತ್ತು ಪ್ರವಾಹ ಸಂಭವಿಸಿದೆ. ಇದರಲ್ಲಿ 53 ಜನರು ಸಾವನ್ನಪ್ಪಿದ್ದು, ಕಾಣೆಯಾದವರಿಗಾಗಿ ರಕ್ಷಾಣ ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗುತ್ತಿದೆ. ಎರಡು ದಿನಗಳ ಪ್ರವಾಹದಲ್ಲಿ 16 ಜನರು ಇನ್ನೂ ಕಾಣೆಯಾಗಿದ್ದಾರೆ. ಇರಾನ್​ನ 31 ಪ್ರಾಂತ್ಯಗಳ ಪೈಕಿ 18 ನಗರದಲ್ಲಿ ಸುಮಾರು 400 ಪಟ್ಟಣಗಳು ​​ಮತ್ತು ಹಳ್ಳಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿವೆ ಎಂದು ರೆಡ್ ಕ್ರೆಸೆಂಟ್ ಸೊಸೈಟಿಯ ತುರ್ತು ಕಾರ್ಯಾಚರಣೆಯ ಮುಖ್ಯಸ್ಥ ಮೆಹದಿ ವಲಿಪೋರ್ ತಿಳಿಸಿದ್ದಾರೆ. ರಾಜಧಾನಿ …

Read More »

ಪೊಲೀಸ್ ಕಾಲರ್ ಹಿಡಿದು ರಂಪಾಟ ಮಾಡಿದ ಮಾಜಿ ಸಿಎಂ

ಭೋಪಾಲ್ : ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಪೊಲೀಸ್ ಕಾಲರ್ ಹಿಡಿದು ರಂಪಾಟ ಮಾಡಿರುವ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ದಿಗ್ವಿಜಯ್ ಸಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ನಡುವೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಸಂಬಂಧಿಸಿದಂತೆ ತೀವ್ರ ಪೈಪೋಟಿ ನಡೆಯುತ್ತಿದೆ. ಈ ನಡುವೆ ದಿಗ್ವಿಜಯ ಸಿಂಗ್ ಮತ್ತು ಶಾಸಕರಾದ ಆರಿಫ್ ಮಸೂದ್ ಮತ್ತು ಪಿಸಿ ಶರ್ಮಾ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು …

Read More »

8 ಯುವ ರೂಪದರ್ಶಿಗಳ ಮೇಲೆ ಅತ್ಯಾಚಾರ

ಮ್ಯೂಸಿಕ್ ಶೂಟಿಂಗ್ ವೇಳೆ ನುಗ್ಗಿದ ಗನ್ ಹಿಡಿದಿದ್ದ ಗ್ಯಾಂಗ್ 8 ಯುವ ರೂಪದರ್ಶಿಗಳ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್ ಬಳಿ ನಡೆದಿದೆ. ಜೊಹಾನ್ಸ್ ಬರ್ಗ್ ಹೊರವಲಯದಲ್ಲಿ ಕ್ರುಗೆಡ್ರೊಪ್ ಎಂಬ ಸಣ್ಣ ಪಟ್ಟಣದಲ್ಲಿ ಸುಮಾರು 20 ಜನರಿದ್ದ ಗ್ಯಾಂಗ್ ಮ್ಯೂಸಿಕ್ ಆಲ್ಬಂ ಶೂಟಿಂಗ್ ವೇಳೆ ದಾಳಿ ಮಾಡಿದೆ. ಚಿತ್ರೀಕರಣಕ್ಕೆ ಸಿದ್ಧತೆ ನಡೆಸುವ ವೇಳೆ ದಾಳಿ ಮಾಡಿದ ಗ್ಯಾಂಗ್ 8 ಯುವ ರೂಪದರ್ಶಿಗಳ ಮೇಲೆ ಅತ್ಯಾಚಾರ …

Read More »

ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಸಕಲ ಸಿದ್ಧತೆ

ಮೈಸೂರು: ​ಅರಮನೆಯಲ್ಲಿ ನಡೆಯುವ ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಸಿದ್ಧತೆಗಳು ನಡೆಯುತ್ತಿವೆ. ದಸರಾ ಗಜಪಯಣಕ್ಕೂ ತಯಾರಿಗಳು ನಡೆಯುತ್ತಿದ್ದು, ಆಗಸ್ಟ್ 7ರಂದು ಗಜಪಡೆ ಮೈಸೂರಿಗೆ ಆಗಮಿಸಲಿದೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಆಗಮಿಸುತ್ತವೆ. ಬಳಿಕ ಎರಡನೇ ಹಂತದಲ್ಲಿ 5 ಅಥವಾ 6 ಆನೆಗಳು ಆಗಮಿಸುತ್ತವೆ. ಸದ್ಯ ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದ್ದು, ಈ ಬಾರಿ ಹೊಸ ಆನೆಗಳಾದ ಗಣೇಶ, ಭೀಮ, ಸುಗ್ರೀವಾ, ಅಜಯ, ಮಹೇಂದ್ರ …

Read More »

ಇಂದು ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾದ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 9.45ಕ್ಕೆ ಪ್ರಕಟವಾಗಲಿದೆ. ಬೆಳಗ್ಗೆ 11 ಗಂಟೆಗೆ www.karresults.nic.in/ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಫಲಿತಾಂಶವನ್ನು ಪ್ರಕಟಿಸಲಿದ್ದು, ನಂತರ ವೆಬ್ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಇಂಜಿನಿಯರಿಂಗ್, ಪಶು ಸಂಗೋಪನೆ, ಕೃಷಿ, ಆಯುಷ್, ಯುನಾನಿ, ಫಾರ್ಮಸಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಜೂನ್ …

Read More »