Breaking News

Uncategorized

ಕೇರಳದ ಜನಪ್ರಿಯ ಯುವನಟ ನಿಧನ

ಕೇರಳ: ಕಳೆದ 2 ವರ್ಷಗಳಿಂದ ಘಟಾನುಘಟಿ ಕಲಾವಿದರು, ಪ್ರತಿಭಾನ್ವಿತ ನಿರ್ದೇಶಕ, ನಿರ್ಮಾಪಕ, ತಂತ್ರಜ್ಞರು, ನಟಿಯರು, ಕಲಾವಿದೆಯರನ್ನು ಕಳೆದುಕೊಂಡಿರುವ ಭಾರತೀಯ ಚಿತ್ರರಂಗಕ್ಕೆ  ಮತ್ತೊಂದು ಆಘಾತ  ಎದುರಾಗಿದೆ. ಕೇರಳದ ಜನಪ್ರಿಯ ಯುವನಟ  ಶರತ್ ಚಂದ್ರನ್  ಸಾವನ್ನಪ್ಪಿದ್ದಾರೆ. ಮಲಯಾಳಂ ಚಿತ್ರರಂಗದ  ಪ್ರತಿಭಾನ್ವಿತ ನಟ ಶರತ್ ಚಂದ್ರನ್ ಕೇವಲ 37ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ನಿನ್ನೆ ರಾತ್ರಿ ಶರತ್ ಚಂದ್ರನ್ ನಿಗೂಢವಾಗಿ  ಮೃತಪಟ್ಟಿದ್ದಾರೆ ಅಂತ ಕೇರಳ ಚಿತ್ರರಂಗದ ಮೂಲಗಳು ತಿಳಿಸಿವೆ.

Read More »

ದೇಶದಲ್ಲಿ ಹೆಚ್ಚಿದ ಕೊರೋನಾ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 20,408 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 54 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,312ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,43,384 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.48ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ …

Read More »

ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಾವಣಗೆರೆ, ಚಿತ್ರದುರ್ಗ,ತುಮಕೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 5 ದಿನ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, …

Read More »

ವಿಚಾರಣೆಗೆ ಹಾಜರುವಾಗುವಂತೆ ಐಎಎಸ್ ಅಧಿಕಾರಿಗೆ ನೋಟಿಸ್

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಆಗಾಗ ವಿವಾದಕ್ಕೆ ಸಿಲುಕಿ ಸುದ್ದಿಯಾಗುತ್ತಿರುತ್ತಾರೆ. ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಹಲವು ಆರೋಪಗಳು ಕೇಳಿಬಂದು ನಂತರ ಬೆಂಗಳೂರಿಗೆ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆಗೊಂಡರು. ಇದೀಗ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಕೇಳಿಬಂದ ಆರೋಪಗಳಿಗೆ ಸಂಬಂಧಪಟ್ಟಂತೆ ಅವರಿಗೆ ನೊಟೀಸ್ ನೀಡಲಾಗಿದ್ದು, ಸರ್ಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್‌ ಅವರು ನೊಟೀಸ್ ಕಳುಹಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಖುದ್ದು ಕಚೇರಿಗೆ ಹಾಜರಾಗಿ ಆರೋಪಗಳಿಗೆ ಉತ್ತರಿಸಲು ಅವರಿಗೆ ಸೂಚಿಸಲಾಗಿದೆ.

Read More »

ಅಡುಗೆ ಮನೆಯಲ್ಲಿ ಹಾವು : ಕುಟುಂಬಸ್ಥರು ಕಂಗಾಲು

ನವಲಗುಂದ : ತಾಲೂಕಿನ ತಿರ್ಲಾಪುರ ಗ್ರಾಮದ ಮನೆಯೊಂದರಲ್ಲಿ ಬೃಹದಾಕಾರದ ನಾಗರ ಹಾವೊಂದು ಕಾಣಿಸಿಕೊಂಡ ಪರಿಣಾಮ ಮನೆಯವರು ಆತಂಕಕ್ಕೀಡಾದ ಘಟನೆ ಗುರುವಾರ ಮಧ್ಯ ರಾತ್ರಿ ನಡೆದಿದೆ . ರಜಾಕ್ ಎಂಬುವರ ಮನೆಯಲ್ಲಿನ ಅಡುಗೆ ಕೋಣೆಯಲ್ಲಿ ಸುಮಾರು 10 ವರ್ಷ ಮೇಲ್ಪಟ್ಟ ಬೃಹತ್ ನಾಗರಹಾವು ಕಾಣಿಸಿಕೊಂಡಿದೆ . ಕೂಡಲೇ ಮನೆಯವರು ಉರಗ ತಜ್ಞ ಸಂಗಮೇಶ ಅವರಿಗೆ ಕರೆ ಮಾಡಿದ್ದಾರೆ . ರಜಾಕ್ ಅವರ ಮನವಿಗೆ ಸ್ಪಂದಿಸಿದ ಸ್ನೇಕ್ ಸಂಗಮೇಶ ಮಧ್ಯರಾತ್ರಿ ತಿರ್ಲಾಪುರದಲ್ಲಿರುವ ರಜಾಕ್ …

Read More »

ಉಣಕಲ್ ಕೆರೆಯಲ್ಲಿ ಮಹಿಳೆ ಶವ : ಕೊಲೆಯೋ ಆತ್ಮಹತ್ಯೆಯೋ ?

ಹುಬ್ಬಳ್ಳಿ : ನಗರದ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಉಣಕಲ್ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಈಗಷ್ಟೇ ಪತ್ತೆಯಾಗಿದೆ . ಶುಕ್ರವಾರ ಉಣಕಲ್ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಸ್ಥಳೀಯರು , ಮಹಿಳೆಯ ಶವವನ್ನು ನೋಡಿ ವಿದ್ಯಾನಗರ ಠಾಣೆಯ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ . ಕೂಡಲೇ ಸ್ಥಳಕ್ಕೆ ಆಗಮಿಸಿದ ವಿದ್ಯಾನಗರ ಠಾಣೆಯ ಪೊಲೀಸರು ಮಹಿಳೆಯ ಶವವನ್ನು ಕೆರೆಯಿಂದ ತೆಗೆದಿದ್ದು ಸುಮಾರು 30 ರಿಂದ 40 ವರ್ಷದ ವಯಸ್ಸಿನ ಮಹಿಳೆ ಎಂದು ಅಂದಾಜಿಸಲಾಗಿದ್ದು …

Read More »

ಮುಸ್ಲಿಂ ಸಂಘಟನೆಗಳು ಬ್ಯಾನ್ ಆಗಬೇಕು: ಬೆಲ್ಲದ

ಧಾರವಾಡ: ರಾಜ್ಯದಲ್ಲಿ ಎಸ್‌ಡಿಪಿಐ, ಪಿಎಫ್ಐ ಸೇರಿದಂತೆ ಇತರ ಸಂಘಟನೆಗಳು ಬ್ಯಾನ್ ಆಗಬೇಕು ಎಂಬ ವಿಚಾರಕ್ಕೆ ನನ್ನ ಬೆಂಬಲವೂ ಇದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಸಂಘಟನೆಗಳು ಮಾತ್ರ ಬ್ಯಾನ್ ಆದರೆ ಸಾಲದು ಸಂಘಟನೆ ಹಾಗೂ ಸಂಘಟನೆಯಲ್ಲಿರುವವರ ಮೇಲೂ ಕ್ರಮ ಆಗಬೇಕು. ಒಂದು ಸಂಘಟನೆ ಬ್ಯಾನ್ ಆದರೆ ಇನ್ನೊಂದು ಸಂಘಟನೆಯಲ್ಲಿ ಬಂದು ಸೇರಿಕೊಳ್ಳುತ್ತಾರೆ. ಹೀಗಾಗಿ ಸಂಘಟನೆಯಲ್ಲಿರುವವರ ಮೇಲೂ ಕ್ರಮ ಆಗಬೇಕು ಎಂದು ಬೆಲ್ಲದ …

Read More »

ರಸ್ತೆ ಅಪಘಾತದಲ್ಲಿ ವೈದ್ಯ ಸಾವು

ಕೊಪ್ಪಳ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ನ ಮಂಗಳಪುರ ಬಳಿ ಗುರುವಾರ ನಡೆದ ಅಪಘಾತದಲ್ಲಿ ತಾಲ್ಲೂಕಿನ ಬೆಟಗೇರಿ ಗ್ರಾಮದ ಆರ್‌ಎಂಪಿ ವೈದ್ಯ ಕಲಿಗಣನಾಥ (65) ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಘಟನೆ ನಡೆದಿದ್ದು, ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ಮೇಲೆಲ್ಲ ದಿನಬಳಕೆ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ದಕ್ಷಿಣ ಕನ್ನಡ ಜಿಲ್ಲೆಗೆ ಮುತಾಲಿಕ್ ಪ್ರವೇಶ ನಿಷೇಧ : ಡಿಸಿ ಆದೇಶ ಹೊರಡಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಿಗೆ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ವಿಧಿಸಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಜಿಲ್ಲಾ …

Read More »

ಪ್ರವೀಣ್ ಮನೆಗೆ ಸಿಎಂ ಭೇಟಿ : 25 ಲಕ್ಷ ರೂ. ಪರಿಹಾರ ಚೆಕ್ ವಿತರಣೆ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ  ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕುಟುಂಬಕ್ಕೆ ಸಾಂತ್ವಾನ ಹೇಳಿ, 25 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು. ಬಿಜೆಪಿ ಮುಖಂಡನ ಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಂದು ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸುಳ್ಯ ತಾಲೂಕಿನ ನೆಟ್ಟೂರು ಗ್ರಾಮಕ್ಕೆ ಭೇಟಿ …

Read More »