Breaking News

Uncategorized

ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

ಇಂದು ರಾಜ್ಯದ ಕೆಲವು ಭಾಗಗಳಲ್ಲಿ ಒಣ ಹವೆ ಇರಲಿದ್ದು, ಮಲೆನಾಡು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ತುಂತುರು  ಮಳೆಯಾಗಲಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ದಾವಣಗೆರೆ, ಮೈಸೂರು ಭಾಗದಲ್ಲಿ ಮಳೆಯ ಸಿಂಚನ ಆಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು ಮತ್ತು ಬಳ್ಳಾರಿಯಲ್ಲಿ ಬಿಸಿಲು ಪ್ರಖರವಾಗಲಿದೆ. ಮಳೆ ಪ್ರಮಾಣ …

Read More »

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಯಶವಂತ್ ಸಿನ್ಹಾ

ನವದೆಹಲಿ: ಇತ್ತೀಚೆಗಷ್ಟೇ ರಾಷ್ಟ್ರಪತಿ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದ ಯಶವಂತ್ ಸಿನ್ಹಾ ಅವರು ತೃಣಮೂಲ ಕಾಂಗ್ರೆಸ್ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ.ಈ ವಿಷಯವನ್ನು ಸ್ವತಃ ಸಿಎಂ ಮಮತಾ ಬ್ಯಾನರ್ಜೀ ಹಂಚಿಕೊಂಡಿದ್ದಾರೆ. “ಫಲಿತಾಂಶ ಪ್ರಕಟವಾದ ನಂತರ ನಾನು ಈ ಬಗ್ಗೆ ಯೋಚಿಸಿದೆ. ಯಾವುದೇ ರಾಜಕೀಯ ಪಕ್ಷವನ್ನು ಸೇರದಿರಲು ನಿರ್ಧರಿಸಿದೆ.ರಾಜಕೀಯ ಪಕ್ಷವನ್ನು ಸೇರದೆ ಜನರೊಂದಿಗೆ ಇರುತ್ತೇನೆ” ಎಂದು ಹೇಳಿದರು. ಯಶವಂತ್ ಸಿನ್ಹಾ ಅವರು ತಾವು ಸ್ಥಾಪಿಸಿದ ರಾಷ್ಟ್ರೀಯ ಮಂಚ್‌ನಲ್ಲಿ ಮತ್ತೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು …

Read More »

ಇಂದು ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರ

ನವದೆಹಲಿ: ನಿನ್ನೆ ರಾಮಾನಾಥ ಕೋವಿಂದ್ ಅವರ ಅಧಿಕಾರಾವಧಿ ಅಂತ್ಯಗೊಂಡ ಕಾರಣ, ದೇಶದ 15ನೇ ರಾಷ್ಟ್ರಪತಿಯಾಗಿ, ಇಂದು ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಿ, ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಭಾರೀ ಬಹುತದೊಂದಿಗೆ ಎನ್ ಡಿಎ ಬೆಂಬಲಿತ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದರು. ಇಂತಹ ಅವರು ಇಂದು 15ನೇ ರಾಷಅಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ಬೆಳಿಗ್ಗೆ 10.15ಕ್ಕೆ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ಪ್ರಮಾಣವಚನ …

Read More »

ಡಿಕೆಶಿಗೆ ಮತ್ತೆ ಟಾಂಗ್ ಕೊಟ್ಟ ಜಮೀರ್‌ಅಹ್ಮದ್

ಹುಬ್ಬಳ್ಳಿ : ಡಿಕೆಶಿ ನಮ್ಮ ಅಧ್ಯಕ್ಷರು, ಅವರ ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ.ನಾನು ಒಕ್ಕಲಿಗರ ಬಗ್ಗೆ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ.ನಂಗೂ ನಮ್ಮ ಜಾತಿಯವರಿಗಿಂತ ಒಕ್ಕಲಿಗರು ಬಹಳ ಆತ್ಮೀಯರಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸ್ವಾಮೀಜಿಯವರು ಅಸಮಾಧಾನ ಮಾಡಿಕೊಂಡಿದ್ದು ನಂಗೆ ಗೊತ್ತಿಲ್ಲ. ಅವರೇನಾದ್ರು ಹೇಳಿದ್ರೆ ನಾನು ಮಾತನಾಡಬಹುದಿತ್ತು. ಸಿ.ಟಿ. ರವಿ, ಅಶೋಕ ಮಾತನಾಡಿದ್ದನ್ನು ನಾನು ಕೇಳಿದ್ದೇನೆ. ಚೆಲುರಾಯಸ್ವಾಮಿ ನಂಗೆ ಏನನ್ನೂ …

Read More »

ಈ ಕಾರ್ಖಾನೆಯು ಲೈಸನ್ಸ್ ಪಡೆದಿಲ್ಲ, ಕಾನೂನು ಬಾಹಿರವಾಗಿ ಕೈಗಾರಿಕಾ ನಡೆಸುವವರ ವಿರುದ್ದ ಕ್ರಮಕೈಗೊಳ್ಳಲಾಗುತ್ತದೆ : ಹಾಲಪ್ಪ ಆಚಾರ್

ಹುಬ್ಬಳ್ಳಿ: ತಾರಿಹಾಳ ಕಾರ್ಖಾನೆ ಅವಘಡ ಹಿನ್ನೆಲೆ ನಗರದ ಕಿಮ್ಸ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಭೇಟಿ ನೀಡಿದರು. ನಗರದಲ್ಲಿಯಿಂದು ಮಾತನಾಡಿದ ಅವರು, ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಲಾಗಿದೆ.ಮೃತರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಅಗ್ನಿ ಅನಾಹುತಕ್ಕೆ ಕಾರಣವಾಗಿರುವ ಈ ಕಾರ್ಖಾನೆಯು ಲೈಸನ್ಸ್ ಪಡೆದಿಲ್ಲ. ಕಾನೂನು ಬಾಹಿರವಾಗಿ ಕೈಗಾರಿಕಾ ನಡೆಸುವವರ ವಿರುದ್ದ ಕ್ರಮಕೈಗೊಳ್ಳಲಾಗುತ್ತದೆ. ದುರಂತ ಕ್ಕೆ …

Read More »

ತಾರಿಹಾಳ ಸ್ಪಾರ್ಕರ್ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ- ಚಿಕಿತ್ಸೆ ಫಲಿಸದೇ ಓರ್ವ ಮಹಿಳೆ ಸಾವು

ಹುಬ್ಬಳ್ಳಿ: ತಾರಿಹಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಭಾನುವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ವಿಜಯಲಕ್ಷ್ಮಿ ವೀರಭದ್ರಪ್ಪ ಯಚ್ಚನಾಗರ (45l ಮೃತರು. ಇವರಿಗೆ ಶೇ. 90ರಷ್ಟು ಸುಟ್ಟಗಾಯಗಳಾಗಿದ್ದವು. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದ ಏಳು ಜನರಿಗೆ ಚಿಕಿತ್ಸೆ ಮುಂದುವರೆದಿದೆ. ತಾರಿಹಾಳ ಕೈಗಾರಿಕಾ ಪ್ರದೇಶದ ಮೊದಲ ಅಡ್ಡರಸ್ತೆಯಲ್ಲಿರುವ ಸ್ಪಾರ್ಕರ್ ತಯಾರಿಕಾ ಘಟಕದಲ್ಲಿ ನಿನ್ನೆ ಅಗ್ನಿ ಅವಘಡ ಉಂಟಾಗಿತ್ತು. ದುರ್ಘಟನೆಯಲ್ಲಿ ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಕಿಮ್ಸ್ …

Read More »

ಜನ್ಮದಿನ ಆಚರಣೆ ದಿನವೇ ಮನೆಯಲ್ಲಿ‌ ನೀರವ ಮೌನ

ಕೊಪ್ಪಳ: ನಗರದ ಹೋಟೆಲ್‌ನಲ್ಲಿ ಶನಿವಾರ ರಾತ್ರಿ ನಡೆದ ಜನ್ಮದಿನದ ಕಾರ್ಯಕ್ರಮದ ಖುಷಿ ಕೇವಲ ಒಂದು ತಾಸಿನೊಳಗೆ ಕರಗಿ ಹೋಯಿತು. ಜನ್ಮದಿನದ ಸಂಭ್ರಮಾಚರಣೆಯಲ್ಲಿ ಮಕ್ಕಳೊಂದಿಗೆ ಪಾಲ್ಗೊಂಡಿದ್ದ ಹಿರಿಯರು ಹಾಗೂ ಮಕ್ಕಳು ಎಲ್ಲರೂ ಒಟ್ಟಿಗೆ ಊಟ ಮಾಡಿದ್ದರು. ಕುಟುಂಬದವರೆಲ್ಲ ಸೇರಿ ಫೋಟೊ ತೆಗೆಯಿಸಿಕೊಂಡಿದ್ದರು. 10.30ರ ಸುಮಾರಿಗೆ ಕಾರ್ಯಕ್ರಮ ಮುಗಿದಿದ್ದು, ಮುಂದಿನ ಅರ್ಧ ಗಂಟೆಯಲ್ಲಿಯೇ ಅಪಘಾತ ನಡೆದಿದೆ. ಅಪಾಯಕಾರಿ ರಸ್ತೆ ಎನ್ನುವ ಕಾರಣಕ್ಕೆ ಬಿನ್ನಾಳ ಗ್ರಾಮದಿಂದ ಬಂದಿದ್ದ ಒಂಬತ್ತು ಜನ ಊಟ ಮುಗಿಸಿಕೊಂಡವರೇ ಊರಿಗೆ …

Read More »

ರಾಷ್ಟ್ರ ಧ್ವಜ ಕುರಿತು ಕೇಂದ್ರ ಸರ್ಕಾರದಿಂದ‌ಮಹತ್ವದ ಆದೇಶ ಹೊರಡಿಕೆ

ನವದೆಹಲಿ : ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗಾ’ ಅಭಿಯಾನವನ್ನ ಪ್ರಾರಂಭಿಸುವುದರೊಂದಿಗೆ, ಭಾರತದ ಧ್ವಜ ಸಂಹಿತೆ 2002ರಲ್ಲಿ ಬದಲಾವಣೆಗಳನ್ನ ತಂದಿದೆ. ಇನ್ನೀದು ತ್ರಿವರ್ಣ ಧ್ವಜವನ್ನ ಹಗಲು ಮತ್ತು ರಾತ್ರಿ ಸಾರ್ವಜನಿಕರಿಗೆ ಹಾರಿಸಲು ಅನುಮತಿ ನೀಡುತ್ತದೆ. ಪ್ರಗತಿಪರ ಸ್ವತಂತ್ರ ಭಾರತದ 75ನೇ ವರ್ಷದ ಸ್ಮರಣಾರ್ಥ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೆ ‘ಹರ್ ಘರ್ ತಿರಂಗಾ’ ಆಚರಿಸಲಾಗುವುದು. ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳಿಗೆ ಪತ್ರ …

Read More »

ವಯಸ್ಸಿನ ಲೆಕ್ಕಾಚಾರದಲ್ಲಿಯೂ ನನಗೆ ಟಿಕೆಟ್ ನೀಡಲ್ಲ : ಬಸವರಾಜ್

ತುಮಕೂರು: ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಮುಂದಿನ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ತುಮಕೂರು ಬಿಜೆಪಿ ಸಂಸದ ಜಿ.ಎಸ್. ಬಸವರಾಜ್ ಘೋಷಿಸಿದ್ದಾರೆ. ನನಗೆ 84 ವರ್ಷ ವಯಸ್ಸಾಗಿದ್ದು, ವಯಸ್ಸಿನ ಲೆಕ್ಕಾಚಾರದಲ್ಲಿಯೂ ಟಿಕೆಟ್ ನೀಡಲ್ಲ. ಹಾಗಾಗಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಅವರು ಹೇಳಿದ್ದಾರೆ. ತುಮಕೂರು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ದೇವೇಗೌಡರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದು, ಒಂದು ವೇಳೆ …

Read More »

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ‌ ಸುದ್ದಿ

ಬೆಂಗಳೂರು : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು5159 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. 2022-23ರ ನೇ ಸಾಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡುವವರಿಗೆ ಅಥವ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ …

Read More »