Breaking News

World

Et ullamcorper sollicitudin elit odio consequat mauris, wisi velit tortor semper vel feugiat dui, ultricies lacus. Congue mattis luctus, quam orci mi semper

ಆಟೋ ಪಲ್ಟಿ : 2 ಸಾವು, 4 ಜನರಿಗೆ ಗಂಭೀರ ಗಾಯ

ಹೈದರಾಬಾದ್: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಾಧವರಂ ಬಳಿ ಸಂಭವಿಸಿದೆ. ಮೃತರನ್ನು 37 ವರ್ಷದ ರಾಘವೇಂದ್ರ ಹಾಗೂ 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ.ಬೆಂಗಳೂರಿನಿಂದ ರೈಲಿನಲ್ಲಿ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ರೈಲ್ವೆ ನಿಲ್ದಾಣದಿಂದ ಆಟೋದಲ್ಲಿ ರಾಯರ ಮಠಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಮಾಧವರಂ ಬಳಿ ಆಟೋ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, …

Read More »

ಇಂದು ಸಂಜೆ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್ ಅಂತ್ಯಕ್ರಿಯೆ

ಮುಂಬೈ: ಭಾರತ ರತ್ನ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದ 92 ವರ್ಷದ ಲತಾ ಮಂಗೇಶ್ಕರ್, ಕೋವಿಡ್ ನಂತರದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಲತಾ ಮಂಗೇಶ್ಕರ್ ಕೊನೆಯುಸಿರೆಳೆದಿದ್ದಾರೆ. ಲತಾ ಅವರ ಪಾರ್ಥಿವ ಶರೀರವನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಅವರ ನಿವಾಸಕ್ಕೆ ಕೊಂಡಯ್ಯಲಾಗುತ್ತಿದ್ದು, ಅಲ್ಲಿಯೇ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಇಂದು ಸಂಜೆ ಶಿವಾಜಿ ಪಾರ್ಕ್ ನಲ್ಲಿ ಸಕಲ …

Read More »

ಲತಾ ಮಂಗೇಶ್ಕರ್ ನಿಧನಕ್ಕೆ ಸಂತಾಪ ಸೂಚಿಸಿ ದ ಪ್ರಧಾನಿ

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಲತಾ ಮಂಗೇಶ್ಕರ್ ಅವರು ನಮ್ಮ ದೇಶಕ್ಕೆ ತುಂಬಲಾಗದ ನಷ್ಟ ಎಂದು ಅವರು ಟ್ವೀಟ್ ಮಾಡಿದ್ದಾರೆ. ಲತಾ ಮಂಗೇಶ್ಕರ್ ಅವರ ನಿಧನದ ಹಿನ್ನೆಲೆಯಲ್ಲಿ ಕೇಂದ್ರವು ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಇಂದು ಸಂಜೆ ಶಿವಾಜಿ ಪಾರ್ಕ್‌ನಲ್ಲಿ ಲತಾ ಮಂಗೇಶ್ಕರ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.

Read More »

ಗಾನ ಕೋಗಿಲೆ ನಿಧನ ಹಿನ್ನಲೆ ದೇಶದಲ್ಲಿ 2 ದಿನಗಳ ಶೋಕಾಚರಣೆ

ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಹೊಂದಿದ್ದಾರೆ. ದೇಶದಲ್ಲಿ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಅವರ ಅಂತ್ಯಸಂಸ್ಕಾರ ನೆರವೇರಲಿದೆ.ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದ ಹಿನ್ನಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Read More »

ಗಾನ ಕೋಗಿಲೆ ಇನ್ನೂ ನೆನಪು ಮಾತ್ರ

ಮುಂಬೈ : ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರು ಇಂದು ನಿಧನರಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಲತಾ ಮಂಗೇಶ್ವಕರ್ ಅವರಿಗೆ ಜನವರಿ 8ರಂದು ಕೊವಿಡ್ ಕಾಣಿಸಿಕೊಂಡಿತ್ತು. ನಂತರ ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

Read More »

ಗಾಯಕಿ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸ್ಥಿತಿ ಗಂಭೀರ

ಕೊರೊನಾದಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸ್ಥಿತಿ ಮತ್ತೆ ಬಿಗಡಾಯಿಸಿದೆ ಎನ್ನಲಾಗಿದೆ. 92 ವರ್ಷದ ಲತಾ ಮಂಗೇಶ್ಕರ್‌ ಅವರು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆಂದು ಕೆಲ ದಿನಗಳ ಹಿಂದಷ್ಟೇ ಹೇಳಲಾಗಿತ್ತಾದರೂ ಮತ್ತೆ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ಐಸಿಯು ನಲ್ಲಿರಿಸಿ ವೈದ್ಯರ ತಂಡ ತೀವ್ರ ನಿಗಾ ವಹಿಸಿದೆ ಎಂದು ತಿಳಿದುಬಂದಿದೆ. ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರೂ ಸಹ ಆತಂಕಪಡುವ ಅಗತ್ಯವಿಲ್ಲವೆಂದು ವೈದ್ಯರ ತಂಡ …

Read More »

ಪ್ರವಾಸಕ್ಕೆ ಹೋದ ವಿಮಾನ ಪತನ : 7 ಜನ ಸಾವು

ಲಿಮಾ: ವಿಶ್ವ ಪಾರಂಪರಿಕ ತಾಣ ಪೆರು ದೇಶದ ನಾಜ್ಕಾ ರೇಖೆಗಳನ್ನು ನೋಡಲು ಹೊರಟಿದ್ದ ವಿಮಾನವೊಂದು ಪತನವಾಗಿ ಏಳು ಜನ ಮೃತಪಟ್ಟ ಘಟನೆ ನಡೆದಿದೆ.ಪ್ರವಾಸಿಗರನ್ನು ಹೊತ್ತ ಲಘು ವಿಮಾನ ಇದಾಗಿತ್ತು. ಏರೋ ಸ್ಯಾಂಟೋಸ್ ಎಂಬ ಟೂರ್ ಸಂಸ್ಥೆಯ ವಿಮಾನ ಇದಾಗಿದೆ. ಐವರು ಪ್ರವಾಸಿಗರು, ಓರ್ವ ಪೈಲಟ್ ಮತ್ತು ಸಹ ಪೈಲಟ್ ಸೇರಿ ಏಳು ಜನ ಮೃತಪಟ್ಟಿದ್ದಾರೆ. ಪ್ರವಾಸಿಗರ ಗುರುತು ಮತ್ತು ದೇಶ ಪತ್ತೆ ಹಚ್ಚಲಾಗುತ್ತಿದೆ. 1500 ರಿಂದ 2000 ವರ್ಷಗಳ ಹಿಂದೆ …

Read More »

ಹಿರಿಯ ಪತ್ರಕರ್ತರ ಬಿ.ಟಿ ರಂಜನ್ ಶೆಣೈ ನಿಧನ

ಪುತ್ತೂರು: ಕರಾವಳಿಯ ಹಿರಿಯ ಪತ್ರಕರ್ತರ ಬಿ.ಟಿ ರಂಜನ್ ಶೆಣೈ ಅವರು ಅಸೌಖ್ಯದಿಂದ ನಿಧನರಾಗಿದ್ದಾರೆ.ಕಳೆದ ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ಗುರುವಾರ ರಾತ್ರಿ ಆರೋಗ್ಯದಲ್ಲಿ ವಿಪರೀತ ಏರುಪೇರು ಕಾಣಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ವಿಷಮಿಸಿದ ಹಿನ್ನಲೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಐದು ಗಂಟೆ …

Read More »

ಯೋಗಿ ಆದಿತ್ಯನಾಥ್ ನಾಮ ಪತ್ರ ಸಲ್ಲಿಕೆ : ಆಸ್ತಿ ಮೊತ್ತ ಘೋಷಣೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಗೋರಖ್ ಪುರ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಯೋಗಿ ಆದಿತ್ಯನಾಥ್ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ ಆಸ್ತಿ ವಿವರದಲ್ಲಿ 1.5 ಕೋಟಿ ರೂ. ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ.ಸ್ವ ಘೋಷಿತ ಆಸ್ತಿ ಪ್ರಕಾರ ಯೋಗಿ ಆದಿತ್ಯನಾಥ್ ಆಸ್ತಿ 1,54,94,054 ರೂ. ಆಗಿದೆ. ಇದರಲ್ಲಿ ಕೈಯಲ್ಲಿರುವ ನಗದು, 6 ಬ್ಯಾಂಕ್ ಖಾತೆಗಳಲ್ಲಿ ಇರುವ ಮೊತ್ತವೂ ಸೇರಿದೆ. 12 ಸಾವಿರ ರೂ. ಮೌಲ್ಯದ ಸ್ಯಾಮ್ ಸಂಗ್ …

Read More »

ಯೋಗಿ ಆದಿತ್ಯನಾಥ್ ವಿರುದ್ಧ ದೂರು ನೀಡಿದ ಸಮಾಜವಾದಿ ಪಕ್ಷ

ಲಖನೌ: ಚುನಾವಣಾ ಪ್ರಚಾರದ ಭಾಷಣಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವಹೇಳನಕಾರಿ ಹಾಗೂ ಬೆದರಿಕೆಯೊಡ್ಡುವಂಥ ಭಾಷೆ ಬಳಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷವು (ಎಸ್‌ಪಿ) ಆರೋಪಿಸಿದೆ. ಈ ಕುರಿತು ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅಂಥ ಭಾಷೆ ಬಳಕೆಯನ್ನು ತಕ್ಷಣವೇ ನಿಷೇಧಿಸಬೇಕು ಎಂದು ಒತ್ತಾಯಿಸಿದೆ. ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಎಸ್‌ಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ವಕ್ತಾರ ರಾಜೇಂದ್ರ ಚೌಧರಿ ಪತ್ರ ಬರೆದಿದ್ದು, ಯೋಗಿ ಅವರು ಚುನಾವಣಾ ಭಾಷಣಗಳಲ್ಲಿ …

Read More »