Breaking News

World

Et ullamcorper sollicitudin elit odio consequat mauris, wisi velit tortor semper vel feugiat dui, ultricies lacus. Congue mattis luctus, quam orci mi semper

ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ : ಮಾಯಾವತಿ

ಬಸ್ತಿ: ‘ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್‌ಪಿಯು ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್‌ಪಿ ಇನ್ನೂ ಪ್ರಸ್ತುತವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಾಯಾವತಿ ಅವರು, ಸತ್ಯವನ್ನು ಒಪ್ಪಿಕೊಳ್ಳುವ ದೊಡ್ಡತನವನ್ನು ಅಮಿತ್ ಶಾ ತೋರಿದ್ದಾರೆ ಎಂದು ಹೇಳಿದ್ದರು. ಬಿಎಸ್‌ಪಿ-ಬಿಜೆಪಿ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುತ್ತವೆ ಎಂದು ವಿರೋಧ ಪಕ್ಷಗಳು ಈ ಎರಡೂ ಹೇಳಿಕೆಗಳ …

Read More »

ಉಕ್ರೇನ್ ನಲ್ಲಿ ಬಾಂಬ್ ಸ್ಫೋಟ : ಧಾರವಾಡ ವಿದ್ಯಾರ್ಥಿನಿ ಚೈತ್ರಾ ಸುರಕ್ಷಿತ

ಹುಬ್ಬಳ್ಳಿ: ಉಕ್ರೇನ್‌ನಲ್ಲಿ ಕಾರ್ಕಿವ್‌ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಎಂಬಿಬಿಎಸ್‌ ಮೂರನೇ ವರ್ಷ ಓದುತ್ತಿದ್ದ,  ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಯರಗುಪ್ಪಿ ಗ್ರಾಮದ ವಿದ್ಯಾರ್ಥಿನಿ ಚೈತ್ರಾ ಸಂಶಿ ಸುರಕ್ಷಿತವಾಗಿದ್ದಾರೆ. ಕಾರ್ಕಿವ್‌ ವಿ.ವಿ. ಒಂದು ಕಿ.ಮೀ. ಸಮೀಪದಲ್ಲಿ ದಾಳಿ ನಡೆದಿದ್ದು, ಜೀವ ಕೈಯಲ್ಲಿ ಹಿಡಿದುಕೊಂಡು ಪ್ರತಿ ಕ್ಷಣವನ್ನು ಕಳೆಯುತ್ತಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

Read More »

ಉಕ್ರೇನ್ ದಾಳಿಯಲ್ಲಿ 800 ರಷ್ಯಾ ಯೋಧರು ಸಾವು

ರಷ್ಯಾ, ಉಕ್ರೇನ್ ನಡುವೆ ನಡೆಯುತ್ತಿರುವ ಸಂಘರ್ಷದ ವೇಳೆ ಉಕ್ರೇನ್ ದಾಳಿಯಲ್ಲಿ 800 ರಷ್ಯಾ ಯೋಧರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕೀ ಮಾಹಿತಿ ನೀಡಿದ್ದಾರೆ. ಕೀವ್ ಬಳಿ ಎರಡು ರಷ್ಯಾ ವಿಮಾನ ಹೊಡೆದುರುಳಿಸಲಾಗಿದೆ. 30 ಯುದ್ಧ ಟ್ಯಾಂಕರ್ ಧ್ವಂಸಗೊಳಿಸಲಾಗಿದೆ. ರಷ್ಯಾದ 2 ವಿಮಾನ, 6 ಹೆಲಿಕಾಪ್ಟರ್ ಗಳನ್ನು ನಾಶ ಮಾಡಲಾಗಿದೆ. ರಷ್ಯಾ ದಾಳಿಗೆ 137 ಸಾವು ಕಂಡಿದ್ದು, 316 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ರಷ್ಯಾ ಸೇನೆ …

Read More »

ರಷ್ಯಾ ದಾಳಿಗೆ 137 ನಾಗರಿಕರು, ಸೇನಾ ಸಿಬ್ಬಂದಿ ಸಾವು

ಕೀವ್​: ರಷ್ಯಾ ತನ್ನ ದೇಶದ ಮೇಲೆ ನಡೆಸಿದ ದಾಳಿಯಲ್ಲಿ ಇದುವರೆಗೆ 137 ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್​ಸ್ಕಿ ಹೇಳಿದ್ದಾರೆ. ಅವರು ಮಾತನಾಡಿರುವ ವಿಡಿಯೋದಲ್ಲಿ, ರಷ್ಯಾವು ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲೂ ದಾಳಿ ಮಾಡುತ್ತಿದೆ. ಪ್ರಮುಖ ನಗರಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಅಮಾಯಕರ ಬಲಿ ತೆಗೆದುಕೊಳ್ಳುತ್ತಿದೆ. ಈವರೆಗೆ ಸೈನಿಕರು ಸೇರಿದಂತೆ 137 ಜನರು ಹತರಾಗಿದ್ದು, ಇನ್ನೂ ನೂರಾರು ಜನರು ಗಾಯಗೊಂಡಿದ್ದಾರೆ …

Read More »

ಉಕ್ರೇನ್ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧ ಘೋಷಣೆ

ಮುಂಬೈ: ಉಕ್ರೇನ್ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧ ಘೋಷಿಸಿದ ಬೆನ್ನಲ್ಲೇ ಭಾರತದ ಷೇರು ಮಾರುಕಟ್ಟೆಯಲ್ಲಿ ಕುಸಿತ ಕಂಡುಬಂದಿದೆ. ಮುಂಬೈ ಷೇರು ಸೂಚ್ಯಂಕ 1,457 ಅಂಶಗಳಷ್ಟು ಕುಸಿದಿದ್ದು, 55,774 ಅಂಶಗಳಲ್ಲಿ ವಹಿವಾಟು ಆರಂಭಿಸಿತು. ನಿಫ್ಟಿ 391 ಅಂಶ ಕುಸಿತ ಕಂಡು, 16,671 ಅಂಶಗಳಲ್ಲಿ ವಹಿವಾಟು ಆರಂಭಿಸಿತು. ಆರಂಭಿಕ ವಹಿವಾಟಿನಲ್ಲಿ. ಸೆನ್ಸೆಕ್ಸ್ ಮತ್ತು ನಿಫ್ಟಿಯ ಎಲ್ಲಾ ಷೇರುಗಳು ಕೆಂಪು ಬಣ್ಣದಲ್ಲಿ ವಹಿವಾಟು ಆರಂಭಿಸಿದವು. ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ಹಿನ್ನೆಲೆಯಲ್ಲಿ …

Read More »

ಮಲಯಾಳಂ ಚಿತ್ರರಂಗದ ಹಿರಿಯ ನಟಿ ಕೆಪಿಎಸಿ ಲಲಿತಾ ನಿಧನ

ಕೊಚ್ಚಿ: ಮಲಯಾಳಂ ಚಿತ್ರರಂಗದ ಹಿರಿಯ ನಟಿ ಕೆಪಿಎಸಿ ಲಲಿತಾ ನಿಧನರಾಗಿದ್ದಾರೆ.ಅವರಿಗೆ 74 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದಾಗಿ ಲಲಿತಾ ಅವರನ್ನು ಕೆಲವು ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಆಸೆಯಂತೆ ಮನೆಗೆ ಕರೆತರಲಾಯಿತು. ಇದೀಗ ತಮ್ಮ ಪುತ್ರ ಸಿದ್ಧಾರ್ಥ್ ಅವರ ಕೊಚ್ಚಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

Read More »

ಅಪರೂಪದ ಕಾಯಿಲೆ 31 ಲಕ್ಷ ರೂ. ನೀಡಿ ಮಾನವೀಯತೆ ಮರೆದ ಭಾರತ ಕ್ರಿಕೆಟಿಗ

ಮುಂಬಯಿ: ಅಪರೂಪದ ರಕ್ತದ ಕಾಯಿಲೆಗೆ ಚಿಕಿತ್ಸೆ ನೀಡಲು ಅಸ್ಥಿ ಮಜ್ಜೆಯ ಕಸಿ ಅಗತ್ಯವಿರುವ 11 ವರ್ಷದ ಉದಯೋನ್ಮುಖ ಕ್ರಿಕೆಟಿಗನಿಗೆ 31 ಲಕ್ಷ. ರೂ. ನೆರವು ನೀಡುವ ಮೂಲಕ ಭಾರತ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ ಕೆ.ಎಲ್‌. ರಾಹುಲ್‌ ಮಾನವೀಯತೆ ಮೆರೆದಿದ್ದಾರೆ. “ವರದ್‌ ನಲವಡೆ ಅವರ ಸ್ಥಿತಿಯ ಬಗ್ಗೆ ನನಗೆ ತಿಳಿದಾಗ ನನ್ನ ತಂಡವು “ಗಿವ್‌ ಇಂಡಿಯಾ’ದೊಂದಿಗೆ ಸಂಪರ್ಕದಲ್ಲಿತ್ತು. ಇದರಿಂದ ನಾವು ಅವರಿಗೆ ಸಹಾಯ ಮಾಡಲು ಸಾಧ್ಯವಾಯಿತು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದಕ್ಕೆ ನನಗೆ …

Read More »

ಪಂಜಾನ್ ನಲ್ಲಿ ಶಾಂತಿ, ಸರಳೆಯಿಂದ ನಡೆದ ಮತದಾನ

ಚಂಡೀಗಡ/ಲಖನೌ: ಪಂಜಾಬ್ ವಿಧಾನಸಭೆಯ ಎಲ್ಲ 117 ಕ್ಷೇತ್ರಗಳು ಹಾಗೂ ಉತ್ತರ ಪ್ರದೇಶದ 59 ಕ್ಷೇತ್ರಗಳಿಗೆ ಭಾನುವಾರ ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು.ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. ಪಂಜಾಬ್‌ನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಶೇ 68ರಷ್ಟು ಮತ ಚಲಾವಣೆಯಾಗಿದೆ.2017ರಲ್ಲಿ ಶೇ 77.36ರಷ್ಟು ಮತದಾನವಾಗಿತ್ತು. ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಶೇ 57ರಷ್ಟು ಮತದಾನವಾಗಿದೆ. ಈ ಕ್ಷೇತ್ರಗಳಲ್ಲಿ 2017ರಲ್ಲಿ ಶೇ 62ರಷ್ಟು ಮತದಾನವಾಗಿತ್ತು. ಐದು ಪ್ರಮುಖ ಪಕ್ಷಗಳು ಸ್ಪರ್ಧಿಸುವ ಕಾರಣ …

Read More »

ಸಮೀರ್ ವಾಂಖೆಡೆ ವಿರುದ್ಧ FIR ದಾಖಲು

ಮುಂಬೈ(ಮಹಾರಾಷ್ಟ್ರ): ಐಆರ್‌ಎಸ್ ಅಧಿಕಾರಿ ಮತ್ತು ಮುಂಬೈ ಎನ್‌ಸಿಬಿಯ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಮುಂಬೈನ ಥಾಣೆಯಲ್ಲಿ ತಮ್ಮ ವಯಸ್ಸನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ನಿರೂಪಿಸಿ ಹೋಟೆಲ್‌ಗೆ ಪರವಾನಗಿ ಪಡೆದ ಆರೋಪದಲ್ಲಿ ಫೋರ್ಜರಿ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕೊಪ್ರಿ ಪೊಲೀಸರು ಇಂದು ತಿಳಿಸಿದ್ದಾರೆ. 1996-97ರಲ್ಲಿ ನಗರದ ಸದ್ಗುರು ಬಾರ್‌ಗೆ ಪರವಾನಗಿ ಪಡೆಯುವ ಸಂದರ್ಭದಲ್ಲಿ ವಾಂಖೆಡೆ ಅವರು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದರು ಎಂದು ಆರೋಪಿಸಿ, ರಾಜ್ಯ ಅಬಕಾರಿ …

Read More »

ಮೂಕ ಪ್ರಾಣಿಯನ್ನು ಬೀಡಿದ ಕಾಮುಕ : ವಿಡಿಯೋ ವೈರೆಲ್

ರಾಜಸ್ಥಾನ : ಪಾಪಿಗಳು ಕರುವಿನ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆಯು ರಾಜಸ್ಥಾನದ ಅಲ್ವಾರ್​​ನಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ ನಾಲ್ವರು ಪಾಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ವಾರ್​ ಜಿಲ್ಲೆಯ ಭಿವಾಡಿ ಪ್ರದೇಶದ ಚುಹಾದ್​​ಪುರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಹಸುವಿನ ಜೊತೆ ನಾಲ್ವರು ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಾಜಸ್ಥಾನ ಪೊಲೀಸರು ನಾಲ್ವರನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ. ಆರೋಪಿಗಳಲ್ಲಿ ಓರ್ವ ರಸ್ತೆಯಲ್ಲಿ ಮಲಗಿದ್ದ ಕರುವಿನ …

Read More »