ಬೆಳಗಾವಿ

ರಮೇಶ್​ ಜಾರಕಿಹೊಳಿಗೆ ಟಾಂಗ್ ಕೊಟ್ಟ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರನ್ನು ರಾಕ್ಷಸರಿಗೆ ಹೋಲಿಸುವ ಮೂಲಕ ಪರೋಕ್ಷವಾಗಿ ಟಾಂಗ್ ನೀಡಿದರು. ತಾಲೂಕಿನ ಮಾವಿನಕಟ್ಟಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗುದ್ದಲಿ ಪೂಜೆ ನೆರವೇರಿಸಿದರು ಈ ರೀತಿ ಮಾತನಾಡಿದರು. ಗುದ್ದಲಿ ಪೂಜೆ ಬಳಿಕ ಮಾತನಾಡಿದ ಅವರು, ನಾಲ್ಕೂವರೆ ಕೋಟಿ ರೂಪಾಯಿಯ ಪ್ಯಾಕೇಜ್ ಇದು. ಎರಡು ವರ್ಷಗಳ ಹಿಂದೆಯೇ ನಾಲ್ಕೂವರೆ ಕೋಟಿ ರೂಪಾಯಿ ಟೆಂಡರ್ ಆಗಿ ವರ್ಕ್ ಆರ್ಡರ್ ಆಗಿತ್ತು. …

Read More »

ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್

ಬೆಳಗಾವಿ : ಮಹಾರಾಷ್ಟ್ರದಲ್ಲಿ ಪೊಲೀಸರು ಪ್ರತಿ ವಾಹನವನ್ನೂ ತಪಾಸಣೆಗೆ ಒಳಪಡಿಸಿದ ನಂತರವೇ ರಾಜ್ಯ ಪ್ರವೇಶಿಸಲು ಅನುವು ಮಾಡಿಕೊಡುತ್ತಿದ್ದಾರೆ.ಕೋವಿಡ್ ಪ್ರಕರಣಗಳು ಹೆಚ್ಚಳಗೊಂಡಿದ್ದು ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್ ಪರಿಸ್ಥಿತಿ ಇದೆ. ಬೆಳಗಾವಿ ಜಿಲ್ಲೆಯ 23 ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬೆಳಗಾವಿ ತಾಲೂಕಿನ ಬಾಚಿ ಚೆಕ್‌ಪೋಸ್ಟ್, ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ, ಕಾಗವಾಡ ಹಾಗೂ ಅಥಣಿ ತಾಲೂಕಿನಲ್ಲಿ ನಿರ್ಮಿಸಲಾಗಿರುವ ಚೆಕ್​ಪೋಸ್ಟ್​ಗಳಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ.

Read More »

ಎಂಇಎಸ್ ನಿಷೇದಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಬೃಹತ್ ಮೆರವಣಿಗೆ

ಬೆಂಗಳೂರು: ಕರ್ನಾಟಕ ರಾಜ್ಯ ಬಂದ್‍ನಿಂದ ಹಿಂದೆ ಸರಿದ ಕನ್ನಡಪರ ಸಂಘಟನೆಗಳು ಇಂದು ಎಂಇಎಸ್ ನಿಷೇಧಿಸಬೇಕೆಂದು ಆಗ್ರಹಿಸಿ ಟೌನ್‍ಹಾಲ್‍ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದವು. ಕನ್ನಡ ಒಕ್ಕೂಟದ ಮುಖಂಡರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥ್ ದೇವು, ಕನ್ನಡ ಸೇನೆಯ ಕುಮಾರ್, ಕರವೇ ಅಧ್ಯಕ್ಷ ಶಿವರಾಮೇಗೌಡ, ಗಿರೀಶ್‍ಗೌಡ ಸೇರಿದಂತೆ ಹಲವು …

Read More »

ಎಂಇಎಸ್ ಬ್ಯಾನ್‌ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

ಹುಬ್ಬಳ್ಳಿ: ರಾಜ್ಯದಲ್ಲಿ ಎಂಇಎಸ್ ಸಂಘಟನೆ ಬ್ಯಾನ್ ಮಾಡುವಂತೆ‌ ಒತ್ತಾಯಿಸಿ ಇಂದು ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನೆಡೆಸಿದರು. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲಿನ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿನ ಪುಂಡರ ಅಟ್ಟಹಾಸ ಮೆರೆದ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಕರೆ ನೀಡಿದ್ದವು. ಬಂದ್ ಗೆ ಹಲವು ಸಂಘಟನೆಗಳ ವಿರೋಧ ಕಾರಣದಿಂದ ಬಂದ್ ಕರೆಯನ್ನು ಹಿಂಪಡೆಯಲಾಗಿದ್ದು ಇಂದು ಹುಬ್ಬಳ್ಳಿಯಲ್ಲಿ ಕನ್ನಡ ಪರ ಕಾರ್ಯಕರ್ತರು ಎಂಇಎಸ್ ಸಂಘಟನೆಯನ್ನು …

Read More »

ನಾಳೆ ಕರ್ನಾಟಕ ಬಂದ್ ಇಲ್ಲ- ಹಲವು ವಿರೋಧಗಳ ನಡುವೆ ಬಂದ್ ಕರೆ ಹಿಂಪಡೆದ ಕನ್ನಡಪರ ಸಂಘಟನೆಗಳು

ಬೆಂಗಳೂರು:ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನೆಡೆಯುತ್ತಿರುವ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿನ ಪುಂಡರ ಅಟ್ಟಹಾಸ ಖಂಡಿಸಿ ನಾಳೆ ಡಿ.31 ರಂದು ಕನ್ನಡ ಪರ ಸಂಘಟನೆಗಳು ಕರೆ‌ ನೀಡಿದ್ದ ಕರ್ನಾಟಕ ಬಂದ್ ಕರೆಯನ್ನು ಹಿಂಪಡೆಯಲಾಗಿದೆ. ಡಿ.22 ಕ್ಕೆ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಸಂಘಟನೆಗಳು ನಿರ್ಧಾರ ಮಾಡಿದ್ದವು.ಇದಾದ ಬಳಿಕ ಬಂದಗೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದರು. ಆದ್ದರಿಂದ ಇಂದು ಸಂಜೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್,,ಪ್ರವಿಣ್ ಶೆಟ್ಟಿ ಹಾಗೂ ಉಮೇಶ ಬಣಕಾರ್ ಹಾಗೂ …

Read More »

ಹು-ಧಾ ಮೇಯರ್‌ ಆಯ್ಕೆ ಬಗ್ಗೆ ತಿರ್ಮಾನ ತೆಗೆದುಕೊಳ್ತೀವಿ-ಶಂಕರ ಪಾಟೀಲ್‌ ಮುನೇನಕೊಪ್ಪ

ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಮೇಯರ್ ಆಯ್ಕೆ ಬಗ್ಗೆ ಶೀಘ್ರದಲ್ಲಿಯೇ ಸರಕಾರದಿಂದ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಹೇಳಿದರು. ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯ ನಂತರ ಮಾತನಾಡಿದ ಸಚಿವರು, ಅವಳಿನಗರದ ಅಭಿವೃದ್ಧಿಗೆ ತಾವು ಸದಾಕಾಲ ಮುಂದು. ಚುನಾವಣೆಗಳು ಇದ್ದಿದ್ದರಿಂದ ತಡವಾಗಿದೆಯಷ್ಟೇ ಎಂದು ಹೇಳಿದರು. ಅವಳಿನಗರದ ಅಭಿವೃದ್ಧಿಗೆ ಪೂರಕವಾದ ಎಲ್ಲವನ್ನೂ ಮಾಡಲು ಸಿದ್ಧವಾಗಿದ್ದು, ಸ್ಮಾರ್ಟ್ ಸಿಟಿ ಕೆಲಸಕ್ಕೂ ತೀವ್ರತೆ ಕೊಡಲಾಗುವುದೆಂದು ಮುನೇನಕೊಪ್ಪ ಹೇಳಿದರು. ಕಸದ …

Read More »

ಕರ್ನಾಟಕ ಬಂದ್ ಇಲ್ಲವೇ ಇಲ್ಲ: ಗೃಹಮಂತ್ರಿ ಆರಗ ಜ್ಞಾನೇಂದ್ರ

ಹುಬ್ಬಳ್ಳಿ: ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆಕೊಟ್ಟಿದ್ದಾರೆ. ಇದಕ್ಕೆ ಸರ್ಕಾರ ಯಾವುದೇ ರೀತಿಯ ಅವಕಾಶ ಕೊಡುವುದಿಲ್ಲ ಎಂದು ಗೃಹಮಂತ್ರಿ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆಯನ್ನು ಸಹಿಸಲು ಆಗುವುದಿಲ್ಲ. ಎಂಇಎಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಎರಡು ವರ್ಷ ಯಾವುದೇ ರೀತಿಯ ವ್ಯವಹಾರ ಆಗಿಲ್ಲ. ಮತ್ತೆ ಬಂದ್ ಮಾಡಿದರೆ ಜನರಿಗೆ ತುಂಬ ತೊಂದರೆ ಆಗುತ್ತದೆ ಎಂದರು.

Read More »

ಕಲಾವಿದರ ಕುಂಚದಿಂದ ಅರಳಿದ ಬಿಜೆಪಿ ನಾಯಕರ ಸಾಧನೆಯ ಚಿತ್ರ ಪ್ರದರ್ಶನ

ಹುಬ್ಬಳ್ಳಿ: ನಗರದ ಖಾಸಗಿ ಹೊಟೇಲನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿಯಲ್ಲಿ ದೀನದಯಾಳಜಿ ಅವರ ಚಿಂತನೆ, ಮೋದಿಯವರ ಸಾಧನೆ ಹಾಗೂ ಬಿಜೆಪಿ ಸಾಧನೆಯ ಕುರಿತು ಕಲಾವಿದರ ಕುಂಚದಿಂದ ಅರಳಿದ ಚಿತ್ರ ಪ್ರದರ್ಶಿನಿ ಏರ್ಪಡಿಸಲಾಗಿತ್ತು.. ಬಿಜೆಪಿ ಸಾಧನೆ ಹಾಗೂ ನಾಯಕರ ಚಿತ್ರ ಪ್ರದರ್ಶನಕ್ಕೆ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹಾಗೂ ನಳೀನ್ ಕುಮಾರ್ ಕಟೀಲು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಗೋವಿಂದ್ ಕಾರಜೋಳ, ಜಗದೀಶ್ ಶೆಟ್ಟರ್, ಡಿ.ಕೆ.ಅರುಣಾ, ಮಹೇಶ …

Read More »

ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲವಿಲ್ಲ : ಕರವೇ ಅಧ್ಯಕ್ಷ್ಯ ಟಿ. ಎ ನಾರಾಯಣ ಗೌಡ

ಬೆಂಗಳೂರು : ಡಿಸೆಂಬರ್‌ 31ರ ಕರ್ನಾಟಕ ಬಂದ್‌ಗೆ ಸಧ್ಯಕ್ಕೆ ನಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ್ಯ ಟಿ.ಎ ನಾರಾಯಣ ಗೌಡ ಹೇಳಿದ್ದಾರೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕರವೇ ಅಧ್ಯಕ್ಷರು, ’31ರ ಕರ್ನಾಟಕ ಬಂದ್‌ಗೆ ಸಧ್ಯಕ್ಕೆ ನಮ್ಮ ಬೆಂಬಲವಿಲ್ಲ . ಯಾಕಂದ್ರೆ, ಬಂದ್‌ಗೆ ಒಂದಷ್ಟು ಯೋಜನೆ ಮಾಡಿಕೊಳ್ಳಬೇಕು. ಈ ರೀತಿ ಏಕಾಏಕಿ ಪ್ರತಿಭಟನೆ ಮಾಡಿದ್ರೆ, ಜನರಿಗೆ ತೊಂದರೆ ಆಗುತ್ತೆ. ಹಾಗಾಗಿ ನಾಳಿನ ಕರವೇ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ’ …

Read More »

ಶಿಕ್ಷಣ ಸಂಸ್ಥೆ ಗುರುತಿನ ಪತ್ರ ನೀಡಿದ ತಕ್ಷಣವೇ ಬಸ್‍ಪಾಸ್ -ಶ್ರೀರಾಮುಲು

ಬೆಳಗಾವಿ,: ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಯ ಯಾವುದಾದರೂ ಗುರುತಿನ ಪತ್ರ ನೀಡಿದರೆ ಅವರಿಗೆ ತಕ್ಷಣವೇ ಪಾಸ್ ನೀಡುವ ವ್ಯವಸ್ಥೆಯನ್ನು ಜಾರಿ ಮಾಡಿದ್ದೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು. ಜೆಡಿಎಸ್‍ನ ಎಚ್.ಕೆ.ಕುಮಾರಸ್ವಾಮಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿದ್ಯಾರ್ಥಿಗಳಿಗಾಗಿ ಬಸ್‍ಪಾಸ್ ವಿತರಿಸಲು ಸೇವಾಸಿಂಧು ಪೋರ್ಟಲ್(ಆನ್‍ಲೈನ್) ಮೂಲಕ ಅರ್ಜಿ ಸಲ್ಲಿಸಿ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳ ಯಾವುದಾದರೊಂದು ಗುರುತಿನ ಚೀಟಿ ನೀಡಿದರೂ …

Read More »
You cannot copy content of this page