Breaking News

ಕೋಲಾರ

ನೀಡಿದ ಸಾಲ ಕೇಳುಲು ಹೋದ ಬ್ಯಾಂಕ ಸಿಬ್ಬಂದಿ ಬೈಕ್‌ ಸುಟ್ಟ ಮಹಿಳೆಯರು.

ಕೋಲಾರ: ಸಾಲ ವಸೂಲಿಗೆ ತೆರಳಿದ್ದ ವೇಳೆ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿ ಬೈಕ್‍ಗೆ ಬೆಂಕಿ ಹಚ್ಚಿದ ಘಟನೆ ಕೋಲಾರದಲ್ಲಿ ಗುರುವಾರ ನಡೆದಿದೆ. ಸ್ತ್ರೀಶಕ್ತಿ ಸಂಘದ ಸಾಲ ವಸೂಲಾತಿಗೆ ಡಿಸಿಸಿ ಬ್ಯಾಂಕ್ (DCC Bank) ಸಿಬ್ಬಂದಿ ಕೋಲಾರದ ಮುಳಬಾಗಿಲಿನ (Mulabagilu) ಬಿಸ್ನಹಳ್ಳಿ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ್ದಾರೆ. ಅಲ್ಲದೇ ಅಲ್ಲಿದ್ದ ಬೈಕ್‍ಗೆ ಬೆಂಕಿ ಹಚ್ಚಿ ಸಿಬ್ಬಂದಿ ಮತ್ತೆ ಬಂದರೆ ಅವರ ಬೈಕ್‍ಗೂ ಇದೇ ಗತಿ …

Read More »

ಸಿಡಿಲು ಬಡಿದು ಮಹಿಳೆ ಸಾವು

ಕೋಲಾರ: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಸಿಡಿಲು ಬಡಿದು ಮಹಿಳೆ ಮೃತಪಟ್ಟಿದ್ದಾರೆ.ಮುಳಬಾಗಿಲು ತಾಲೂಕಿನ ಮಣಿಘಟ್ಟೆಮಿಟ್ಟೆ ಗ್ರಾಮದಲ್ಲಿ ರವಳಿ (28) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.ಇವರು ತಮ್ಮ ಹೊಲದಲ್ಲಿ ರಾಗಿ ಬಿತ್ತನೆ ಮಾಡಿದ್ದರು. ಆದರೆ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹೊಲದಲ್ಲಿ ನೀರು ತುಂಬಿಕೊಂಡು ಕೆರೆಯಂತಾಗಿತ್ತು. ಈ ಹಿನ್ನೆಲೆ ನೀರನ್ನು ಹೊರಹಾಕುವ ಸಲುವಾಗಿ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಗೆ ಸಿಡಿಲು ಬಡಿದಿದೆ. ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಂಗಲಿ ಪೊಲೀಸ್ …

Read More »

ಶ್ರೀಶ್ರೀ ಕೇಶವನಿಧಿ ತೀರ್ಥರು ನಿಧನ

ಕೋಲಾರ: ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿರುವ ಶ್ರೀ ಪಾದರಾಜ ಮಠದ ಹಿರಿಯ ಶ್ರೀಗಳಾದ ಶ್ರೀಶ್ರೀ ಕೇಶವನಿಧಿ ತೀರ್ಥರು ಅವರುಕಳೆದ ಕೆಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಹಿನ್ನಲೆ ಇಂದು ಬೆಳಗ್ಗೆ  ನಿಧನರಾದರು. ಈ ಹಿನ್ನಲೆಯಲ್ಲಿ ಕಳೆದ ಆರು ತಿಂಗಳ ಹಿಂದಷ್ಟೇ ಕಿರಿಯ ಶ್ರೀಗಳಾದ ಸುಜಯ ನಿಧಿ ತೀರ್ಥಸ್ವಾಮಿಗಳಿಗೆ ಅಧಿಕಾರ ವಹಿಸಿಕೊಡಲಾಗಿತ್ತು.ಬೆಂಗಳೂರಿನ ಚಾಮರಾಜಪೇಟೆಯ ಮಠದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆ ನಂತರ ಮುಳಬಾಗಿಲು ನರಸಿಂಹ ತೀರ್ಥದ ಶ್ರೀಪಾದರಾಜ ಮಠದಲ್ಲಿ ಅಂತಿಮ ದರ್ಶನಕ್ಕೆ …

Read More »

ದುಸ್ಸಾಹಾಸಕ್ಕೆ ಯುವಕ ಬಲಿ

ಕೋಲಾರ:- ರಸ್ತೆಯಲ್ಲಿ ಬೈಕ್ ವೀಲಿಂಗ್ ಮಾಡುವ ವೇಳೆ ಆಯಾತಪ್ಪಿ ಬಿದ್ದ ಯುವಕ ಮೃತ ಪಟ್ಟಿರುವ ಘಟನೆ ಕೋಲಾರದ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ರಸ್ತೆಯಲ್ಲಿ ನಡೆದಿದೆ. ಬೈಕ್ ವೀಲಿಂಗ್ ಮಾಡುವ ವೇಳೆ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಯುವಕ ಸಾವನ್ನಪಿದ್ದಾನೆ. ಪಟ್ಟಣದ ರಹೀಮ್ ಕಾಂಪೌಂಡ್ ನಿವಾಸಿ ತಾಹೀದ್ (23) ಮೃತ ಯುವಕನಾಗಿದ್ದಾನೆ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೀಗ ಮುರಿದು ಚಿನ್ನಾಭರಣ ಕಳವು

ಕೋಲಾರ: ಮನೆ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿರುವ ಘಟನೆ ಕೋಲಾರದ ಕಾರಂಜಿಕಟ್ಟೆಯ 12ನೇ ಕ್ರಾಸ್ ನಲ್ಲಿ ನಡೆದಿದೆ. ಕೋಲಾರದ ಬೆಸ್ಕಾಂ ನೌಕರ ಪ್ರಭಾಕರ್ ಮನೆಯವರು ಊರಿಗೆ ಹೋಗಿದ್ದಾಗ ಬೀಗ ಹೊಡೆದು ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ. ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದು, ಸ್ಥಳಕ್ಕೆ ಕೋಲಾರ ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಕೋಲಾರದಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ.

KOLAR:-ಕೋಲಾರದಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ ನಡೆಯುತ್ತಿದ್ದು, ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಯೋಗ ದಿನ ಆಯೋಜಿಸಿದೆ. ಜಿಲ್ಲಾಡಳಿತದೊಂದಿಗೆ ಹಲವು ಸಂಘ ಸಂಸ್ಥೆಗಳು ಸಹಯೋಗದೊಂದಿಗೆ ದೀಪ ಬೆಳಗಿಸುವ ಮೂಲಕ ಜಿಲ್ಲಾದಿಕಾರಿ ಮಂಜುನಾಥ್ ಯೋಗ ದಿನಕ್ಕೆ ಚಾಲನೆ ನೀಡಿದರು. ಯೋಗ ದಿನಾಚರಣೆಯಲ್ಲಿ ನೂರಾರು ವಿದ್ಯಾರ್ಥಿಗಳು, ಯೋಗಪಟುಗಳು ಭಾಗಿಯಾಗಿದ್ದರು. ಸಾಮೂಹಿಕ ಯೋಗ ಪ್ರದರ್ಶನವನ್ನು ಯೋಗಪಟುಗಳು ನಡೆಸಿದರು. ಡಿಸಿ ಮಂಜುನಾಥ್, ಸಿಇಓ ಜಗದೀಶ್, ಎಸ್ಪಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

Read More »

ಯಾವ ಹುದ್ದೆಗೆ ರಾಜಿನಾಮೆ ಕೊಡಬೇಕು ಅನ್ನೋದ್ರ ಬಗ್ಗೆ ಯೋಚನೆ ಮಾಡ್ತೀನಿ.

ಮಹಾನಗರ ಪಾಲಿಕೆ ಸದಸ್ಯರಾಗಿದ್ದ ಎಸ್.ಮುನಿಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದರ ಹಿನ್ನೆಲೆಯಲ್ಲಿ ಎರಡು ಪ್ರಮುಖ ಹುದ್ದೆಗಳಲ್ಲಿ ಮುಂದುವರೆಯುವ ಸಂಸದರು ಯಾವ ಹುದ್ದೆಗೆ ರಾಜೀನಾಮೆ ನೀಡಬೇಕೆಂಬುದರ ಬಗ್ಗೆ ಯೋಚನೆ ಮಾಡುತ್ತಿದ್ದೇನೆಂದು ಕೋಲಾರದಲ್ಲಿ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಹೇಳಿಕೆ ನೀಡಿದರು. ಬಿಬಿಎಂಪಿ ಕಾಡುಗುಡಿ ಕಾರ್ಪೋರೇಟರ್ ಸಹ ಆಗಿರುವ ಎಸ್.ಮುನಿಸ್ವಾಮಿ ಈಗ ಕೋಲಾರದ ಸಂಸದರು ಸಹ ಆಗಿದ್ದಾರೆ. ಹೀಗಾಗಿ ಯಾವ ಪದವಿಗೆ ರಾಜಿನಾಮೆ ಕೊಡಬೇಕು ಅನ್ನೋದ್ರ ಬಗ್ಗೆ ಯೋಚನೆ ಮಾಡ್ತೀನಿ. ಇದರ …

Read More »

ಅಕ್ರಮವಾಗಿ ಹಸುಗಳನ್ನ ಸಾಗಾಣೆ ಮಾಡುತ್ತಿದ್ದ ವ್ಯಕ್ತಿಯನ್ನು ಹಿಡಿದ ಶ್ರೀರಾಮಸೇನೆ

ಅಕ್ರಮವಾಗಿ ಹಸುಗಳನ್ನ ಸಾಗಾಣೆ ಮಾಡುತ್ತಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೋಲಾರ ಹೊರವಲಯದ ಪವನ್ ಕಾಲೇಜು ಮೈದಾನದ ಬಳಿ ನಡೆದಿದೆ. ಟಾಟಾ ಏಸ್ ನಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಾಣಿಕೆ ಮಾಡುತ್ತಿದ್ದಾಗ ವೇಳೆ ಶ್ರೀರಾಮಸೇನೆ ಕಾರ್ಯಕರ್ತರು ಹಿಡಿದು ಪೋಲಿಸರ ವಶಕ್ಕೆ ನೀಡಿದ್ದಾರೆ. ಟಾಟಾ ಏಸ್ ವಾಹನ ಸೇರಿದಂತೆ ಒಂಬತ್ತು ಹಸುಗಳು, ಚಾಲಕನನ್ನ ನಗರಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.ಪ್ರಕರಣವನ್ನು ದಾಖಲಿಸಿಕೊಂಡ ಪೋಲಿಸರು ವಾಹನದ ಚಾಲಕನನ್ನು ವಿಚಾರಣೆ ನಡೆಸಿದ್ದಾರೆ.

Read More »

ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳಿಂದ ಭ್ರಷ್ಟರ ಮೇಲೆ ದಾಳಿ

ಕೋಲಾರ ನಗರದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಭ್ರಷ್ಟರ ಮೇಲೆ ದಾಳಿ ಮಾಡುವ ಮೂಲಕ ಶಾಕ್ ನೀಡಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ‌ ನಿರ್ದೇಶಕರ ಸಂಬಂಧಿಕರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿದೆ. ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ‌ ನಿರ್ದೇಶಕ ನಾರಾಯಣಸ್ವಾಮಿ ಸಂಬಂಧಿಕರು ಕೋಲಾರ ನಗರದ ಅಂತರಗಂಗೆ ರಸ್ತೆಯಲ್ಲಿರುವಮನೆಗಳ ಮೇಲೆ ದಾಳಿಯಾಗಿದೆ. ಅಧಿಕಾರಿ ನಾರಾಯಣಸ್ವಾಮಿ ಮಾವ ಶಿವಪ್ಪ, ತಾಯಿ ತುಳಸಮ್ಮ ನಿವಾಸಗಳ ಮೇಲೆ ಹಾಗೂ ಬೆಂಗಳೂರಿನ‌ ಜಯನಗರ ನಿವಾಸ ಮತ್ತು ಚಿಂತಾಮಣಿ …

Read More »

ಕೋಲಾರ ನಗರಸಭೆಗೆ ಡಿಸಿ ಮಂಜುನಾಥ್ ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ

ಕೋಲಾರ ನಗರಸಭೆಗೆ ಡಿಸಿ ಮಂಜುನಾಥ್ ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ಮಾಡಿದರು. ಕೋಲಾರ ನಗರಸಭೆ ಆಡಳಿತಾಧಿಕಾರಿಯಾಗಿರುವ ಡಿಸಿ ಮಂಜುನಾಥ್ ರವರು ನಗರಸಭೆ ಎಇ, ಎಇಇ ಯನ್ನ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಟೆಂಡರ್ ಆಗಿದ್ದರು ಗುತ್ತಿಗೆದಾರರಿಂದ ಕೆಲಸ ಮಾಡಿಸದ ಇಂಜಿನಿಯರ್ ಗಳು ಬಗ್ಗೆ ತೀವ್ರ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಇನ್ನೂ ಡಿಸಿಗೆ ತಪ್ಪು ಮಾಹಿತಿ ನೀಡಿದ ಎಇಇ ಪೂಜಾರಪ್ಪ ಗೆ ತೀವ್ರ ತರಾಟೆ ತೆಗೆದುಕೊಂಡು, ಟೆಂಡರ್ ಕರೆದು ಎರಡು …

Read More »