Breaking News

ಚಾಮರಾಜನಗರ

ಚಿಕನ್‌ ಸೆವನೆ ಮಾಡಿದ ಮಕ್ಕಳು ಅಸ್ವಸ್ಥ.

ಚಾಮರಾಜನಗರ: ಚಿಕನ್ ಊಟ ಸೇವಿಸಿದ ಮಕ್ಕಳು ವಾಂತಿ, ಬೇಧಿಯಾಗಿ ಅಸ್ವಸ್ಥಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಒಟ್ಟು 30 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದು, 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಕೆಲ ದಿನಗಳ ಹಿಂದೆ ಬೀದರ್​ನ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು …

Read More »

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಅಪರಾಧಿಗೆ 3 ವರ್ಷ ಶಿಕ್ಷೆ

ಚಾಮರಾಜನಗರ :  ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ, ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 2 ಲಕ್ಷ ರೂ.ಪರಿಹಾರ ನೀಡುವಂತೆ ನಗರದ ಮಕ್ಕಳ ಸ್ನೇಹಿ ಹಾಗೂ ಹೆಚ್ಚುವರಿ ಜಿಲ್ಲಾ ಮತ್ತು ಸೇಷನ್ಸ್  ನ್ಯಾಯಾಲಯ ಆದೇಶ ನೀಡಿದೆ. ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಶಿವಕುಮಾರ( 37) ಶಿಕ್ಷೆಗೆ ಗುರಿಯಾದ ಅಪರಾಧಿ. 2021ರ ಜನವರಿ 1ರಂದು 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ,ಪೋಷಕರಿಗೆ …

Read More »

ಚಾಮರಾಜನಗರ ಜಿಲ್ಲೆಯಲ್ಲಿ ಚಿರತೆ ದಾಳಿ ಬಾಲಕಿಗೆ ಗಂಭೀರ ಗಾಯ.

ಹನೂರು:- ತಾಲೂಕಿನ ಚಿಕ್ಕಮಾಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಗ್ಗಲಿಗುಂದಿ ಗ್ರಾಮದಲ್ಲಿ ಸೋಮವಾರ ರಾತ್ರಿ ಮನೆ ಮುಂದೆ ಕುಳಿತಿದ್ದ ಬಾಲಕಿಯೊಬ್ಬಳ ಮೇಲೆ ಚಿರತೆಯೊಂದು ದಾಳಿ ನಡೆಸಿ ಗಾಯಗೊಳಿಸಿದೆ.ಕಗ್ಗಲಿಗುಂದಿ ಗ್ರಾಮವು ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿದೆ. ಸೋಮವಾರ ರಾತ್ರಿ 7:30 ರ ಸಮಯದಲ್ಲಿ ಘಟನೆ ನಡೆದಿದೆ. ಗ್ರಾಮದ ರಾಮು ಹಾಗೂ ಅವರ ಮಗಳು ಸುಶೀಲಾ ಮನೆಯ ಮುಂಭಾಗ ಕುಳಿತಿದ್ದರು. ಮನೆ ಬಳಿಗೆ ಬಂದ ಚಿರತೆಯು ರಾಮು ಮೇಲೆ ದಾಳಿ …

Read More »

ಯಾರೂ ಏನೇ ಟೀಕೆ ಮಾಡಿದರೂ ನಾನು ಅಂಜಲ್ಲ, ಅಳುಕಲ್ಲ  : ಸಿಎಂಂಆಮಚ

ಚಾಮರಾಜನಗರ: ಯಾರೂ ಏನೇ ಟೀಕೆ ಮಾಡಿದರೂ ನಾನು ಅಂಜಲ್ಲ, ಅಳುಕಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 1100 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಟೀಕೆಗಳಿಗೆ ನಮ್ಮ ಸರ್ಕಾರ ಅಳುಕಲ್ಲ. ಸತ್ಯ ಮೇವ ಜಯತೆ ನುಡಿ ಮೇಲೆ ಸತ್ಯ ಹಾಗೂ ಆತ್ಮಸಾಕ್ಷಿ ಮೇಲೆ ಸರ್ಕಾರ ನಡೆಸುತ್ತಿದೆ. ಜನಪರವಾಗಿ, ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಚಾಮರಾಜನಗರಕ್ಕೆ …

Read More »

ಕರ್ತವ್ಯಲೋಪ ಐವರು ಪೊಲೀಸರು ಅಮಾನತು : ಆದೇಶ ಹಿಪಂಡೆಯುವಂತೆ ಪ್ರತಿಭಟನೆ

ಚಾಮರಾಜನಗರ: ಜೀಪಿನಿಂದ ಹಾರಿ ಆರೋಪಿ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಐವರು ಪೊಲೀಸರು ಅಮಾನತುಗೊಂಡಿದ್ದಾರೆ. ಯಳಂದೂರು ಸಿಪಿಐ ಶಿವಮಾದಯ್ಯ, ಪಿಎಸ್‌ಐ ಮಹದೇವಗೌಡ, ಎಎಸ್‌ಐ ಚೆಲುವರಾಜ್, ಹೆಡ್ ಕಾನ್ಸ್‌ಟೇಬಲ್ ಭದ್ರಮ್ಮ, ಕಾನ್ಸ್‌ಟೇಬಲ್ ಸೋಮಶೇಖರ್ ಅಮಾನತುಗೊಂಡ ಪೊಲೀಸ್ ಸಿಬ್ಬಂದಿ. ಆರೋಪಿ ಬಂಧಿಸಿ ಕರೆತರುವಾಗ ಕರ್ತವ್ಯಲೋಪ ಎಸಗಿದ್ದಾರೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ಅಮಾನತು ಆದೇಶ ಹೊರಬಿದ್ದಿದೆ. ಯಳಂದೂರು ತಾಲೂಕಿನ ಕುಂತೂರುಮೋಳೆ ಗ್ರಾಮದ ನಿಂಗರಾಜು(21) ಎಂಬಾತನ ವಿರುದ್ಧ ಅಪ್ರಾಪ್ತೆ ಅಪಹರಿಸಿದ ದೂರು ದಾಖಲಾಗಿತ್ತು. …

Read More »


ಡಿ.24 ರಿಂದ 26ರವರೆಗೆ ದಾವಣಗೆರೆಯಲ್ಲಿ ಮಹಾ ಅಧಿವೇಶನ

ಚಾಮರಾಜನಗರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 23ನೇ ಮಹಾ ಅಧಿವೇಶನ ಡಿ.24 ರಿಂದ 26ರವರೆಗೆ ದಾವಣಗೆರೆಯಲ್ಲಿ ನಡೆಯಲಿದೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರೇಣುಕ ಪ್ರಸನ್ನ, ‘ಮೂರು ದಿನಗಳ ಕಾಲ ನಡೆಯುವ ಅಧಿವೇಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಸೇರಿದಂತೆ ರಾಜ್ಯದ ವಿವಿಧ ಮಠಾಧೀಶರು, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ’ ಎಂದರು. ‘ಮಹಾ ಅಧಿವೇಶನದಲ್ಲಿ ಮೂರು …

Read More »


ಕೆಎಸ್‌ಆರ್ ಟಿಸಿ ಬಸ್ ಪಲ್ಟಿ : 13 ಮಂದಿ ಪ್ರಯಾಣಿಕರಿಗೆ ಗಾಯಾ

ಚಾಮರಾಜನಗರ: ಹೊರವಲಯದ ನಂಜನಗೂಡು ರಸ್ತೆಯಲ್ಲಿ ಕೆಎಸ್‌ಆರ್ ಟಿಸಿ ಬಸ್ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ. ಮೈಸೂರಿಂದ ಕೊಯಮತ್ತೂರಿಗೆ ತೆರಳುತ್ತಿದ್ದ ಬಸ್ ನಿನ್ನೆ ಮಧ್ಯರಾತ್ರಿ‌ 2 ಗಂಟೆ ಸುಮಾರಿಗೆ ಹೊರವಲಯದಲ್ಲಿರುವ ಸಣ್ಣ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಕಂಡಕ್ಟರ್ ಸೇರಿದಂತೆ 13 ಮಂದಿ ಪ್ರಯಾಣಿಕರು ಗಾಯಾಕೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಚಾಮರಾಜನಗರ ಪಟ್ಟಣ ಠಾಣೆಯ ಕ್ಷಿಪ್ರ ಕಾರ್ಯ(QRT) …

Read More »

ಪೊಲೀಸ್ ಹುತಾತ್ಮ ದಿನ : ಕರ್ತವ್ಯದ ವೇಳೆ ಹುತಾತ್ಮರಾದ ಖಾಕಿಪಡೆಗೆ ನಮನ

ಚಾಮರಾಜನಗರ: ಜಿಲ್ಲಾ ಪೊಲೀಸ್ ಇಲಾಖೆಯು ನಗರದ ಜಿಲ್ಲಾ ಸಶಸ್ತ್ರ‌ ಮೀಸಲು ಪಡೆ ಮೈದಾನದಲ್ಲಿ  ಪೊಲೀಸ್ ಹುತಾತ್ಮ ದಿನಾಚರಣೆ ಹಮ್ಮಿಕೊಂಡಿತ್ತು. ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾ. ಬಿ.ಎಸ್. ಭಾರತಿ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಬಂಡೀಪುರ ಸಿಎಫ್‌ಒ ರಮೇಶ್ ಕುಮಾರ್, ಜಿಪಂ‌ ಸಿಇಒ‌ ಕೆ.ಎಂ. ಗಾಯತ್ರಿ, ವಿವಿಧ ಸಂಘಟನೆಗಳ ಮುಖಂಡರು ಪುಷ್ಪ ನಮನ ಸಲ್ಲಿಸಿದರು.‌ ಹುತಾತ್ಮರ ಸ್ಮರಣಾರ್ಥ ಗಾಳಿಯಲ್ಲಿ ‌ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ಎಸ್ಪಿ ಟಿ.ಪಿ. ಶಿವಕುಮಾರ್ …

Read More »

ಭಾರತ್ ಜೋಡೋ ಯಾತ್ರೆ : ಫ್ಲೆಕ್ಸ್‌ಗಳನ್ನು ಹರಿದ ಕಿಡಿಗೇಡಿಗಳು

ಗುಂಡ್ಲುಪೇಟೆ (ಚಾಮರಾಜನಗರ): ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿ, ನಾಯಕರಿಗೆ ಸ್ವಾಗತ ಕೋರಲು ಮಾಡಿದ್ದ ಫ್ಲೆಕ್ಸ್‌ಗಳನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಹರಿದು ಹಾಕಿದ್ದಾರೆ. ಇದು ಕಾಂಗ್ರೆಸ್ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣ ಊಟಿ ಸರ್ಕಲ್ ನಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಅದರ ಎರಡು ಬದಿಯಲ್ಲಿ ಅಳವಡಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಇನ್ನಿತರ ನಾಯಕರ ಸುಮಾರು 40ಕ್ಕೂ …

Read More »

ಲಾರಿ ಕಾರು ಮಧ್ಯೆ ಅಪಘಾತ :ಶಾಸಕ ಸೇರಿ 3 ಜನರಿಗೆ ಗಾಯ

ಚಾಮರಾಜನಗರ: ತಾಲೂಕಿನ ಬಾಣಳ್ಳಿ ಗೇಟ್ ಬಳಿಯಲ್ಲಿ ಕಳೆದ ರಾತ್ರಿ ಕೊಳ್ಳೇಗಾಲದ ಮಾಜಿ ಶಾಸಕ ಎಸ್ ಬಾಲರಾಜು ಅವರ ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಲಾರಿಯ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಪರಿಣಾಮದಿಂದಾಗಿ ಮಾಜಿ ಶಾಸಕ ಬಾಲರಾಜು ಹಾಗೂ ಕಾರು ಚಾಲಕ ಮೋಹನ್ ಮತ್ತು ಕ್ಲೀನರ್ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಈ ಅಪಘಾತದಲ್ಲಿ ಮಾಜಿ ಶಾಸಕ ಸೇರಿ ಮೂವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಮಾಜಿ ಶಾಸಕ ಎಸ್ ಬಾಲರಾಜು ಪ್ರಾಣಾಪಾಯದಿಂದ ಪಾರಾಗಿದ್ದರೇ, …

Read More »