BigTv News
April 11, 2025
Breaking News, Crime, ದಾವಣಗೆರೆ
ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಸಾವಿನಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೊಬ್ಬರು ಇಬ್ಬರು ಮಕ್ಕಳ ಉಸಿರುಗಟ್ಟಿಸಿ ಸಾಯಿಸಿ ತಾನೂ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಗುರುವಾರ ದಾವಣಗೆರೆಯ ಎಸ್‌ಪಿಎಸ್ ನಗರದ 2ನೇ ಹಂತದಲ್ಲಿ ನಡೆದಿದೆ.ಉದಯ್‌ಕುಮಾರ್ ಸಾವಿಗೂ ಮುನ್ನ ನಾಲ್ಕು ಪುಟಗಳ ಡೆತ್‌ನೋಟ್ ಬರೆದಿರುವುದು ದೊರೆತಿದೆ. ನಮ್ಮ ಸಾವಿಗೆ ಯಾರೂ ಕಾರಣರಲ್ಲ. ಮಕ್ಕಳು ಅಮ್ಮ… ಅಮ್ಮ… ಎಂದಾಗ, ಅಮ್ಮ ಎಲ್ಲಿಗೆ ಹೋಗಿದ್ದಾಳೆ.. ಎಂದೆಲ್ಲ ಕೇಳಿದಾಗ ಏನು ಹೇಳುವುದು ಎಂಬುದು ಗೊತ್ತಾಗದೆ ಮನಸಿಗೆ …
Read More »
BigTv News
April 4, 2025
Breaking News, Crime, ದಾವಣಗೆರೆ
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಚನ್ನಾಪುರ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಘಟನೆ ನಡೆದಿದ್ದು, ಬೆಳಗಾವಿ ಮೂಲದ ಮಹಿಳೆ ಉಚ್ಚಂಗಿದುರ್ಗದ ಉಚ್ಚಂಗೆಮ್ಮ ಜಾತ್ರೆಗೆ ಮಕ್ಕಳ ಜೊತೆ ಬಂದಿದ್ದರು. ಜಾತ್ರೆ ಮುಗಿಸಿಕೊಂಡು ದಾವಣಗೆರೆಗೆ ಹೋಗಲು ಬಸ್ ಹತ್ತಿದಾಗ ಬಸ್ ಸಿಬ್ಬಂದಿ ಅತ್ಯಾಚಾರ ಎಸಗಿದ್ದಾರೆ. ಬನಶಂಕರಿ ಎಂಬ ಹೆಸರಿನ ಖಾಸಗಿ ಬಸ್ ಆರೋಪಿಗಳು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುತ್ತಿದ್ದ ವೇಳೆ ಮಹಿಳೆ ಕಿರುಚಾಡಿದ್ದಾರೆ. ಮಹಿಳೆಯ ಕಿರುಚಾಟ ಕೇಳಿ ಸಾರ್ವಜನಿಕರು ರಕ್ಷಿಸಿದ್ದಾರೆ.ಸ್ಥಳೀಯರ ಮಾಹಿತಿ ಮೇರೆಗೆ …
Read More »
BigTv News
April 2, 2025
Breaking News, Crime, ದಾವಣಗೆರೆ
ಬೆಳಗಾವಿ ಮೂಲದ ಮಹಿಳೆ ಉಚ್ಚಂಗಿದುರ್ಗದ ಉಚ್ಚಂಗೆಮ್ಮನ ಜಾತ್ರೆಗೆ ಬಂದಿದ್ದರು. ಜಾತ್ರೆ ಮುಗಿಸಿಕೊಂಡು ದಾವಣಗೆರೆಗೆ ಹೋಗಲು ಮಹಿಳೆ ಮಂಗಳವಾರ ರಾತ್ರಿ ಬಸ್ಸಿಗಾಗಿ ಕಾಯುತ್ತಿದ್ದರು.ಬಸ್ನಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಮಾತ್ರ ಇದ್ದರು. ಎರಡು ಸಣ್ಣ ಮಕ್ಕಳೊಂದಿಗೆ ಒಬ್ಬಂಟಿ ಮಹಿಳೆ ಇರುವುದನ್ನು ಮೂರು ಜನ ಆರೋಪಿಗಳು ಗಮನಿಸಿದ್ದಾರೆ.ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುತ್ತಿದ್ದ ವೇಳೆ ಮಹಿಳೆ ಕಿರುಚಾಡಿದ್ದಾರೆ. ಮಹಿಳೆಯ ಕಿರುಚಾಟ ಕೇಳಿ ಸಾರ್ವಜನಿಕರು ರಕ್ಷಣೆ ಮಾಡಿದ್ದಾರೆ. ವಿಜಯನಗರ ತಾಲೂಕಿನ ಉಚ್ಚಂಗಿದುರ್ಗದ ಚನ್ನಾಪುರ ಗ್ರಾಮದ ಬಳಿ …
Read More »
BigTv News
April 1, 2025
Breaking News, Crime, ದಾವಣಗೆರೆ
ದಾವಣಗೆರೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನ್ಯಾಮತಿ ಶಾಖೆಯಿಂದ ಕಳುವಾಗಿದ್ದ ಚಿನ್ನವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕರ್ನಾಟಕ ಪೊಲೀಸರು ಆರು ಮಂದಿ ದರೋಡೆಕೋರರ ತಂಡವನ್ನು ಹಿಡಿದು ಬಂಧಿಸಿದ್ದಾರೆ. 17.7 ಕೆಜಿ ಕದ್ದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.ತಮಿಳುನಾಡಿನ ಮಧುರೈ ಜಿಲ್ಲೆಯ ಉಸಲಂಪಟ್ಟಿ ಪಟ್ಟಣದ ಬಾವಿಯಲ್ಲಿ ಈ ಚಿನ್ನ ಪತ್ತೆಯಾಗಿದೆ. ಕದ್ದ ಚಿನ್ನದ ಆಭರಣಗಳೊಂದಿಗಿನ ಲಾಕರ್ ಬಾವಿಯಲ್ಲಿ ಪತ್ತೆಯಾಗಿದೆ.
Read More »
BigTv News
March 23, 2025
Breaking News, Crime, ದಾವಣಗೆರೆ
ಉದ್ಯೋಗ ಅರಸಿ ಮಧ್ಯ ಆಫ್ರಿಕಾದ ಗಬಾನ್ ದೇಶಕ್ಕೆ ತೆರಳಿರುವ ಚನ್ನಗಿರಿ ತಾಲೂಕಿನ ಗೋಪನಾಳ್-ಅಸ್ತಾಪನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಹಕ್ಕಿ-ಪಿಕ್ಕಿ ಜನಾಂಗದ ನಾಟಿ ವೈದ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಮ್ಮ ಪಾಸ್ಪೋರ್ಟ್ ವಶಕ್ಕೆ ಪಡೆದು ತೊಂದರೆ ನೀಡುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಇಲ್ಲಿನ ಕುಟುಂಬದ ಸದಸ್ಯರಿಗೆ ಕರೆ ಮಾಡಿ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಇಲಾಖೆ ಗಮನ ಹರಿಸುವಂತೆ ಸಂಕಷ್ಟದಲ್ಲಿ ಸಿಲುಕಿರುವ ಕುಟುಂಬಸ್ಥರು ಮನವಿ …
Read More »
BigTv News
February 15, 2024
Breaking News, ಅಪರಾಧ, ದಾವಣಗೆರೆ
ದಾವಣಗೆರೆ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ 34 ವರ್ಷದ ಪೊಲೀಸ್ ಪೇದೆಯೊಬ್ಬರು ಬುಧವಾರ ಕರ್ತವ್ಯದಲ್ಲಿದ್ದಾಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಮಂಗನ ಜ್ವರ’: ಸಾವುಗಳನ್ನು ತಡೆಗಟ್ಟುವುದು ಸರ್ಕಾರದ ಅತ್ಯಂತ ಆದ್ಯತೆ:ಸಚಿವ ಗುಂಡೂರಾವ್ ಪೊಲೀಸರ ಪ್ರಕಾರ, ಗುರು ಮೂರ್ತಿ ಎಂದು ಗುರುತಿಸಲಾದ ಕಾನ್‌ಸ್ಟೆಬಲ್ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಿವಾಸಿಯಾಗಿದ್ದು, ತನ್ನ ಜೀವನವನ್ನು ಅಂತ್ಯಗೊಳಿಸಲು ಯತ್ನಿಸಿದ್ದಾನೆ. ಕಾನ್‌ಸ್ಟೆಬಲ್‌ನನ್ನು ತಕ್ಷಣವೇ ನಗರದ ಆಸ್ಪತ್ರೆಗೆ ಸಾಗಿಸಲಾಯಿತು.ಮೂರ್ತಿ ಅವರನ್ನು ನಗರ ಪಾಲಿಕೆ ಆವರಣದಲ್ಲಿರುವ …
Read More »
BigTv News
December 16, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಮೈಸೂರಿನಲ್ಲಿ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಮತಾಂಧ ಹಾಗೂ ಹಿಂದು ದೇವಾಲಯಗಳನ್ನ ದ್ವಂಸಗೊಳಿಸಿರುವ ಟಿಪ್ಪು ಸುಲ್ತಾನ್ ನ ಹೆಸರಿಡುವುದು ಯಾಕೆ, ಅದನ್ನು ಬಿಟ್ಟು ಮೈಸೂರು ಮಹಾರಾಜರ ಹೆಸರನ್ನ ನಾಮಕರಣ ಮಾಡಿ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಮಾಧ್ಯಮಗಳ ಜೊತೆಗೆ …
Read More »
BigTv News
December 7, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮೆಕ್ಕೆಜೋಳ, ಭತ್ತ ಪ್ರಮುಖ ಬೆಳೆಯಾದರೂ ಅಡಿಕೆ ಬೆಳೆಗಾರರು ಕೂಡ ಸಾಕಷ್ಟಿದ್ದಾರೆ. ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆ ಬೆಳೆಯಲಾಗುತ್ತಿದೆ. ಈ ಬಾರಿ ಮಳೆಯೂ ಕಡಿಮೆಯಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಬೆಳೆ ಕುಂಠಿತಗೊಂಡಿದೆ. ಅಡಿಕೆ ಧಾರಣೆಯೂ ಹಾವು ಏಣಿ ಆಟ ಆಗುತ್ತಿದ್ದು, ಇದರಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಚನ್ನಗಿರಿ ಅಡಿಕೆ ನಾಡು ಅಂತಾನೇ ಫೇಮಸ್. ಈ ಬಾರಿ ಮಳೆ ಕಡಿಮೆಯಾಗಿದ್ದು, ಇದರಿಂದ ಅಡಿಕೆ ಬೆಳೆಗಾರರು ಬೆಳೆ ಉಳಿಸಿಕೊಳ್ಳುವುದು …
Read More »
BigTv News
November 22, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಜಗಳೂರು ತಾಲ್ಲೂಕಿನಲ್ಲಿ 409 ಮೀ.ಮೀ ವಾಡಿಕೆಗೆ 361 ಮೀ.ಮೀ ಮಳೆಯಾಗಿದೆ. ಜುಲೈ ತಿಂಗಳಲ್ಲಿ ಮಾತ್ರ ಹೆಚ್ಚು ಮಳೆಯಾಗಿದ್ದು, ಆಗಸ್ಟ್, ಸೆಪ್ಟೆಂಬರ್‌ನಲ್ಲಿ ಮಳೆ ತೀವ್ರ ಕೊರತೆಯಿಂದ ಶೇಕಡಾ 80ರಷ್ಟು ಬೆಳೆ ನಷ್ಟವಾಗಿದೆ. ಈ ವರ್ಷ 18,250 ರೈತರು ಫಸಲ್ ಭೀಮಾ ಯೋಜನೆಗೆ ನೊಂದಾಯಿಸಿದ್ದಾರೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು. ಇನ್ನು ತಾಲೂಕಿನ 48 ಗ್ರಾಮಗಳು ಪ್ಲೋರೈಡ್‌ನಿಂದ ಕೂಡಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭರವಸೆ …
Read More »
BigTv News
November 21, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಭದ್ರಾ ಜಲಾಶಯದಿಂದ ಮುಂಗಾರು ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ಕಾಲುಗಳಲ್ಲಿ ಸೆಪ್ಟೆಂಬರ್ 6ರಿಂದ ನೀರು ಹರಿಸಲಾಗುತ್ತಿದ್ದು, ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ನವೆಂಬರ್ 22 ರಿಂದ ಸ್ಥಗಿತಗೊಳ್ಳಲಿದೆ. ಆದ್ದರಿಂದ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರು ಮತ್ತು ಸಂಬಂಧಪಟ್ಟವರು ಸಹಕರಿಸುವಂತೆ ಕರ್ನಾಟಕ ನೀರಾವರಿ ನಿಗಮದ ಭದ್ರಾ ಯೋಜನಾ ವೃತ್ತ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಶೇಕಡ 70ರಷ್ಟು ಭದ್ರಾ ಅಚ್ಚುಕಟ್ಟು ಪ್ರದೇಶವಿದ್ದು, ರೈತರು ಸುಮಾರು 1.4 …
Read More »