BigTv News
February 3, 2025
Breaking News, ಯಾದಗಿರಿ
ಯಾದಗಿರಿ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಹಾಪುರ, ಸುರಪುರ, ಯಾದಗಿರಿ ,ಗುರಮಠಕಲ್ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿಯಾಗಿರುವ 159- ಅಂಗನವಾಡಿ ಕಾರ್ಯಕರ್ತೆ ಹಾಗೂ 311-ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು, ಏಜೆಂಟರು ಅಥವಾ ಅನ್ಯ ವ್ಯಕ್ತಿಗಳ ಮುಖಾಂತರ ವಾಮ ಮಾರ್ಗದ ಮೂಲಕ ಹಣಕಾಸು ನೀಡಿ ಆಯ್ಕೆ ಹೊಂದಲು ಪ್ರಯತ್ನಿಸಿದಲ್ಲಿ ಅಂತಹವರ ವಿರುದ್ಧ ಕಾನೂನಿನ ರೀತ್ಯ ಕಠಿಣ ಕ್ರಮ …
Read More »
BigTv News
January 21, 2025
Breaking News, ಯಾದಗಿರಿ
ಯಾದಗಿರಿ : ಕಲ್ಯಾಣ ಕರ್ನಾಟಕದಲ್ಲಿ ಹಿಂದುಳಿದ ಯಾದಗಿರಿ ಜಿಲ್ಲೆಯ ಅಭಿವೃದ್ಧಿಗಾಗಿ ಬರುವ ಬಜೆಟ್ ನಲ್ಲಿ ನಗರಸಭೆಗೆ ಹೆಚ್ಚಿನ ಅನುದಾನ ನಮ್ಮ ಸರಕಾರದಿಂದ ನೀಡುವುದಾಗಿ ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹಿಂಖಾನ್ ಭರವಸೆ ನೀಡಿದರು. ನಗರದಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ನಿಮಾರ್ಣವಾದ ನಗರಸಭೆ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಜಿಲ್ಲೆಯ ಸಚಿವ, ಶಾಸಕರೊಂದಿಗೆ ಚರ್ಚಿಸಿ ನಗರದ ಅಭಿವೃದ್ಧಿಗೆ ವಿವಿಧ ಯೋಜನೆಯಡಿ ಹೆಚ್ಚಿನ ಅನುದಾನ ನೀಡುವುದಾಗಿ ಹೇಳಿದರು. …
Read More »
BigTv News
January 21, 2025
Breaking News, ಯಾದಗಿರಿ
ಯಾದಗಿರಿ: ನಗರೋತ್ಥಾನ ಯೋಜನೆಯಡಿ ಗುಣಮಟ್ಟದ, ಸಮರ್ಪಕ ಕಾಮಗಾರಿ ಆಧಾರದ ಮೇಲೆ ಅನುದಾನ ಮಂಜೂರು ಮಾಡುವಂತೆ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವರಾದ ರಹೀಂ ಖಾನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಗರೋತ್ಥಾನ ಹಂತ- 3ರ ಕಾಮಗಾರಿಗಳು ಪೂರ್ಣಗೊಂಡಿವೆ. ನಗರೋತ್ಥಾನ ಹಂತ-4ರ ಅಡಿಯಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಗುಣಮಟ್ಟದ ಕಾಮಗಾರಿಗಳ …
Read More »
BigTv News
January 12, 2025
Breaking News, ಯಾದಗಿರಿ
ವಡಗೇರಾ: ತಾಲ್ಲೂಕು ಕೇಂದ್ರವಾಗಿ ಏಳು ವರ್ಷಗಳ ಬಳಿಕ ನಂತರ ವಡಗೇರಾ ಪಟ್ಟಣದಲ್ಲಿ ಮಿನಿವಿಧಾನ ಸೌಧ ನಿರ್ಮಾಣಕ್ಕೆ ಸಿದ್ಧತೆ ನಡೆದಿದ್ದು, ಇದರಿಂದಾಗಿ ತಾಲ್ಲೂಕಿನ ಜನರ ಬಹುದಿನಗಳ ಕನಸು ನನಸಾಗುತ್ತಿದೆ. 2018ರಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ರಾಜ್ಯದಲ್ಲಿ ಸುಮಾರು 44 ನೂತನ ತಾಲ್ಲೂಕು ಕೇಂದ್ರಗಳನ್ನು ಘೋಷಣೆ ಮಾಡಿದ್ದರು. ಅದರಲ್ಲಿ ವಡಗೇರಾ ಸಹ ಒಂದು. ಜಮೀನು ಮಂಜೂರು: ಇಲ್ಲಿನ ತುಮಕೂರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಇರುವ ಮೊರಾರ್ಜಿ ವಸತಿ ಶಾಲೆಯ ಪಕ್ಕದ ಸ.ನಂ.581ರಲ್ಲಿ …
Read More »
BigTv News
January 7, 2025
Breaking News, ಯಾದಗಿರಿ
ಯಾದಗಿರಿ : ಬೈಪಾಸ್ ರಸ್ತೆ ನಿರ್ಮಾಣಕ್ಕೆ ಸಂಬಂಧ ಪಟ್ಟಂತೆ ಪುನರ್ ಟೆಂಡರ್ ಕರೆಯುವ ಬಗ್ಗೆ ಚಿಂತನೆ ನಡೆಸುವಂತೆ ಲೋಕೋಪಯೋಗಿ ಖಾತೆ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ʼಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆʼ ನಡೆಸಿ ಅವರು ಮಾತನಾಡಿದರು. ಯಾದಗಿರಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟಂತೆ 136.29 ಕೋಟಿ ರೂ.ಗಳ ಅನುದಾನ ಮಂಜೂರು ಆಗಿದೆ. 104.04 ಕೋಟಿ ರೂ.ಗಳ ಅನುದಾನಕ್ಕೆ ಟೆಂಡರ್ …
Read More »
BigTv News
November 17, 2024
Breaking News, ಯಾದಗಿರಿ
ಶಹಾಪುರ: ಮುಂಗಾರು ಹಂಗಾಮಿನ ಭಾಗವಾಗಿ ಇನ್ನೂ ನಾಲ್ಕು ದಿನ ಎನ್‌ಎಲ್‌ಬಿಸಿ ಕಾಲುವೆಗೆ ನಿರಂತರವಾಗಿ ನೀರು ಹರಿಸಲು ಸೂಚಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು. ಈ ಕುರಿತು ಮಾತನಾಡಿದ ಅವರು, ನಿಗದಿತ ನಿಯಮದ ಪ್ರಕಾರ ಭಾನುವಾರ(ನ.17) ಕಾಲುವೆ ನೀರು ಸ್ಥಗಿತಗೊಳಿಸಬೇಕಾಗಿತ್ತು. ಆದರೆ ರೈತರ ಹಿತದೃಷ್ಟಿಯಿಂದ ನ.17ರಿಂದ 20ರವರೆಗೆ ಕಾಲುವೆಗೆ ನಿರಂತರವಾಗಿ ನೀರು ಹರಿಸಲು ನಿಗಮದ ಅಧಿಕಾರಿಗಳಿಗೆ ಶನಿವಾರ ಆಲಮಟ್ಟಿಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಸೂಚಿಸಿದೆ …
Read More »
BigTv News
November 9, 2024
Breaking News, ಯಾದಗಿರಿ
ಯಾದಗಿರಿ : ಇಲ್ಲಿನ ಮುಂಡರಗಿ ಗ್ರಾಮದ ಹೊರವಲಯದಲ್ಲಿರುವ ಹತ್ತಿ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಹತ್ತಿ ನಾಶವಾಗಿರುವ ಘಟನೆ ಶುಕ್ರವಾರ ನಡೆದಿರುವುದಾಗಿ ವರದಿಯಾಗಿದೆ. ಅವಘಡದ ವೇಳೆ ಸ್ಥಳದಲ್ಲೇ ಇದ್ದ ರೈತರಿಂದ ಬೆಂಕಿ ನಂದಿಸುವ ಕಾರ್ಯ ಬರದಿಂದ ಜರುಗಿತ್ತಾದರೂ ಕೂಡ ಕ್ಷಣಾರ್ಧದಲ್ಲೇ ಲಕ್ಷಾಂತರ ರೂ.ಮೌಲ್ಯದ ಹತ್ತಿ ಬೆಂಕಿಗೆ ಸುಟ್ಟು ಭಸ್ಮವಾಗಿದೆ ಎಂದು ತಿಳಿದು ಬಂದಿದೆ. ಯಾದಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
Read More »
BigTv News
November 5, 2024
Breaking News, ಯಾದಗಿರಿ
ಯಾದಗಿರಿ: ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ರೈತನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ಸುರಪುರ ನಗರದ ರಂಗಂಪೇಟೆಯ ತಿಮ್ಮಾಪುರದಲ್ಲಿ ಸಂಭವಿಸಿದೆ. ಸೋಮನಾಥ ನಿಂಗಪ್ಪ (40) ಸಾವನ್ನಪ್ಪಿರುವ ರೈತ. ಇವರು ಮಹಿಬೂಬ್ ಸುಭಾನಿ ದರ್ಗಾದ ಹಿಂಬದಿಯಲ್ಲಿನ ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ಆಘಾತದಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
November 5, 2024
Breaking News, ಯಾದಗಿರಿ
ಯಾದಗಿರಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಹೆಚ್ಚಿನ ಕ್ಷೇತ್ರದಲ್ಲಿ ವಾಣಿಜ್ಯ ಬೆಳೆಯಾಗಿರುವ ಹತ್ತಿ ಬೆಲೆ ಕುಸಿತದಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಹೀಗಾಗಿ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀದಿಸಲು ಜಿಲ್ಲೆಯಲ್ಲಿ 21 ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸಲು 2024-25ನೇ ಸಾಲಿನ ಭಾರತೀಯ ಹತ್ತಿ ನಿಗಮ ಹುಬ್ಬಳ್ಳಿ ಘಟಕದಿಂದ ನವೆಂಬರ್ ಮೊದಲ ವಾರದಲ್ಲೇ ಖರೀದಿ ಆರಂಭವಾಗುವ ಸಾಧ್ಯತೆ ಇದೆ. ಕಳೆದ ಎರಡ್ಮೂರು ವರ್ಷಗಳಿಂದ ಹತ್ತಿಗೆ ಸೂಕ್ತ ಬೆಲೆ ಇಲ್ಲದೇ …
Read More »
BigTv News
October 16, 2024
Breaking News, ಯಾದಗಿರಿ
ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ಬುಧವಾರ ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದಿಂದ 50 ಸಾವಿರ ಕ್ಯುಸೆಕ್ ನೀರು ಬರುತ್ತಿದ್ದು ಬಸವ ಸಾಗರ ಜಲಾಶಯದ 13 ಗೇಟ್ ತೆರೆದು 58 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ. ಪಶ್ಚಿಮಘಟ್ಟ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿರುವುದರಿಂದ ಬಸವ ಸಾಗರ ಜಲಾಶಯಕ್ಕೆ ಇಂದು 50 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಒಳಹರಿವನ್ನು ಗಮನಿಸಿ ಕೃಷ್ಣಾನದಿಗೆ ನೀರುಬಿಡಲಾಗುತ್ತಿದೆ ಜಲಾಶಯದ ಒಳಹರಿವಿನ …
Read More »