Breaking News

ಕೊಪ್ಪಳ

ಮರಕುಂಬಿ ಜಾತಿ ಸಂಘರ್ಷ ಪ್ರಕರಣ: ಅಸ್ವಸ್ಥಗೊಂಡಿದ್ದ ಅಪರಾಧಿ ಸಾವು

ಕೊಪ್ಪಳ: ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ನಡೆದಿದ್ದ ಜಾತಿ ಸಂಘರ್ಷ ಪ್ರಕರಣದಲ್ಲಿ ಅಪರಾಧಿಯಾಗಿದ್ದ ರಾಮಣ್ಣ ಲಕ್ಷ್ಮಣ ಭೋವಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 101 ಜನ ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹5,000 ದಂಡ ವಿಧಿಸಲಾಗಿದೆ. ಇನ್ನುಳಿದ ಮೂವರಿಗೆ ಐದು ವರ್ಷ ಜೈಲು ಹಾಗೂ ತಲಾ ₹2,000 ದಂಡ ವಿಧಿಸಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು …

Read More »

ಕೊಪ್ಪಳದ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 98 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ಮೂವರಿಗೆ 5 ವರ್ಷ ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು (ಅ.24) ಮಹತ್ವದ ಆದೇಶ ಹೊರಡಿಸಿದೆ. ಅಸ್ಪೃಶ್ಯತೆ ಆಚರಣೆ, ದಲಿತರ ಮೇಲಿನ ದೌರ್ಜನ್ಯ ಕಾರಣ ಪ್ರಕರಣ ದೇಶದ ಗಮನ ಸೆಳೆದಿತ್ತು. ಗಲಭೆಗೆ ಕಾರಣರಾದ 101 ಜನರ ವಿರುದ್ಧದ ಆರೋಪ ಸಾಬೀತಾಗಿದ್ದು, ನ್ಯಾಯಾಲಯ ಅಪರಾಧಿಗಳೆಂದು ತಿಳಿಸಿದೆ, 98 ಅಪರಾಧಿಗಳಿಗೆ …

Read More »

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾಮಗಾರಿಗಳನ್ನು ಪೂರ್ಣಗೊಳಿಸಿ: ಡಾ.ಅಜಯಸಿಂಗ್

ಕೊಪ್ಪಳ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಯಾವುದೇ ನೆಪ ಹೇಳದೆ ಕಾಲಮಿತಿಯಲ್ಲಿ ಪೂರ್ಣಗೊಳಿಸಿಬೇಕೆಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ. ಅಜಯ್ ಧರ್ಮಸಿಂಗ್ ಅವರು ಹೇಳಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕೊಪ್ಪಳ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದ ಅವರು 2018-19, 2019-20 ಮತ್ತು 2020-21ರಲ್ಲಿ ಕಾಮಗಾರಿಗಳು ಯಾಕೆ ಬಾಕಿ ಇವೆ …

Read More »

ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್ ಭೀಮಾ ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಕೊಪ್ಪಳ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕ್ರಮ ವಹಿಸುವಂತೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 2024-25ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಾಕೃತಿಕ ದುರಂತ ಮತ್ತು ಹವಾಮಾನ ವೈಪರಿತ್ಯಗಳಿಂದ ರೈತರು ಬೆಳೆದ ಬೆಳೆಗಳಿಗೆ …

Read More »

ಕೊಪ್ಪಳ ಜಿಲ್ಲೆಯ ವಾರ್ತಾಧಿಕಾರಿಯಾಗಿ ಡಾ.ಸುರೇಶ್ ಜಿ ಅಧಿಕಾರ ಸ್ವೀಕಾರ

ಕೊಪ್ಪಳ: ಜಿಲ್ಲಾ ವಾರ್ತಾಧಿಕಾರಿಯಾಗಿ ಡಾ.ಸುರೇಶ್ ಜಿ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಗವಿಸಿದ್ದಪ್ಪ ಹೊಸಮನಿ ಅವರು ರಾಯಚೂರು ಜಿಲ್ಲೆಗೆ ವರ್ಗಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಸಹಾಯಕ ನಿರ್ದೇಶಕರ ಹುದ್ದೆಯ ಪ್ರಭಾರವನ್ನು ಡಾ.ಸುರೇಶ್ ಜಿ ಅವರು ವಹಿಸಿಕೊಂಡರು ನಿರ್ಗಮಿತ ಅಧಿಕಾರಿಗಳು ನೂತನ ಜಿಲ್ಲಾ ವಾರ್ತಾಧಿಕಾರಿಗಳಿಗೆ ಹೂಗುಚ್ಚ ನೀಡಿ ಅಧಿಕಾರ ಹಸ್ತಾಂತರಿಸಿದರು. ಡಾ.ಸುರೇಶ್ ಜಿ ಅವರು ಬೀದರ್ ಜಿಲ್ಲಾ …

Read More »

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ ಗುಪ್ತಾ ನೇಮಕಗೊಳಿಸಿ ಸರ್ಕಾರ ಆದೇಶ

ಕೊಪ್ಪಳ: ಸಾಕಷ್ಟು ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದ್ದ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಉದ್ಯಮಿ ಭಾಗ್ಯನಗರದ ಶ್ರೀನಿವಾಸ ಗುಪ್ತಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೂದಲೋದ್ಯಮಿಯಾಗಿ ಹೆಸರು ಮಾಡಿರುವ ಗುಪ್ತಾ ಅವರ ಹೆಸರು ಈ ಸ್ಥಾನಕ್ಕೆ ಹಿಂದೆಯೇ ಕೇಳಿಬಂದಿದ್ದರೂ ಈಗ ಅಧಿಕೃತವಾಗಿ ಘೋಷಣೆಯಾಗಿದೆ. ಪರಿಶಿಷ್ಟ ಪಂಗಡದ ಮಾರ್ಕಂಡೇಶ್ವರ ಕಲ್ಲನವರ, ಲಿಂಗಾಯತ ಸಮುದಾಯದ ಚನ್ನಬಸಯ್ಯ ಚನ್ನವಡಿಯರ ಮಠ, ಮುಸ್ಲಿಂ ಸಮಾಜದ ಅಬ್ದುಲ್‌ ಲತೀಫ್‌ ಖತೀಬ್‌ ಮತ್ತು ಪರಿಶಿಷ್ಟ …

Read More »

ಕೊಪ್ಪಳದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ

ಕೊಪ್ಪಳ: ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರಕಾರ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಜಿಲ್ಲಾ ಒಕ್ಕೂಟದ ಪದಾಧಿಕಾರಿಗಳು ಇಲ್ಲಿನ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು. ಪರಿಶಿಷ್ಟ ಜಾತಿಗಳಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಅತಿ ಹೆಚ್ಚು ಹಿಂದುಳಿದ ಜಾತಿಗಳ ಅಭಿವೃದ್ಧಿಯ ಉದ್ದೇಶದಿಂದಾಗಿ ಆಯಾ ಜಾತಿಗಳಿಗೆ ಸೇರಿದವರಿಗೆ ಮೀಸಲಾತಿ ಸೌಲಭ್ಯ ತಲುಪಲು ಒಳಮೀಸಲಾತಿ ನೀಡುವ ಸಾಂವಿಧಾನಿಕ ಅಧಿಕಾರ ಆಯಾ …

Read More »

ಕೊಪ್ಪಳದ ಹಿರೇಹಳ್ಳಕ್ಕೆ ಹಾರಿದ ಮಹಿಳೆಯ ರಕ್ಷಣೆ

ಕೊಪ್ಪಳ: ಹಿರೇಹಳ್ಳಕ್ಕೆ ಹಾರಿ ಮಹಿಳೆಯನ್ನು ಗ್ರಾಮದ ಯುವಕರು ರಕ್ಷಿಸಿರುವ ಘಟನೆ ನಗರದ ಭಾಗ್ಯನಗರದಲ್ಲಿ ಶನಿವಾರ ನಡೆದಿದೆ. ಹಳ್ಳಕ್ಕೆ ಹಾರಿದ ಮಹಿಳೆಯನ್ನು ತಾಲೂಕಿನ ಓಜನಹಳ್ಳಿ ಗ್ರಾಮದ ಭರಮಮ್ಮ ಮಡಿವಾಳರ್ ಎಂದು ಗುರುತಿಸಲಾಗಿದೆ. ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿರುವ ಭರಮಮ್ಮ ಕಳೆದೊಂದು ವಾರದಿಂದಲೂ ಭಾಗ್ಯನಗರ ಸಮೀಪದಲ್ಲಿ ಹಿರೇಹಳ್ಳದ ದಡದಲ್ಲಿರುವ ಕರಿಬಸವೇಶ್ವರ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದರು. ಶನಿವಾರ ತಡರಾತ್ರಿಯಿಂದಲೇ ಹಿರೇಹಳ್ಳ ಜಲಾಶಯದಿಂದ ಹಳ್ಳಕ್ಕೆ ನೀರು ಬಿಡುಗಡೆ ಮಾಡಿದ್ದು, ಬೆಳಗ್ಗೆ ಹೊತ್ತಿಗೆ ಹಳ್ಳದ ಎರಡು ದಂಡೆಯ ಮೇಲೆ ನೀರು …

Read More »

ಕೊಪ್ಪಳ ಜಿಲ್ಲೆಯಲ್ಲಿ ವ್ಯಾಪಕ ಮಳೆ: ಹಿರೇಹಳ್ಳ ಡ್ಯಾಂ ಭರ್ತಿ

ಕೊಪ್ಪಳ: ಹಿಂದಿನ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು, ಕೆರೆಗಳು ತುಂಬಿವೆ. ಕೊಪ್ಪಳ ತಾಲ್ಲೂಕಿನ ಕಿನ್ನಾಳ ಬಳಿಯಿರುವ ಹಿರೇಹಳ್ಳ ಡ್ಯಾಂ ಭರ್ತಿಯಾಗಿದ್ದು ನೀರು ಹೊರಬಿಡಲಾಗಿದೆ. ಡ್ಯಾಂ ಒಟ್ಟು 1.67 ಟಿಎಂಸಿ ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು ಈಗ 18,886 ಕ್ಯುಸೆಕ್‌ ನೀರು ಹೊರಬಿಡಲಾಗಿದೆ. ಸುತ್ತಲಿನ ಭತ್ತದ ಗದ್ದೆಗೆ ನೀರು ನುಗ್ಗಿದ್ದು ಬೆಳೆ ಹಾನಿಯಾಗಿದೆ. ಇರಕಲ್ಲಗಡ ಭಾಗದ ಕೆರೆಗಳು ಭರ್ತಿಯಾಗಿವೆ.

Read More »

ಕಾಮನೂರು ಗ್ರಾಮ ಜಿಲ್ಲಾ ಪಂಚಾಯತಿಯ ದತ್ತು ಗ್ರಾಮವೆಂದು ಆಯ್ಕೆ

ಕೊಪ್ಪಳ: ಮದ್ಯಪಾನ ಮುಕ್ತ ಮತ್ತು ಶುಚಿತ್ವ ಹೊಂದಿದ ಗ್ರಾಮ ಎಂದು ಇತ್ತೀಚೆಗೆ ಸುದ್ದಿಯಲ್ಲಿರುವ ಲೇಬಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮನೂರ ಗ್ರಾಮವು ಜಿಲ್ಲಾ ಪಂಚಾಯಿತಿ ದತ್ತು ಗ್ರಾಮವೆಂದು ಆಯ್ಕೆಯಾಗಿದೆ. ಬೆಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋರನಾಳ ಗ್ರಾಮವನ್ನೂ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆಯಿಂದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅವಕಾಶ …

Read More »