BigTv News
September 21, 2024
Breaking News, ಕೊಪ್ಪಳ
ಕೊಪ್ಪಳ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೆಪ್ಟೆಂಬರ್ 22ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‍ಸ್ಟ್ರೀಪ್‍ಗೆ ಆಗಮಿಸುವರು. ಅಲ್ಲಿಂದ 10.55ಕ್ಕೆ ನಿರ್ಗಮಿಸಿ ಬೆಳಗ್ಗೆ 11.15ಕ್ಕೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಆಗಮಿಸಿ ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ಹಮ್ಮಿಕೊಂಡಿರುವ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡುವರು. ಬೆಳಗ್ಗೆ 11.45ಕ್ಕೆ …
Read More »
BigTv News
September 21, 2024
Breaking News, ಕೊಪ್ಪಳ
ಕೊಪ್ಪಳ: ಗೇಟ್ ಹಾನಿಯಾದ ಬಳಿಕ ಮತ್ತೆ ತುಂಬಿದ ತುಂಗಭದ್ರಾ ಜಲಾಶಯಕ್ಕೆ ನಾಳೆ ಭಾನುವಾರ (ಸೆ. 22) ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಬಾಗಿನ ಅರ್ಪಿಸಲಿದ್ದಾರೆ. ಕೊಪ್ಪಳ, ರಾಯಚೂರು,ಬಳ್ಳಾರಿ ಹಾಗೂ ನೆರೆಯ ಆಂಧ್ರಪ್ರದೇಶ ಕಡಪಾ, ಕರ್ನೂಲು ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ನದಿಗೆ ಹೊಸಪೇಟೆ ಕೊಪ್ಪಳ ಮಧ್ಯೆ ಇರುವ ಜಲಾಶಯದ 19ನೇ ಕ್ರಸ್ಟ್‌ಗೇಟು ಸುಮಾರು ಒಂದು ತಿಂಗಳ ಹಿಂದೆ ಕಿತ್ತು ಹೋಗಿ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ …
Read More »
BigTv News
September 20, 2024
Breaking News, ಕೊಪ್ಪಳ
ಕೊಪ್ಪಳ: ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿರುವ ಕರ್ನಾಟಕ ನೀರಾವರಿ ನಿಗಮ ಕಚೇರಿಗೆ ಇಂದು ರೈತರು ಮುತ್ತಿಗೆ ಹಾಕಿ, ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಕಾರಟಗಿ ತಾಲೂಕಿನ ಯರಡೋಣಾ, ತಿಮ್ಮಾಪುರ, ಹಾಲಸಮುದ್ರ, ಬೂದಗುಂಪಾ, ಚನ್ನಳ್ಳಿ ಮಾವಿನ ಮಡಗು ಸೇರಿದಂತೆ ಅನೇಕ ಗ್ರಾಮಗಳಲ್ಲಿ ರೈತರು, ತುಂಗಭದ್ರಾ ಜಲಾಶಯದ ನೀರನ್ನೇ ನಂಬಿ ಕೃಷಿ ಮಾಡುತ್ತಿದ್ದಾರೆ. ಈ ಗ್ರಾಮಗಳಿಗೆಲ್ಲ 31 ಮತ್ತು 32 ನೇ ವಿತರಣಾ ಕಾಲುವೆಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ. ಆದರೆ ಕಳೆದ ಕೆಲ …
Read More »
BigTv News
September 20, 2024
Breaking News, ಕೊಪ್ಪಳ
ಕೊಪ್ಪಳ: ಸರ್ಕಾರಿ ಕೆಲಸ ದೇವರ ಕೆಲಸ ಎನ್ನುತ್ತಾರೆ, ಆದರೆ ಆ ಕೆಲಸವನ್ನು ಮಾಡುವ ಅಧಿಕಾರಿಗಳಲ್ಲಿ ಹಲವರು ಸರಿಯಾದ ಸಮಯಕ್ಕೆ ಕಚೇರಿಗೆ ಬಾರದೆ ಸಭೆ ಇದೆ ಎನ್ನುವ ನೆಪ ಮುಂದಿಡುತ್ತಿದ್ದು, ಈ ಕುರಿತು ವ್ಯಾಪಕ ದೂರುಗಳು ಕೇಳಿಬಂದಿವೆ. ಆದ್ದರಿಂದ ಜಿಲ್ಲಾಧಿಕಾರಿ ನಲಿನ್ ಅತುಲ್ ಸರ್ಕಾರದ ಸೂಚನೆಯಂತೆ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿಯೂ ಬಯೊಮೆಟ್ರಿಕ್ ಅಳವಡಿಕೆ ಕಡ್ಡಾಯ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರು ಕಚೇರಿಯಲ್ಲಿ ತಮ್ಮ …
Read More »
BigTv News
September 18, 2024
Breaking News, ಕೊಪ್ಪಳ
ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಸೆಪ್ಟಂಬರ್ 22 ರಂದು ಗಂಗೆ ಪೂಜೆ ನೆರವೇರಿಸಿ, ಬಾಗಿನ ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ತುಂಗಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ದುರಸ್ತಿ ಮಾಡಿ ನೀರನ್ನ ಉಳಿಸಿದ್ದೇವೆ. ಕೊಚ್ಚಿಹೋಗಿದ್ದ ಕ್ರಸ್ಟ್ ಗೇಟ್ ದುರಸ್ತಿಗಾಗಿ 108 ಜನ ಶ್ರಮಿಸಿದ್ದಾರೆ. ಹೀಗಾಗಿ ಗಂಗಾ ಪೂಜೆಯೊಂದಿಗೆ 108 ಜನರಿಗೆ ಸನ್ಮಾನ ಮಾಡಲಿದ್ದೇವೆ ಎಂದು ಮಾಹಿತಿ …
Read More »
BigTv News
September 17, 2024
Breaking News, ಕೊಪ್ಪಳ
ಕೊಪ್ಪಳ: ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪಿಡಿಒ ಓರ್ವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕಕನೂರು ಬಳಿಯ ಇಟಗಿ ಗ್ರಾಮದಲ್ಲಿ ನಡೆದಿದೆ. ಯರೇಹಂಚಿನಾಳ ಗ್ರಾಮದ ಪಿಡಿಒ ಅಡಿವೆಪ್ಪ ಯಡಿಯಾಪುರ (32) ಮೃತ ದುರ್ದೈವಿ. ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದ್ವಜಾರೋಹಣದ ನಿಮಿತ್ತ ಬೆಳಿಗ್ಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಹಾಲಿನ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ. …
Read More »
BigTv News
September 15, 2024
Breaking News, ಕೊಪ್ಪಳ
ಅಳವಂಡಿ: ಹೋಬಳಿ ವ್ಯಾಪ್ತಿಯಲ್ಲಿ ಈ ವರ್ಷ ಉತ್ತಮ ಮಳೆಯಿಂದ ಉತ್ತಮ ಫಸಲು ಕಂಡಿರುವ ರೈತರಿಗೆ ವಾನರ ಹಾವಳಿಯಿಂದ ಬೆಳೆ ನಷ್ಟ ಉಂಟಾಗುವ ಆಂತಕ ಎದುರಾಗಿದೆ. ಅಳವಂಡಿ ಹೋಬಳಿ ವ್ಯಾಪ್ತಿಯ ಜಮೀನುಗಳಲ್ಲಿ ಬಿತ್ತನೆ ಮಾಡಿದ ಮೆಕ್ಕೆಜೋಳ, ಅಲಸಂದಿ ಹಾಗೂ ಶೇಂಗಾ ಸೇರಿದಂತೆ ಇತರೆ ಬೆಳೆಗಳಿಗೆ ಮಂಗಗಳ ಕಾಟ ಎದುರುರಾಗಿದ್ದು, ಮೆಕ್ಕೆಜೋಳ ತೆನೆಯನ್ನು ಮುರಿದು ತಿನ್ನುತ್ತಿವೆ. ಶೇಂಗಾ ಹಾಗೂ ಅಲಸಂದಿ ಬೆಳೆಯನ್ನು ಕಿತ್ತು ಹಾಕುತ್ತಿರುವುದರಿಂದ ಹೋಬಳಿ ವ್ಯಾಪ್ತಿಯ ಅನೇಕ ಗ್ರಾಮಗಳ ರೈತರಿಗೆ ಚಿಂತೆಗೀಡು …
Read More »
BigTv News
September 13, 2024
Breaking News, ಕೊಪ್ಪಳ
ಅಳವಂಡಿ: ತಾವು ಪಡೆದ ಶಿಕ್ಷಣ ವ್ಯರ್ಥವಾಗಬಾರದು ಎಂಬ ಉದ್ದೇಶದಿಂದ ಕೊಪ್ಪಳ ತಾಲ್ಲೂಕಿನ ನಾಲ್ವರು ಯುವಕರು ಕಳೆದ ಮೂರು ವರ್ಷಗಳಿಂದ ತಮ್ಮ ಗ್ರಾಮದ ಶಾಲಾ ಮಕ್ಕಳಿಗೆ ಉಚಿತ ಮನೆಪಾಠ ಮಾಡುತ್ತಿದ್ದಾರೆ. ಕೊಪ್ಪಳ ತಾಲ್ಲೂಕಿನ ನೀರಲಗಿ ಗ್ರಾಮದ ಪದವೀಧರರಾದ ಆಂದೇಶ ಉಳ್ಳಾಗಡ್ಡಿ, ವಿನಾಯಕ ಮರೇಬಾಳ, ಶಂಕರಗೌಡ ಪೊಲೀಸ್ ಪಾಟೀಲ, ದವನಕುಮಾರ ಆನಂದಹಳ್ಳಿ ಎಂಬುವವರು ತಮ್ಮ ಗ್ರಾಮದ ಶಾಲಾ ಮಕ್ಕಳಿಗೆ ಎರಡರಿಂದ ಮೂರು ಗಂಟೆಗಳ ಕಾಲ ಉಚಿತ ಶಿಕ್ಷಣ ನೀಡುತ್ತಿದ್ದಾರೆ. ಗ್ರಾಮದ ಯುವಕರಾದ ಆಂದೇಶ …
Read More »
BigTv News
September 9, 2024
Breaking News, ಕೊಪ್ಪಳ
ಕೊಪ್ಪಳ: ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಮರುಸ್ಥಾಪಿಸಿ ಮೀಸಲಾತಿಯನ್ನು ಶೇ.4ರಿಂದ ಶೇ8ಕ್ಕೆ ಹೆಚ್ಚಳ ಮಾಡಬೇಕು ಎಂದು ಇಲ್ಲಿನ ಕರ್ನಾಟಕ ಮುಸ್ಲಿಂ ಯೂನಿಟಿ ಸಂಘಟನೆ ಸರ್ಕಾರವನ್ನು ಆಗ್ರಹಿಸಿದೆ. ಸಂಘಟನೆಯ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಲಾನ್ ಕಿಲ್ಲೇದಾರ ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲು ವಿಜಯಪುರದಿಂದ ಬೆಂಗಳೂರು ತನಕ ಕಾರ್ ರ್‍ಯಾಲಿ ಹಮ್ಮಿಕೊಂಡಿದ್ದೇವೆ ಈ ಕುರಿತು ಚರ್ಚಿಸಲು ಸೆ. 11ರಂದು ಬೆಳಿಗ್ಗೆ 11.30ಕ್ಕೆ ಇಲ್ಲಿನ ಹಜರತ್ ಮರ್ದಾನೆ ಗೈಬ್ ದರ್ಗಾ ಆವರಣದಲ್ಲಿ …
Read More »
BigTv News
September 7, 2024
Breaking News, ಕೊಪ್ಪಳ
ಕೊಪ್ಪಳ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಪ್ರಮುಖ ರಸ್ತೆಗಳಲ್ಲಿ ಹಾಗೂ ಬಡಾವಣೆಗಳಲ್ಲಿ ತರಹೇವಾರಿ ಬಣ್ಣಗಳ ವಿದ್ಯುತ್ ದೀಪಗಳ ಹೊಳಪು ಕಂಡುಬರುತ್ತಿದೆ. ಎಲ್ಲೆಡೆಯೂ ಗಣೇಶ ಮೂರ್ತಿಗಳ ಮಾರಾಟ ಹಾಗೂ ಖರೀದಿಯ ಉತ್ಸಾಹವೂ ಇದೆ. ಶ್ರಾವಣ ಮಾಸ ಮುಗಿದ ತಕ್ಷಣವೇ ಬರುವ ಮೊದಲ ಹಬ್ಬ ಗೌರಿ ಹಾಗೂ ಗಣೇಶನ ಪ್ರತಿಷ್ಠಾಪನೆ ಜನರಲ್ಲಿ ಹುಮ್ಮಸ್ಸು ಮೂಡಿಸಿದೆ, ಅದರಲ್ಲಿಯೂ ವಿಶೇಷವಾಗಿ ಯುವಜನತೆಯಲ್ಲಿ ಗಣಪತಿ ಹಬ್ಬ ಹಬ್ಬದ ಹುಮಸ್ಸು ನೂರ್ಮಡಿಯಾಗಿದೆ. ಹಬ್ಬದ ತಿಂಗಳು ಮೊದಲೇ ಸಾರ್ವಜನಿಕರಿಂದ ಹಾಗೂ ಬಡಾವಣೆಯ …
Read More »