Breaking News

ಕೊಪ್ಪಳ

ಗೃಹಲಕ್ಷ್ಮಿ ಹಣ: ದೇವಸ್ಥಾನಕ್ಕೆ ದೇಣಿಗೆ ನೀಡಿದ ಮಹಿಳೆಯರು

ಕೊಪ್ಪಳ: ರಾಜ್ಯ ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಿಂದ ಬರುವ ಹಣದಿಂದ ಬಹಳಷ್ಟು ಮಹಿಳೆಯರು ಅನುಕೂಲ ಪಡೆದುಕೊಂಡಿದ್ದಾರೆ ಎಂದರೆ ತಪ್ಪಾಗಲಾರದು. ಈ ಹಿಂದೆ ಮಹಿಳೆಯರು ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಮೊಬೈಲ್​, ಕಣ್ಣಿನ ಶಸ್ತ್ರಚಿಕಿತ್ಸೆ, ಫ್ರಿಡ್ಜ್​, ಹೋಳಿಗೆ ಊಟ, ಸೊಸೆಗೆ ಫ್ಯಾನ್ಸಿ ಸ್ಟೋರ್​ ಹಾಕಿಕೊಡುವ ಮೂಲಕ ಸುದ್ದಿಯಾಗಿದ್ದರು. ಇದೀಗ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಹಿರೇಬಿಡನಾಳ ಗ್ರಾಮದಲ್ಲಿ 50ಕ್ಕೂ ಹೆಚ್ಚು ಮಹಿಳೆಯರು ದೇವಸ್ಥಾನ ನಿರ್ಮಾಣಕ್ಕೆ ಗೃಹಲಕ್ಷ್ಮಿ …

Read More »

ಲಾರಿ ಬೈಕ್ ನಡುವೆ ಭೀಕರ ಅಪಘಾತ:ಬೈಕ್ ಸವಾರರ ದುರ್ಮರಣ

ಕೊಪ್ಪಳ : ಕೊಪ್ಪಳದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿಗೆ ವೇಗವಾಗಿ ಬಂದಂತಹ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಪರಶುರಾಮ (40) ಹನುಮಂತ (35) ಮೃತ ದುರ್ದೈವಿಗಳು. ಮೃತರು ಕೊಪ್ಪಳ ತಾಲೂಕಿನ ವಣಗೇರಿ ಗ್ರಾಮದ ವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ …

Read More »

ತುಂಗಭದ್ರಾ ಡ್ಯಾಮ್‌ಗೆ ಮಹತ್ವದ ಸಲಹೆ ನೀಡಿದ ತಜ್ಞರು

ಹೊಸಪೇಟೆ: ಹೆಚ್ಚಿನ ಪ್ರಮಾಣದಲ್ಲಿ ನದಿಗೆ ನೀರು ಹರಿಸದೇ ನೀರನ್ನು ಉಳಿಸಿಕೊಂಡು ಸಹ ತುಂಗಭದ್ರಾ ಡ್ಯಾಮ್‌ಗೆ ಹೊಸಗೇಟ್ ಅಳವಡಿಸಬಹುದು ಎಂಬುದಾಗಿ ತಜ್ಞರು ಮಹತ್ವದ ಸಲಹೆ ನೀಡಿದರು. ನ್ಯಾಷನಲ್ ಡ್ಯಾಮ್ ಗೇಟ್ ಎಕ್ಸಪರ್ಟ್ ಕಣ್ಣಯ್ಯ ನಾಯ್ಡು, ತುಂಗಭದ್ರಾ ಬೋರ್ಡ್ನ ಕಾರ್ಯದರ್ಶಿ, ಕರ್ನಾಟಕ ನೀರಾವರಿ ನಿಗಮದ ಎಂ.ಡಿ., ಕರ್ನಾಟಕ ಹಾಗೂ ಆಂದ್ರ ನೀರಾವರಿ ಇಲಾಖೆ ಕಾರ್ಯದರ್ಶಿ, ಕರ್ನಾಟಕ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್, ನ್ಯಾಷನಲ್ ಡ್ಯಾಮ್ ಸೇಫಟಿ ಏಜೆನ್ಸಿಯ ಮುಖ್ಯ ಎಂಜಿನಿಯರ್, ಜೆಎಸ್‌ಡಬ್ಲೂö್ಯನ ಎಕ್ಸಪರ್ಟ, …

Read More »

ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕಟ್

ಕೊಪ್ಪಳ : ಜಿಲ್ಲೆಯ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕಟ್ ಆಗಿ ಕೊಚ್ಚಿ ಹೋಗಿರುವ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಇನ್ನೊಂದೆಡೆ ಮುರಿದು ಬಿದ್ದಿರುವ ಗೇಟ್ ಮೇಲಿನ ಒತ್ತಡ ಕಡಿಮೆ ಮಾಡಲು ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಜಲಾಶಯದಿಂದ ಇಂದು ಕೂಡ 1.5 ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಶುರುವಾಗಿದ್ದು, ಕಟ್ಟೆಚ್ಚರ ವಹಿಸುವಂತೆ ಘೋಷಿಸಲಾಗಿದೆ. …

Read More »

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ: ಸಿದ್ದರಾಮಯ್ಯ.

ಕೊಪ್ಪಳ: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಂಗಳವಾರ ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ತಪ್ಪು ಮಾಡಿದವರಿಗೆ ಏನು ಮಾಡಬೇಕು ಎಂದು ಪ್ರಶ್ನಿಸಿದ ಅವರು, ಸುಮ್ಮನೆ ಬಿಟ್ಟುಬಿಡಬೇಕೇ? ಹಳೇ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಅದರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದರು. ನ್ಯಾಯಾಲಯದ ಸೂಚನೆ ಇದ್ದರೆ, ಅದರಂತೆ ಕ್ರಮ …

Read More »

ಶಿವಲಿಂಗವನ್ನು ಕಿತ್ತೊಯ್ದು ವಿಕೃತಿ ಮೆರೆದ ಖದೀಮರು……

ಗಂಗಾವತಿ : ತಾಲೂಕಿನ ಮಲ್ಲಾಪುರ ಗ್ರಾಮದ ಸಮೀಪ ಇರುವ ಪುರಾತನ ಕಾಲದ ವಾಣಿ ವೀರಭದ್ರೇಶ್ವರ ದೇವಸ್ಥಾನದಲ್ಲಿದ್ದ ಶಿವಲಿಂಗವನ್ನು ಖದೀಮರು ಕದ್ದೊಯ್ದ ಘಟನೆ ಗುರುವಾರ ಬೆಳಕಿಗೆ ಬಂದಿದೆ. ನಿರ್ಜನ ಹಾಗೂ ಬೆಟ್ಟದ ಕಡಿದಾದ ಪ್ರದೇಶದಲ್ಲಿರುವ ಪೌರಾಣಿಕ ಹಿನ್ನೆಲೆಯ ದೇವಸ್ಥಾನದಲ್ಲಿ ಕಳೆದ ಹಲವು ದಶಕದಿಂದ ನಿತ್ಯಪೂಜೆ ಸಲ್ಲಿಸಲಾಗುತ್ತಿದೆ. ಇದೇ ಸಮಯಕ್ಕಾಗಿ ಕಾದಿದ್ದ ಖದೀಮರು ದೇಗುಲದ ಗರ್ಭಗುಡಿಯಲ್ಲಿದ್ದ ಪಾಣಿ ಬಟ್ಟಲು ಮೇಲಿನ ಶಿವಲಿಂಗವನ್ನು ಕಿತ್ತೊಯ್ದು ವಿಕೃತಿ ಮೆರೆದಿದ್ದಾರೆ. ಬೆಳಗ್ಗೆ ಅರ್ಚಕರು ಪೂಜೆ ಸಲ್ಲಿಸಿ, ಮಧ್ಯಾಹ್ನದ …

Read More »

ರಕ್ತದಲ್ಲಿ ಬರೆದುಕೊಡ್ತೀನಿ, ಬಿಜೆಪಿ ಬಿಡಲ್ಲ

ಕೊಪ್ಪಳ ಬಿಜೆಪಿ ತೊರೆಯುವದಾಗಿ ವದಂತಿ ಹಬ್ಬಿದ್ದು, ಪಕ್ಷ ತೊರೆಯುವ ಪ್ರಶ್ನೆಯೆ ಇಲ್ಲ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಸ್ಪಷ್ಟಪಡಿಸಿದ್ದಾರೆ.ಬೇಕಾದರೆ ರಕ್ತದಲ್ಲಿ ಬರೆದು ಕೊಡ್ತೀನಿ, ಪಕ್ಷ ಬಿಡಲ್ಲ ಎಂದಿದ್ದಾರೆ. ಈ ಬಾರಿಯೂ ಕೊಪ್ಪಳದಿಂದ ಲೋಕಸಭೆಗೆ ಸ್ಪರ್ಧೆ ಮಾಡುವದಾಗಿ ತಿಳಿಸಿದ ಅವರು, ಪಕ್ಷ ಟಿಕೇಟ್ ಕೊಡದೆ ಹೋದರು, ಪಕ್ಷ ಸೂಚಿಸಿದ ಅಭ್ಯರ್ಥಿ ಪರ ದುಡಿಯುವದಾಗಿ ಸಂಗಣ್ಣ ಕರಡಿ ತಿಳಿಸಿದ್ದಾರೆ

Read More »

ಪೈಪ್ ಲೈನಗಳ ತೆರವು ಕಾರ್ಯಾಚರಣೆ…..

ಗಂಗಾವತಿ(ಕೊಪ್ಪಳ): ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿನ ವಿತರಣಾ ಕಾಲುವೆಗಳ ಸಮೀಪ ಅನಧಿಕೃತವಾಗಿ ಪೈಪ್​ಲೈನ್​ ಅಳವಡಿಸಿ, ನೀರು ಕಳ್ಳತನವಾಗುತ್ತಿರುವ ಪ್ರದೇಶಗಳನ್ನು ಪತ್ತೆ ಹಚ್ಚಿದ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಇಂದು ಪೈಪ್​ಲೈನ್​​​ಗಳ ತೆರವು ಕಾರ್ಯಾಚರಣೆ ನಡೆಸಿತು. ನೀರು ಕಳ್ಳತನ ತಡೆಯುವ ಉದ್ದೇಶಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ತುಂಗಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಮುಖ್ಯ ಅಭಿಯಂತರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿಂದ ಕೂಡಿದ ಕಾರ್ಯಾಚರಣೆ ಪಡೆ ರಚಿಸಿದ್ದಾರೆ.ಈ ಹಿನ್ನೆಲೆ ಇಲ್ಲಿನ ವಡ್ಡರಹಟ್ಟಿ ನಂಬರ್-2 ವಿಭಾಗದ ವ್ಯಾಪ್ತಿಗೆ …

Read More »

ಜ. 8ರಂದು ಗವಿಸಿದ್ದೇಶ್ವರ ಮಠದ ಮಹಾರಥೋತ್ಸವ

ಕೊಪ್ಪಳ: ಮುಂದಿನ ತಿಂಗಳು 8ರಂದು ಇಲ್ಲಿ ನಡೆಯಲಿರುವ ಪ್ರಸಿದ್ಧ ಗವಿಸಿದ್ದೇಶ್ವರ ಮಠದ ಮಹಾರಥೋತ್ಸವವನ್ನು ಈಶಾ ಫೌಂಡೇಷನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ಉದ್ಘಾಟನೆ ಮಾಡುವುದು ಖಚಿತವಾಗಿದೆ. ವಾಸುದೇವ್‌ ಕಾರ್ಯಕ್ರಮಕ್ಕೆ ಬರಲಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಶುಕ್ರವಾರ ಮಠವೇ ಈ ಕುರಿತು ಪ್ರಕಟಣೆ ನೀಡಿದೆ. ಜಗ್ಗಿ ವಾಸುದೇವ್‌ 8ರಂದು ಸಂಜೆ 5.30ಕ್ಕೆ ಮಹಾರಥೋತ್ಸವಕ್ಕೆ ಚಾಲನೆ ನೀಡುವರು. ನಂತರ ಕೈಲಾಸ ಮಂಟಪದಲ್ಲಿ ಜರುಗುವ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಲಿದ್ದಾರೆ. …

Read More »

ವಿಧಾನಸಭಾ ಚುನಾವಣೆ : ಅಭ್ಯರ್ಥಿಗಳ ಹೆಸರು ಘೋಷಿಸಿದ ಸಿದ್ದರಾಮಯ್ಯ

ಕೊಪ್ಪಳ: 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಜಿಲ್ಲೆಯ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಅಲ್ಲದೇ ಜಿಲ್ಲೆಯ ಐದು ಕ್ಷೇತ್ರದಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿದರು. ತಾಲೂಕಿನ ವನಬಳ್ಳಾರಿಯಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಆನಂತರ ಮಾತನಾಡಿ, ಕೊಪ್ಪಳ ಕ್ಷೇತ್ರದಲ್ಲಿ ರಾಘವೇಂದ್ರ ಹಿಟ್ನಾಳ, ಗಂಗಾವತಿಯಲ್ಲಿ ಇಕ್ಬಾಲ ಅನ್ಸಾರಿ, ಕನಕಗಿರಿಯಲ್ಲಿ ಶಿವರಾಜ ತಂಗಡಗಿ, ಕುಷ್ಟಗಿಯಲ್ಲಿ ಅಮರೇಗೌಡ ಭಯ್ಯಾಪುರ, ಯಲಬುರ್ಗಾದಲ್ಲಿ ಬಸವರಾಜ ರಾಯರಡ್ಡಿ ಅವರನ್ನು …

Read More »