Breaking News

ರಾಯಚೂರು


ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ  ಶಿಕ್ಷಕರಾಗಿ ತೃತೀಯಲಿಂಗಿಗಳು ಆಯ್ಕೆ

ರಾಯಚೂರು  : ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ  ಶಿಕ್ಷಕರಾಗಿ ತೃತೀಯಲಿಂಗಿಗಳು ಸಹ ಆಯ್ಕೆಯಾಗಿದ್ದಾರೆ. ನೀರಮಾನವಿ ಗ್ರಾಮದ ಅಶ್ವತ್ಥಾಮ (ಪೂಜಾ) ಆಯ್ಕೆಯಾದ ತೃತೀಯ ಲಿಂಗಿಯಾಗಿದ್ದಾರೆ . ತೃತೀಯ ಲಿಂಗ ಮೀಸಲಾತಿಯನ್ನು  ಸರಿಯಾಗಿ ಸದ್ಬಳಕೆ ಮಾಡಿ ಕೊಂಡ ಅಶ್ವತ್ಥಾಮ, ರಾಜ್ಯ ಶಿಕ್ಷಣ ಇಲಾಖೆಯಿಂದ ಮಾರ್ಚ್ ತಿಂಗಳಲ್ಲಿ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆದು ಆಯ್ಕೆಯಾಗಿದ್ರು. ಅಧಿಕೃತ ತೃತೀಯ ಲಿಂಗ ಮೀಸಲಾತಿಯಲ್ಲಿ ಪರೀಕ್ಷೆ ಬರೆದು ಸಮಾಜ ವಿಜ್ಞಾನ ವಿಷಯದ ಶಿಕ್ಷಕರಾಗಿ ಆಯ್ಕೆಯಾಗಿದ್ದಾರೆ. …

Read More »

ರಾಗಾ ಜೊತೆ ಹೆಜ್ಜೆ ಹಾಕಿದ ಸ್ಯಾಂಡಲ್ ವುಡ್ ನಟಿ

ರಾಯಚೂರು: ಸ್ಯಾಂಡಲ್ ವುಡ್ ಮತ್ತು ರಾಜಕಾರಣದಿಂದ ದೂರ ಸರಿದಿದ್ದ ಮೋಹಕ ತಾರೆ ರಮ್ಯಾ ಮತ್ತೆ ಸುದ್ದಿ ಮಾಡುತ್ತಿದ್ದಾರೆ. ಇತ್ತೀಚಿಗೆ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಹಾಜರ್ ಆಗಿದ್ದ ರಮ್ಯಾ, ಇದೀಗ ರಾಜಕೀಯದಲ್ಲೂ ಶೈನ್ ಆಗುತ್ತಿದ್ದಾರೆ. ನಟಿ ರಮ್ಯಾ ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎಂಬ ಊಹಾಪೋಹಗಳ ಮಧ್ಯೆ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ರಾಯಚೂರಿನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ರಮ್ಯಾ ಹೆಜ್ಜೆ ಹಾಕಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ …

Read More »

ಕರ್ನಾಟಕದಲ್ಲಿ ನಾಳೆ ಕೊನೆಯಾಗಲಿದೆ ಭಾರತ ಐಕ್ಯತಾ ಯಾತ್ರೆ

ರಾಯಚೂರು- ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಕರ್ನಾಟಕದ ವ್ಯಾಪ್ತಿಯಲ್ಲಿನ ಸಂಚಾರವನ್ನು ನಾಳೆಗೆ ಪೂರ್ಣಗೊಳಿಸಲಿದೆ. ಇಂದು ಬೆಳಗ್ಗೆ ರಾಯಚೂರು ಜಿಲ್ಲೆಯ ಯರಗೇರಾ ಗ್ರಾಮದಿಂದ ಪಾದಯಾತ್ರೆ ಆರಂಭವಾಯಿತು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್ ಸೇರಿದಂತೆ ಸ್ಥಳೀಯ ನಾಯಕರು ಯಾತ್ರೆಯಲ್ಲಿ ಭಾಗವಹಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಡವಾಗಿ ಯಾತ್ರೆಗೆ ಜೊತೆಗೂಡಿದರು. ಸಂಜೆ ರಾಯಚೂರು ನಗರ ಭಾಗದಿಂದ ಯಾತ್ರೆ ಪುನರಾಂಭವಾಗಲಿದ್ದು, ಗುಂಜ್ ವೃತ್ತದಲ್ಲಿ ಅಂತ್ಯವಾಗಲಿದೆ. ರಾತ್ರಿ …

Read More »

ರಾಯಚೂರು ಜಿಲ್ಲೆಗೆ ಏಮ್ಸ್ ತರುವ ಭರವಸೆ ನನಗಿದೆ : ಸಿಎಂರಾ

ರಾಯಚೂರು : 151 ದಿನಗಳಿಂದ ನಡೆಯುತ್ತಿರುವ ಏಮ್ಸ್ ಹೋರಾಟದ ಬಗ್ಗೆ ಮಾಹಿತಿ ಇದೆ. ಈಗಾಗಲೇ ಕೇಂದ್ರ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದು, ರಾಯಚೂರು ಜಿಲ್ಲೆಗೆ ಏಮ್ಸ್ ತರುವ ಭರವಸೆ ನನಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ರಾಯಚೂರಿನಲ್ಲಿ ಹೇಳಿದರು. ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸಂಸ್ಥೆಯನ್ನ ಸ್ಥಾಪಿಸಬೇಕು ಎಂದು ಒತ್ತಾಯಿಸಿ, ಕಳೆದ 151 ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಂಸದರು, ಸಚಿವರು ಮತ್ತು ಶಾಸಕರು ನನ್ನ ಗಮನಕ್ಕೆ ತಂದಿದ್ದಾರೆ. ಇದೇ ವಿಚಾರಕ್ಕೆ …

Read More »

ಅನುಮಾನಾಸ್ಪದ ರೀತಿಯಲ್ಲಿ ಪಿಡಿಒ ಮೃತದೇಹ ಪತ್ತೆ

ರಾಯಚೂರು : ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹೊರ ವಲಯದ ಹೆದ್ದಾರಿ ಬಳಿ ಕೋಠಾ ಗ್ರಾಮ ಪಂಚಾಯಿತಿಯ ಪಿಡಿಒ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಕೋಠಾ ಗ್ರಾಮ ಪಂಚಾಯಿತಿ ಪಿಡಿಒ ಗಜದಂಡಯ್ಯ ಸ್ವಾಮಿ ಎನ್ನುವವರ ಶವ ಪತ್ತೆಯಾಗಿದ್ದು, ಭಾರೀ ಅನುಮಾನಕ್ಕೆಡೆ ಮಾಡಿದೆ.ಲಿಂಗಸುಗೂರು ತಾಲ್ಲೂಕು ಯಲಗಲದಿನ್ನಿ ಗ್ರಾಮದ ಹೊರವಲಯದಲ್ಲಿ ಗಜದಂಡಸ್ವಾಮಿ ತ್ರಿಪುರಾಂತಯ್ಯ (49) ಶವ ಪತ್ತೆಯಾಗಿದೆ. ತಲೆಗೆ ಬಲವಾಗಿ ಕಲ್ಲು ಅಥವಾ ಮಾರಕಾಸ್ತ್ರದಿಂದ ಹೊಡೆತ ಬಿದ್ದಿದೆ. ಇವರು ಲಿಂಗಸುಗೂರು ತಾಲ್ಲೂಕು ಕೋಠ ಗ್ರಾಮದವರಾಗಿದ್ದು, …

Read More »

ಅಂತರರಾಷ್ಟ್ರೀಯ ಮಟ್ಟದ ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವುದು ಸೂಕ್ತವಾಗಿದೆ : ಫಾದರ್ ಪೌಲರಾಜ್

ರಾಯಚೂರು: ಜಿಲ್ಲೆಯು ಸರ್ವ ರಂಗದಲ್ಲಿಯೂ ಅತ್ಯಂತ ಹಿಂದುಳಿದಿದೆ. ವಿಶೇಷವಾಗಿ ಆರೋಗ್ಯ ಕ್ಷೇತ್ರದ ಸೌಲಭ್ಯಗಳು ಅತ್ಯಂತ ಕೆಳಮಟ್ಟದಲ್ಲಿವೆ. ಅದಕ್ಕಾಗಿಯೇ ಅಂತರರಾಷ್ಟ್ರೀಯ ಮಟ್ಟದ ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವುದು ಸೂಕ್ತವಾಗಿದೆ ಎಂದು ಇನ್ಫೆಂಟ್ ಜೀಸಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಫಾದರ್ ಪೌಲರಾಜ್ ಹೇಳಿದರು. ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಏಮ್ಸ್‌ ಹೋರಾಟ ಸಮಿತಿಯು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯು ಬುಧವಾರ 125ನೇ ದಿನಕ್ಕೆ ಕಾಲಿರಿಸಿದ್ದು, ಧರಣಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಪ್ರದೇಶವು ವಿಶೇಷವಾಗಿ …

Read More »

ರಾಯಚೂರು ನ್ನು ಏಮ್ಸ್ ಗೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ : ಸಿಎಂರಾ

ರಾಯಚೂರು: ಹಿಂದುಳಿದಿರುವಿಕೆ, ಮಹಾತ್ವಕಾಂಕ್ಷಿ ಜಿಲ್ಲೆ ಮತ್ತು ಅಪೌಷ್ಠಿಕತೆ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಉನ್ನತ ಆರೋಗ್ಯ ಸಂಸ್ಥೆ ಅಗತ್ಯವಾಗಿದ್ದು, ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಸಮೀಕ್ಷೆ ನಡೆಸಿ, ಏಮ್ಸ್ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಸವರಾಜ ಬೊಮ್ಮಾಯಿ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ಸಿರಿಧಾನ್ಯ ಮೇಳ ಕಾರ್ಯಕ್ರಮ ಉದ್ಘಾಟನೆ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು. ಇತ್ತೀಚಿಗೆ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾನವ …

Read More »

ಕರ್ನಾಟಕದವರು ಗುಜರಾತ್ ಗೆ ಪಾನಿಪುರಿ, ಜೋಳದ ರೊಟ್ಟಿ ಮಾರಲು ಹೋಗಿದ್ದಾರಾ : ಇಬ್ರಾಹಿಂ

ರಾಯಚೂರು: ನಮ್ಮ ಊರಿನಲ್ಲಿ ಪಾನಿಪುರಿ ಮಾರುವರೇ ಗುಜರಾತ್ ನವರು. ಪಾನ್ ಮಸಾಲಾ ಮಾರುವವವರು ಗುಜರಾತ್ ‌ನವರೇ. ಕರ್ನಾಟಕದವರು ಗುಜರಾತ್ ಗೆ ಪಾನಿಪುರಿ, ಜೋಳದ ರೊಟ್ಟಿ ಮಾರಲು ಹೋಗಿದ್ದಾರಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಕಳೆದ 36 ವರ್ಷದಿಂದಿದೆ. ಜನರಿಗೆ ಜೆಡಿಎಸ್ ಪರಿಚಯ ಮಾಡುವ ಅವಶ್ಯಕತೆ ಇಲ್ಲ. ನಮ್ಮ ಕನ್ನಡಿಗರು ಪ್ರಧಾನಿಯಾಗಿದ್ದ ಪಕ್ಷ ನಮ್ಮದು. ಹತ್ತಾರು ನೀರಾವರಿ ಯೋಜನೆಗಳನ್ನು ‌ನಮ್ಮ ದೇವೇಗೌಡರು …

Read More »

ರಾಯಚೂರಿನಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಗೊಳಿಸಿದ ಕಿಚ್ಚ ಸುದ್ದೀಪ್

ರಾಯಚೂರ : ಜಿಲ್ಲೆಗೆ ನಟ ಕಿಚ್ಚ ಸುದೀಪ್ ಆಗಮಿಸಿ ಸಿರವಾರ ತಾಲೂಕಿನ ಕುರಕುಂದ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಗೊಳಿಸಿದ್ದಾರೆ.. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ನಟ, ನನ್ನ ಮೂರ್ತಿ ಪ್ರತಿಷ್ಠಾಪನೆಗೆ ಹೊರಟಿದ್ದ ಅಭಿಮಾನಿಗಳ ಪ್ರೀತಿಗೆ ನಾನು ಎಂದಿಗೂ ಶರಣು..ತುಂಬಾ ಜನರು ಸಾಧನೆ ಮಾಡಿದವರು ಇದ್ದಾರೆ. ಅವರಿಗೆ ಗೌರವ ಸಲ್ಲಬೇಕು.. ನಾನು ಇನ್ನೂ ಅಷ್ಟು ದೊಡ್ಡವನಲ್ಲ, ಸಾಧನೆ ಮಾಡಬೇಕಾದದ್ದು ನನಗೆ ತುಂಬಾ ಇದೆ..ಮುಂದಿನ ದಿನಗಳಲ್ಲಿ ಅಂತಹ ದಿನ ಬಂದಾಗ ನನ್ನ ಮೂರ್ತಿ …

Read More »

ಇಂದು ರಾಯಚೂರು ನಗರ ಬಂದ್

ರಾಆಯಯಚೂರು: ನವೋದಯ ಮೆಡಿಕಲ್ ಸಂಸ್ಥೆಯಿಂದ ಸ್ಥಳೀಯರಿಗೆ ಅನ್ಯಾಯ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಇಂದು (ಮಾರ್ಚ್ 7) ರಾಯಚೂರು ನಗರ ಬಂದ್ ಆಗಿದೆ. ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಬಂದ್ ( ಆಗಿದ್ದು, ನವೋದಯ ಶಿಕ್ಷಣ ಸಂಸ್ಥೆ ನಿಲುವಿನ ವಿರುದ್ಧ ವಿವಿಧ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಕಲಂ 371(ಜೆ) ಅನ್ವಯಿಸದಂತೆ ನವೋದಯ ಸಂಸ್ಥೆ ಕೋರ್ಟ್ ಮೊರೆ ಹೋಗಿದೆ. ಕೋರ್ಟ್​ಗೆ ಹಾಕಿದ ಅರ್ಜಿ ವಾಪಸ್ ಪಡೆಯುವಂತೆ ಒತ್ತಾಯಿಸಿ …

Read More »