BigTv News
January 26, 2025
Breaking News, ರಾಯಚೂರು
ರಾಯಚೂರು: 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೇಕಾಳು ಉತ್ಪನ್ನವನ್ನು ಖರೀದಿಸಲು ರಾಯಚೂರು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ತಿಳಿಸಿದ್ದಾರೆ. ಸರ್ಕಾರದ ಆದೇಶದಂತೆ 2024-25ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಮದ ಕಡಲೇಕಾಳು ಉತ್ಪನ್ನವನ್ನು ಪ್ರತಿ ಎಕರೆಗೆ 4.00 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 20 …
Read More »
BigTv News
January 25, 2025
Breaking News, ರಾಯಚೂರು
ರಾಯಚೂರು : ಒಪೆಕ್ ಆಸ್ಪತ್ರೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದ ಶರಣ್ ಪ್ರಕಾಶ್ ಪಾಟೀಲ್ ಅವರು ವೈದ್ಯರನ್ನು ನಂಬಿ ಜೀವ ಕಾಪಾಡಿಕೊಳ್ಳಲು ಆಸ್ಪತ್ರೆಗೆ ಬರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಸಿಗಬೇಕು. ವೈದ್ಯರು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿ, ಕರ್ತವ್ಯ ಅರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ …
Read More »
BigTv News
January 25, 2025
Breaking News, ರಾಯಚೂರು
ರಾಯಚೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 2024-25ನೇ ಸಾಲಿನಲ್ಲಿ ರಾಯಚೂರಿನ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಗೆ ಮಂಜೂರಾದ ನೂತನ ಮಿನಿ ಬಸ್‌ಗೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹಸಿರು ನಿಶಾನೆ ತೋರಿದರು. ಜನವರಿ 24ರಂದು, ನಗರದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನಡೆದ ಬಸ್ ಚಾಲನಾ ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವರು, ಹೂವು, ತಳಿರು ತೋರಣಗಳಿಂದ ಸಿಂಗಾರಗೊಂಡಿದ್ದ ಬಸ್‌ನ ಪ್ರವೇಶ ದ್ವಾರದಲ್ಲಿ ರಿಬ್ಬನ್ …
Read More »
BigTv News
January 25, 2025
Breaking News, ರಾಯಚೂರು
ರಾಯಚೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ರಾಯಚೂರು ಜಿಲ್ಲೆಯ ಎಲ್ಲಾ ವಸತಿ ನಿಲಯಗಳಲ್ಲಿ ಮೂಲ ಸೌಕರ್ಯ, ಅಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸಿ ವಸತಿ ನಿಲಯಗಳಲ್ಲಿ ಶಿಸ್ತು ಕಾಪಾಡಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜ.24ರಂದು ಮುಂದುವರೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ …
Read More »
BigTv News
January 25, 2025
Breaking News, ರಾಯಚೂರು
ರಾಯಚೂರು: ರಾಯಚೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿ ಜುಬಿನ್ ಮೋಹಪಾತ್ರ ಅವರನ್ನು ನೇಮಕ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. 2021ನೇ ಸಾಲಿನ ಕರ್ನಾಟಕ ತಂಡದ ಐಎಎಸ್ ಅಧಿಕಾರಿ ಜುಬಿನ್ ಮೋಹಪಾತ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಈಗ ಅವರನ್ನು ರಾಯಚೂರಿಗೆ ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
Read More »
BigTv News
January 23, 2025
Breaking News, ರಾಯಚೂರು
ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಮಾಣವನ್ನು ತಗ್ಗಿಸಲು, ಗರ್ಭಿಣಿಯರ ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಂಡಿರುವ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ರಾಯಚೂರು ಜಿಲ್ಲೆಯಿಂದಲೆಯೇ ಆರೋಗ್ಯ ಇಲಾಖೆ ಸಚಿವ ದಿನೇಶ ಗುಂಡೂರಾವ್ ಅವರು ಚಾಲನೆ ನೀಡಿದರು. ಸ್ಥಳೀಯ ತಾಯಿ ಮತ್ತು ಮಕ್ಕಳ ಸರ್ಕಾರಿ (ಹಳೆಯ ಜಿಲ್ಲಾಸ್ಪತ್ರೆ ಆವರಣ) ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ …
Read More »
BigTv News
January 23, 2025
Breaking News, ರಾಯಚೂರು
ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನವರಿ 24ರಂದು ನಡೆಯುವ ತ್ರೈಮಾಸಿಕ ಕೆ.ಡಿ.ಪಿ ಸಭೆಗೆ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಬರಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಜನವರಿ 22ರಂದು ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು. ಕೃಷಿ, ತೋಟಗಾರಿಕೆ, ಆರೋಗ್ಯ, …
Read More »
BigTv News
January 20, 2025
Breaking News, ರಾಯಚೂರು
ರಾಯಚೂರು: ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಕಾರ್ಮಿಕ ಇಲಾಖೆಯ ಸೌಲಭ್ಯಗಳನ್ನು ಒದಗಿಸಬೇಕು. ಇಲಾಖೆ ಯೋಜನೆಗಳ ಕುರಿತು ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಬೇಕೆಂದು ಕಾರ್ಮಿಕ ಇಲಾಖೆಯ ಸಚಿವ ಸಂತೋಷ ಎಸ್. ಲಾಡ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಕಲಬುರಗಿ ವಿಭಾಗದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಲಬುರಗಿ ಭಾಗದ ಎಲ್ಲ ಜಿಲ್ಲೆಗಳಲ್ಲಿ …
Read More »
BigTv News
January 20, 2025
Breaking News, ರಾಯಚೂರು
ಮಾನ್ವಿ: ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ರಾಯಚೂರು ಜಿಲ್ಲೆಗೆ ಏಮ್ಸ್ ಸಂಸ್ಥೆಯ ಮಂಜೂರಾತಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭರವಸೆ ನೀಡಿದರು. ಪಟ್ಟಣದಲ್ಲಿ ಮಾಜಿ ಸಚಿವ ಕೆ.ಶಿವನಗೌಡ ನಾಯಕ ನೇತೃತ್ವದಲ್ಲಿ ಕೆಎಸ್‌ಎನ್ ಸಾಮಾಜಿಕ ಸೇವಾ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ಅಧಿಕಾರದ ಅವಕಾಶ ದೊರೆತರೆ ಈ ಭಾಗದಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನ, …
Read More »
BigTv News
January 19, 2025
Breaking News, ರಾಯಚೂರು
ರಾಯಚೂರು: ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್.ಲಾಡ್ ಅವರು ಜನವರಿ 20ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜನವರಿ 20ರ ಬೆಳಿಗ್ಗೆ 10 ಗಂಟೆಯಿಂದ 10.30ರವರೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. 10.30 ರಿಂದ ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲೆಗೆ ಸಂಬಂದಿಸಿದಂತೆ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವವರು. ಸಂಜೆ …
Read More »