Breaking News

ರಾಯಚೂರು

ಬೆಂಬಲ ಬೆಲೆಯಡಿ ರೈತರಿಗೆ ಅನುಕೂಲವಾಗುವಂತೆ ಖರೀದಿ ಕೇಂದ್ರಗಳನ್ನು ತೆರೆಯಲು ಸಚಿವ ಶರಣಪ್ರಕಾಶ್ ಪಾಟೀಲ ಸೂಚನೆ

ರಾಯಚೂರು: ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ಬೆಳೆ ಕಟಾವು ಹಂತದಲ್ಲೇ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳನ್ನು ತೆರೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು …

Read More »

ರಾಯಚೂರು ವಿಮಾನ ನಿಲ್ದಾಣಕ್ಕೆ ಶೀಘ್ರವೇ ಕಾಮಗಾರಿ ಆರಂಭ: ಸಚಿವ ಶರಣಪ್ರಕಾಶ್‌ ಪಾಟೀಲ್‌

ರಾಯಚೂರು : ಜಿಲ್ಲೆಯ ಜನರ ಬಹುದಿನಗಳ ಕನಸಾದ ರಾಯಚೂರು ವಿಮಾನ ನಿಲ್ದಾಣ ನನಸಾಗುವ ಹಂತಕ್ಕೆ ಬಂದಿದೆ. ಕೇಂದ್ರ ಸರಕಾರ ಸೈಟ್ ಕ್ಲಿಯರೆನ್ಸ್ ನೀಡಿರುವುದರಿಂದ ಶೀಘ್ರವೇ ಕಾಮಗಾರಿ ಆರಂಭವಾಗಲಿದ್ದು, ಯೋಜನಾ ವರದಿ ಸಿದ್ಧವಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌ ತಿಳಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ‌ ರಾಜ್ಯೋತ್ಸವ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಬಳಿಕ ಮಾತನಾಡಿದರು. ನಗರದ …

Read More »

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಿದ ಹೈಮಾಸ್ ದೀಪಗಳಿಗೆ ಸಚಿವ ಬೋಸರಾಜು ಚಾಲನೆ

ರಾಯಚೂರು: ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಡವಾಟಿ ಬಿಜಿನೆಗೆರಾ, ಮಲಿಯಾಬಾದನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾದ ಹೈಮಾಸ್ ದೀಪಗಳನ್ನು ಸಚಿವ ಎನ್ ಎಸ್ ಬೋಸರಾಜು ಅವರು ಹಿಮಾಸ್ ದೀಪದ ಬಟನ್ ಆನ್ ಮಾಡುವ ಮೂಲಕ ಚಾಲನೆ ನೀಡಿದರು. ವಡವಾಟಿ, ಬಿಜನಗೆರ, ಮಲೆಯಾಬಾದ್ ನಲ್ಲಿ ನಿರ್ಮಿಸಿದ ಹೈಮಸ್ ದೀಪಗಳಿಗೆ ಚಾಲನೆ ನೀಡಿ ಮಾತನಾಡಿ ರಾಯಚೂರು ನಗರ ಪ್ರದೇಶದಲ್ಲಿ ಈಗಾಗಲೇ ವಿವಿಧ ಬಡಾವಣೆಗಳಲ್ಲಿ 100 ವ್ಯಾಟ್ ನ ಎಲ್‌ಇಡಿ …

Read More »

ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ ಕೇಂದ್ರಗಳ ಸ್ಥಾಪನೆ: ಜಿಲ್ಲಾಧಿಕಾರಿ

ರಾಯಚೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ರೈತರು ಸದುಪಯೋಗಪಡೆಯಬೇಕೆಂದು ಜಿಲ್ಲಾಧಿಕಾರಿ ನಿತೀಶ್ ಕೆ., ಅವರು ತಿಳಿಸಿದ್ದಾರೆ. ರೈತರಿಂದ ಶೇಂಗಾ ಉತ್ಪನ್ನವನ್ನು ಪ್ರತಿ ಎಕರಿಗೆ 3.00 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್‍ಗೆ 6,783 ರೂ.ಗಳ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಲಾಗುವುದು. ಆಸಕ್ತರ ರೈತರು ರಾಯಚೂರು …

Read More »

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ದುರ್ಮರಣ

ರಾಯಚೂರು: ಜಿಲ್ಲೆಯ ಸಿಂಧನೂರಿನ ಸಿಎಸ್‌ಎಫ್ ಚರ್ಚ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರರು ಸವಾರರು ಮೃತಪಟ್ಟ ಘಟನೆ ಇಂದು (ಅ.25) ನಡೆದಿದೆ. ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಶೆಕ್ಷಾವಲಿ (19) ಮೃತಪಟ್ಟಿದ್ದು, ಮತ್ತೋರ್ವ ಮೃತ ಬೈಕ್ ಸವಾರನ ಹೆಸರು ತಿಳಿದು ಬಂದಿಲ್ಲ. ತಾಲೂಕಿನ ದುಮುತಿ ಗ್ರಾಮದಿಂದ ಸಿಂಧನೂರಿನ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿ, ಜವಳಗೆರಾದಿಂದ ಜಮೀನಿಗೆ ಹೊರಟಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಎರಡೂ ಬೈಕುಗಳ ಮುಂಭಾಗ ನಜ್ಜುಗುಜ್ಜಾಗಿದೆ. …

Read More »

ಸಿಂಧನೂರು ನಗರಕ್ಕೆ ಜಿಲ್ಲಾಧಿಕಾರಿ ದಿಢೀರ್ ಭೇಟಿ: ಸ್ವಚ್ಛತೆ ಶುಚಿಯ ಬಗ್ಗೆ ಪರಿಶೀಲನೆ

ಸಿಂಧನೂರು: ನಗರದ ಇಂದಿರಾ ಕ್ಯಾಂಟೀನ್‍ಗೆ ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ವಚ್ಚತೆ, ಶುಚಿ, ರುಚಿಯ ಬಗ್ಗೆ ಪರಿಶೀಲನೆ ನಡೆಸಿ ಸ್ವಚ್ಚತೆ ಕಾಪಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು ಜಿಲ್ಲೆಯಲ್ಲಿರುವ ಇಂದಿರಾ ಕ್ಯಾಟೀನ್‍ಗಳಲ್ಲಿ ಗುಣಮಟ್ಟದ ಆಹಾರ ನೀಡುವುದರ ಜೊತೆಗೆ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ಬಡವರಿಗೆ ಕಡಿಮೆ ದರದಲ್ಲಿ ತಿಂಡಿ ಮತ್ತು ಊಟಗಳು ದೊರೆಯಬೇಕೆಂಬುದು ಸರ್ಕಾರದ ಆಶಯವಾಗಿದೆ. ಇಂದಿರಾ ಕ್ಯಾಂಟೀನ್‍ನಲ್ಲಿ …

Read More »

ಬಟ್ಟೆ ತೊಳೆಯುವ ವೇಳೆ ನದಿ ನೀರಿನ ರಭಸಕ್ಕೆ ಕೊಚ್ಚಿ ಹೋದ ತಾಯಿ ಮಗಳು

ರಾಯಚೂರು: ಬಟ್ಟೆ ತೊಳೆಯಲು ಹೋದಾಗ ದುರಂತವೊಂದು ಸಂಭವಿಸಿದ್ದು, ತಾಯಿ ಹಾಗೂ ಮಗಳು ನದಿ ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ತಾಯಿ ಹಾಗೂ ಮಗಳು ಇಬ್ಬರೂ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ರಾಯಚೂರು ತಾಲೂಕಿನ ಬಿ.ಯದ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾಯಿ ಸುಜಾತಾ (27 ಹಾಗೂ ಮಗಳು ಶ್ರಾವಣಿ (10) ಮೃತರು. ತಾಯಿ ಶವ ಪತ್ತೆಯಾಗಿದ್ದು, ಮಗಳ ಶವಕ್ಕಾಗಿ ಶೋಧ …

Read More »

ಕಲ್ಯಾಣ ಕರ್ನಾಟಕ ಭಾಗಕ್ಕೆ 5,267 ಶಿಕ್ಷಕರ ನೇಮಕಾತಿ: ರಾಜ್ಯ ಸರ್ಕಾರ ಅನುಮತಿ

ರಾಯಚೂರು: ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಉದ್ಭವಿಸಿರುವ ಶಿಕ್ಷಕರ ಕೊರತೆ ಬಗ್ಗೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರನ್ನು ನೇಮಕ ಮಾಡಲು ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕಲ್ಯಾಣ ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ಸುಮಾರು 2100ಕ್ಕೂ ಹೆಚ್ಚು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿವೆ. ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸುಮಾರು 2.5 ಲಕ್ಷ ಬಡ ವಿದ್ಯಾರ್ಥಿಗಳು ಓದುತ್ತಿದ್ದಾರೆ. …

Read More »

ನವಲಿ ಅಣೆಕಟ್ಟು ನಿರ್ಮಾಣ ಕುರಿತು ಆಂಧ್ರ, ತೆಲಂಗಾಣ ಸಿಎಂ ಜೊತೆ ಚರ್ಚೆ: ಡಿಸಿಎಂ ಡಿಕೆಶಿ

ರಾಯಚೂರು : ಶಿವಮೊಗ್ಗ ಜಿಲ್ಲೆ ಬಳಿಯ ನವಲಿ ಎಂಬಲ್ಲಿ ಅಣೆಕಟ್ಟು ನಿರ್ಮಾಣ ಸಂಬಂಧ ಒಂದು ತಿಂಗಳ ಒಳಗಾಗಿ ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣದ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಜಿಲ್ಲೆಯ ಸಿಂಧನೂರಿನಲ್ಲಿ ಆಯೋಜಿಸಿದ್ದ ರೈತ ದಸರಾ ಉದ್ಘಾಟಿಸಿ ಮಾತನಾಡಿದ ಅವರು, ತುಂಗಾಭದ್ರ ಅಣೆಕಟ್ಟಿಗೆ ಪರ್ಯಾಯವಾಗಿ ನವಲಿಯಲ್ಲಿ ಅಣೆಕಟ್ಟು ನಿರ್ಮಿಸಬೇಕೆಂದು ಒತ್ತಾಯವಿದೆ. ಅಲ್ಲದೆ, 33 ಟಿಎಂಸಿ ನೀರು ವ್ಯರ್ಥವಾಗುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ಹೀಗಾಗಿ ಈ …

Read More »

ರಾಯಚೂರು ನಗರಸಭೆಯಿಂದ ಅವಶ್ಯಕ ಸಾಮಗ್ರಿಗಳ ಪೂರೈಕೆಗೆ ಅರ್ಜಿ ಆಹ್ವಾನ

ರಾಯಚೂರು: ನಗರಸಭೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ಇದೇ ಅಕ್ಟೋಬರ್ 12ರಂದು ನಾಡಹಬ್ಬ ದಸರಾ ಹಬ್ಬದ ಆಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳ ವ್ಯವಸ್ಥೆಗಳಾದ ಕಲಾತಂಡಗಳು, ಕುಂಭ ಮೇಳ, ರಥ, ಕುದುರೆಗಳು, ಹೂ, ಹೂವಿನಹಾರಗಳು, ಊಟ ಹಾಗೂ ಉಪಹಾರ, ನೀರು, ಕ್ಯಾನಗಳು, ಸಪ್ಲಾಯರ್, ಮೈಕ್, ಡಿ.ಜೆ, ಆಮಂತ್ರಣ, ಪಗಡಿ, ಸ್ವಾಗತ ಕಮಾನು ಹಾಗೂ ಇತರೆ ಅವಶ್ಯಕ ಸಾಮಾಗ್ರಿಗಳ ಕುರಿತು ಕೊಟೇಷನ್ ಕರೆಯಲಾಗಿದ್ದು, ಆಸಕ್ತರು 3 ದಿನಗಳ ಒಳಗಾಗಿ ನಗರಸಭೆಗೆ ಅರ್ಜಿಯನ್ನು …

Read More »