BigTv News
October 5, 2024
Breaking News, ರಾಯಚೂರು
ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿಂದು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಆಲಿಸಿದರು. ವಿವಿದೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿದರು. ಸರ್ಕಾರಿ ನೌಕರರು ವರ್ಗಾವಣೆಗಾಗಿ ಹಲವರು ಮನವಿ ಸಲ್ಲಿಸಿದರು, ಅನಾರೋಗ್ಯದಿಂದ ಬಳಲುತ್ತಿರುವವರು ಆರ್ಥಿಕ ನೆರವು ಕೋರಿ ಅರ್ಜಿ ಸಲ್ಲಿಸಿದರು. ಹಲವರು ತಮಗೊಂದು ಸರ್ಕಾರಿ ಕೆಲಸ ಕೊಡಿಸುವಂತೆ ಕೋರಿದರು.
Read More »
BigTv News
October 5, 2024
Breaking News, ರಾಯಚೂರು
ರಾಯಚೂರು: ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಸಂಭ್ರಮ 50ರ ಅಂಗವಾಗಿ ಆಯೋಜಿಸಿದ್ದ ಗೋಕಾಕ್ ಚಳವಳಿ ಹಿನ್ನೋಟ ಮುನ್ನೋಟ ಬೃಹತ್ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ. …
Read More »
BigTv News
October 5, 2024
Breaking News, ರಾಯಚೂರು
ರಾಯಚೂರು: ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿ ವರದಿಯನ್ನು ಸಂಪುಟದಲ್ಲಿ ಚರ್ಚಿಸಿ, ಸದನದಲ್ಲೂ ಮಂಡಿಸಲಾಗುವುದು ಎಂದಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ, ಜಾತಿ ಗಣತಿಯನ್ನು ನಾವು ತಕ್ಷಣಕ್ಕೆ ಜಾರಿ ಮಾಡುವುದಾಗಿ ಹೇಳಿಲ್ಲ ಈಗ ಚರ್ಚೆ ಮಾಡುತ್ತಿದ್ದೇವಷ್ಟೇ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಜಾತಿ ಗಣತಿಗೆ ಆಕ್ಷೇಪ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿಯ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಿ ಏನಾದರೂ ಲೋಪಗಳಿದ್ದರೆ ಸರಿಪಡಿಸಲಾಗುವುದು ಎಂದು ತಿಳಿಸಿದರು.
Read More »
BigTv News
October 5, 2024
Breaking News, ರಾಯಚೂರು
ಮಸ್ಕಿ: ತಾಲ್ಲೂಕಿನ ಬಳಗಾನೂರು ಗ್ರಾಮದಲ್ಲಿ ಶುಕ್ರವಾರ ಸಂಜೆ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಮಲ್ಲಪ್ಪ (54) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಬಳಗಾನೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗಿದೆ. ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಮಲ್ಲಪ್ಪ ಮಳೆ ಬಂದಿದ್ದರಿಂದ ಮರದ ಕೆಳಗೆ ನಿಂತಿದ್ದರು. ಇದೇ ಸಂದರ್ಭದಲ್ಲಿ ಮರಕ್ಕೆ ಸಿಡಿಲು ಅಪ್ಪಳಿಸಿದ್ದು, ಮಲ್ಲಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಬಳಗಾನೂರು ಠಾಣೆಯಲ್ಲಿ …
Read More »
BigTv News
October 4, 2024
Breaking News, ರಾಯಚೂರು
ರಾಯಚೂರು: ಮುಡಾ ಪ್ರಕರಣದಲ್ಲಿ ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ ಅವರ ಮಾತುಗಳಿಗೆ ಅರ್ಥವಿದೆಯೇ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ದೂರಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಿದರೆ ಕಾಂಗ್ರೆಸ್ ದುರ್ಬಲವಾಗುತ್ತಿದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ. ಆದರೆ, ನಮ್ಮದು ಸಂಪೂರ್ಣ ಜನಾಶೀರ್ವಾದದಿಂದ ಬಂದ ಸರ್ಕಾರ 135 ಸ್ಥಾನ ಪಡೆದು ಅಧಿಕಾರಕ್ಕೆ ಬಂದ ಯಾವುದೇ ಪಕ್ಷಗಳು ಇತ್ತೀಚೆಗೆ ಬಂದಿಲ್ಲ. ಸಿಎಂ …
Read More »
BigTv News
October 4, 2024
Breaking News, ರಾಯಚೂರು
ರಾಯಚೂರು : ಮುಡಾ ತನಿಖೆಯ ಟೆನ್ಷನ್ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 4 ಹಾಗೂ 5 ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅ.4ರಂದು ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ಕೊಪ್ಪಳದ ಗಿಣಿಗೇರಾ ಏರ್‌ಸ್ಟ್ರಿಪ್‌ಗೆ ಸಿಎಂ ಆಗಮಿಸಿದ್ದಾರೆ. ಅಲ್ಲಿಂದ ಮಧ್ಯಾಹ್ನ 12.15ಕ್ಕೆ ಸಿಂಧನೂರಿಗೆ ಬಂದು ದಸರಾ ಮಹೋತ್ಸವ, ಕಲ್ಯಾಣ ಸೌಹಾರ್ಧ ನಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಸಿಂಧನೂರಿನಿಂದ ಕಲ್ಮಲಾ ಜಂಕ್ಷನ್ ವರೆಗೆ ₹ 1635 ಕೋಟಿ ವೆಚ್ಚದಲ್ಲಿ ಚತುಷ್ಪಥ …
Read More »
BigTv News
October 3, 2024
Breaking News, ರಾಯಚೂರು
ರಾಯಚೂರು: ಪರಿಶಿಷ್ಟ ಜಾತಿಯ ಮಾದಿಗ ಸಂಬಂಧಿತ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಹಾಗೂ ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ದಲಿತ ಪರಸಂಘಟನೆಗಳು ಇಂದು ರಾಯಚೂರು ಬಂದ್‌ಗೆ ಕರೆ ನೀಡಿದೆ. ಅಂಗಡಿ ಮುಂಗಟ್ಟುಗಳು ಸಹ ವ್ಯಾಪಾರ ಸ್ಥಗಿತಗೊಳಿಸುವ ಮೂಲಕ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ನಗರದ ಉಸ್ಮಾನಿಯ ತರಕಾರಿ ಮಾರುಕಟ್ಟೆಯನ್ನು ಬಂದ್ ಮಾಡಲಾಗಿದೆ. ಬಂದ್ ಪರಿಣಾಮ ಬಸ್ ಸಂಚಾರ ಸಹ ಸ್ಥಗಿತಗೊಂಡಿದ್ದು, ಬಸ್ ನಿಲ್ದಾಣ …
Read More »
BigTv News
September 28, 2024
Breaking News, ರಾಯಚೂರು
ರಾಯಚೂರು: ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ತಿಳಿಸಿದರು. ಸ್ಥಳೀಯ ಕೇಂದ್ರ ಬಸ್ ನಿಲ್ದಾಣದ ಹತ್ತಿರವಿರುವ ಐತಿಹಾಸಿಕ ಕೋಟೆ ಮೆಕ್ಕಾ ದರವಾಜಾದಲ್ಲಿ ಜಿಲ್ಲಾಡಳಿತ, ಜಿಪಂ, ಪ್ರವಾಸೋದ್ಯಮ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ಶಿಕ್ಷಣ ಇಲಾಖೆ, ಪುರಾತತ್ವ ಸಂಗ್ರಹಾಲಯಗಳ ಮತ್ತು ಪರಂಪರೆ ಇಲಾಖೆ ಹಾಗೂ ನಗರಸಭೆ ರಾಯಚೂರು ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ …
Read More »
BigTv News
September 28, 2024
Breaking News, ರಾಯಚೂರು
ಲಿಂಗಸುಗೂರು: ಕೆಲ ವರ್ಷಗಳಿಂದ ಕಲುಷಿತ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ತಾಲ್ಲೂಕಿನ ಗೊರೆಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರೆಬಾಳ ತಾಂಡಾ 1 ಮತ್ತು 2ರ ನಿವಾಸಿಗಳು ಆರೋಪಿಸಿದ್ದಾರೆ. 15 ವರ್ಷಗಳ ಹಿಂದೆ ತಾಂಡಾಗಳಿಗೆ ಶುದ್ಧ ಮತ್ತು ಸಮರ್ಪಕ ಕುಡಿಯುವ ನೀರು ಪೂರೈಸಲು ಮೇಲ್ಮಟ್ಟದ ಜಲಸಂಗ್ರಹಗಾರ ನಿರ್ಮಿಸಲಾಗಿದೆ. ನಾಲ್ಕು ವರ್ಷಗಳಿಂದ ನಿರ್ವಹಣೆ ನಿರ್ಲಕ್ಷ್ಯದಿಂದ ಕಲುಷಿತ ನೀರು ಪೂರೈಕೆ ಆಗುತ್ತಿರುವ ಕುರಿತು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಪರ್ಯಾಯ ವ್ಯವಸ್ಥೆಗೆ ಮುಂದಾಗಿಲ್ಲ ಎಂಬ ದೂರುಗಳು …
Read More »
BigTv News
September 24, 2024
Breaking News, ರಾಯಚೂರು
ರಾಯಚೂರು: ಕಸ್ತೂರಬಾ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೊಡ ಗ್ರಾಮದಲ್ಲಿ ನಡೆದಿದೆ. ಉಪಹಾರ ಸೇವಿಸಿದ ಬಳಿಕ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ, ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನ ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಂದು ಬೆಳಗ್ಗೆ ನೀಡಿದ ಚಿತ್ರಾನ್ನ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ತಿಂಗಳ ಹಿಂದೆಯಷ್ಟೆ ಆಹಾರದಲ್ಲಿ ವಿಷ ಬೇರೆಸಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು …
Read More »