Breaking News

ರಾಯಚೂರು

ಅಧಿಕಾರಿಗಳ ವಿರುದ್ಧ ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ….

ರಾಯಚೂರು: ದೇವದುರ್ಗ ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ ನಡೆದ ಅಕ್ರಮ ಕುರಿತು ರಾಜ್ಯ ಸಾಮಾಜಿಕ ಲೆಕ್ಕಪರಿಶೋಧನಾ ಸಮಿತಿ ನೀಡಿದ ವರದಿ ಆಧರಿಸಿ ಇಬ್ಬರು ಅಧಿಕಾರಿಗಳ ವಿರುದ್ಧ ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿರ್ದೇಶನದ ಮೇರೆಗೆ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಅಣ್ಣರಾವ್ ನೀಡಿದ ದೂರಿನಂತೆ ತಾಲ್ಲೂಕು ಪಂಚಾಯಿತಿಯ ಹಿಂದಿನ ಇಒ ಪಂಪಾಪತಿ ಹಿರೇಮಠ, ನಿರ್ಗಮಿತ ನರೇಗಾ ಯೋಜನೆ ಸಹಾಯಕ …

Read More »

ಭತ್ತದ ಕಟಾವಿಗೆ ಮುನ್ನವೇ ಉತ್ತಮ ಬೇಡಿಕೆ….

ರಾಯಚೂರು: ಮಳೆಯ ಅಭಾವದ ನಡುವೆಯೂ ರೈತರು ಪ್ರಯಾಸಪಟ್ಟು ಬೆಳೆದ ಭತ್ತಕ್ಕೆ ಕಟಾವಿಗೆ ಮುನ್ನವೇ ಉತ್ತಮ ಬೇಡಿಕೆ ಬಂದಿದೆ. ವಿವಿಧ ತಳಿಯ 75 ಕೆ.ಜಿ. ಭತ್ತದ ದರ ₹1,900ರಿಂದ ₹ 2,100ರವರೆಗೂ ತಲುಪಿದೆ. ಕಳೆದ ವರ್ಷ ₹1,750 ಇತ್ತು. ಮುಂಗಾರು ಹಂಗಾಮಿನಲ್ಲಿ ಸಿಂಧನೂರು ತಾಲೂಕಿನಲ್ಲಿ 56,413 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ತುಂಗಭದ್ರಾ ಕಾಲುವೆಯ ಮೇಲ್ಭಾಗದಲ್ಲಿ ಈಗಾಗಲೇ ಭತ್ತದ ಕಟಾವು ಪ್ರಾರಂಭವಾಗಿದೆ. ಆದರೆ, ಮಧ್ಯ ಹಾಗೂ ಕೆಳ ಭಾಗದಲ್ಲಿ ತೆನೆ ಕೆಂಪಗಾಗಿದ್ದು, …

Read More »

ಮುಂಗಾರು ಮಳೆ ಕೊರತೆಯಿಂದ ಚೆಂಡು ಹೂವಿನ ಬೆಳೆ ಕೈಹಿಡಿದಿದೆ….

ರಾಯಚೂರು: ಮಾನ್ವಿ ಪಟ್ಟಣದ ಖಾಸಗಿ ಕಾಲೇಜಿನ ಇಂಗ್ಲಿಷ್‌ ವಿಷಯದ ಉಪನ್ಯಾಸಕ ನಾಗರಾಜ ಚಿಮ್ಲಾಪೂರ ವೃತ್ತಿಯ ಜೊತೆಗೆ ಚೆಂಡು ಹೂವು ಕೃಷಿಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಪಟ್ಟಣದ ಹೊರವಲಯದ ಸೀಕಲ್ ಕ್ರಾಸ್ ಬಳಿ‌ ಮೂರು ಹೆಕ್ಟೇರ್‌ ಜಮೀನು ಗುತ್ತಿಗೆ ಪಡೆದು ಮೂರು ವರ್ಷಗಳಿಂದ ಚೆಂಡು ಹೂವು ಬೆಳೆಯುತ್ತಿದ್ದಾರೆ. ನಾಗರಾಜ ಅವರು ತಾವು ಬೆಳೆದ ಚೆಂಡು ಹೂವುಗಳನ್ನು ಖುದ್ದಾಗಿ ಮಾರಾಟ ಮಾಡುವ ಮೂಲಕ ಉತ್ತಮ ಲಾಭ ಗಳಿಸುತ್ತಿದ್ದಾರೆ. ಈ ವರ್ಷ ಮುಂಗಾರು ಮಳೆ …

Read More »

ಬೇರೆಯವರ ಮೇಲೆ ಗೂಬೆ ಕೂರಿಸುವ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ: ಮುಖ್ಯಮಂತ್ರಿ ಚಂದ್ರು.

ರಾಯಚೂರು: ಭ್ರಷ್ಟಾಚಾರ ಆರೋಪ ಬಂದಾಗ ನಾವು ಭ್ರಷ್ಟರಲ್ಲ ಎಂದು ಯಾರೂ ಹೇಳುತ್ತಿಲ್ಲ. ಬದಲಾಗಿ ಅವರು ಹೆಚ್ಚು ಭ್ರಷ್ಟಾಚಾರ ಮಾಡಿದ್ದಾರೆಂದು ಬೇರೆಯವರ ಮೇಲೆ ಗೂಬೆ ಕೂರಿಸುವ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ ಎಂದು ಆಮ್‍‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದರು. ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಚಂದ್ರು ಅವರು ಶನಿವಾರ ರಾಯಚೂರು ಜಿಲ್ಲಾ ಪ್ರವಾಸವನ್ನು ಮಾಡಿದರು. ಈ ವೇಳೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, …

Read More »

ರಾಯಚೂರು ಜಿಲ್ಲೆಯಲ್ಲಿ ಭತ್ತದ ಬೆಳೆಯಲ್ಲಿ ಮೂಡಿದ ಅಪ್ಪು…

ಅಪ್ಪು…. ಈ ಹೆಸರಲ್ಲಿ ಅದೇನೋ ಶಕ್ತಿ ಇದೆ. ಅಪ್ಪು…. ಅಂತ ಕರೆದರೆ ಪ್ರೀತಿ ತೋರಿಸುವ ಮನಸ್ಸಾಗುತ್ತದೆ. ಗಟ್ಟಿಯಾಗಿ ತಬ್ಬಿಕೊಂಡು ನಗು ನಗುತಾ ಮಾತನಾಡುವ ಆಸೆಯಾಗುತ್ತದೆ. ಇದೇ ಈ ಹೆಸರಿನಲ್ಲಿರುವ ತಾಕತ್ತು. ಚಂದನವನದ ಚಂದದ ಗುಡಿ, ದೊಡ್ಮನೆಯ ಕಣ್ಮಣಿ ಪುನೀತ್ ರಾಜಕುಮಾರ್ ಅವರು ಅಗಲಿ ಅಕ್ಟೋಬರ್‌ಗೆ ಎರಡು ವರ್ಷಗಳು ಕಳೆಯುತ್ತವೆ. ಆದರೆ ಅವರ ಮೇಲಿರುವ ಅಭಿಮಾನ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದಂತೆ ಉಳಿದಿದೆ. ಇದಕ್ಕೆ ಸಾಕ್ಷಿ ರಾಯಚೂರು ಜಿಲ್ಲೆಯಲ್ಲಿ ಭತ್ತದ ಬೆಳೆಯಲ್ಲಿ ಮೂಡಿದ …

Read More »

ತೆಲಂಗಾಣದಲ್ಲಿ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹಲವಾರು ರೈಲುಗಳ ಸೇವೆಗೆ ಚಾಲನೆ ನೀಡಿದರು….

ರಾಯಚೂರು: ತೆಲಂಗಾಣದಲ್ಲಿ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹಲವಾರು ರೈಲುಗಳ ಸೇವೆಗೆ ಚಾಲನೆ ನೀಡಿದರು. ಇದರಲ್ಲಿ ಒಂದು ರೈಲು ಕರ್ನಾಟಕದ ರಾಯಚೂರು ಮತ್ತು ತೆಲಂಗಾಣದ ನಾಂದೇಡ್​ಗೆ ಸಂಚಾರ ನಡೆಸುತ್ತದೆ. ಈ ಮೂಲಕ ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಅಕ್ಟೋಬರ್ 10ರಿಂದಲೇ ಈ ರೈಲು ಸೇವೆ ಆರಂಭವಾಗಿದೆ. ಈ ಮೂಲಕ ಕೇಂದ್ರ ಸರ್ಕಾರ, ರೈಲ್ವೆ ಸಚಿವಾಲಯ ತೆಲಂಗಾಣ, ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಂಪರ್ಕ ಕಲ್ಪಿಸುವ ರೈಲು ಸೇವೆ ಆರಂಭಿಸಿದೆ.

Read More »

ತಡವಾಗಿ ಮಳೆಯ ಅಭಾವದಿಂದ ಬೆಳೆ ಅಷ್ಟಕಷ್ಟೆ ಬಂದಿದೆ….

ರಾಯಚೂರು: ಜಿಲ್ಲೆಯಲ್ಲಿ ಮಾರುಕಟ್ಟೆಗೆ ಬರುವ ಮುಂಚೆಯೇ ಹತ್ತಿ ದರ ತೀವ್ರ ಕುಸಿತ ಕಂಡಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಪ್ರಸಕ್ತ ವರ್ಷ ಸಕಾಲಕ್ಕೆ ಮಳೆ ಬಾರದೇ ಇರುವುದರಿಂದ ಮಳೆಯೂ ಬಂದಿಲ್ಲ. ಇಳುವರಿಯೂ ಬಂದಿಲ್ಲ. ಹತ್ತಿ ಮಾರುಕಟ್ಟೆಗೆ ಬರುವುದಕ್ಕಿಂತ ಮುಂಚೆಯೇ ದರ ಕುಸಿದಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿದೆ. ಮುಂಗಾರು ಮಳೆ ಸರಿಯಾದ ಸಮಯಕ್ಕೆ ಬಾರದೆ ತಡವಾಗಿ ಮಳೆಯ ಅಭಾವದಿಂದ ಬೆಳೆ ಅಷ್ಟಕಷ್ಟೆ ಬಂದಿದೆ. ಈ ಹೊತ್ತಿನಲ್ಲಿ ಹತ್ತಿಯ ದರ ಕುಸಿದಿದೆ. ತುಂಗಭದ್ರಾ ಮತ್ತು …

Read More »

ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತ…

ರಾಯಚೂರು: ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ರಾಯಚೂರು ತಾಲೂಕಿನ ಕೊತ್ತದೊಡ್ಡಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಲ್ಲೇಶ್(16) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಎಸ್​ಆರ್​ಪಿಎಸ್​ ಪದವಿಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಲ್ಲೇಶ್​ ಎಂದಿನಂತೆ ಕಾಲೇಜಿಗೆ ತೆರಳಲು ಗ್ರಾಮದ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ. ಈ ವೇಳೆ ಇಡಪನೂರು ಗ್ರಾಮದ ಬಳಿ ತುಂಗಭದ್ರಾ ನದಿಯಿಂದ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಗುದ್ದಿದೆ ಎಂದು …

Read More »

ಪ್ರಮಾಣ ಪತ್ರಗಳನ್ನು ಪಡೆಯಲು ಪ್ರಯತ್ನಿಸಿ ವಿಫಲ ಆತ್ಮಹತ್ಯೆ..

ರಾಯಚೂರು: ಪದವಿ ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ಭಾವಿ ಶಿಕ್ಷಕನೋರ್ವ ಪ್ರಮಾಣ ಪತ್ರಗಳನ್ನು ಪಡೆಯಲು ಪ್ರಯತ್ನಿಸಿ ವಿಫಲಗೊಂಡು, ಆಡಳಿತ ವ್ಯವಸ್ಥೆಯಿಂದ ರೋಸಿ ಹೋಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಜರುಗಿದೆ. ದೇವದುರ್ಗ ಪಟ್ಟಣದಲ್ಲಿ ಜ್ಞಾನಗಂಗಾ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಸಾವಿಗೆ ಶರಣಾಗಿದ್ದಾನೆ. ಚಿಕ್ಕಬೂದುರು ಗ್ರಾಮದ ನಿವಾಸಿ ಚನ್ನಬಸವ (26) ಮೃತ ಯುವಕನೆಂದು ಗುರುತಿಸಲಾಗಿದೆ.

Read More »

ಕೆಲಸದ ಒತ್ತಡದಿಂದ ಇನ್ನೊಬ್ಬ ಪೊಲೀಸ್ ಪೇದೆ ಸಾವು..

ರಾಯಚೂರು:ಪೊಲೀಸ್ ಕಾನ್​ಸ್ಟೇಬಲ್​​ವೊಬ್ಬರು ಹೃದಯಾಘಾತದಿಂದ ನಿಧನ ಹೊಂದಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಇಂದು ನಡೆದಿದೆ. ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಗುರುವಾರ ರಾತ್ರಿ ಘಟನೆ ಜರುಗಿದೆ. ಬಸವನಗೌಡ ಆಗೋಲಿ (34) ಮೃತರು. ಇವರು ಮಸ್ಕಿ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಕೆಲಸ ಮುಗಿಸಿಕೊಂಡು ಮನೆಯಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ರವಾನಿಸುತ್ತಿದ್ದಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

Read More »