Breaking News

ಲೈಫ್ ಸ್ಟೈಲ್

ರಾಜಸ್ಥಾನದಲ್ಲಿ ಓಮಿಕ್ರಾನ್‌ನಿಂದ ಚೇತರಿಸಿಕೊಂಡಿದ್ದ ವ್ಯಕ್ತಿ ಸಾವು

ಜೈಪುರ: ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿದ್ದ 73 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಉದಯಪುರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಡಿಸೆಂಬರ್ 15 ರಂದು ಈ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಬಂದಿತ್ತು ಮತ್ತು ಜ್ವರ, ಕೆಮ್ಮು ಹಾಗೂ ಮೂಗು ಸೋರುವಿಕೆಯಂತಹ ರೋಗಲಕ್ಷಣಗಳನ್ನು ಹೊಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಡಾ ಖಾರಾಡಿ ಹೇಳಿದ್ದಾರೆ. ಮೃತ ವ್ಯಕ್ತಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಮತ್ತು ಹೈಪೋಥೈರಾಯ್ಡಿಸಮ್ ಅನ್ನು ಹೊಂದಿದ್ದರು. …

Read More »

ಸೇವಾ ಭಾರತಿ ಟ್ರಸ್ಟ್‌ ವತಿಯಿಂದ ಕೀಮ್ಸ್‌ಗೆ ಆಂಬ್ಯುಲೆನ್ಸ್‌ ವಿತರಣೆ

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಗೆ ಪ್ರತಿದಿನವೂ ನೂರಾರು ಬಡ ರೋಗಿಗಳು ಬರುತ್ತಾರೆ. ತುರ್ತು ಸಮಯದಲ್ಲಿ ವಾಹನ ಸೇವೆ ತುಂಬ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಸೇವಾ ಭಾರತಿ ಟ್ರಸ್ಟ್ ಆಂಬುಲೆನ್ಸ್ ನೀಡಿರುವುದು ಖುಷಿಯ ಸಂಗತಿ ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಹೇಳಿದರು. ಕಿಮ್ಸ್ ಆಸ್ಪತ್ರೆಗೆ ಸೇವಾ ಭಾರತಿ ಟ್ರಸ್ಟ್ ಉಚಿತವಾಗಿ ಅಂಬುಲೆನ್ಸ್ ನೀಡಿದ್ದು, ಅದನ್ನು ಕೀಮ್ಸ್ ಆಸ್ಪತ್ರೆಯ ಆವರಣದಲ್ಲಿ ಹಸ್ತಾಂತರ ಮಾಡಲಾಯಿತು. ನಂತರ ರಾಮಲಿಂಗಪ್ಪ ಅಂಟರತಾನಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಸೇವಾ ಭಾರತಿ …

Read More »

ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್‌ಗೆ ಕೋವಿಡ್ ದೃಢ

ಕೋಲ್ಕತ್ತ: ‘ನನಗೆ ಕೋವಿಡ್‌-19 ಇರುವುದು ದೃಢಪಟ್ಟಿದ್ದು. ಮನೆಯಲ್ಲಿಯೇ ಪ್ರತ್ಯೇಕವಾಸದಲ್ಲಿದ್ದೇನೆ’ ಎಂದು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ನಾಯಕ, ಸಂಸದ ಡೆರೆಕ್ ಓಬ್ರಿಯಾನ್ ಮಂಗಳವಾರ ಹೇಳಿದ್ದಾರೆ. ‘ಕಳೆದ ಮೂರು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಮತ್ತು ರೋಗಲಕ್ಷಣಗಳನ್ನು ಹೊಂದಿರುವವರು ದಯವಿಟ್ಟು ವೈದ್ಯಕೀಯ ಸಲಹೆಯನ್ನು ಪಡೆದುಕೊಳ್ಳಿ’ ಎಂದೂ ಡೆರೆಕ್ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Read More »

15-18 ವರ್ಷ ವಯಸ್ಸಿನವರಿಗೆ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಲಸಿಕೆ ನೀಡಿಕೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮಕ್ಕಳು ಹಾಗೂ ವಯೋ ವೃದ್ಧರ ಆರೋಗ್ಯ ವಿಚಾರದಲ್ಲಿ ಯಾವುದೇ ಅವಕಾಶಗಳನ್ನು ತೆಗೆದುಕೊಳ್ಳದಿರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ವಯಸ್ಕರು ಮತ್ತು ಅರ್ಹ ಫಲಾನುಭವಿಗಳನ್ನು ಲಸಿಕಾ ಕೇಂದ್ರಗಳತ್ತ ಸೆಳೆಯಲು ಯೋಜನೆಗಳನ್ನು ರೂಪಿಸುತ್ತಿದೆ. ಮಕ್ಕಳಿಕೆ ಲಸಿಕೆ ನೀಡುವುದರ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮಕ್ಕಳು ಲಸಿಕೆ ಪಡೆದುಕೊಳ್ಳುವುದೇ ಇರುವುದನ್ನು ತಪ್ಪಿಸಲು 15-18 ವರ್ಷದ ಮಕ್ಕಳಿಗೆ ಶಾಲೆ ಹಾಗೂ ಕಾಲೇಜುಗಳಲ್ಲಿಯೇ ಲಸಿಕೆ ನೀಡುವ ಕೆಲಸವನ್ನು ಮಾಡಲಾಗುತ್ತಿದೆ. ಈ ಕುರಿತು ಶಿಕ್ಷಣ ಇಲಾಖೆ, …

Read More »

ಗೋವಾದಲ್ಲಿ ಮೊದಲ ಓಮಿಕ್ರಾನ್ ಪತ್ತೆ

ಪಣಜಿ: ಯುಕೆಯಿಂದ ಹಿಂದಿರುಗಿದ 8 ವರ್ಷದ ಬಾಲಕನಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಪತ್ತೆಯಾಗಿದೆ. ಈ ಮೂಲಕ ಗೋವಾದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ವರದಿಯಾಗಿದೆ. ಡಿಸೆಂಬರ್ 17 ರಂದು ಇಂಗ್ಲೆಂಡ್‍ನಿಂದ ಆಗಮಿಸಿದ 8 ವರ್ಷದ ಬಾಲಕನಲ್ಲಿ ಓಮಿಕ್ರಾನ್ ಪತ್ತೆಯಾಗಿದ್ದು, ಇದು ರಾಜ್ಯದಲ್ಲಿ ದಾಖಲಾದ ಮೊದಲ ಓಮಿಕ್ರಾನ್ ಪ್ರಕರಣ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸೋಮವಾರ ತಿಳಿಸಿದ್ದಾರೆ. ಬಾಲಕನ ಗಂಟಲ ದ್ರವ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿಗೆ …

Read More »

ಸದೃಢ ಸಮಾಜ ನಿರ್ಮಾಣ ಸಂಕಲ್ಪದ ಯಾತ್ರೆ-

ಹುಬ್ಬಳ್ಳಿ: ಅಖಿಲ ಭಾರತ ವೀರಶೈವ ಮಹಾಸಭಾ ಧಾರವಾಡ ಜಿಲ್ಲೆ ಮುಖ್ಯ ಘಟಕ ಕೈಗಾರಿಕಾ ಘಟಕ ಮಹಿಳಾ ಘಟಕ ಯುವ ಘಟಕ ಆಶ್ರಯದಲ್ಲಿ ಜಮ್ಮು-ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಸೈಕ್ಲಿಂಗ್ ಧೂಮಪಾನ ಮಧ್ಯಪಾನ ದುಶ್ಚಟಗಳಿಂದ ಯುವಕರು ದೂರವಿದ್ದು ಸದೃಢ ಸಮಾಜ ನಿರ್ಮಾಣ ಮಾಡಲು ಜಾಗೃತಿಗಾಗಿ ಯಾತ್ರೆ ಹೊರಟ ಪೊಲೀಸ್ ಅಧಿಕಾರಿಗಳಾದ ಮುರುಗೇಶ್ ಚನ್ನನ್ನವರ್, ಪ್ರಶಾಂತ್ ಹಿಪ್ಪರಗಿ, ಸದಾನಂದ ಅಮರಾಪುರ ,ಹುಬ್ಬಳ್ಳಿಗೆ ಆಗಮಿಸಿದಾಗ ಚಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ ನಲ್ಲಿ ಸ್ವಾಗತಿಸಿ ,ಸನ್ಮಾನಿಸಿ, ಗೌರವಿಸಲಾಯಿತು. …

Read More »

ಅರಮನೆ ನಗರಿ ಜನರಿಗೆ ಓಮಿಕ್ರಾನ್‌ ಆತಂಕ-9 ವರ್ಷದ ವಿದ್ಯಾರ್ಥಿನಿಗೆ ಸೋಂಕು

ಮೈಸೂರು: ವಿಶ್ವದಲ್ಲಿ ಮೂರನೇ ಅಲೆಯ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್‍ನ ಹೊಸ ರೂಪಾಂತರಿ ಓಮಿಕ್ರಾನ್ ಮೈಸೂರಿಗೂ ಕಾಲಿಟ್ಟಿದ್ದು, ವಿದೇಶದಿಂದ ಬಂದಿದ್ದ ಬಾಲಕಿಯಲ್ಲಿ ಪತ್ತೆಯಾಗಿದೆ. ಕೊರೊನಾದಿಂದ ತತ್ತರಿಸಿದ್ದ ಮೈಸೂರು ಈಗತಾನೇ ಚೇತರಿಸಿಕೊಳ್ಳುತ್ತಿದೆ. ಆದರೆ ಈಗ ಅರಮನೆ ನಗರಿಯಲ್ಲಿ ಓಮಿಕ್ರಾನ್ ಆತಂಕ ಶುರುವಾಗಿದೆ. ವಿದೇಶದಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಓಮಿಕ್ರಾನ್ ದೃಢವಾಗಿತ್ತು. ಬಾಲಕಿಯು ಸ್ವಿಜರ್ಲೆಂಡ್‍ನಿಂದ ಮೈಸೂರಿಗೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಬಾಲಕಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ ಪಾಸಿಟಿವ್ ಬಂದಿದ್ದರಿಂದ, ಮಾದರಿಯನ್ನು ಜೀನೋಮ್ …

Read More »

ರುಡ್‌ಸೆಟ್ ಸಂಸ್ಥೆಯಿಂದ ಸ್ವ-ಉದ್ಯೋಗ ಮಾಹಿತಿ ಕಾರ್ಯಕ್ರಮ

ಕಲಘಟಗಿ: ವೇದಾಂತ ಫೌಂಡೇಶನ್ ನ ನಂದಘರ್ ಅಂಗನವಾಡಿ ಕೇಂದ್ರ ಹಾಗೂ ರುಡ್‌ಸೆಟ್ ಸಂಸ್ಥೆಯ ಸಹಯೋಗದೊಂದಿಗೆ ಗ್ರಾಮೀಣ ಯುವಜನತೆಯ ಸಹಕಾರದಿಂದ ಕಲಘಟಗಿಯ ತಾಲೂಕಿನ ಜಿನ್ನೂರು ಗ್ರಾಮದಲ್ಲಿ ಉಚಿತವಾಗಿ ಕೌಶಲ್ಯಾಭಿವೃದ್ದಿಯ ಸ್ವದ್ಯೋಗ ತರಬೇತಿ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರುಡ್ ಸೆಟ್ ಸಂಸ್ಥೆಯ ಸಹಾಯಕರಾದ ನಾಗೇಶ್ ಶಿಂಧೆ ಇವರು ಮಾತನಾಡಿ ನಾಲ್ಕು ವಿಭಾಗಗಳ ತರಬೇತಿಗಳಾದ ಕೃಷಿ,ಸೇವಾ,ಉತ್ಪಾದನಾ,ವ್ಯವಹಾರ ವಿಭಾಗ ಹೀಗೆ ಹೈನುಗಾರಿಕೆ ಮೊಬೈಲ್ ರಿಪೇರಿ,ಸಿದ್ದ ಉಡುಪು ತಯಾರಿಕೆ ಆಹಾರ ಉತ್ಪನ್ನಗಳ ತಯಾರಿಕೆ ಕಂಪ್ಯೂಟರ್ ಡಿಡಿಟಿಪಿ ಕಂಪ್ಯೂಟರ್ …

Read More »

2 ತಿಂಗಳ ಹಿಂದೆಯೇ ಮೃತಪಟ್ಟ ಮಹಿಳೆಗೂ ಕೋವಿಡ್ ವ್ಯಾಕ್ಸಿನ್ – ಪತಿ ಮೊಬೈಲ್‍ಗೆ ಸಂದೇಶ

ಪಟ್ನಾ: ಎರಡು ತಿಂಗಳ ಹಿಂದೆಯೇ ಮೃತಪಟ್ಟ ಮಹಿಳೆ ಹೆಸರಿನಲ್ಲಿ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದಿರುವ ಸಂದೇಶ ಬಂದಿರುವುದು ಅಚ್ಚರಿ ಮೂಡಿಸಿದೆ. ಮೃತ ಮಹಿಳೆಯ ಪತಿ ಬಳಿ ಇದ್ದ ಮೊಬೈಲ್‍ಗೆ ಈ ಸಂದೇಶ ಬಂದಿದೆ. ಲಾಲೊ ದೇವಿ ಅವರ ಪತಿ ರಾಮ್ ಉದ್ಗಾರ್ ಥಾಕೂರ್ ಈ ಕುರಿತು ಪ್ರತಿಕ್ರಿಯಿಸಿ, ನನ್ನ ಪತ್ನಿ ಜ್ವರ, ಅಸ್ವಸ್ಥತೆ ಕಾರಣದಿಂದಾಗಿ ಸೆಪ್ಟೆಂಬರ್ 19ರಂದು ನಿಧನರಾದರು. ಬಿಹಾರ್‍ನ ಯೋಜನೆ ಮತ್ತು ಅಭಿವೃದ್ಧಿ ಇಲಾಖೆಯಿಂದ ನೀಡಲಾಗಿರುವ ಮರಣ ಪ್ರಮಾಣ …

Read More »

ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ

ದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬುಧವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ದತ್ತಾಂಶದ ಪ್ರಕಾರ, ಭಾರತವು 15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ವೈರಸ್ ನ ರೂಪಾಂತರಿ ಒಮಿಕ್ರಾನ್ 213 ಪ್ರಕರಣಗಳನ್ನು ದಾಖಲಿಸಿದೆ, ಇದರಲ್ಲಿ 90 ಜನರು ಚೇತರಿಸಿಕೊಂಡಿದ್ದಾರೆ. ದೆಹಲಿಯಲ್ಲಿ ಒಮೈಕ್ರಾನ್ ರೂಪಾಂತರದ ಗರಿಷ್ಠ 57 ಪ್ರಕರಣಗಳು …

Read More »

You cannot copy content of this page