Breaking News

ಲೈಫ್ ಸ್ಟೈಲ್

ಹೊಸ ವರ್ಷಕ್ಕೆ ನಿರ್ಬಂಧ, ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ-ಕ್ರೀಸ್ಮಸ್‌ ಗಿಲ್ಲ ನಿರ್ಬಂಧ

ಬೆಂಗಳೂರು : 2021ಕ್ಕೆ ಬೈ-ಬೈ ಹೇಳಿ 2022ಕ್ಕೆ ಹಾಯ್‌ ಹೇಳುತ್ತಾ ಅದ್ಧೂರಿಯಾಗಿ ಹೊಸ ವರ್ಷವನ್ನು ವೆಲ್‌ಕಮ್‌ ಮಾಡ್ಕೊಳ್ಳೋಕೆ ಸಾಕಷ್ಟು ಮಂದಿ ತುದಿಗಾಲಲ್ಲಿರುವ ಹೊತ್ತಿನಲ್ಲೇ, ಕೊರೊನಾ ಮತ್ತು ಒಮಿಕ್ರಾನ್‌ ವೈರಸ್‌ ತಡೆಗಟ್ಟುವ ಕಾರಣದಿಂದ ಸರ್ಕಾರ ಅದ್ಧೂರಿ ವರ್ಷಾಚರಣೆಗೆ ಬ್ರೇಕ್‌ ಹಾಕಲು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಜೊತೆಗೆ ಕ್ರೀಸ್ಮಸ್‌ ಹಬ್ಬಕ್ಕೆ ಯಾವುದೇ ನಿರ್ಭಂದ ಹೇರಿಲ್ಲ. ರೆಸ್ಟೋರೆಂಟ್, ಕ್ಲಬ್‌ಗಳಿಗೆ ಶೇಕಡಾ 50ರಷ್ಟು ಜನರಿಗೆ ಪ್ರವೇಶಸೀಮಿತ ಪ್ರಮಾಣದಲ್ಲಿ ಮ್ಯೂಸಿಕ್‌, ಡಿ.ಜೆಗೆ ಅವಕಾಶಎಂಜಿ ರಸ್ತೆ, ಬ್ರಿಗೇಡ್ ರಸ್ತೆ …

Read More »

ಡೆಲ್ಟಾಗಿಂತ ವ್ಯಾಪಕವಾಗಿ ಹರಡುತ್ತಿದೆ ಒಮಿಕ್ರಾನ್;‌ ಈ ಕುರಿತು ಸಾಕ್ಷ್ಯ ಲಭ್ಯ ಎಂದ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

ಒಮಿಕ್ರಾನ್ ರೂಪಾಂತರಿ ಕೋವಿಡ್ ಸೋಂಕು ಈಗ ವ್ಯಾಪಕವಾಗಿ ಹರಡುತ್ತಿದ್ದು, ಲಸಿಕೆ ಪಡೆದ ಹಾಗೂ ಸೋಂಕಿನಿಂದ ಚೇತರಿಸಿಕೊಂಡ ಮಂದಿಯಲ್ಲೂ ಸಹ ಕಂಡು ಬರುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ತಿಳಿಸಿದ್ದಾರೆ. “ಡೆಲ್ಟಾ ರೂಪಾಂತರಿಗಿಂತಲೂ ಒಮಿಕ್ರಾನ್‌ ವ್ಯಾಪಕವಾಗಿ ಹರಡುತ್ತಿದೆ ಎಂಬ ಕುರಿತು ಈಗ ಸಾಕಷ್ಟು ಸಾಕ್ಷ್ಯಗಳು ಸಿಕ್ಕಿವೆ,” ಎಂದ ಟೆಡ್ರೋಸ್, “ಮತ್ತು ಲಸಿಕೆ ಪಡೆದ ಮತ್ತು ಚೇತರಿಸಿಕೊಂಡ ಮಂದಿಗೂ ಈ ಸೋಂಕು ತಗುಲುವ ಸಾಧ್ಯತೆ ಇದೆ,” ಎಂದಿದ್ದಾರೆ.

Read More »
Featured Video Play Icon

ಜಿಲ್ಲೆಯಲ್ಲೂ ಪತ್ತೆಯಾದ ಓಮಿಕ್ರಾನ-ಯಾರೂ ಭಯಪಡುವ ಅಗತ್ಯವಿಲ್ಲ-ಜಿಲ್ಲಾಧಿಕಾರಿ ನಿತೇಶ್ ಪಾಟೀಲ್

Read More »

ಧಾರವಾದದಲ್ಲಿ ಒಂದು ಓಮಿಕ್ರಾನ ಪತ್ತೆ

ಧಾರವಾಡ: ಜಿಲ್ಲೆಯಲ್ಲಿ ಒಂದು ಒಮಿಕ್ರಾನ್ ಕೇಸ್ ಪತ್ತೆ ಆಗಿದೆ.54 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ತಗುಲಿದೆ. ಟ್ವೀಟ್ ಮೂಲಕ ಆರೋಗ್ಯ ಸಚಿವ ಸುಧಾಕರ್ ಮಾಹಿತಿ ಕೊಟ್ಟಿದ್ದಾರೆ. ರಾಜ್ಯದಲ್ಲಿ ಒಮಿಕ್ರಾನ್ ಕೇಸ್ 19 ಕ್ಕೆ ಏರಿದಂತಾಗಿದೆ ಎಂದು ಟ್ವಿಟರ್ ನಲ್ಲಿಯೇ ಈ ಎಲ್ಲ ವಿಷಯ ಹಂಚಿಕೊಂಡಿದ್ದಾರೆ.

Read More »

ಇಡೀ ದೇಶಕ್ಕೆ ಮತ್ತೆ ಶುರುವಾಗಿದೆ ”ಓಮಿಕ್ರಾನ್” ಟೆನ್ಷನ್..! ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ಏರಿಕೆ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ 4 ಹೊಸ ಒಮಿಕ್ರಾನ್​ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೆಹಲಿಯಲ್ಲಿ ಒಮಿಕ್ರಾನ್​ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಹಾಗೇ, ರಾಜಸ್ಥಾನದಲ್ಲಿ ಕೂಡ 4 ಕೇಸ್​ ದಾಖಲಾಗಿದ್ದು, ಅಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 13ಕ್ಕೆ ಏರಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ತಲುಪಿದೆ. ನಿನ್ನೆ ಗುಜರಾತ್​​ನಲ್ಲಿ ವ್ಯಕ್ತಿಯೊಬ್ಬರಲ್ಲಿ ಒಮಿಕ್ರಾನ್​ ದೃಢಪಟ್ಟಿತ್ತು. ಅವರು ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದವರಾಗಿದ್ದು, ಕೊವಿಡ್​ 19 ಪಾಸಿಟಿವ್​ ಬಂದಿತ್ತು. ಮಾದರಿಯನ್ನು …

Read More »

ಇಂಗ್ಲೆಂಡ್​​ನಿಂದ ಬಂದ ಇಬ್ಬರು ಮಕ್ಕಳು ಸೇರಿ ಐವರಿಗೆ ಕೊರೊನಾ

ದೇವನಹಳ್ಳಿ : ವಿದೇಶದಿಂದ ಬರುತ್ತಿರುವ ಪ್ರಯಾಣಿಕರಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇಂದು ಮುಂಜಾನೆ ಇಂಗ್ಲೆಂಡ್​​ನಿಂದ ಬಂದ 5 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇಂದು ಮುಂಜಾನೆ ಯುಕೆಯಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ಆಗಮಿಸಿದ್ದು, ಪ್ರಯಾಣಿಕರನ್ನ ಆರ್ ಟಿ ಪಿಸಿಆರ್ ಟೆಸ್ಟ್​​​ಗೆ ಒಳಪಡಿಸಿದ್ದಾಗ 5 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 18 ವರ್ಷದ ಇಬ್ಬರಿಗೆ, 6 ವರ್ಷದ ಇಬ್ಬರು ಮಕ್ಕಳಿಗೆ ಮತ್ತು 30 ವರ್ಷದ …

Read More »

ಒಮಿಕ್ರಾನ್ ಆತಂಕ; ಮುಂಬೈನಲ್ಲಿ 48 ಗಂಟೆಗಳ ಕಾಲ 144 ನಿಷೇಧಾಜ್ಞೆ ಜಾರಿ

ಮುಂಬೈ: ಕರೋನವೈರಸ್‌ನ ಒಮಿಕ್ರಾನ್ ರೂಪಾಂತರ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಮುಂಬೈನಲ್ಲಿ 48 ಗಂಟೆಗಳ ಕಾಲ ನಿಷೇಧಾಜ್ಞೆ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ. ವೀಕೆಂಡ್​ನಲ್ಲಿ ದೊಡ್ಡ ಸಮಾರಂಭಗಳನ್ನು ಆಯೋಜಿಸುವುದನ್ನೂ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಮುಂಬೈ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಜನರು ಮತ್ತು ವಾಹನಗಳನ್ನು ಒಳಗೊಂಡ ರ್ಯಾಲಿಗಳು ಮತ್ತು ಪ್ರತಿಭಟನಾ ಮೆರವಣಿಗೆಗಳನ್ನು ನಿರ್ಬಂಧಿಸಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ …

Read More »

ರಾಜ್ಯದಲ್ಲಿ ಸದ್ಯಕ್ಕಿಲ್ಲ ನೈಟ್‌ ಕರ್ಪ್ಯೂ-ವಾರದ ಬಳಿಕ ನಿರ್ಧಾರ-ಸಿಎಂ ಬೊಮ್ಮಾಯಿ

ಬೆಂಗಳೂರು: ಕೋವಿಡ್​ ರೂಪಾಂತರಿ ತಳಿ ಒಮಿಕ್ರಾನ್​ ಕುರಿತು ಯಾರೂ ಕೂಡಾ ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸದ್ಯಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡುವುದಿಲ್ಲ. ಒಂದು ವಾರದ ಬಳಿಕ ಈ ಕುರಿತು ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬಸವರಾಜ​ ಬೊಮ್ಮಾಯಿ ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ, ನೈಟ್ ಕರ್ಫ್ಯೂ ಸದ್ಯಕ್ಕಿಲ್ಲ, ಒಂದು ವಾರದ ಬಳಿಕ ನಿರ್ಧಾರ ಮಾಡಲಾಗುವುದು. ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ …

Read More »

ಸಾಂಕ್ರಾಮಿಕ ರೋಗದ ಬಗ್ಗೆ ಪ್ರಬಂಧ ಸ್ಪರ್ಧೆ ವೈದ್ಯರಿಂದ ಜಾಗೃತಿ ಕಾರ್ಯಕ್ರಮ

ಕುಂದಗೋಳ : ನಿತ್ಯ ಜಾಗೃತವಾದ ಜೀವನ ಶೈಲಿ ಆರೋಗ್ಯದ ಪ್ರಯೋಜನ ಹಾಗೂ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಸೂಕ್ತ ಜ್ಞಾನ ಒದಗಿಸುವ ನಿಟ್ಟಿನಲ್ಲಿ ಕುಂದಗೋಳ ತಾಲೂಕ ಆಸ್ಪತ್ರೆ ವೈದ್ಯಾಧಿಕಾರಿಗಳು ಹೊಸ ಪ್ರಯೋಗ ಮಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದ್ದಾರೆ. ಹೌದು ! ತಾಲೂಕು ಆಸ್ಪತ್ರೆ ವೈದ್ಯರು ಶಿವಾನಂದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಮಾಣ ಪತ್ರ ನೀಡಿ ಬಳಿಕ ಸಾಂಕ್ರಾಮಿಕ …

Read More »

ಕರ್ನಾಟಕದ ಮೂಲಕ ಭಾರತಕ್ಕೆ ಓಮಿಕ್ರಾನ ಎಂಟ್ರಿ

ಬೆಂಗಳೂರು: ರಾಜ್ಯದ ಇಬ್ಬರಲ್ಲಿ ಓಮಿಕ್ರಾನ ವೈರಸ್ ಪತ್ತೆಯಾಗಿದ್ದು, ಬೆಂಗಳೂರಿನ ಇಬ್ಬರಲ್ಲಿ ಓಮಿಕ್ರಾನ್ ಪತ್ತೆಯಾಗಿದೆ.ದೇಶದಲ್ಲೇ ಮೊದಲ ಎರಡು ಕೇಸ್ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು.ರಾಜ್ಯದ ಮೂಲಕ ಭಾರತಕ್ಕೆ ಓಮಿಕ್ರಾನ ಪತ್ತೆಯಾಗಿದೆ.ಡೆಲ್ಟಾ ವೈರಸ್ ಗಿಂತ ಅತಿ ವೇಗವಾಗಿ ಈ ವೈರಸ್ ಹರಡುತ್ತದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.ಸಿಲಿಕಾನ್ ಸಿಟಿ ಬೆಂಗಳೂರಿಗೆ ಓಮಿಕ್ರಾನ ಡಬಲ್ ಶಾಕ್ ನೀಡಿದೆ.ಬೆಂಗಳೂರಿನ 64 ಹಾಗೂ 46 ವರ್ಷದ ವೃದ್ದರಲ್ಲಿ ಓಮಿಕ್ರನಾ ಪತ್ತೆಯಾಗಿದೆ. ಒಟ್ಟಿನಲ್ಲಿ ಸಿಲಿಕಾನ್ ಸಿಟಿ ಮೂಲಕ ಓಮಿಕ್ರಾಮಮನ …

Read More »

You cannot copy content of this page