Breaking News

ಲೈಫ್ ಸ್ಟೈಲ್

ವಿದ್ಯಾರ್ಥಿಗೆ ಸೋಂಕು-ಶಾಲಾ ಮಕ್ಕಳಿಗೆ ಕೋವಿಡ್‌ ಟೆಸ್ಟ್‌ ಆರಂಭ

ಹುಬ್ಬಳ್ಳಿ : ಕೋವಿಡ್ ಸೋಂಕು ಕಡಿಮೆಯಾಯ್ತು, ಅನ್ನುವಷ್ಟರಲ್ಲಿ ಎಸ್.ಡಿ. ಎಂ ಕಾಲೇಜಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಬೆನ್ನಲ್ಲೇ ನಗರದ ಆದರ್ಶ ನಗರದ ರೋಟರಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವನಿಗೆ ದೃಢಪಟ್ಟಿದ್ದು ಮತ್ತಷ್ಟು ಆತಂಕ ಮನೆ ಮಾಡಿದ ಹಿನ್ನಲೆಯಲ್ಲಿ ಶಾಲೆಯಲ್ಲಿ ಕೋವಿಡ್ ಟೆಸ್ಟ್ ತ್ವರಿತವಾಗಿ ನಡೆಸಲಾಗುತ್ತಿದೆ. ನಿನ್ನೆ ಮಧ್ಯಾಹ್ನದ ವೇಳೆಗೆ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿತ್ತು. ಅಲ್ಲದೇ ಸೋಮವಾರದವರೆಗೆ ರಜ ಘೋಷಣೆ ಸಹ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಭೀತಿ ಮತ್ತಷ್ಟು …

Read More »

ಓಮಿಕ್ರಾನ್‌ ಭೀತಿ-30,000 ಬೆಡ್ ಸಜ್ಜು ಮಾಡಿದ ದೆಹಲಿ ಸರ್ಕಾರ

ನವದೆಹಲಿ: ಕೊರೊನಾ ವೈರಸ್‍ನ ರೂಪಾಂತರ ತಳಿ ಓಮಿಕ್ರಾನ್ ತಳಿ ಹರಡುವ ಭೀತಿಯಿದ್ದು, ಅದನ್ನು ಎದುರಿಸಲು ಸರ್ಕಾರ ಸಜ್ಜಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಕೇಜ್ರಿವಾಲ್ ಅವರು ಸರ್ಕಾರದ ವಿವಿಧ ಇಲಾಖೆಗಳ ಜೊತೆ ಸಿದ್ಧತೆ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಆಮ್ಲಜನಕ ಸೌಲಭ್ಯವಿರುವ 30,000 ಬೆಡ್‌ಗಳು ಹಾಗೂ ಆಮ್ಲಜನಕ ಪೂರೈಕೆ ಹಾಗೂ ಸಂಗ್ರಹ ವ್ಯವಸ್ಥೆಯನ್ನು ಒಂದೆರಡು ವಾರಗಳಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗುವುದು. ಕೊರೊನಾ ರೂಪಾಂತರಿ ವೈರಸ್ …

Read More »

ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಕ್ಕೆ ನಿರ್ಬಂಧ ಹೇರುವುದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಹುಬ್ಬಳ್ಳಿ: ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಜಿನ್ಯೂಂ ಸಿಕ್ವೇನ್ಸ್ ಟೆಸ್ಟ್ ಮಾಡಲು ಸ್ಯಾಂಪಲ್ ಕಳುಹಿಸಿ ಕೊಡಲಾಗಿತ್ತು. ಟೆಸ್ಟ್ ವರದಿ ಕಳೆದ ರಾತ್ರಿ ಬಂದಿದೆ. ಯಾರಿಗೂ ಪಾಸಿಟಿವ್ ಬಂದಿಲ್ಲ. ಜನರು ಆತಂಕ ಪಡಬಾರದು.ಫಸ್ಟ್ ಡೋಸ್ 90% ಲಸಿಕಾಕರಣ ಆಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮನೆ ಮನೆಗೆ ಹೋಗಿ ಲಸಿಕೆ ವಿತರಣೆ ಮಾಡುತ್ತಿದ್ದೇವೆ. …

Read More »

ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಿಗೆ ಕೊರೊನಾ ಸೋಂಕು ದೃಢ

ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ದೇಶದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್ ಮಾಡಲಾಗಿದ್ದು, ಮತ್ತೊಬ್ಬರನ್ನು ಖಾಸಗಿ ಹೋಟೆಲ್​​​ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇವರಲ್ಲಿ ಹೊಸ ತಳಿಯ ವೈರಸ್ …

Read More »

ಕಿಮ್ಸ್ ಆಸ್ಪತ್ರೆಯಲ್ಲಿ ಸಿಗುತ್ತಿಲ್ಲ ಹೃದಯ ರೋಗಕ್ಕೆ ಸರಿಯಾದ ಚಿಕಿತ್ಸೆ: ತಜ್ಞ ವೈದ್ಯರಿಲ್ಲ, ಅಗತ್ಯ ಸಲಕರಣೆ ಇಲ್ಲವೇ ಇಲ್ಲ…!

ಹುಬ್ಬಳ್ಳಿ : ಅದು ಇಡೀ ಉತ್ತರ ಕರ್ನಾಟಕ ಭಾಗದ ಬಡರೋಗಿಗಳಿಗೆ ಸಂಜೀವಿನಿ ಎಂದೇ ಹೆಸರು ವಾಸಿಯಾಗಿರುವ ಆಸ್ಪತ್ರೆ.‌ ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಆ ಆಸ್ಪತ್ರೆಯಲ್ಲಿ ಹೃದ್ರೋಗ ಶಸ್ತ್ರ ಚಿಕಿತ್ಸೆಗೆ ಬೇಕಾದ ನುರಿತ ತಜ್ಞರೂ ಇಲ್ಲ, ಅಗತ್ಯ ಸಲಕರಣೆಗಳೂ ಇಲ್ಲ. ಹೌದು.. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆಯ ವ್ಯವಸ್ಥೆಯಿಲ್ಲದೇ ಹೃದಯ ರೋಗಿಗಳು ಪರದಾಡುವಂತಾಗಿದೆ. ಉತ್ತರ ಕರ್ನಾಟಕದ ಐದಾರೂ ಜಿಲ್ಲೆಯ ರೋಗಿಗಳಿಗೆ ಆಧಾರವಾದ ಕಿಮ್ಸ್ ಆಸ್ಪತ್ರೆಯಲ್ಲಿ ಪ್ರತಿ …

Read More »

ಮೈಸೂರಿನ 48 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ತಗುಲಿದ ಕೊರೊನಾ ಸೋಂಕು!

ಮೈಸೂರು: ಬೆಂಗಳೂರು ಹಾಗೂ ಧಾರವಾಡದ ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್​​ ದೃಢಪಟ್ಟ ಬೆನ್ನಲ್ಲೇ ಇದೀಗ ಮೈಸೂರಿನ ಕಾಲೇಜು ವಿದ್ಯಾರ್ಥಿಗಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಒಂದು ವಾರದ ಅವಧಿಯಲ್ಲಿ ಮೈಸೂರಿನ ಎರಡು ಖಾಸಗಿ ಕಾಲೇಜುಗಳ 48 ನರ್ಸಿಂಗ್‌ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಜಿಲ್ಲಾಡಳಿತದ ಅಧಿಕಾರಿಗಳು ನೀಡಿರುವ ಮಾಹಿತಿಗಳ ಪ್ರಕಾರ, ಎರಡು ಖಾಸಗಿ ನರ್ಸಿಂಗ್ ಕಾಲೇಜುಗಳ 48 ವಿದ್ಯಾರ್ಥಿಗಳಲ್ಲಿ ಕೋವಿಡ್ ತಗುಲಿರುವುದು​​ ದೃಢಪಟ್ಟಿದೆ. ಈ ಎಲ್ಲ ವಿದ್ಯಾರ್ಥಿಗಳು ಎರಡು ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ನರ್ಸಿಂಗ್‌ …

Read More »

ಯುವಕನ ಗುದನಾಳದಲ್ಲಿ ಸಿಕ್ಕಿಹಾಕಿಕೊಂಡಿದ್ದ ಟಾಯ್ಲೆಟ್ ಜೆಟ್ ಸ್ಪ್ರೇ; ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದ ಕಿಮ್ಸ್ ವೈದ್ಯರು

ಹುಬ್ಬಳ್ಳಿ(ಧಾರವಾಡ): ಗುದನಾಳದಲ್ಲಿ ಟಾಯ್ಲೆಟ್ ಜೆಟ್ ಸ್ಪ್ರೇ ಸಿಕ್ಕಿಹಾಕಿಕೊಂಡಿದ್ದ 32 ವರ್ಷದ ಯುವಕನೊಬ್ಬನಿಗೆ ಕಿಮ್ಸ್ ಆಸ್ಪತ್ರೆ ವೈದ್ಯರು ಸುಮಾರು 3 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ, ಟಾಯ್ಲೆಟ್ ಜೆಟ್ ಸ್ಪ್ರೇಯನ್ನು ಹೊರ ತೆಗೆದಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಯುವಕ ಬೈರಿದೇವರಕೊಪ್ಪ ಪ್ರದೇಶದ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ. ನವೆಂಬರ್ 20ರ ಶನಿವಾರ ಬೆಳಗ್ಗೆ ತೀವ್ರ ಅಸ್ವಸ್ಥಗೊಂಡಿದ್ದ ಸ್ಥಿತಿಯಲ್ಲಿದ್ದ ಈತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು …

Read More »

ಆರೋಗ್ಯ ಸಲಹೆ: ನೀವು ಸಕ್ಕರೆ ಪ್ರಿಯರೇ?.. ಅತಿ ಬಳಕೆಗೂ ಮೊದಲು ಕೊಂಚ ಯೋಚಿಸೋದು ಒಳ್ಳೇದು..

ಬೆಂಗಳೂರು : ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸಕ್ಕರೆ ಅತಿ ಕೆಟ್ಟ ಅಭ್ಯಾಸ ಎನ್ನುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಹೇಳುತ್ತದೆ. ಸಕ್ಕರೆ ಸೇವನೆ ಒಂದು ರೀತಿಯ ಸ್ಲೋ ಪಾಯಿಸನ್ (ನಿಧಾನಗತಿಯ ವಿಷ). ಇದರ ಸೇವನೆಯಿಂದ ಅತಿ ಹೆಚ್ಚು ಆರೋಗ್ಯ ಸಮಸ್ಯೆ ನಮ್ಮನ್ನು ಕಾಡುತ್ತದೆ. ಎಲ್ಲಾ ಬಗೆಯ ಆರೋಗ್ಯ ಸಮಸ್ಯೆಗೆ ಸಕ್ಕರೆಯೇ ಮುಖ್ಯ ಕಾರಣ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಹಾಗಿದ್ದರೆ, ಸಕ್ಕರೆ ಸೇವನೆ ಮಾಡಬಾರದೇ?. ಖಂಡಿತ ಮಾಡಬಹುದು. ಎಷ್ಟು ಪ್ರಮಾಣದಲ್ಲಿ ಮಾಡಬೇಕು, ಯಾವ …

Read More »

ಅಗತ್ಯ ವೈದ್ಯಕೀಯ ಉಪಕರಣ ಹಸ್ತಾಂತರ : ಬಡವರ ಸಂಜೀವಿನಿ ಹುಬ್ಬಳ್ಳಿ ಕಿಮ್ಸ್ ಮತ್ತಷ್ಟು ಸುಸಜ್ಜಿತ

ವೈದ್ಯಕೀಯ ಉಪಕರಣಗಳು ಹುಬ್ಳಳ್ಳಿ: ತುರ್ತು ಆರೋಗ್ಯ ಸೇವೆಗಳ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಿಮ್ಸ್ ಆಸ್ಪತ್ರೆಯನ್ನು ವಿಶ್ವ ದರ್ಜೆಯ ಅರಿವಳಿಕೆ ಸಾಧನ ಮತ್ತು ಪಲ್ಸ್ ಆಕ್ಸಿಮೀಟರ್ ಗಳೊಂದಿಗೆ ಸುಸಜ್ಜಿತಗೊಳಿಸಿರುವುದು ತುಂಬ ಸಂತೋಷ ತಂದಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಎಲ್ ಟಿಐ ಸಂಸ್ಥೆ, ಕಿಮ್ಸ್ ಮತ್ತು ದೇಶಪಾಂಡೆ ಪ್ರತಿಷ್ಠಾನದ ಸಹಯೋಗದೊಂದಿಗೆ ಇದು ಸಾಧ್ಯವಾಗಿದೆ.ಕಿಮ್ಸ್ ಕೇವಲ ಕರ್ನಾಟಕದ‌ ಮಾತ್ರವಲ್ಲ, ದೇಶದಲ್ಲೇ ಒಂದು ಅತ್ಯುತ್ತಮವಾದ‌ …

Read More »
Featured Video Play Icon

ಅಮೃತ ದೇಸಾಯಿ ಗೆಳೆಯರ ಬಳಗದ ವತಿಯಿಂದ ನೇತ್ರದಾನದ ನೋಂದಣಿ ಹಾಗೂ ರಕ್ತ ದಾನ ಶಿಬಿರ

Read More »

You cannot copy content of this page