Breaking News

ಗದಗ

ಕಾಂಗ್ರೆಸ್‌ ನ ಮಾಜಿ ಶಾಸಕ ಶಂಕರಗೌಡ ಎನ್‌ ಪಾಟೀಲ್‌ ನಿಧನ

ಗದಗ:  ಕಾಂಗ್ರೆಸ್‌ ನ ಮಾಜಿ ಶಾಸಕ ಶಂಕರಗೌಡ ಎನ್‌ ಪಾಟೀಲ್‌ ಅವರು ಅನಾರೋಗ್ಯದಿಂದ ಬಳಲುತ್ತಿದ್ದು,ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಮ್ಮ 81 ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದ ಇವರು ಗುರುವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಪಾಟೀಲ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಇದರ ಕಾರಣ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 1989-1994ರ ಅವಧಿಯಲ್ಲಿ ಶಂಕರಗೌಡ ಅವರು ಕಾಂಗ್ರೆಸ್‌ ನಿಂದ …

Read More »

ಹಸುಗೂಸನ್ನು
ರಟ್ಟಿನ ಡಬ್ಬದಲ್ಲಿ ಮುಚ್ಚಿಟ್ಟ ಪಾಪಿಗಳು : ಪೋಲಿಸ್ ರಿಂದ ರಕ್ಷಣೆ

ಗದಗ : ನಗರದ ಎಪಿಎಂಸಿ ಆವರಣದ ನಿರ್ಜನ ಪ್ರದೇಶದಲ್ಲಿ ರಟ್ಟಿನ ಡಬ್ಬದಲ್ಲಿ ಮೂರು ದಿನದ ಹಸುಗೂಸನ್ನು ಮುಚ್ಚಿಡಲಾಗಿದೆ. ಬೇವಿನ ಸೊಪ್ಪು, ಕೊಂಬೆಗಳನ್ನು ಅಡಿಯಲ್ಲಿ ಸೇರಿಸಿ ರಟ್ಟಿನ ಡಬ್ಬಿಯಲ್ಲಿ ಮಗುವನ್ನು ಇಟ್ಟಿದ್ದರು. ಮಗು ಅಳುವ ಸದ್ದನ್ನು ಕೇಳಿಸಿಕೊಂಡು ಆಕಾಶ್ ಎಂಬ ವ್ಯಕ್ತಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾನೆ. ಸ್ಥಳಕ್ಕೆ ಕಾನ್ಸ್ ಸ್ಟೇಬಲ್ ಗಳಾದ ಪರುಶುರಾಮ ದೊಡ್ಡಮನಿ, ಅಶೋಕ್ ಬಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಗದಗನ ಸಣ್ಣಮಕ್ಕಳ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಮಗುವಿಗೆ …

Read More »

ಅನಾರೋಗ್ಯದಿಂದ ಬೇಸತ್ತು ಹೆಡ್​ಕಾನ್ಸ್​ಟೇಬಲ್  ​ಆತ್ಮಹತ್ಯೆಗೆ ಶರಣು

ಗದಗ: ಅನಾರೋಗ್ಯದಿಂದ ಬೇಸತ್ತು ಹೆಡ್​ಕಾನ್ಸ್​ಟೇಬಲ್  ​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗನ ತೇಜಾ ನಗರದಲ್ಲಿ ನಡೆದಿದೆ. ಅನಿಲ್ ಸಜ್ಜನರ್(48) ಮೃತ ಹೆಡ್​ಕಾನ್ಸ್​ಟೇಬಲ್​. ಅನಿಲ್​ ಸಜ್ಜನರ್ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಹೆಡ್​ಕಾನ್ಸ್​ಟೇಬಲ್​ ಆಗಿದ್ದರು. ಅನಿಲ್​ ಸಜ್ಜನರ್ 2 ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಇಂದು (ನ. 25) ಅನಿಲ್​ ಸಜ್ಜನರ್ ಎಳನೀರು ತರುವಂತೆ ಪತ್ನಿಯನ್ನು ಹೊರಗೆ ಕಳುಹಿಸಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣಾ …

Read More »

ಗಣೇಶ ವಿಸರ್ಜನೆ ವೇಳೆ ಚಾಕು ಇರಿತ : ಯುವಕ ಸಾವು

ಗದಗ: ಗಣೇಶ ವಿಸರ್ಜನೆ ವೇಳೆ ಚಾಕು ಇರಿತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಗದಗದ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಸುದೀಪ್ ಮುಂಡೆವಾಡಿ(22) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಸ್ನೇಹಿತರೇ ಹಲ್ಲೆ ಮಾಡಿ ಚಾಕು ಇರಿದು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ತೀವ್ರ ರಕ್ತಸ್ರಾವದಿಂದ ಸುದೀಪ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗದಗದಲ್ಲಿ ಚಾಕು ಇರಿತ ಪ್ರಕರಣಕ್ಕೆ …

Read More »

ಕಾಂಗ್ರೆಸ್‌ನ ಪ್ರತಿ ಕಾರ್ಯಕರ್ತನೂ ಅವರ ನಿಲುವನ್ನು ತೀಕ್ಷ್ಣವಾಗಿ ವಿರೋಧಿಸುತ್ತಾನೆ : ಎಚ್‌.ಕೆ.ಪಾಟೀಲ

ಗದಗ: ‘ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್‌ ದೇಶವ್ಯಾಪಿ ಸಕ್ರಿಯ ಹೋರಾಟ ಪ್ರಾರಂಭಿಸಿರುವ ಸಂದರ್ಭದಲ್ಲಿ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್‌ ತ್ಯಜಿಸುವ ನಿರ್ಣಯ ಕೈಗೊಂಡಿರುವುದು ಕೋಮುವಾದಿಗೆ ಬಲ ತುಂಬುವ ಪ್ರಯತ್ನವೇ ಹೊರತು ಬೇರೆನೂ ಅಲ್ಲ.ಕಾಂಗ್ರೆಸ್‌ನ ಪ್ರತಿ ಕಾರ್ಯಕರ್ತನೂ ಅವರ ನಿಲುವನ್ನು ತೀಕ್ಷ್ಣವಾಗಿ ವಿರೋಧಿಸುತ್ತಾನೆ’ ಎಂದು ಶಾಸಕ ಎಚ್‌.ಕೆ.ಪಾಟೀಲ ಹೇಳಿದರು. ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಪಕ್ಷ ಸಕ್ರಿಯವಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಸಂದರ್ಭದಲ್ಲಿ ಆಜಾದ್‌ ಜನದ್ರೋಹಿ ನಿರ್ಣಯ ಕೈಗೊಂಡಿದ್ದಾರೆ. ಆದರೆ, …

Read More »

ಸಾರಿಗೆ ಬಸ್‌ಗೆ ಬೈಕ್ ಡಿಕ್ಕಿ, ಹಿಂಬದಿ ಸವಾರ ಸ್ಥಳದಲ್ಲಿ ಸಾವು

ಗದಗ : ಸಾರಿಗೆ ಸಂಸ್ಥೆಯ ಬಸ್‌ಗೆ ಬೈಕ್ ಗುದ್ದಿದ ಪರಿಣಾಮ ದ್ವಿಚಕ್ರ ವಾಹನದ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗದಗ ನಗರದ ಹೊಂಬಳ ರಸ್ತೆಯಲ್ಲಿ ನಡೆದಿದೆ . ಇನ್ನು ಅಪಘಾತ ತಪ್ಪಿಸಲು ಹೋದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು , 10 ಕ್ಕೂ ಜನರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ . ಅಪಘಾತದಲ್ಲಿ ಮೃತಪಟ್ಟ ಹಿಂಬದಿ ಸವಾರನ ಮೃತ ದೇಹದ ತಲೆ ಭಾಗವು ಛಿದ್ರವಾಗಿರುವುದು ಎಲ್ಲರನ್ನೂ …

Read More »

ರೈಲಿನಡಿ ಸಿಲುಕಿದ ಮಹಿಳೆಯನ್ನು ರಕ್ಷಿಸಿದ ರೈಲ್ವೇ ಪೊಲೀಸ್!

ಗದಗ: ಚಲಿಸುತ್ತಿದ್ದ ರೈಲು ಹತ್ತುವ ವೇಳೆ ಆಯಾ ತಪ್ಪಿ ರೈಲಿನಡಿ ಸಿಲುಕಿ ಪ್ರಾಣಾಪಾಯದಲ್ಲಿದ್ದ ಮಹಿಳೆಯೊಬ್ಬಳನ್ನು ಸ್ಥಳದಲ್ಲಿಯೇ ಇದ್ದ ರೈಲ್ವೇ ಪೊಲೀಸ್ ಸಿಬ್ಬಂದಿಯೊಬ್ಬರು ರಕ್ಷಣೆ ಮಾಡಿ ಸಮಯ ಪ್ರಜ್ಣೆ ಮೆರೆದ ಘಟನೆ ಗದಗ ರೈಲ್ವೆ ಜಂಕ್ಷನ್​ನಲ್ಲಿ ನಡೆದಿದೆ. ನಿನ್ನೆ ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಾಯಿರಾ ಎಂಬ ಮಹಿಳೆ ತಮ್ಮ ಕುಟುಂಬ ಸಮೇತರಾಗಿ ಹುಬ್ಬಳ್ಳಿ ವಿಜಯಪುರ ಪ್ಯಾಸೆಂಜರ್ ರೈಲಿನ ಮೂಲಕ ಗದಗ ಮಾರ್ಗವಾಗಿ ವಿಜಯಪುರ, ಸೊಲ್ಲಾಪುರಕ್ಕೆ ಹೊರಟಿದ್ರು. ಗದದ ರೈಲು ನಿಲ್ದಾಣದಲ್ಲಿ …

Read More »

ಸಿ.ಸಿ.ಪಾಟೀಲ್ ಮನೆ ಮುಂದೆ ದಿಂಗಾಲೇಶ್ವರ ಸ್ವಾಮೀಜಿ ಧರಣಿ..‌. ಯಾಕೆ ಗೊತ್ತಾ?

ಗದಗ : ಮೂರು ಸಾವಿರ ಮಠದ ಪಿಠಾಧಿಪತಿಯಾಗಲು ದಿಂಗಾಲೇಶ್ವರ ಸ್ವಾಮೀಜಿ ರೌಡಿಸಂ ಮಾಡಿದ್ದರು ಎಂಬ ಸಚಿವ ಸಿ.ಸಿ.ಪಾಟೀಲ್ ಆರೋಪವನ್ನು ಸಾಬೀತು ಮಾಡಬೇಕು ಎಂದು ಆಗ್ರಹಿಸಿ ಇಂದು ದಿಂಗಾಲೇಶ್ವರ ಸ್ವಾಮೀಜಿ ಧರಣಿ ನಡೆಸಲಿದ್ದಾರೆ. ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿರುವ ಸಚಿವ ಸಿ.ಸಿ.ಪಾಟೀಲ್ ಮನೆ ಮುಂದೆ ದಿಂಗಾಲೇಶ್ವರ ಸ್ವಾಮೀಜಿ ಧರಣಿ ನಡೆಸಲಿದ್ದಾರೆ. ತಮ್ಮ ವಿರುದ್ಧ ಸಚಿವ ಸಿ.ಸಿ.ಪಾಟೀಲ್ ಮಾಡಿರುವ ಆರೋಪಗಳ ಬಗ್ಗೆ ಏಪ್ರಿಲ್ 27 ರೊಳಗೆ ವಿವರಣೆ ನೀಡಬೇಕು ಎಂದು ದಿಂಗಾಲೇಶ್ವರ ಶ್ರೀಗಳು …

Read More »

ಸರ್ಕಾರದ ವಿರುದ್ಧ ದಿಂಗಾಲೇಶ್ವರ ಶ್ರೀಗಳು ಹೊಸ ಬಾಂಬ್‌ ಸ್ಫೋಟ್

ಗದಗ : ಶಿರಹಟ್ಟಿ ಮಠಕ್ಕೆ ಬಿಡುಗಡೆಯಾದ ಅನುದಾನದ ಹಣವನ್ನ ನುಂಗಿ ಹಾಕಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ದಿಂಗಾಲೇಶ್ವರ ಶ್ರೀಗಳು ಹೊಸ ಬಾಂಬ್‌ ಸಿಡಿಸಿದ್ದಾರೆ. ನಗರದಲ್ಲಿ ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡಿದ ಶ್ರೀಗಳು, ‘ಶಿರಹಟ್ಟಿ ಮಠದ ಹೆಸರಲ್ಲಿ ಬಿಡುಗಡೆಯಾದ 2 ಕೋಟಿ ರೂಪಾಯಿ ಅನುದಾನದಲ್ಲಿ 1.25 ಕೋಟಿ ಹಣ ನುಂಗಿ ಹಾಕಿದ್ದಾರೆ. 10 ವರ್ಷ ಕಳೆದರೂ ಇನ್ನು ಅನುದಾನ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು.

Read More »

ಕಳಸಾ ಬಂಡೂರಿ ಕುರಿತು ಮಹತ್ವದ ಮಾಹಿತಿ ನೀಡಿದ ಸಿಎಂ

ಗದಗ : ಶೀಘ್ರವೇ ಕಳಸಾ ಬಂಡೂರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಳಸಾ ಬಂಡೂರಿ ಕಾಮಗಾರಿ ಸಂಬಂಧ ಈಗಾಗಲೇ ಕೇಂದ್ರ ಸಚಿವರನ್ನು ಭೇಟಿಯಾಗಿ ಅನುಮತಿಗೆ ವಿನಂತಿಸಲಾಗಿದೆ.

Read More »