BigTv News
March 11, 2025
Breaking News, Crime, ಗದಗ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಅಪರಾಧ ಸಾಬೀತು ಆಗಿದೆ. 23 ಜನರಿಗೆ ಇದೇ ಫೆಬ್ರವರಿ 24 ರಂದು ನ್ಯಾಯಾಲಯ ಶಿಕ್ಷೆ ಪ್ರಕಟ ಮಾಡಲಿದೆ.ಅದು 2017 ಫೆಬ್ರವರಿ 5 ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಯಾರು ಊಹೆ ಮಾಡದಂತ ಘಟನೆ ನಡೆದು ಹೋಗಿತ್ತು.ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆ ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಜನ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಲಿದೆ. ಫೆಬ್ರವರಿ 24 ರಂದು …
Read More »
BigTv News
December 24, 2024
Breaking News, ಗದಗ
ರೋಣ: ತಾಲ್ಲೂಕಿನ ವಿವಿಧೆಡೆ ಈಚೆಗೆ ಸುರಿದ ಮಳೆಯಿಂದಾಗಿ ಭೂಮಿಯ ತೇವಾಂಶ ಹೆಚ್ಚಿದ ಕಾರಣ ಇಲ್ಲಿನ ಪ್ರಮುಖ ಬೆಳೆಯಾದ ಕಡಲೆಗೆ ಸಿಡಿರೋಗದ ಬಾಧೆ ಎದುರಾಗಿದೆ. ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆಗೆ ಕಳೆದ ಬಾರಿ ನಿರೀಕ್ಷಿತ ಬೆಲೆ ಸಿಗದ ಕಾರಣ ಈ ಬೆಳೆಗಳ ಬಿತ್ತನೆ ಕ್ಷೇತ್ರದ ಪ್ರಮಾಣ ತಾಲ್ಲೂಕಿನಲ್ಲಿ ಕಡಿಮೆಯಾಗಿದೆ. ಕಳೆದ ಬಾರಿ ಕಡಲೆ ಬೆಳೆಯ ಉತ್ತಮ ಇಳುವರಿ ಸಿಕ್ಕಿದ್ದರಿಂದ ಈ ಬಾರಿಯೂ ಅದೇ ನಿರೀಕ್ಷೆಯೊಂದಿಗೆ ಕಡಲೆ ಬಿತ್ತನೆ ಮಾಡಲಾಗಿತ್ತು. ಆದರೆ, ಈಚೆಗೆ …
Read More »
BigTv News
December 21, 2024
Breaking News, ಗದಗ
ಗದಗ: ರೊಟ್ಟಿ ಮಾಡುವ ಕ್ವಾಮಣಗಿಯಿಂದ ತಲೆಗೆ ಹೊಡೆದು ಮುಖ್ಯ ಶಿಕ್ಷಕಿಯನ್ನು ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ನವನಗರದಲ್ಲಿ ನಡೆದಿದೆ. ಅನ್ನಪೂರ್ಣ ರಾಠೋಡ್ (55) ಮೃತ ಮುಖ್ಯ ಶಿಕ್ಷಕಿಯಾಗಿದ್ದು, ಗಜೇಂದ್ರಗಡ ತಾಲೂಕಿನ ರೋಣದ ಬಿಇಒ ಕಚೇರಿಯಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮನೆಯಲ್ಲಿದ್ದ ಮುಖ್ಯ ಶಿಕ್ಷಕಿಯ ತಲೆಗೆ ದುಷ್ಕರ್ಮಿಗಳು ರೊಟ್ಟಿ ಮಾಡುವ ಕಟ್ಟಿಗೆಯ ಕ್ವಾಮಣಗಿಯಿಂದ ಹೊಡೆದು ಭೀಕರ ಕೊಲೆ ಮಾಡಲಾಗಿದ್ದು, ಇದನ್ನು ಕಂಡ ಗಜೇಂದ್ರಗಡ ನಿವಾಸಿಗಳು ಆತಂಕಗೊಂಡಿದ್ದಾರೆ. ಇನ್ನೂ ಸ್ಥಳಕ್ಕೆ …
Read More »
BigTv News
December 16, 2024
Breaking News, ಗದಗ
ಗದಗ : 1,20,000 ಕೋಟಿ ಹಣವನ್ನು ಈ ವರ್ಷ ನಾವು ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52,000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ₹200 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಸಿರಿಧಾನ್ಯ ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 1,20,000 ಕೋಟಿ ಹಣವನ್ನು ಈ …
Read More »
BigTv News
November 14, 2024
Breaking News, ಗದಗ
ಗದಗ: ಮುಸ್ಲಿಂ ಗುತ್ತಿಗೆದಾರರಿಗೆ ಸರ್ಕಾರಿ ಕಾಮಗಾರಿಯಲ್ಲಿ ಮೀಸಲಾತಿ ವಿಚಾರವಾಗಿ ಮನವಿಗಳು ಬಂದಿದೆ. ಆದರೆ ಈ ಬಗ್ಗೆ ಇನ್ನು ನಿರ್ಣಯ ಮಾಡಿಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಮುಸ್ಲಿಂ ಸಮುದಾಯದಿಂದ ಮಾತ್ರವಲ್ಲ, ಬೇರೆ ಸಮುದಾಯದಿಂದಲೂ ಬೇಡಿಕೆ ಇವೆ ಸರ್ಕಾರ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಎಸ್ಸಿ-ಎಸ್ಟಿ ಅವರಿಗೆ ಮೀಸಲಾತಿ ಕೊಡಬೇಕು ಅಂತಾ ಸರ್ಕಾರದ ನಿಲುವಿತ್ತು, ಕೊಟ್ಟಿದ್ದೀವಿ, ಒಂದು ಕೋಟಿ ರೂಪಾಯಿವರೆಗಿನ ಕಾಮಗಾರಿಗೆ ರಿಸರ್ವೇಶನ್ ಮಾಡಲಾಗಿದೆ. …
Read More »
BigTv News
November 5, 2024
Breaking News, ಗದಗ
ಗದಗ: 1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ 39ನೇ ಎಐಸಿಸಿ ಅಧಿವೇಶನಕ್ಕೆ ಈಗ ಶತಮಾನೋತ್ಸವ ಸಂಭ್ರಮ. ಆ ನೆನಪನ್ನು ಮೆಲುಕು ಹಾಕುವ ಸಲುವಾಗಿ 2024ರ ಅ.2ರಿಂದ 2025ರ ಅ.2ರವರೆಗೆ ಶತಮಾನೋತ್ಸವ ಆಚರಣೆಗೆ ನಿರ್ಧರಿಸಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು. ಈ ಅವಧಿಯಲ್ಲಿ ಗಾಂಧೀಜಿ ಅವರ ತತ್ವ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ. ಜತೆಗೆ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಕ್ಕೆ ಬರಬೇಕು …
Read More »
BigTv News
October 28, 2024
Breaking News, ಗದಗ
ಗದಗ: ಕಪ್ಪತಗುಡ್ಡದಲ್ಲಿನ ಎಲ್ಲಾ 28 ಗಣಿಗಾರಿಕೆ ಪ್ರಸ್ತಾವನೆಗಳನ್ನು ತಿರಸ್ಕರಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾರಿಯಿದ್ದಾರೆ. ಇತ್ತೀಚೇಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಗಣಿಗಾರಿಕೆ ಪ್ರಸ್ತಾವನೆಗಳನ್ನು ಮುಂದೂಡಿದ್ದರು. ಇದೀಗ ಬಸವರಾಜ ಹೊರಟ್ಟಿ ಸಿಎಂಗೆ ಪತ್ರ ಬರೆದು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಗಣಿಗಾರಿಕೆ ಪ್ರಸ್ತಾವನೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ವಾರ ತೋಂಟದಾರ್ಯ ಮಠಾಧೀಶರು, ಸಾಮಾಜಿಕ ಕಾರ್ಯಕರ್ತರು, ಪರಿಸರವಾದಿಗಳು ಡಿಸಿ ಮೂಲಕ ಸಿಎಂಗೆ …
Read More »
BigTv News
October 22, 2024
Breaking News, ಗದಗ
ಗದಗ: ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಅನುಷ್ಠಾನ ಮಾಡಬೇಕು ಎಂದು ಒತ್ತಾಯಿಸಿ ಗದಗ ಜಿಲ್ಲಾಡಳಿತ ಭವನದ ಎದುರು ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು ಈ ವೇಳೆ ಮುಖಂಡರು ಮಾತನಾಡಿ, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನ ಮಾಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.
Read More »
BigTv News
October 20, 2024
Breaking News, ಗದಗ
ಗದಗ : ನಗರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಗದಗ ನಗರದಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದಾರೆ ಗಾಯಗೊಂಡ ಕಾರ್ಮಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣ್ಣಿನಡಿ ಸಿಲುಕಿದ ಕಾರ್ಮಿಕನನ್ನು ನಜೀರ್ ಸಾಬ್ ಬೈಲು ಹುಲಿ ಎಂದು ಗುರುತಿಸಲಾಗಿದ್ದು, ಗದಗ ನಗರಸಭೆ ವಾಟರ್ ಮ್ಯಾನ್ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದಾರೆ.
Read More »
BigTv News
October 16, 2024
Breaking News, ಗದಗ
ಮುಳಗುಂದ: ಸಮೀಪದ ಚಿಂಚಲಿ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ಸಾರ್ವಜನಿಕರು ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ. ಇಲ್ಲಿನ ಬಹುತೇಕ ಚರಂಡಿಗಳಲ್ಲಿ ಹೂಳು ತುಂಬಿಕೊಂಡಿದೆ ಕೊಳಚೆ ನೀರು ಮುಂದೆ ಸಾಗದೆ, ಅಲ್ಲೇ ನಿಂತು ದುರ್ನಾತ ಬೀರುತ್ತಿದೆ. ಕೆಲವೆಡೆ ಸಿಸಿ ರಸ್ತೆ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ಗ್ರಾಮ ಪಂಚಾಯಿತಿ ಹತ್ತಿರದ ಚರಂಡಿಯಲ್ಲಿ ಹುಲ್ಲು ಬೆಳೆದು ಹಲವು ತಿಂಗಳೇ ಆದರೂ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಮುಂದಾಗಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತಲೂ …
Read More »