Breaking News

ಶಿವಮೊಗ್ಗ

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ : 2 ಆರೋಪಿಗಳು ಬಂಧನ

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ . ಹಂತಕರ ಪತ್ತೆಗೆ 3 ವಿಶೇಷ ಪಡೆಯನ್ನು ರಚಿಸಲಾಗಿತ್ತು. ಘಟನೆ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ಜೆ.ಪಿ.ನಗರದ ನಿವಾಸಿ ಸೈಯದ್ ನದೀಮ್ (20), ಹಾಗೂ ಬುದ್ದಾನಗರ ನಿವಾಸಿ ಕಾಸಿಫ್ (30) ಎಂಬುವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮುನ್ನಚ್ಚರಿಕಾ ಕ್ರಮವಾಗಿ ಇಂದು ನಗರದ …

Read More »

ಶಿವಮೊಗ್ಗ ನಗರದಲ್ಲಿ ಶಾಲೆ ಕಾಲೇಜು ಬಂದ್

ಶಿವಮೊಗ್ಗ : ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಬೆನ್ನಲ್ಲೇ ಖಾಕಿ ಫುಲ್ ಅಲರ್ಟ್ ಆಗಿದೆ. ಶಿವಮೊಗ್ಗ ನಗರದಾದ್ಯಂತ ನಾಳೆ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮುನ್ನೆಚ್ಚರಿಕೆಗಾಗಿ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಿನ್ನೆ ರಾತ್ರಿಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೆ ಕಫ್ರ್ಯೂ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಕರ್ಫ್ಯೂ ಜಾರಿ ನಡುವೆಯೂ ಮನೆ ಮುಂದೆ ನಿಲ್ಲಿಸಿದ್ದ ಒಂದು ಆಟೋ …

Read More »

ಬಜರಂಗದಳ ಕಾರ್ಯಕರ್ತನ ಬರ್ಬರವಾಗಿ ಹತ್ಯೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ

ಶಿವಮೊಗ್ಗ: ನಗರದಲ್ಲಿ ಬಜರಂಗದಳ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹಿನ್ನೆಲೆ, ಮುನ್ನಚ್ಚರಿಕಾ ಕ್ರಮವಾಗಿ ಇಂದು ನಗರದ ಶಾಲಾ ಕಾಲೇಜುಗಳಿಗೆ ಡಿಸಿ ಡಾ. ಸೆಲ್ವಮಣಿ ರಜೆ ಘೋಷಿಸಿದ್ದಾರೆ. ನಗರದ ಸೀಗೆಹಟ್ಟಿ ನಿವಾಸಿ ಹರ್ಷ (24) ನ ಮೇಲೆ ಮಾರಕಾಸ್ತ್ರಗಳಿಂದ ಹತ್ಯೆಗೈದು ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ.ಹಲ್ಲೆ ನಡೆಯುತ್ತಿದ್ದಂತೆ ಎರಡು ಗುಂಪುಗಳ ನಡುವೆ ನಗರದಲ್ಲಿ ಕಲ್ಲು ತೂರಾಟ ನಡೆದಿದೆ. ಈ ವೇಳೆ ನಗರದ ದೊಡ್ಡಪೇಟೆ ಪೊಲೀಸ್‌ ಠಾಣಾ ಪೊಲೀಸರು ಲಾಠಿ ಚಾರ್ಜ್‌ …

Read More »

ಕಾಂಗ್ರೆಸ್ ನಾಯಕರ ಹೋರಾಟಕ್ಕೆ ನಾನು ಜಗ್ಗುವುದೂ ಇಲ್ಲ, ಬಗ್ಗುವುದೂ ಇಲ್ಲ : ಈಶ್ವರಪ್ಪ

ಶಿವಮೊಗ್ಗ: ಕಲಾಪ ಸಂದರ್ಭ ನಾನು ಆಡಿದ ಮಾತನ್ನು ವಿರೋಧಿಸಿ ಕಾಂಗ್ರೆಸ್‌ ನಾಯಕರು ಹೋರಾಟ ಮಾಡುತ್ತಿದ್ದಾರೆ. ಅದಕ್ಕೆ ನಾನು ಯಾವುದೇ ಕಾರಣಕ್ಕೆ ಜಗ್ಗುವುದೂ ಇಲ್ಲ, ಬಗ್ಗುವುದೂ ಇಲ್ಲ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರಧ್ವಜ ನನ್ನ ತಾಯಿ ಸಮಾನ. ಅದಕ್ಕೆ ಯಾರಾದರೂ ಅವಮಾನ ಮಾಡಿದರೆ ಸಹಿಸಲಾಗದು. ಅಂತಹವರು ರಾಷ್ಟ್ರದ್ರೋಹಿ ಎನಿಸಿಕೊಳ್ಳುತ್ತಾರೆ. ಹೀಗಾಗಿ, ದೇಶದ ಹಿತದೃಷ್ಟಿಯಿಂದ ಹೇಳಿಕೆ ನೀಡಿದ್ದೇನೆ. ಇದೇ ವಿಚಾರವನ್ನು ಇಟ್ಟುಕೊಂಡು ಕಲಾಪದ ಸಮಯ ಹಾಳು ಮಾಡುವುದು …

Read More »

ರಾಜ್ಯದ ಎಲ್ಲ ಅಧಿಕಾರಿಗಳಿಗೆ ತಾಕೀತು ಮಾಡಿದ ಈಶ್ವರಪ್ಪ

ಶಿವಮೊಗ್ಗ: ರಾಜ್ಯದ ಎಲ್ಲ ಅಧಿಕಾರಿಗಳು, ಪಿಡಿಒಗಳು ಪರಸ್ಪರ ಉತ್ತಮ ಸಂಬಂಧ ಇಟ್ಟುಕೊಂಡು ಜನಸಾಮಾನ್ಯರ ಸೇವೆ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಾಕೀತು ಮಾಡಿದರು. ನಗರದಲ್ಲಿ ಸುದ್ದಿಗಾರರ ಮಾತನಾಡಿದ ಅವರು, ಪಿಡಿಒಗಳಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪದ ಮೇಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಗೆ ಆದೇಶಿಸಲಾಗಿದೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಸರಿಯಾಗಿ ಕೆಲಸ ಮಾಡದೇ ಇರುವವರ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧವೂ …

Read More »

ಎಪ್ರಿಲ್‌ ನಲ್ಲಿ ಪ್ರಧಾನಿ ಶಿವಮೊಗ್ಗಕ್ಕೆ ಆಗಮನ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಎಪ್ರಿಲ್‌ ತಿಂಗಳಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ. ವಿವಿಧ ಗ್ರಾಮಗಳಿಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಈ ವೇಳೆ ಶಿವಮೊಗ್ಗ ಜಿಲ್ಲೆಯ ಗ್ರಾಮಕ್ಕೂ ಭೇಟಿ ನೀಡಲಿದ್ದಾರೆ. ಅತ್ಯುತ್ತಮ ಗ್ರಾಮ ಪ್ರಶಸ್ತಿ ಪಡೆದ ಆಯ್ದ ಗ್ರಾಮಕ್ಕೆ ಪ್ರಧಾನಿಗಳು ಭೇಟಿ ನೀಡಲಿದ್ದಾರೆ ಎಂದರು.

Read More »

ಶಿವಮೊಗ್ಗ ಜಿಲ್ಲೆಯಲ್ಲಿ 609 ಕೊರೊನಾ ಸೊಂಕು ಪತ್ತೆ

ಶಿವಮೊಗ್ಗ: ಜಿಲ್ಲೆಯಲ್ಲಿ ಶನಿವಾರ 609 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, 499 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಶನಿವಾರ ಶಿವಮೊಗ್ಗ ತಾಲ್ಲೂಕಿನ 192 ಮಂದಿಗೆ ಸೋಂಕು ದೃಢಪಟ್ಟಿದ್ದು, ಭದ್ರಾವತಿಯ 102, ತೀರ್ಥಹಳ್ಳಿಯ 34, ಶಿಕಾರಿಪುರದ 72, ಸಾಗರದ 78, ಹೊಸನಗರದ 75, ಸೊರಬದ 48 ಹಾಗೂ ಹೊರ ಜಿಲ್ಲೆಯಿಂದ ಬಂದ 8 ಮಂದಿಗೆ ಸೋಂಕು ತಗುಲಿದೆ.

Read More »

ಕಲಾವಿದ ಹೆಚ್‌.ಆರ್.ಕೇಶವಮೂರ್ತಿ ಗೆ ಪದ್ಮಶ್ರೀ ಪ್ರಶಸ್ತಿ

ಶಿವಮೊಗ್ಗ: ಖ್ಯಾತ ಗಮಕ ಕಲಾವಿದರಾದ ಹೆಚ್‌.ಆರ್.ಕೇಶವಮೂರ್ತಿ ಅವರಿಗೆ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಕಳೆದ ಹಲವಾರು ದಶಕಗಳಿಂದ ಹೆಚ್‌.ಆರ್.ಕೇಶವಮೂರ್ತಿ ಅವರು ನಿರಂತರವಾಗಿ ಗಮಕ ಕಾರ್ಯಕ್ರಮಗಳ ಮೂಲಕ ಮಾಡಿರುವ ಸಾಧನೆಯನ್ನು ಗುರುತಿಸಿ ಭಾರತ ಸರ್ಕಾರ ಪದ್ಮಶ್ರೀ ನೀಡಿ ಗೌರವಿಸಿದೆ. ಹೆಚ್‌.ಆರ್.ಕೇಶವಮೂರ್ತಿ ಅವರದು ಶಿವಮೊಗ್ಗ ಸಮೀಪದ ಮತ್ತೂರು ಹೊಸಳ್ಳಿ. ರಾಮಸ್ವಾಮಿ ಶಾಸ್ತ್ರಿ-ಲಕ್ಷ್ಮೀದೇವಮ್ಮ ದಂಪತಿ ಪುತ್ರ. 22 ಫೆಬ್ರವರಿ 1934ರಲ್ಲಿ ಜನಿಸಿದ್ದ ಅವರು ಬಾಲ್ಯದಿಂದಲೇ ಗಮಕ ಕಲೆ ಕರಗತ ಮಾಡಿಕೊಂಡಿದ್ದರು. ತಂದೆ, ತಾಯಿ ರಾಗವಾಗಿ …

Read More »

ಆರ್ಥಿಕ ನಷ್ಟ: ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ

ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರಕಾಶ್ ಟ್ರಾವೆಲ್ಸ್ ಮಾಲೀಕರಾಗಿದ್ದ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಲಾಕ್ ಡೌನ್ ನಿಂದಾಗಿ ವ್ಯವಹಾರದಲ್ಲಿ ಉಂಟಾದ ನಷ್ಟದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಅರ ಮೃತ ದೇಹ ಪತ್ತೆಯಾಗಿದೆ. ಜನವರಿ 21ರ ಸಂಜೆ ನಿಗೂಢವಾಗಿ ನಾಪತ್ತೆಯಾಗಿದ್ದ ಅವರ ಕಾರು, ಮೊಬೈಲ್ ಫೋನ್ ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿತ್ತು. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. …

Read More »

ಸಚಿವರಾಗಬೇಕು ಎಂಬುದು ಹಲವು ಹಿರಿಯ ಶಾಸಕರ ಸಹಜವಾದ ಆಶಯ : ಈಶ್ವರಪ್ಪ

ಶಿವಮೊಗ್ಗ: ಸಂಪುಟ ವಿಸ್ತರಣೆ ಆಗಬೇಕಾಗಿರುವುದು ಸ್ವಾಭಾವಿಕ. ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇದೆ. ಹಾಗಾಗಿ ಸಂಪುಟ ವಿಸ್ತರಣೆ ಅಗತ್ಯವಿದೆ. ಸಚಿವರಾಗಬೇಕು ಎಂಬುದು ಹಲವು ಹಿರಿಯ ಶಾಸಕರ ಸಹಜವಾದ ಆಶಯ. ಅದರಲ್ಲಿ ತಪ್ಪಿಲ್ಲ. ಯಾರಿಗೆ ಸ್ಥಾನ ನೀಡಬೇಕು ಎಂಬುದು ವರಿಷ್ಠರ ತೀರ್ಮಾನ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಖಾಲಿ ಇರುವ ನಾಲ್ಕು ಸ್ಥಾನವನ್ನು ಯಾರಿಗೆ ನೀಡಿದರೆ ಉತ್ತಮ ಎಂಬುದನ್ನು ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ. ಸದ್ಯಕ್ಕೆ ರಾಜ್ಯದಲ್ಲಿ ಬಿಜೆಪಿ …

Read More »