Breaking News

ಶಿವಮೊಗ್ಗ

ಕರ್ತವ್ಯ ನಿರತ ಅರಣ್ಯಾಧಿಕಾರಿ ನಿಧನ

ಶಿವಮೊಗ್ಗ: ಕರ್ತವ್ಯ ನಿರತ ಅರಣ್ಯಾಧಿಕಾರಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಬಳಿ ನಡೆದಿದೆ. ಶನಿವಾರ ಕರ್ತವ್ಯಕ್ಕೆಂದು ತೆರಳುವಾಗ ಬೈಕ್​​ನಿಂದ ಬಿದ್ದ ಲೋಕನಾಥ್​ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಸ್ಥಳೀಯರು ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿಸಿದ್ದರು. ಇವರ ನಿಧನಕ್ಕೆ ಅರಣ್ಯಾ ಇಲಾಖೆ ಅಧಿಕಾರಿಗಳು ಕಂಬನಿ ಮಿಡಿದಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಪ್ರಕಾಶ್ ಟ್ರಾವೆಲ್ಸ್​ಬಸ್ ನ ಮಾಲೀಕರಾದ ಪ್ರಕಾಶ್ ಕಾಣೆ : ಕಾರು ಸೇತುವೆ ಬಳಿ ಪತ್ತೆ

ಶಿವಮೊಗ್ಗ: ಪ್ರಕಾಶ್ ಟ್ರಾವೆಲ್ಸ್​ಬಸ್ ನ ಮಾಲೀಕರಾದ ಪ್ರಕಾಶ್ ಎಂಬುವರು ಕಾಣೆಯಾಗಿದ್ದು, ಅವರ ಕಾರು ಹಾಗೂ ಮೊಬೈಲ್ ಹೊಸನಗರದ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿದೆ. ಸಾಗರ ನಿವಾಸಿಯಾಗಿರುವ ಪ್ರಕಾಶ್, ಮೊನ್ನೆ ಸಂಜೆ ಮನೆಯಿಂದ ಹೊರ ಹೋಗಿದ್ದಾರೆ. ಆದರೆ ಮನೆಗೆ ವಾಪಸ್ ಆಗಿರಲಿಲ್ಲ. ಮೊಬೈಲ್ ಮಾತ್ರ ರಿಂಗ್ ಆಗ್ತಾ ಇತ್ತು.‌ ಇನ್ನು ಕಾರು ಬೆಳಗ್ಗೆಯಿಂದ ಪಟಗುಪ್ಪೆ ಸೇತುವೆ ಮೇಲೆ‌ ನಿಂತಿದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ …

Read More »

ಮಾ. 22ಕ್ಕೆ ಶಿವಮೊಗ್ಗ ಮಾರಿಕಾಂಬ ಜಾತ್ರೆ

ಶಿವಮೊಗ್ಗ: ಕೋವಿಡ್‌ ಕಾರಣ ಮಾರ್ಚ್‌ 22ಕ್ಕೆ ಮುಂದೂಡಲಾಗಿದೆ.  ಫೆ. 22ರಿಂದ ಆರಂಭವಾಗಬೇಕಿದ್ದ ಶಿವಮೊಗ್ಗ ಮಾರಿಕಾಂಬ ಜಾತ್ರೆ ಸ್ಥಗಿತಗೊಳಿಸಿ ಮಾರ್ಚ್ ನಲ್ಲಿ ಮಾಡುವುದಾಗಿಹೇಳಲಾಗಿದೆ. ಜಾತ್ರೆ ಮುಂದೂಡಿದರೂ ಸಿದ್ಧತೆಗಳು ಮುಂದುವರಿಯಲಿವೆ. ಕೋವಿಡ್‌ ನಿಯಮಗಳು, ಮಾರ್ಗಸೂಚಿ ಅನುಸರಿಸಿ ಮಾರಿಕಾಂಬ ಜಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಕೋಟೆ ಶ್ರೀಮಾರಿಕಾಂಬ ಸಮಿತಿ ಅಧ್ಯಕ್ಷ ಎಸ್.ಕೆ. ಮರಿಯಪ್ಪ, ಕಾರ್ಯದರ್ಶಿ ಎನ್. ಮಂಜುನಾಥ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

Read More »

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಇನ್ನೊಬ್ಬ ವಿದ್ಯಾರ್ಥಿಗೆ ಕೊರೋನಾ

ಶಿವಮೊಗ್ಗ : ಆರೋಗ್ಯ ಇಲಾಖೆಯಿಂದ ಕೋವಿಡ್ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಒಳಪಡಿಸಿದಂತ ಸಂದರ್ಭದಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಕೊರೋನಾ ದೃಢಪಟ್ಟಿದೆ. ನಿನ್ನೆ ಸೊರಬ ತಾಲೂಕಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಕುರಿತು ಮಾಹಿತಿ ನೀಡಿರುವಂತ ತಾಲೂಕು ಆರೋಗ್ಯಾಧಿಕಾರಿ ಡಾ.ವಿನಯ್ ಪಾಟೀಲ್ ಅವರು, ನಿನ್ನೆ ಸೊರಬ ತಾಂತ್ರಿಕ ವಿದ್ಯಾಲಯದ ಇಬ್ಬರು ವಿದ್ಯಾರ್ಥಿನಿಯರಿಗೆ ಕೋವಿಡ್ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಇಂದು ವೈದ್ಯರು ಮತ್ತು ಸಿಬ್ಬಂದಿಯ ತಂಡ ರಚಿಸಿ ಕಾಲೇಜಿನ …

Read More »

ಶಿವಮೊಗ್ಗದ ಜಿಲ್ಲಾಧಿಕಾರಿ ವರ್ಗಾವಣೆ

ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಸ್ಫೋಟದ ನಡುವೆ ಎಲ್ಲರೂ ಬೇಸುತ್ತು ಹೋಗಿದ್ದಾರೆ.  ಅದರ ನಡುವೆ ಶಿವಮೊಗ್ಗ ಜನತೆಗೆ ಮತ್ತೊಂದು ವಿಷಯ ಅಘಾತಕಾರಿಯಾಗಿ ಸಂಭವಿಸಿದೆ.  ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್​ ಅವರನ್ನು ವರ್ಗಾವಣೆ ಮಾಡಿ ರಾಜ್ಯಸರ್ಕಾರ‌ ಆದೇಶ ಹೊರಡಿಸಿದೆ. ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಸೆಲ್ವಮಣಿ ಆರ್ ಅವರನ್ನು ನೇಮಕ ಮಾಡಲಾಗಿದೆ.

Read More »

ವೀಕೆಂಡ್ ಕರ್ಫ್ಯೂ ಕುರಿತು ಬಿಜೆಪಿಯಲ್ಲಿ ಬೇಸರ

ಶಿವಮೊಗ್ಗ: ಕೊರೋನಾದಿಂದಾಗಿ ಲಾಕ್ ಡೌನ್ ಮಾಡುವುದರಿಂದ ಜನರು ತಕರಾರು ಎತ್ತುವುದು ನಿಜ.ಓಮಿಕ್ರಾನ್ ಸೋಂಕು ಹರಡುತ್ತಿರುವುದಕ್ಕೆ ಕಡಿವಾಣ ಹಾಕಲು ಸರಕಾರ ಘೋಷಿಸಿರುವ ನೈಟ್ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗುತ್ತಿರುವುದು ಗೊತ್ತೇ ಇದೆ. ಆದರೆ ಸರಕಾರದ ನಿರ್ಧಾರಕ್ಕೆ ಬಿಜೆಪಿಯಲ್ಲೂ ಅಸಮಾಧಾನ ವ್ಯಕ್ತವಾಗುತ್ತಿರುವುದು ರಾಜಕೀಯದಲ್ಲಿ ಹೊಸ ವಿಚಾರವಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೋಂಕು ಹೆಚ್ಚುತ್ತಿದೆ, ಅಲ್ಲಿ ಕರ್ಫ್ಯೂ ಹಾಕಲಿ, ರಾಜ್ಯದ ಇತರ ಕಡೆ ಯಾಕೆ ಎಂದು ಗ್ರಾಮೀಣಾಭಿವೃದ್ದಿ ಮತ್ತು …

Read More »

ಬೆಂಗಳೂರಿನಲ್ಲಿ ವೀಕೆಂಡ್ ಕರ್ಪ್ಯೂ ಓಕೆ, ರಾಜ್ಯದೆಲ್ಲೆಡೆ ಯಾಕೆ?: ಸಚಿವ ಈಶ್ವರಪ್ಪ ಗರಂ

ಶಿವಮೊಗ್ಗ : ಕೋವಿಡ್ ಹೆಚ್ಚಳ ಹಿನ್ನೆಲೆ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿರುವ ಸರ್ಕಾರದ ನಿರ್ಧಾರಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬುಧವಾರ ಅಸಮಾಧಾನ ಹೊರ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ ಇರುವುದು ಹೌದು, ನಾನು ಇಲ್ಲ ಅಂತಾ ಹೇಳಿಲ್ಲ.ರಾಜ್ಯದ ಎಲ್ಲಾ ಕಡೆಯೂ ಇದು ಇಲ್ಲ.ಉದಾಹರಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ಅಷ್ಟಿಲ್ಲ.ಕೆಲವೆಡೆ 2-3-4-5 ಈ ರೀತಿ ಇದೆ. ಜಾಸ್ತಿ ಅಂದರೆ 10 ರವರೆಗೆ ಇದೆ. ಜಾಸ್ತಿ ಇದೆ ಅಂದುಕೊಂಡು ಇಡೀ ರಾಜ್ಯಕ್ಕೆ …

Read More »

ಕಾಂಗ್ರೇಸ್ಸಿನವರಿಗೆ ಪ್ರತ್ಯೇಕ ನಿಯಮ ರೂಪಿಸಿಲ್ಲ-ಎಲ್ಲರೂ ಕೋವಿಡ್‌ ನಿಯಮ ಪಾಲಿಸಬೇಕು-ಅರಗ ಜ್ಞಾನೇಂದ್ರ

ಶಿವಮೊಗ್ಗ : ಕೊರೊನಾ ಟಫ್ ರೂಲ್ಸ್ ಜನ ಸಾಮಾನ್ಯರಿಗೆ ಅನ್ವಯವಾಗುವಂತೆ ಕಾಂಗ್ರೆಸ್ ಪಕ್ಷಕ್ಕೂ ಅನ್ವಯವಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆಗೆ ಟಾಂಗ್ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಸಹ ಪ್ರತಿ ದಿನ ಸಾವಿರಾರ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿವೆ. ರಾಜ್ಯ ಸರ್ಕಾರ ತಜ್ಞರ ಸಲಹೆ ಪಡೆದು ಕಠಿಣ ನಿಯಮ ಜಾರಿ ಮಾಡಲಾಗಿದೆ. ನೈಟ್ ಕಫ್ರ್ಯೂ …

Read More »

ಕೇಂದ್ರದ ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿದ್ದೇನೆ-ಈಶ್ವರಪ್ಪ

ಹುಬ್ಬಳ್ಳಿ: ನಗರದಲ್ಲಿಂದು ರೇಣುಕಾಚಾರ್ಯ ಸಚಿವರಾದವರು ಸಚಿವ ಸ್ಥಾನ ಬಿಟ್ಟು ಹೊಸಬರಿಗೆ ಅವಕಾಶ ಕೊಡಬೇಕು ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರದ ವರಿಷ್ಠರು ಹಿರಿಯರನ್ನು ತೆಗೆಬೇಕು ಎಂದು ತೀರ್ಮಾನಿಸಿದರೆ ಪ್ರಥಮವಾಗಿ ಒಪ್ಪಿಕೊಂಡು ಸಂತೋಷದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಅವರು ಹೇಳಿದರು. ಸ್ವಯಂ ಪ್ರೇರಿತವಾಗಿ ಸಚಿವ ಸ್ಥಾನ ಬಿಟ್ಟುಕೊಡುತ್ತಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯದಲ್ಲಿ ಸ್ಥಾನಮಾನದ ಬಹಳ ಮಹತ್ವದಾಗಿದೆ. ಅಧಿಕಾರದಲ್ಲಿ ಎಷ್ಟರ ಮಟ್ಟಿಗೆ ಒಳ್ಳೆದು, ಕೆಟ್ಟದ್ದು …

Read More »

ಶಿವಮೊಗ್ಗ: ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮರಳಿದ ಒಂದೇ ಕುಟುಂಬದ 9 ಮಂದಿ

ಶಿವಮೊಗ್ಗ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆ ಬಿಸಿಯಾಗಿರುವಾಗಲೇ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಒಂದೇ ಕುಟುಂಬದ 9 ಮಂದಿ ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ವಿಶೇಷ ಪೂಜೆಗಳ ಮೂಲಕ ಇವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಲಾಯಿತು. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿಗಳಾದ ಜಯಶೀಲನ್ ಮತ್ತು ಜಯಮ್ಮ ಎಂಬುವರು ತಮ್ಮ ಕುಟುಂಬದ ಸಮೇತ ಹಿಂದೂ ಧರ್ಮಕ್ಕೆ ಭಾನುವಾರ ಮರಳಿದ್ದಾರೆ. 40 ವರ್ಷಗಳ ಹಿಂದೆ ಮತಾಂತರ ಜಯಶೀಲನ್ ಅವರ …

Read More »