Breaking News

ಶಿವಮೊಗ್ಗ

ಮಲೆನಾಡು ಭಾಗದಲ್ಲಿ ಹೆಚ್ಚಾದ ಮಂಗಗಳ ಹಾವಳಿ: ಹೈರಾಣಾದ ರೈತರು

ಸಾಗರ: ಬೆಳೆ ಹಾನಿ ಮಾಡುವ ಮಂಗಗಳನ್ನು ಹಿಡಿಯಲು ಮುಂದಾದರೆ ಅದು ವನ್ಯಜೀವಿ ಸಂರಕ್ಷಣೆ ಕಾಯ್ದೆ ಅನ್ವಯ ಶಿಕ್ಷಾರ್ಹ ಅಪರಾಧ. ಆದ ನಷ್ಟಕ್ಕೆ ಕಾಯ್ದೆ ಪ್ರಕಾರವೇ ಬೆಳೆ ಪರಿಹಾರ ಕಲ್ಪಿಸಿ ಅಂದರೆ ಮಾತ್ರ ಅಧಿಕಾರಿಗಳಿಂದ ತೀವ್ರ ಮೌನ, ಅರಣ್ಯ ಇಲಾಖೆಯ ಈ ಇಬ್ಬಂದಿತನ ಮಲೆನಾಡಿನ ರೈತರನ್ನು ಹೈರಾಣಾಗಿಸಿದೆ. ಮಲೆನಾಡು ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಂಗ ಹಾಗೂ ಮುಸಿಯಾಗಳ ಹಾವಳಿ ವಿಪರೀತವಾಗಿದೆ. ಬೆಳೆ ಹಾನಿ ಮಾಡಿ ರೈತ ಸಮೂಹಕ್ಕೆ ತೊಂದರೆ ಕೊಡುವ ಜೊತೆಗೆ …

Read More »

ಶಿವಮೊಗ್ಗದಲ್ಲಿ ಭಾರೀ ಮಳೆ: ನಷ್ಟದ ಹಾದಿ ಹಿಡಿದ ನೂರಾರು ಎಕರೆ ಬೆಳೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಅಡಿಕೆ ಮತ್ತು ಭತ್ತ ಬೆಳೆಯುವ ರೈತರಿಗೆ ಸಂಕಷ್ಟವನ್ನು ತಂದಿದೆ. ಭತ್ತದ ಗದ್ದೆಯಲ್ಲಿ ಕೀಟಬಾಧೆ ಕಾಣಿಸಿಕೊಂಡಿದ್ದು ನೂರಾರು ಎಕರೆ ಬೆಳೆ ನಷ್ಟದ ಹಾದಿಯತ್ತ ಸಾಗಿದೆ. ಭತ್ತದ ಬೆಳೆಯ ಕೀಟಬಾಧೆಯನ್ನು ಹೋಗಲಾಡಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಂಟಿ ಕೃಷಿ ನಿರ್ದೇಶಕರಾದ ಕಿರಣ್ ಕುಮಾರ್ ಎಂ. ರೈತರಿಗೆ ಸಲಹೆಗಳನ್ನು ನೀಡಿದ್ದಾರೆ. ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಕನ್ನಂಗಿ ಪಂಚಾಯತಿ ಗರಗ ಕಿಕ್ಕೇರಿಯ ಭತ್ತದ ಗದ್ದೆಗಳಲ್ಲಿ ಕೀಟಬಾಧೆಯಿಂದ ನೂರಾರು …

Read More »

ಜಿಲ್ಲೆಯಾದ್ಯಂತ ಆಯುಧ ಪೂಜೆಯ ಸಂಭ್ರಮ

ಶಿವಮೊಗ್ಗ: ಆಯುಧ ಪೂಜೆಯನ್ನು ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಜನರು ಸಡಗರ, ಸಂಭ್ರಮದಿಂದ ಆಚರಿಸಿದರು. ಅಂಗಡಿ ಮಾಲೀಕರು ಸಿಹಿ ಹಂಚುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಗಳ ಎದುರು ಬೆಳಿಗ್ಗೆಯಿಂದಲೇ ರಂಗೋಲಿಗಳು ಕಂಗೊಳಿಸುತ್ತಿದ್ದವು. ಮನೆ, ಕಚೇರಿಗಳ ಎದುರು ವಾಹನಗಳನ್ನು ನಿಲ್ಲಿಸಿ, ಬೂದಗುಂಬಳ ಕಾಯಿ ಒಡೆದು ಪೂಜೆ ಮಾಡುವುದು ಎಲ್ಲೆಡೆ ಕಂಡುಬಂತು ವಾಹನಗಳಿಗೆ ಹಾರ ಹಾಕಿ ಸಿಂಗರಿಸಲಾಗಿತ್ತು. ಆಯುಧಪೂಜೆಯಂದು ಆಯುಧಗಳಿಗೆ ಮಾತ್ರವಲ್ಲದೆ, ವಾಹನಗಳಿಗೆ, ಯಂತ್ರೋಪಕರಣಗಳು, ಕೃಷಿ ಉಪಕರಣ, ಸಲಕರಣೆಗಳಿಗೆ ಪೂಜೆ ಸಲ್ಲಿಸಿರುವ …

Read More »

ಪಿಎಂ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನು ಕೃಷಿ ಕೊಳಗಳ ನಿರ್ಮಾಣ ಒಟ್ಟು 5.33 ಹೆಕ್ಟೆರರ್ ಗಳು, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ ಸಾಂಪ್ರದಾಯಿಕ ಮೀನುಗಾರಿಕೆಗೆ ಎಫ್ರ್ಪಿ ಬದಲಿ ದೋಣಿ ನಿರ್ಮಾಣಕ್ಕಾಗಿ ಸಹಾಯ ಘಟಕಕ-01 (ಸಾಮಾನ್ಯ 01), ಮೀನು ಮರಿ ಪಾಲನಾ …

Read More »

ರೈತರಿಂದ ಖರೀದಿಸುವ ಹಾಲಿನ ದರ 90 ಪೈಸೆ ಕಡಿತ

ಶಿವಮೊಗ್ಗ: ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್ ಗೆ 90 ಪೈಸೆಯಷ್ಟು ಕಡಿತಗೊಳಿಸಲಾಗಿದೆ. ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಅ. 1ರಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ. ಶಿವಮೊಗ್ಗ ಹಾಲು ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ರೈತರಿಂದ ಖರೀದಿ ಮಾಡುವ ಪ್ರತಿ ಲೀಟರ್ ಹಾಲಿನ ದರವನ್ನು 90 ಪೈಸೆ ಕಡಿತ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಮೊದಲು ಲೀಟರ್ ಹಾಲಿಗೆ 32.99 ರೂಪಾಯಿ …

Read More »

ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ನಿಗಮದ ಚಂದ್ರಶೇಖರ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ಸಿಎಂ

ಶಿವಮೊಗ್ಗ: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ವಾಲ್ಮೀಕಿ ನಿಗಮದ ಚಂದ್ರಶೇಖರ್‌ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳವಾರ ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ 25 ಲಕ್ಷ ರೂಪಾಯಿಯ ಪರಿಹಾರ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚಂದ್ರಶೇಖರ್‌ ಆತ್ಮಹತ್ಯೆ ದುರದೃಷ್ಟದ ಘಟನೆ, ಸರ್ಕಾರ ಅವರ ಕುಟುಂಬದ ನೋವಿಗೆ ಸ್ಪಂದಿಸಿದೆ ಮತ್ತು ಯಾವತ್ತೂ ಜತೆಗಿರಲಿದೆ ಎಂದು ಹೇಳಿದರು. ಚಂದ್ರಶೇಖರ್ ಕುಟುಂಬಕ್ಕೆ ಸಾಂತ್ವನ ಹೇಳಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, …

Read More »

ವಿದ್ಯಾರ್ಥಿಗಳ ಭವಿಷ್ಯ ರೂಪಿಸಬಲ್ಲ ಶಿಕ್ಷಕರಲ್ಲಿ ದೇವರನ್ನು ಕಾಣುವ ಸಂಸ್ಕೃತಿ ನಮ್ಮದು: ಮಧು ಬಂಗಾರಪ್ಪ

ಸೊರಬ: ವಿದ್ಯಾರ್ಥಿಗಳ ಭವಿಷ್ಯ ರೂಪಿಸಬಲ್ಲ ಶಿಕ್ಷಕರಲ್ಲಿ ದೇವರನ್ನು ಕಾಣುವ ಸಂಸ್ಕೃತಿ ನಮ್ಮದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು. ಪಟ್ಟಣದ ರಂಗ ಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆತ್ತ ತಂದೆ, ತಾಯಿಗಳ ಸ್ಥಾನದಲ್ಲಿ ಅಕ್ಷರ ಕಲಿಸುವ ಗುರುಗಳನ್ನು ನೋಡುವ ಪರಂಪರೆ ನಮ್ಮದು. ಶಿಕ್ಷಕರ ಅನುಪಸ್ಥಿತಿಯಲ್ಲಿ ಸಮಾಜವನ್ನು ನೆನಪಿಸಿಕೊಳ್ಳಲು ಸಾಧ್ಯವಿಲ್ಲ. ನಿಮ್ಮ ಕರ್ತವ್ಯಕ್ಕೆ ಚ್ಯುತಿ ಬರದಂತೆ …

Read More »

ಜೋಗ ಜಲಪಾತ ಪ್ರವೇಶ ಶುಲ್ಕ ಹೆಚ್ಚಳ: ಪ್ರವಾಸಿಗರ ಆಕ್ಷೇಪ

ತಾಳಗುಪ್ಪ : ಪ್ರಕೃತಿಯ ರಮ್ಯ ತಾಣ ಜೋಗ ಜಲಪಾತ ವೀಕ್ಷಣೆ ಪ್ರವೇಶ ಶುಲ್ಕ ಈಗ ಮತ್ತಷ್ಟು ದುಬಾರಿಯಾಗಿದೆ. ಸುಮಾರು 183.7 ಕೋಟಿ ರು.ಗಳ ವೆಚ್ಚದಲ್ಲಿ ಜಲಪಾತದ ಆವರಣವನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವನ್ನಾಗಿ ರೂಪಿಸಲು ಹೊರಟಿರುವ ಜೋಗ ನಿರ್ವಹಣಾ ಪ್ರಾಧಿಕಾರವು, ಮೂಲ ಸೌಕರ್ಯ ಪೂರ್ಣ ರೂಪುಗೊಳ್ಳುವ ಮೊದಲೇ ಹಿಂದಿದ್ದ ಪ್ರವೇಶ ಶುಲ್ಕವನ್ನು ಹೆಚ್ಚಿಸಿದೆ.ಇದು ಈಗ ಪ್ರವಾಸಿಗರು ಹಾಗೂ ಸ್ಥಳೀಯರು ಆಕ್ಷೇಪಕ್ಕೆ ಕಾರಣವಾಗಿದೆ. ಜೋಗ ಜಲಪಾತದ ಪ್ರದೇಶದಲ್ಲಿ ಕಳೆದ ಎರಡು ವರ್ಷದಿಂದ …

Read More »

‘ಈಸೂರು’ ಸ್ವಯಂ ಸ್ವಾತಂತ್ರ್ಯ ಘೋಷಿಸಿಕೊಂಡ ಗ್ರಾಮ

ಶಿವಮೊಗ್ಗ: 78ನೇ ಸ್ವಾತಂತ್ರ್ಯ ದಿನಾಚರಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ‘ಏಸೂರು ಕೊಟ್ಟರು ಈಸೂರು ಕೊಡೆವು’ ಎಂದು ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರ್ಯ ಘೋಷಿಸಿಕೊಂಡ ಹಳ್ಳಿ ಈಸೂರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಈಸೂರು ಗ್ರಾಮದ ಜನರು ಬ್ರಿಟಿಷರಿಗೆ ಸೆಡ್ಡು ಹೊಡೆದು, ಅವರೊಂದಿಗೆ ಕಾದಾಡಿ ವೀರ ಮರಣ ಹೊಂದಿದ್ದಾರೆ. ಈಸೂರು ಸ್ವಾತಂತ್ರ್ಯ ಹೋರಾಟದಲ್ಲಿ 11 ಜನರನ್ನು ಗಲ್ಲಿಗೇರಿಸಲಾಯಿತು ಮತ್ತು 23 ಜನರಿಗೆ ಜೀವಾವಧಿ ಶಿಕ್ಷೆಯನ್ನು ಘೋಷಿಸಲಾಯಿತು. ಸ್ವಾತಂತ್ರ್ಯ ಚಳಿವಳಿಯಲ್ಲಿ ತ್ಯಾಗ ಬಲಿದಾನಕ್ಕೆ …

Read More »

ರೌಡಿಶೀಟರ್ ಬಂಧನ ವೇಳೆ ಪೋಲಿಸರ ಮೇಲೆ ಹಲ್ಲೆ

ಶಿವಮೊಗ್ಗ : ಹಲವು ಕಳ್ಳತನ ಹಾಗೂ ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಒಬ್ಬನನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಆತ ಹಲ್ಲೆ ನಡೆಸಿದ್ದಾನೆ. ಇವಳೆ ಆತ್ಮ ರಕ್ಷಣೆಗಾಗಿ ಪೊಲೀಸರು ರೌಡಿಶೀಟರ್ ಮೇಲೆ ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬಾ ನಗರದಲ್ಲಿ ನಡೆದಿದೆ.ಬಂಧಿಸಲು ಹೋಗಿದ್ದಾಗ ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ರೌಡಿಶೀಟರ್ ಗೆ ಗುಂಡು ಹಾರಿಸಲಾಗಿದೆ.ಆತ್ಮ ರಕ್ಷಣೆಗಾಗಿ ರೌಡಿಶೀಟರ್ ಭವಿತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಾಲಿಗೆ ವಿನೋಬನಗರ ಪಿಎಸ್‌ಐ …

Read More »