Breaking News

ಶಿವಮೊಗ್ಗ

ಹೊಸ ಪರಿಕಲ್ಪನೆಯಡಿ ಡಿಸಿ ಗ್ರಾಮಗಳಿಗೆ ಭೇಟಿ

ಶಿವಮೊಗ್ಗ : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ. ಈ ಪರಿಕಲ್ಪನೆಯ ಅಂಗವಾಗಿ ದಿ:19/03/2022ರ ಶನಿವಾರ ಬೆಳಗ್ಗೆ 11.00ಕ್ಕೆ ತೀರ್ಥಹಳ್ಳಿ ತಾಲೂಕು ನೊಣಬೂರು ಗ್ರಾಮ ಪಂಚಾಯತಿ ಆವರಣದಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ …

Read More »

ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರುವಿಡುವಂತೆ ಒತ್ತಾಯ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರ ಹೆಸರನ್ನು ಶಿವಮೊಗ್ಗದಲ್ಲಿ ನಿರ್ವಣವಾಗುತ್ತಿರುವ ನೂತನ  ವಿಮಾನ ನಿಲ್ದಾಣಕ್ಕೆ ಹೆಸರಿಡುವಂತೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಅವರ ಬೇಡಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಕೇಂದ್ರ ಸರ್ಕಾರದ ಜತೆ ಚರ್ಚೆ ನಡೆಸಿ ಎಂದು ಒತ್ತಾಯ ಮಾಡಿದರು. ಕೇಂದ್ರದ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು  ಭರವಸೆ ನೀಡಿದರು. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ …

Read More »

ಹರ್ಷ ಕೊಲೆ ಪ್ರಕರಣ : 10 ಆರೋಪಿಗಳ ಬಂಧನ

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದ 10 ಆರೋಪಿಗಳನ್ನು  ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಂಗ ಬಂಧನ ನೀಡಿದೆ. ಹರ್ಷನ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 10 ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಫೆ 25 ರಿಂದ 11 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಸೋಮವಾರ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಎಲ್ಲ ಆರೋಪಿಗಳನ್ನು ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆ ಎಲ್ಲ ಆರೋಪಿಗಳನ್ನು …

Read More »

ಶಿವಮೊಗ್ಗದಲ್ಲಿ ಹರಡಿದ ಸುಳ್ಳ ಸುದ್ದಿಗೆ ಬ್ರೇಕ್ ಹಾಕಿದ ಡಿಡಿಪಿಯು

ಶಿವಮೊಗ್ಗ: ಶಿವಮೊಗ್ಗದಲ್ಲಿ ಮಾ. 7 ರ ಸೋಮವಾರದಂದು ಕಾಲೇಜ್ ಗಳಿಗೆ ರಜೆ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳ ಕೆಲವು ಗುಂಪುಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿರುವುದರಿಂದ ಡಿಡಿಪಿಯು ಅವರು ಸ್ಪಷ್ಟನೆ ನೀಡಿದ್ದಾರೆ. ದಿನಾಂಕ 07/03/2022ರಂದು ಯಾವುದೇ ಕಾಲೇಜುಗಳಿಗೆ ರಜೆ ಇರುವುದಿಲ್ಲ.ಪರೀಕ್ಷೆಗಳು ಯಥಾಸ್ಥಿತಿಯಲ್ಲಿ ನಡೆಯುತ್ತವೆ, ಯಾರೋ ಅನಾಮಿಕರು ಉಪನಿರ್ದೇಶಕರ ಹೆಸರಿನಲ್ಲಿ ಜಿಲ್ಲಾಧಿಕಾರಿಯವರ ಆದೇಶದಂತೆ ಇಂದು ರಜೆ ಎಂದು what’s app ನಲ್ಲಿ ಹಾಕಿದ್ದಾರೆ, ಇದು ಸುಳ್ಳು ಸುದ್ದಿಯಾಗಿದ್ದು, ಯಾವುದೇ ಕಾಲೇಜಿಗೆ ರಜೆ ಇರುವುದಿಲ್ಲ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ ಎಂದರು.

Read More »

ಹರ್ಷ ಮನೆಗೆ ಮಾಜಿ ಸಿಎಂ ಭೇಟಿ: 25 ಲಕ್ಷ ರೂ. ಪರಿಹಾರ ವಿತರಣೆ

ಶಿವಮೊಗ್ಗ: ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರಕಾರದ ಪರವಾಗಿ ಹರ್ಷ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರದ ಚೆಕ್ ನೀಡಿದರು. ಸೀಗೆಹಟ್ಟಿಯಲ್ಲಿ ಹರ್ಷ ಕುಟುಂಬಸ್ಥರ ಭೇಟಿ ಬಳಿಕ ಮಾತನಾಡಿದ ಯಡಿಯೂರಪ್ಪ, 26 ವರ್ಷದ ಯುವಕ ಹರ್ಷ ಎಲ್ಲರ ಜೊತೆ ಆತ್ಮೀಯ ಸಂಬಂಧ ಹೊಂದಿದ್ದ. ಈ ಭಾಗದಲ್ಲಿ ಗೊಂದಲ, ಹೋರಾಟಕ್ಕೆ ಅವಕಾಶ ನೀಡುತ್ತಾ ಇರಲಿಲ್ಲ. ಹಿಂದೂ ಯುವ …

Read More »

ಶಿವಮೊಗ್ಗದಲ್ಲಿ ಹಲ್ಲೆ ಪ್ರಕರಣ : ಇಬ್ಬರು ಬಂಧನ

ಶಿವಮೊಗ್ಗ: ನಗರದಲ್ಲಿ ನಡೆದಂತ ಹರ್ಷ ಹತ್ಯೆ ಪ್ರಕರಣ ಮಾಸುವ ಮುನ್ನವೇ, ಮತ್ತೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ಪ್ರಕರಣ ವರದಿಯಾಗಿತ್ತು. ಈ ಸಂಬಂಧ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕಃ-3-3-2022 ರಂದು ಸಂಜೆ 06-30 ಗಂಟೆಗೆ ತುಂಗಾನಗರ ಠಾಣಾ ವ್ಯಾಪ್ತಿಯ ಪದ್ಮಾ ಟಾಕೀಸ್ ಎದುರು ಗೋಪಾಳ ಶಿವಮೊಗ್ಗ ಟೌನ್ ನ ವಾಸಿಯೊಬ್ಬರು ತಮ್ಮ ನಾಯಿಯನ್ನು …

Read More »

ಹರ್ಷನ ಕುಟುಂಬಕ್ಕೆ ಪರಿಹಾರ ಧನ ಘೋಷಿಸಿದ ಸರ್ಕಾರ

ಶಿವಮೊಗ್ಗ: ಫೆ.20ರಂದು ಹತ್ಯೆಗೀಡಾದ ಹಿಂದೂಪರ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ರು. ಪರಿಹಾರ ಘೋಷಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾನುವಾರ ತಾವು ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಈ ಚೆಕ್‌ ಅನ್ನು ಹರ್ಷ ಕುಟುಂಬಕ್ಕೆ ಹಸ್ತಾಂತರಿಸಲಿದ್ದೇವೆ ಎಂದು ತಿಳಿಸಿದರು. ಇದೇ ವೇಳೆ ಆಸ್ತಿಗಳಿಗೆ ಹಾನಿಯಿಂದ ನಷ್ಟಕ್ಕೆ ಒಳಗಾದವರಿಗೂ ಪರಿಹಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

Read More »

ಹರ್ಷ ಕುಟುಂಬಕ್ಕೆ ನೆರವಿನ ಮಹಾಪೂರ

ಶಿವಮೊಗ್ಗ : ಕೋಮುದ್ವೇಷಕ್ಕೆ ಬಲಿಯಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ನೆರವಿನ ಮಹಾಪೂರ ಹರಿದು ಬಂದಿದ್ದು, ಈವರೆಗೆ 2 ಕೋಟಿ ರೂಪಾಯಿಗಳಿಗೂ ಅಧಿಕ ನೆರವು ನೀಡಲಾಗಿದೆ ಎಂದು ತಿಳಿದುಬಂದಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ 10 ಲಕ್ಷ ರೂಪಾಯಿ ನೀಡಿರುವುದು ಸೇರಿದಂತೆ ಹರ್ಷ ಅವರ ಮನೆಗೆ ಭೇಟಿ ನೀಡಿದ್ದ ರಾಜಕಾರಣಿಗಳು, ಮಠಾಧೀಶರು ಹಣದ ನೆರವು ನೀಡಿದ್ದಾರೆ. ಅಲ್ಲದೆ ಹರ್ಷ ತಾಯಿ ಪದ್ಮಾ ಅವರ ಖಾತೆಯ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ …

Read More »

ರಾಜ್ಯದ ರೈತರಿಗೆ ಸಿಹಿ ಸುದ್ದಿ

ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟವು ಮಹಾಶಿವರಾತ್ರಿ ಕೊಡುಗೆಯಾಗಿ ಮಾರ್ಚ್ 01 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆ.ಜಿ.ಗೆ ರೂ.2.50 ಹೆಚ್ಚಿಸಲಾಗಿದೆ ಎಂದು ಶಿಮುಲ್ ಅಧ್ಯಕ್ಷ ಶ್ರೀಪಾದ್‍ರಾವ್ ತಿಳಿಸಿದರು. ಶಿಮುಲ್, ಮಾಚೇನಹಳ್ಳಿ ಇಲ್ಲಿ ಇಂದು ಕರೆಯಲಾಗಿದ್ದ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಕಾಲ ಕಾಲಕ್ಕೆ …

Read More »