BigTv News
March 20, 2025
Breaking News, Crime, ಕರ್ನಾಟಕ, ಹಾಸನ
ಹಾಸನ ತಾಲೂಕು ಕಟಾಯ ಗ್ರಾಮದಲ್ಲಿ ಸಾಕು ನಾಯಿ ಒಂದು ಕಾಳಿಂಗ ಸರ್ಪದೊಂದಿಗೆ ಹೋರಾಡಿ ತನ್ನ ಮಾಲೀಕನ ಮಕ್ಕಳ ಜೀವವನ್ನು ಕಾಪಾಡಿದೆ ಕೊನೆಗೆ ತನ್ನ ಪ್ರಾಣವನ್ನು ಕಳೆದುಕೊಂಡಿದೆ. ಸಮನ್ ಎಂಬುವರು ಸಾಕಿದ್ದ ಬಿಟ್ಬುಲ್ ನಾಯಿ ಒಂದು ಕಾಳಿಂಗ ಸರ್ಪದೊಂದಿಗೆ ಕಾಳಗ ನಡೆಸಿ ಪ್ರಾಣ ಬಿಟ್ಟಿದೆ ಹಾವಿನೊಂದಿಗೆ 15 ನಿಮಿಷಕ್ಕೂ ಹೆಚ್ಚು ಕಾಳಗ ನಡೆಸಿ ಅದನ್ನು ಕೊಂದು ಮತ್ತೆ ತಾನು ಪ್ರಾಣ ಬಿಟ್ಟಿದೆ. ಈ ವಿಷಯ ಕೇಳಿ ಕುಟುಂಬದವರು ಕಣ್ಣೀರಿಟ್ಟಿದ್ದಾರೆ.
Read More »
BigTv News
January 30, 2025
Breaking News, ಹಾಸನ
ಹಾಸನ: ಒಳಮೀಸಲಾತಿಗೆ ಸಂಬಂಧಿಸಿದಂತೆ ರಚಿಸಲಾಗಿರುವ ನ್ಯಾ. ನಾಗಮೋಹನ್ ದಾಸ್ ಆಯೋಗಕ್ಕೆ ಕಾಲಾವಕಾಶ ವಿಸ್ತರಣೆ ಮಾಡದೇ, ಕೂಡಲೇ ಈಗಾಗಲೇ ಸಂಗ್ರಹಿಸಿರುವ ಮಧ್ಯಂತರ ವರದಿ ದತ್ತಾಂಶವನ್ನು ಪರಿಗಣಿಸಿ ಒಳ ಮೀಸಲಾತಿ ಜಾರಿ ಮಾಡುವಂತೆ ಕರ್ನಾಟಕ ಮಾದಿಗ ದಂಡೋರ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಸಂಬಂಧ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಮೀಸಲಾತಿ ಜಾರಿ ವಿಷಯದಲ್ಲಿ ಆಯಾ ರಾಜ್ಯಗಳಿಗೆ ಅಧಿಕಾರ ಕೊಟ್ಟಿದೆ. ಆದರೂ …
Read More »
BigTv News
December 24, 2024
Breaking News, ಹಾಸನ
ಹಾಸನ: ರಾಜ್ಯದಲ್ಲಿ ಮತ್ತೊಮೆ ಮೈತ್ರಿ ಸರ್ಕಾರ ಶೀಘ್ರದಲ್ಲೇ ಬಂದೇ ಬರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಸಕಲೇಶಪುರದಲ್ಲಿ ನಡೆದ ಕಾಫಿ ಬೆಳೆಗಾರರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದರು. 2006ರಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಿಶ್ರ …
Read More »
BigTv News
December 24, 2024
Breaking News, ಹಾಸನ
ಹಾಸನ: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್) ನಂತರ ಕರ್ನಾಟಕದ ಕಾಫಿಯನ್ನು ಮತ್ತೊಂದು ರೀತಿಯ ಚಿನ್ನವಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಕಾಫಿ ಬೆಳೆಗಾರರ ಒಕ್ಕೂಟ ಆಯೋಜಿಸಿದ್ದ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. 2011 ರಿಂದ ಸ್ಥಗಿತಗೊಂಡಿದ್ದ ಸಮಗ್ರ ಕಾಫಿ ಅಭಿವೃದ್ಧಿ ಯೋಜನೆಯನ್ನು ಮತ್ತೆ ಜಾರಿಗೆ ತರಲಾಗಿದೆ. ಇದು ಕಾಫಿಯ ಗುಣಮಟ್ಟವನ್ನು …
Read More »
BigTv News
December 20, 2024
Breaking News, ಹಾಸನ
ಹಾಸನ: ಜಿಲ್ಲೆಯಲ್ಲಿ ಬೆಳೆ ವಿಮೆ ಕಟ್ಟಿರುವ ರೈತರಿಗೆ ಯಾವುದೇ ರೀತಿಯಲ್ಲಿ ಮೋಸ ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಓರಿಯೆಂಟಲ್ ವಿಮಾ ಕಂಪನಿಯ ಪ್ರತಿನಿಧಿಗಳು, ರೈತರಿಂದ ಲಂಚ ಕೇಳುತ್ತಿರುವ ಬಗ್ಗೆ ದೂರುಗಳು ಬಂದಿವೆ. ಜೊತೆಗೆ ರೈತರಿಗೆ ಬೆದರಿಕೆ ಹಾಕಿ, ಇಳುವರಿಯನ್ನು ನಾವು ಹೇಳಿದಂತೆ ಬರೆದುಕೊಡಿ ಎಂದು ಕೇಳುತ್ತಿರುವುದು …
Read More »
BigTv News
October 30, 2024
Breaking News, ಹಾಸನ
ಹಾಸನ: ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು. ಕುಟುಂಬ ಸಮೇತರಾಗಿ ಇಂದು ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಡಳಿತದಿಂದ ಬಹಳ ಅಚ್ಚುಕಟ್ಟಾಗಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಉತ್ತಮ ವ್ಯವಸ್ಥೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಅಭಿನಂದನೆಗಳನ್ನು ತಿಳಿಸಿದರು. ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ. …
Read More »
BigTv News
October 29, 2024
Breaking News, ಹಾಸನ
ಹಾಸನ: ವಿಶ್ವದ ಭೂಪಟದಲ್ಲಿ ಭಾರತೀಯ ರೈಲ್ವೆ ಇಲಾಖೆಯನ್ನು ಐದನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ 7 ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿ ಮಾಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಹಾಸನದಲ್ಲಿ ಇಂದು ಕುಟುಂಬ ಸಮೇತ ಹಾಸನಾಂಬ ದೇವಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, 44 ಸಾವಿರ ರೈಲ್ವೆ …
Read More »
BigTv News
October 24, 2024
Breaking News, ಹಾಸನ
ಹಾಸನ: ವರ್ಷಕ್ಕೊಮೆ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ನಗರದ ಅಧಿದೇವತೆ ಹಾಗೂ ಶಕ್ತಿದೇವತೆ ಹಾಸನಾಂಬೆಯ ಗರ್ಭಗುಡಿ ಬಾಗಿಲನ್ನು ಶಾಸೊತ್ರೕಕ್ತವಾಗಿ ಇಂದು ತೆರೆಯಲಾಯಿತು. ಅರಸು ವಂಶಸ್ಥರು ಬಾಳೆಕಂಬವನ್ನು ಕಡಿಯುವ ಮೂಲಕ 12.10ಕ್ಕೆ ಸರಿಯಾಗಿ ಗರ್ಭಗುಡಿಯ ಬಾಗಿಲನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಶಾಸಕರಾದ ಎಚ್.ಪಿ.ಸ್ವರೂಪ್ ಪ್ರಕಾಶ್, ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಸತ್ಯಭಾಮಾ, ಎಸ್‌ಪಿ ಮಹಮದ್ ಸುಜೇತ …
Read More »
BigTv News
October 1, 2024
Breaking News, ಹಾಸನ
ಹಳೇಬೀಡು: ಗ್ರಾಮೀಣ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಸಮರ್ಪಕವಾಗಿ ಸಂಪನ್ಮೂಲಗಳ ಬಳಕೆ ಮಾಡಿಕೊಂಡು ಮುನ್ನಡೆಯುತ್ತಿರುವುದರಿಂದ ಮಾದಿಹಳ್ಳಿ ಹೋಬಳಿಯ ಇಬ್ಬಿಡು ಗ್ರಾಮ ಪಂಚಾಯಿತಿಗೆ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ದೊರಕಿದೆ. ಸತತ ಎರಡನೇ ಬಾರಿಗೆ ಈ ಗೌರವಕ್ಕೆ ಪಾತ್ರವಾಗಿದೆ. ಅ.2ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ನಾಮಫಲಕ, ಪ್ರಮಾಣಪತ್ರ ಹಾಗೂ ₹5 ಲಕ್ಷ ಬಹುಮಾನ ಒಳಗೊಂಡಿದೆ. 16 ಹಳ್ಳಿಗಳನ್ನು ಹೊಂದಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ …
Read More »
BigTv News
September 8, 2024
Breaking News, ಹಾಸನ
ಹಾಸನ: ಜಿಲ್ಲೆಯ ಅರಕಲಗೂಡು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಮೂಲ ರೈತನ ಗಮನಕ್ಕೆ ಬಾರದೆ ಜಮೀನನ್ನು ಬೇರೊಬ್ಬರಿಗೆ ಕ್ರಯ, ನೋಂದಣಿ ಮಾಡಿದ ಘಟನೆ ನಡೆದಿದೆ. ಅರಕಲಗೂಡು ತಾಲೂಕು ರಾಮನಾಥಪುರ ಹೋಬಳಿ ಜಿಟ್ಟೇನಹಳ್ಳಿ ಗ್ರಾಮದ ಸರ್ವೆ ನಂಬರ್ 32/6, 32/35ರಲ್ಲಿ ತಲಾ 8.8 ಗುಂಟೆ ಭೂಮಿ ಶ್ರೀನಿವಾಸ ಬಿನ್ ಜವರೇಗೌಡ, ರೇವಣ್ಣ ಬಿನ್ ಜವರೇಗೌಡ ಸಹೋದರರಿಗೆ ಪಿತ್ರಾರ್ಜಿತ ಆಸ್ತಿಯಾಗಿ ಬಂದಿದೆ. ಈ ಜಮೀನನ್ನು ಅವರಿಗೆ ತಿಳಿಯದಂತೆ ಕೊಣನೂರು …
Read More »