BigTv News
August 7, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಕಾವೇರಿ ಭಾಗದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುವ ಮುನ್ನ ನಾಲೆಗಳಿಗೆ ನೀರು ಹರಿಸಿ, ರಾಜ್ಯದ ರೈತರ ಹಿತ ಕಾಪಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರುಜಲದರ್ಶಿನಿ ಸರಕಾರಿ ಅತಿಥಿಗೃಹದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸಂಕಷ್ಟ ಕಾಲದಲ್ಲೂ ಸ್ಥಳೀಯ ರೈತರನ್ನು ನಿರ್ಲಕ್ಷಿಸಿ ಕಬಿನಿ, ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿ, ಅಚ್ಚುಕಟ್ಟು ಭಾಗದ ರೈತರನ್ನು ಬಲಿ ಕೊಡುವುದು ಸರಿಯಲ್ಲ. ಜಲಾಶಯದ ಎಲ್ಲ …
Read More »
BigTv News
August 7, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಜಮೀನು ವಿವಾದದ ಹಿನ್ನೆಲೆಯಲ್ಲಿ ಮರಕ್ಕೆ ಕಟ್ಟಿಹಾಕಿ ಥಳಿಸಿದ್ದರಿಂದ ಅವಮಾನಿತರಾಗಿ, ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ಮೃತರ ಪತ್ನಿ ನೀಡಿದ ದೂರಿನಂತೆ ಮೂವರ ವಿರುದ್ಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹುಣಸೂರು ತಾಲೂಕಿನ ಕುಡಿನೀರು ಮುದ್ದನಹಳ್ಳಿ ಗ್ರಾಮದ ಗುರುರಾವ್ ಭಾಂಗೆ (60) ಆತ್ಮಹತ್ಯೆಗೆ ಶರಣಾದವರು. ಇವರಿಗೆ ಪತ್ನಿ, ಮಕ್ಕಳಿದ್ದಾರೆ. ಪತಿಯ ಆತ್ಮಹತ್ಯೆಗೆ ಗ್ರಾಮದ ಮಹೇಶ್ ಮತ್ತವರ ಪತ್ನಿ ಸಾಕಮ್ಮ …
Read More »
BigTv News
July 31, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ನಗರದ ವಿವಿ ಪುರಂ ಪೊಲೀಸರ ನಿದ್ದೆಗೆಡಿಸಿದ್ದ ಐಷಾರಾಮಿ ಕಾರುಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಕಳ್ಳತನ ಪ್ರಕರಣವನ್ನು ಇದೀಗ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂಬಂಧ ಬೆಂಗಳೂರು ಮೂಲದ ಕುಖ್ಯಾತ ವೃತ್ತಿಪರ ಖದೀಮನನ್ನು ಬಂಧಿಸಿದ್ದು, ಈತ ಒಬ್ಬನೇ ಕಾರು ಕಳ್ಳತನದ ಜೊತೆಗೆ ಮನೆಗಳ್ಳತನ ಸಹ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಐಷಾರಾಮಿ ಕಾರುಗಳ ಸರಣಿ ಕಳ್ಳತನ ಮಾಡುತ್ತಿದ್ದ ಈತ, ಮೈಸೂರಿನಲ್ಲೇ 2-3 ಐಷರಾಮಿ ಕಾರುಗಳನ್ನು ಕದ್ದು ಬೇರೆಯವರಿಗೆ ಮಾರಾಟ …
Read More »
BigTv News
July 22, 2023
News, ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು:ನಾಗರಹೊಳೆ ಉದ್ಯಾನದಲ್ಲಿ ಜಿಂಕೆ ಬೇಟೆಯಾಡಿ, ಆರೋಪಿಗಳು ಜೋಳದ ಹೊಲದಲ್ಲಿ ಮಾಂಸವನ್ನು ಬಚ್ಚಿಟ್ಟಿದ್ದರು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಪರಿಕರವನ್ನು ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ತಪ್ಪಿಸಿಕೊಂಡ ನಾಲ್ವರ ಬಂಧನಕ್ಕೆ ಬಲೆ ಬೀಸಿದ್ದಾರೆ. ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ, ಹಾಗು ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ನೇಗತ್ತೂರಿನ ಜೋಳದ ಹೊಲದಲ್ಲಿ, ಅಕ್ರಮವಾಗಿ ಕಾಡು ಪ್ರಾಣಿ ಮಾಂಸ ಸಂಗ್ರಹಿಸಿಟ್ಟಿದ್ದಾರೆಂದು ಖಚಿತ ಮಾಹಿತಿ ಬಂದಿತ್ತು. ಈ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು …
Read More »
BigTv News
July 18, 2023
News, ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು :ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೆ ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಪಿರಿಯಾಪಟ್ಟಣ ಬಳಿಯ ಕಂಪಲಾಪುರ ಗ್ರಾಮದ ಬಳಿ ಇಂದು ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸೌದೆ ತುಂಬಿಕೊಂಡು ನಿಂತಿದ್ದ ಟ್ರಾಕ್ಟರ್ಗೆ ಕಂಪಲಾಪುರ ಬಳಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮುದಾಸಿರ್, ಮುಜಾಹಿದ್ ಹಾಗೂ ಅಹ್ಮದ್ ಪಾಷಾ …
Read More »
BigTv News
July 17, 2023
News, ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು:ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಸಸ್ಯೋದ್ಯಾನ (ಟ್ರೀ ಪಾರ್ಕ್) ಇಲ್ಲವೋ ಅಲ್ಲಿ ಸಾಲುಮರದ ತಿಮ್ಮಕ್ಕ ಟ್ರೀಪಾರ್ಕ್ಗಳನ್ನು ನಿರ್ಮಿಸುವಂತೆ ರಾಜ್ಯ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮೈಸೂರಿನ ಅರಣ್ಯ ಭವನದಲ್ಲಿ ಭಾನುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇಂದಿನ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯ ತಡೆಗೆ ವೃಕ್ಷ ಸಂಪತ್ತಿನ ಹೆಚ್ಚಳ ಅನಿವಾರ್ಯ ಎಂದರು. …
Read More »
BigTv News
July 4, 2023
News, ಕರ್ನಾಟಕ, ಜಿಲ್ಲೆ, ಮೈಸೂರು, ಸುದ್ದಿ
ಬೆಂಗಳೂರು; ಲಂಚಾವತಾರ ತಾಳಿದ ವೈದ್ಯೆಯ ಅಮಾನತು ಮಾಡಿ ಆದೇಶ ಹೊರಡಿಸಿದೆ. ಸೂಜಿ ಚುಚ್ಚಲು, ಬ್ಯಾಂಡೆಂಜ್ ಹಾಕಲು ಕಾಸು ಪಡೆದ ಡಾಕ್ಟರ್ ಕೋಮಲ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಆದೇಶ ಮಾಡಿದ್ದು, ಸುದ್ದಿ ಪ್ರಸಾರದ ಬೆನ್ನಲ್ಲೇ ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಜನರ ವಿಶ್ವಾಸಕ್ಕೆ ಪ್ರಾತ್ರರಾಗಿದ್ದಾರೆ. ಶಾಂತಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ಕೋಮಲ ಎಂಬ ವೈದ್ಯೆ ಜನರಿಂದ ಹಣ ಸುಲಿಗೆ ಮಾಡುತ್ತಿದ್ದು ವೈದ್ಯಯ ಲಂಚಾವತಾರ ವಿಡಿಯೋ …
Read More »
BigTv News
June 30, 2023
News, ಕರ್ನಾಟಕ, ಮೈಸೂರು, ಸುದ್ದಿ
ನಿವೃತ್ತ ಕರ್ನಲ್ ಕೃಷ್ಣಮೂರ್ತಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿ ಲಕ್ಷ್ಮೀಪುರಂ ನಿವಾಸದಲ್ಲಿ ಕೊನೆಯುಸಿರನ್ನು ಚೆಲ್ಲಿದ್ದಾರೆ. ರಜಪೂತ್ ರೆಜಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸೇನಾಧಿಕಾರಿ1971ರ ಯುದ್ದದಲ್ಲಿ ಕೃಷ್ಣಮೂರ್ತಿ ಭಾಗವಹಿಸಿದ್ದರು.ಲಕ್ಷ್ಮೀಪುರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತಿಮ ದರ್ಶನಕ್ಕೆ ಮೈಸೂರು ಎಕ್ಸ್ ಸರ್ವಿಸ್ ಮೆನ್ ಮೂವ್ಮೆಂಟ್ (ರಿ ) ಸಂಸ್ಥಾಪಕರಾದ ಶ್ರೀಯುತ ಮಹೇಶ್ ವಿ,ಅಧ್ಯಕ್ಷರಾದ ಶ್ರೀಯುತ ಪ್ರಿನ್ಸ್ ಮತ್ತು ಪದಾಧಿಕಾರಿಗಳು ಹಾಗೂ ಸುಮಾರು 25 ಸದಸ್ಯರು ಮೃತರಿಗೆ ಸಕಲ ಗೌರವಗಳೊಂದಿಗೆ …
Read More »
BigTv News
June 28, 2023
News, ಕರ್ನಾಟಕ, ಮೈಸೂರು
ಮೈಸೂರು ; ಆಶಾ ಕಾರ್ಯಕರ್ತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮೈಸೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಮೈಸೂರು ಜಿಲ್ಲಾ ಪಂಚಾಯತ್‌ನಲ್ಲಿ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದರು. ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ ಎಐಯುಟಿಯುಸಿ ಕೇಂದ್ರೀಯ ಕಾರ್ಮಿಕ ಸಂಘಟನೆಗೆ ಸಂಯೋಜಿತ ಗೊಂಡಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವ ಧನ 8,000 ನಿಗದಿಪಡಿಸಿ, ಆರ್ ಸಿ ಎಚ್ ಪೋರ್ಟಲ್ ಮೂಲಕ ಪ್ರೋತ್ಸಾಹ ಧನ ನೀಡುವುದನ್ನು …
Read More »
BigTv News
June 27, 2023
News, ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಪ್ರಭು ಕೆಂಪೇಗೌಡ ರವರ 514ನೇ ಜಯಂತಿಯನ್ನ ಅದ್ದೂರಿಯಾಗಿ ಆಚರಿಸಲಾಗಿದೆ. ಕೆಂಪೇಗೌಡ ಜಯಂತಿ ಅಂಗವಾಗಿ ಅದ್ದೂರಿ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಆರಂಭವಾದ ಮೆರವಣಿಗೆ ಕಲಾಮಂದಿರದ ಬಳಿ ಅಂತ್ಯವಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ರವರು ಮೆರವಣಿಗೆಗೆ ಚಾಲನೆ ನೀಡಿದರು.ಸಂಸದ ಪ್ರತಾಪಸಿಂಹ ಶಾಸಕರಾದ ಜಿ ಟಿ ದೇವೇಗೌಡ ಪುತ್ರ ಶಾಸಕ ಹರೀಶ್ ಗೌಡ ಚಾಮರಾಜ ಕ್ಷೇತ್ರದ …
Read More »