Breaking News

ಮೈಸೂರು

ಪೋಲಿಸ್ ರು ವಕೀಲರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಮೈಸೂರು; ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇತ್ತೀಚೆಗೆ ವಕೀಲರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಂಡ್ಯದ ಬಾರ್ ಅಸೋಸಿಯೇಷನ್ ಸದಸ್ಯರು ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಮಂಡ್ಯದ ಸಂಜಯ್ ವೃತ್ತದಲ್ಲಿ ಜಮಾಯಿಸಿದ ವಕೀಲರು ಮಾನವ ಸರಪಳಿ ರಚಿಸಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪೊಲೀಸ್ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಜೇಂದ್ರ ವಕೀಲ್, ವಕೀಲರ ವಿರುದ್ಧ …

Read More »

ವಿದೇಶಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣು

ಮೈಸೂರು: ವಿದೇಶಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾರೆ. ನಗರದ  ಗೋಕುಲಂ ಬಡಾವಣೆ ನಿವಾಸಿ ಜೋರ್ಡಾನ್ ದೇಶದ ಕರಕ್ ನಗರದ ನಿವಾಸಿ ಕ್ಯೂಸೆ ಸುಹೇಲ್ ಇಸಾ ಆಲ್ಬಗೇನ್ ಮೃತ ವಿದ್ಯಾರ್ಥಿ. ಬಡಾವಣೆಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಹನುಮ ಜಯಂತಿ ಆಚರಣೆ : 3 ದಿನ ಮಧ್ಯ ಮಾರಾಟ ನಿಷೇಧ

ಮೈಸೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಹನುಮ ಜಯಂತಿ ಆಚರಣೆ ನಡಯುತ್ತಿದ್ದು, ಹಲವು ಕಡೆಗಳಲ್ಲಿ ವಿಜೃಂಭಣೆಯಿಂದ ಆಚರಣೆ ನಡೆಯುತ್ತಿದೆ. ಈ ಹಿನ್ನಲೆ ಹುಣಸೂರಿನಲ್ಲಿ ಮೂರು ದಿನಗಳ ಕಾಲ ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ. ರಾಜ್ಯದ ಎಲ್ಲೆಡೆಯಲ್ಲಿ ಹನುಮ ಜಯಂತಿ ಆಚರಣೆಯನ್ನು ಆಚರಿಸುತ್ತಿದ್ದು, ಮೈಸೂರಿನ ಹುಣಸೂರಿನಲ್ಲೂ ಕೂಡ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಇಂದಿನಿಂದ ಮೂರು ದಿನಗಳವರೆಗೂ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು …

Read More »


ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀಕಂಠಯ್ಯ ನಿಧನ

ಮೈಸೂರು: ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀಕಂಠಯ್ಯನವರು (96) ಶುಕ್ರವಾರ ನಿಧನರಾಗಿದ್ದಾರೆ. ವಿಷಯ ತಿಳಿದ ಕೂಡಲೇ ನಂಜನಗೂಡು ನಗರದ ರಾಷ್ಟ್ರಪತಿ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಸ್ವಾತಂತ್ರ್ಯ ಹೋರಾಟಗಾರ ಶ್ರೀಕಂಠಯ್ಯ ನಿಧನಬಳಿಕ ಮಾತನಾಡಿ ಧ್ರುವನಾರಾಯಣ್, ಶ್ರೀಕಂಠಯ್ಯನವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. 96 ವರ್ಷಗಳಲ್ಲಿ ಅವರು ಜನಪರವಾಗಿದ್ದರು. ಗಾಂಧೀಜಿ ಅವರ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡವರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಪುಣ್ಯ …

Read More »

ಕೆಆರ್ ಇಡಿಎಲ್ ಯೋಜನಾ ನಿರ್ದೇಶಕ ಡಿ.ಕೆ.ದಿನೇಶ್ ಕುಮಾರ್ ಅನುಮಾನಾಸ್ಪದ ಸಾವು

ಮೈಸೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ (ಕೆಆರ್ ಇಡಿಎಲ್) ಯೋಜನಾ ನಿರ್ದೇಶಕ, ವಿಜಯನಗರ ನಿವಾಸಿ ಡಿ.ಕೆ.ದಿನೇಶ್ ಕುಮಾರ್ (51) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಬಗ್ಗೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ದೊಡ್ಡಪಾಳ್ಯ ಗ್ರಾಮದ ದಿನೇಶ್ ಬೆಂಗಳೂರಿನ ನಾಗರಬಾವಿಯಲ್ಲಿ ಕೆಆರ್ ಇಡಿಎಲ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಭಾನುವಾರ ರಾತ್ರಿ ಊಟದ ನಂತರ ದಿನೇಶ್ ಮಲಗಿದ್ದರು ಮತ್ತು ಸೋಮವಾರ ಪ್ರಜ್ಞೆ ತಪ್ಪಿದರು ಎಂದು ಅವರ ಪತ್ನಿ …

Read More »

ವಿವಾದಕ್ಕೆ ಕಾರಣವಾಗುತ್ತಿರುವ ಮೈಸೂರಿನ ಬಸ್ ನಿಲ್ದಾಣ

ಮೈಸೂರು: ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಎದುರು ಇದ್ದ ಬಸ್ ಶೆಲ್ಟರ್‌ ಮೇಲಿದ್ದ ಗುಂಬಜ್‌ ಸ್ಥಳೀಯ ಬಿಜೆಪಿ ಶಾಸಕರ ಹಾಗೂ ಬಿಜೆಪಿ ಸಂಸದರ ವಾಕ್ಸಮರಕ್ಕೆ ಕಾರಣವಾಗಿತ್ತು. ಇದಲ್ಲದೇ ಸಂಸದ ಪ್ರತಾಪ್‌ ಸಿಂಹ ಇದನ್ನು ಹೊಡೆದು ಹಾಕುವ ಬೆದರಿಕೆಯನ್ನು ಕೂಡ ಹಾಕಿದ್ದರು. ಈ ನಡುವೆ ಬಸ್‌ ನಿಲ್ದಾಣದ ಮೇಲೆ ನಿರ್ಮಾಣವಾಗಿದ್ದ ಮೂರು ಗುಂಬಜ್‌ ಪೈಕಿ ಎರಡನ್ನು ತೆರವು ಮಾಡಲಾಗಿದೆ ಅಂಥ ಸ್ಥಳೀಯ ಶಾಸಕ ರಾಮದಾಸ್‌ ಅವರು ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದ್ದಾರೆ.

Read More »

ಸಾಲ ಕೊಡಲು ನಿರಾಕರಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

ಮೈಸೂರು : ಜಿಲ್ಲೆ ಹೆಚ್​​.ಡಿ.ಕೋಟೆ ತಾಲೂಕಿನ ಹೊಸಹೊಳಲು ಗ್ರಾಮದ ರೈತ ಲಿಂಗೇಗೌಡ(72) ಎಂಬುವವರು ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿದ್ದಾರೆ. 4 ಎಕರೆ 13 ಗುಂಟೆ ಜಮೀನು‌ ಹೊಂದಿದ್ದ ರೈತ ಲಿಂಗೇಗೌಡ, ₹2 ಲಕ್ಷ ಸಾಲಕ್ಕೆ ಕಾವೇರಿ ಗ್ರಾಮೀಣ ಬ್ಯಾಂಕ್​ಗೆ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಪಡೆದ ಸಾಲ ತೀರಿಸಿಲ್ಲ ಎಂದು ಬ್ಯಾಂಕ್ ಸಾಲ ನಿರಾಕರಿಸಿತ್ತು. ಇದರಿಂದ ಮನನೊಂದು ಬ್ಯಾಂಕ್​​ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡ ರೈತ ಲಿಂಗೇಗೌಡನನ್ನು ಕೆ.ಆರ್​.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ …

Read More »

ವಿಧಾನಸಭಾ ಚುನಾವಣೆಯಲ್ಲಿ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುತ್ತೇನೆ : ಸಿದ್ದರಾಮಯ್ಯ

ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ”ಕೋಲಾರ, ಬಾದಾಮಿ, ವರುಣಾಕ್ಷೇತ್ರ ಶಾರ್ಟ್ ಲಿಸ್ಟ್ ನಲ್ಲಿ ಇದೆ. ಅಂತಿಮವಾಗಿ ಎಲ್ಲಿ ಸ್ಪರ್ಧಿಸಬೇಕೆಂದು ವರಿಷ್ಠರು ನಿರ್ಧರಿಸುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಬಳಿಕ ಸ್ಪರ್ಧಿಸುವ ಕ್ಷೇತ್ರ ಹೇಳುತ್ತೇನೆ” ಎಂದು ತಿಳಿಸಿದರು. ”ಹಾಗೆಯೇ ಸೋಲಿನ ಭಯದಲ್ಲಿ ಸರ್ವೇ ಮಾಡುತ್ತಿದ್ದಾರೆ ಎನ್ನುತ್ತಾರೆ. ಆದರೆ ಸರ್ವೇ ಮಾಡಿಸಿದರೆ ತಪ್ಪೇನು …

Read More »

29 ದಂಪತಿಗಳು ಲೋಕ ಅದಾಲತ್ ಮೂಲಕ ಹೊಸ ಜೀವನಕ್ಕೆ ನಾಂದಿ

ಮೈಸೂರು: ಒಟ್ಟು 29 ದಂಪತಿಗಳು ತಮ್ಮ ವೈವಾಹಿಕ ಬಿರುಕನ್ನು ಮರೆತು ಲೋಕ ಅದಾಲತ್ ಕೌನ್ಸೆಲಿಂಗ್ ಮೂಲಕ ಹೊಸ ಜೀವನಕ್ಕೆ ನಾಂದಿ ಹಾಡಿದರು. 29ರ ಶನಿವಾರ ನಗರದಲ್ಲಿ ನಡೆದ ಲೋಕ ಅದಾಲತ್ ನಲ್ಲಿ ಮತ್ತೆ ಒಂದಾಗಿ ಅನೇಕ ಪ್ರಕರಣಗಳನ್ನು ಸೌಹಾರ್ದಯುತವಾಗಿ ಬಗೆಹರಿಸಲಾಯಿತು.ಮೈಸೂರು ತಾಲೂಕಿನ 20, ತಿ.ನರಸೀಪುರ ಮತ್ತು ಪಿರಿಯಾಪಟ್ಟಣದಲ್ಲಿ ತಲಾ 2, ನಂಜನಗೂಡು, ಹುಣಸೂರು ತಾಲೂಕಿನ ತಲಾ 1 ಜೋಡಿ, ಎಚ್.ಡಿ.ಕೋಟೆ ತಾಲೂಕಿನ 3 ಜೋಡಿಗಳು ಒಟ್ಟು 29 ಜೋಡಿ ಒಂದಾದರು. …

Read More »

ಯುಎಇ ಕನ್ನಡ ರತ್ನ ಪ್ರಶಸ್ತಿಯನ್ನು ನಿರಾಕರಿಸಿದ ಯದುವೀರ್‌

ಮೈಸೂರು: ಯುಎಇ ಕನ್ನಡ ರತ್ನ ಪ್ರಶಸ್ತಿಯನ್ನು ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ನಿರಾಕರಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನನಗೆ ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂಬ ಸುದ್ದಿ ಮುದ್ರಣ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ.ಈ ಪ್ರಶಸ್ತಿಯನ್ನು ತಾನು ಸ್ವೀಕರಿಸುವುದಿಲ್ಲ. ಪ್ರಶಸ್ತಿಗೆ ತನ್ನನ್ನು ಪರಿಗಣಿಸಿದ್ದಕ್ಕಾಗಿ ಸಂಘಟಕರಿಗೆ ಧನ್ಯವಾದ ತಿಳಿಸುತ್ತೇನೆ. ಆದರೆ ಈ ಪ್ರಶಸ್ತಿಯನ್ನು ಸ್ವೀಕರಿಸುವುದು ಸೂಕ್ತವೆಂದು ತಾನು ಭಾವಿಸುವುದಿಲ್ಲ …

Read More »