Breaking News

ಮೈಸೂರು

ಸಾಲ ಭಾದೆ ತಾಳಲಾರದೇ ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ

ಮೈಸೂರು : ನಗರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಸಾಲ ಭಾದೆ ತಾಳಲಾರದೇ ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಕೃಷ್ಣರಾಜನಗರ ತಾಲೂಕಿನ ಸಂಬರವಳ್ಳಿ ಸಮೀಪದ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಟ್ಟಪ್ಪ (50), ರುಕ್ಮಿಣಿ (40) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ. ಕಳೆದ 20 ವರ್ಷಗಳಿಂದ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ದಂಪತಿ ಸಾಲ ಭಾದೆ ತಾಳಲಾರದೇ …

Read More »

ಸೆ. 24 ರಂದು ಮಹಿಷ ದಸರಾ ಆಚರಣೆ

ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಮಹಿಷ ಪ್ರತಿಮೆ ಬಳಿ ಸೆಪ್ಟೆಂಬರ್ 24 ರಂದು ಮಹಿಷ ದಸರಾ ಆಚರಿಸಲಾಗುವುದು ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 24 ರಂದು ಮಹಿಷ ದಸರಾ ಆಚರಿಸಲಾಗುವುದು. ಮಹಿಷಾ ದಸರಾ ಆಚರನೆಯನ್ನು ಯಾರು ತಡೆಯಲು ಬಂದರೂ ನಮ್ಮ ನಿರ್ಧಾರ ಬದಲಾಗುವುದಿಲ್ಲ. ಸೆ.25 ರಂದು ಚಾಮುಂಡಿ ಬೆಟ್ಟದ ಮಹಿಷಾ ಪ್ರತಿಮೆ ಬಳಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ. ಮಹಿಷಾ …

Read More »

ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಆಗಮನ : ಸೂಕ್ತ ಭದ್ರತೆ ಒದಗಿಸಿದ ಉಸ್ತುವಾರಿ ಸಚಿವ

ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದಲ್ಲದೆ ಸೂಕ್ತ ಭದ್ರತೆ ಕೈಗೊಳ್ಳಲು ಸೂಚಿಸಿದ್ದಾರೆ. ಸಭಾ ವೇದಿಕೆಯ ಸಿದ್ಧತೆ, ಗಣ್ಯರು, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಕಾರ್ಯಕ್ರಮ ವೀಕ್ಷಣೆ, ಭದ್ರತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಷ್ಟ್ರಪತಿ ಕಚೇರಿ ಸೂಚನೆಯಂತೆ ಸಿದ್ಧತೆ ಮಾಡಲಾಗುತ್ತಿದೆ. ಸೂಕ್ತ ರೀತಿಯಲ್ಲಿ ಭದ್ರತೆ …

Read More »

ಮೈಸೂರು ಅರಮನೆಯಲ್ಲಿ ಜನಸಿದ ಮರಿಆನೆಗೆ ನಾಮಕರಣ

ಮೈಸೂರು : ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ಆನೆ ಲಕ್ಷ್ಮಿ, ಅರಮನೆ ಆವರಣದಲ್ಲಿಯೇ ಮರಿಗೆ ಜನ್ಮ ನೀಡಿದ್ದು, ಬಹು ವರ್ಷಗಳ ಬಳಿಕ ಈ ವಿದ್ಯಮಾನ ಮರುಕಳಿಸಿತ್ತು. 15 ವರ್ಷಗಳ ಹಿಂದೆ ಸರಳ ಎಂಬ ಆನೆ ಹೆಣ್ಣು ಮರಿಗೆ ಜನ್ಮ ನೀಡಿದ್ದರೆ, ಇದಾದ ಬಳಿಕ ಸೆಪ್ಟೆಂಬರ್ 13ರ ಮಂಗಳವಾರ ರಾತ್ರಿ ಲಕ್ಷ್ಮಿ ಆನೆ ಗಂಡುಮರಿಗೆ ಜನ್ಮ ನೀಡಿತ್ತು. ಇದಕ್ಕೆ ಹೆಸರಿಡುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಕೋರಲಾಗಿದ್ದು, ಅವರು ‘ಶ್ರೀ ದತ್ತಾತ್ರೇಯ’ …

Read More »

ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಚಾಲನೆ

ಬೆಂಗಳೂರು: ರಾಷ್ಟ್ರದ ಪ್ರಥಮ ಪ್ರಜೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ‌ಬೊಮ್ಮಾಯಿ ಪ್ರಕಟಿಸಿದ್ದಾರೆ. ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ಸಿಎಂ ಬೊಮ್ಮಾಯಿ ಅವರು ಈ ಮಹತ್ವ ಘೋಷಣೆ ಮಾಡಿದ್ದಾರೆ.ಇದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಈ ಬಾರಿ ಮೈಸೂರು ದಸರಾ ಉತ್ಸವನ್ನು …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 11.56 ಸೆ.ಮೀ. ನಿಂದ 20.44 ಸೆ.ಮೀ.ವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ‘ಆರೆಂಜ್ ಅಲರ್ಟ್ ನೀಡಲಾಗಿದೆ. ಮಂಡ್ಯ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಉತ್ತರ ಕನ್ನಡ, ತುಮಕೂರು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುರುವಾರದಿಂದ ಶುಕ್ರವಾರ ಬೆಳಗ್ಗೆ 8:30ರ ವರೆಗೆ ಉಡುಪಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ದಾವಣಗೆರೆ, ಚಿತ್ರದುರ್ಗ, ಹಾಸನ, …

Read More »

ಹಳೇ ದ್ವೇಷ : ಓರ್ವ ವ್ಯಕ್ತಿ ಸಾವು

ಮೈಸೂರು: ಹಳೇ ದ್ವೇಷದಲ್ಲಿ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆ ಇಲ್ಲಿನ ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ ಕೊಲೆಯಾದಾತ. ನವೀನ್ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡು ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೊಲೆ ಆರೋಪಿಗಳಾದ ಚಂದ್ರು ಹಾಗೂ ಶೆಟ್ಟಿ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯ ಸಂಪೂರ್ಣ ವಿವರ: ಕ್ಯಾತಮಾರನಹಳ್ಳಿಯ ಅಶ್ವತ್ಥಕಟ್ಟೆ ಬಳಿ ನವೀನ್ ಹಾಗೂ ವೆಂಕಟೇಶ್ …

Read More »

ಸೂತಕದ ಮನೆಗೆ ನೇರವಾದ ಶಾಸಕ ಜಿ ಟಿ ದೇವೇಗೌಡ

ಮೈಸೂರು: ತಾಲೂಕಿನಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆ ಮಾವಿನಹಳ್ಳಿಯ ಗ್ರಾಮಸ್ಥರೊಬ್ಬರನ್ನು ಬಲಿ ಪಡೆದಿದೆ. ಜಯಪುರ ಗ್ರಾಮದ ಕಗ್ಗೆರೆ ಕೆರೆ ಶುಕ್ರವಾರ ಭರ್ತಿಯಾಗಿ ಕೋಡಿ ಹರಿದಿತ್ತು. ಇದರ ಸಮೀಪದಲ್ಲಿ ರಸ್ತೆ ದಾಟುವಾಗ ಮಾವಿನಹಳ್ಳಿಯ ಮಹೇಶ (45) ಎಂಬವರು ನೀರುಪಾಲಾಗಿದ್ದಾರೆ. ವಿಷಯ ತಿಳಿದು ಶಾಸಕ ಜಿ ಟಿ ದೇವೇಗೌಡರು ಮೃತ ಗ್ರಾಮಸ್ಥನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತನ ಪತ್ನಿಗೆ ವೈಯಕ್ತಿಕ 50 ಸಾವಿರ ರೂ.ಗಳ ನೆರವು ನೀಡಿ …

Read More »

ನಾನೇನಿದ್ದರೂ ಕಾನೂನಿನ ಪರ : ಸಿದ್ದರಾಮಯ್ಯ

ಪಾಂಡವಪುರ/ಮೈಸೂರು: ರಾಜ್ಯ ಸರ್ಕಾರದ ಮೇಲಿನ ಶೇ.40ರಷ್ಟುಕಮಿಷನ್‌ ವಿಚಾರವಾಗಿ ನಾನು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸೇರಿ ಯಾವ ಗುತ್ತಿಗೆದಾರರ ಪರವೂ ನಿಲ್ಲುತ್ತಿಲ್ಲ, ನಾನೇನಿದ್ದರೂ ಕಾನೂನಿನ ಪರ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಜತೆಗೆ, ಬಿಜೆಪಿಯವರು ಪ್ರಾಮಾಣಿಕರೇ ಆಗಿದ್ದರೆ ಕಮಿಷನ್‌ ಆರೋಪವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಿ ಎಂದು ಪುನರುಚ್ಚರಿಸಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಕ್ರಮ ಕೈಗೊಳ್ಳುವ ಮುಖ್ಯಮಂತ್ರಿ ಹೇಳಿಕೆ ಕುರಿತು ಮಂಡ್ಯ ಜಿಲ್ಲೆಯ ಪಾಂಡವಪುರ ಹಾಗೂ …

Read More »

ಜಂಬೂಸವಾರಿ ತಾಲೀಮಿಗೆ ಒಂದುದಿನದ ಮಟ್ಟಿಗೆ ಬ್ರೇಕ್

ಮೈಸೂರು: ಇಂದು ಅಮಾವಾಸ್ಯೆ ಹಿನ್ನೆಲೆ ದಸರಾ ಜಂಬೂಸವಾರಿಗೆ ಸಿದ್ಧತೆಯಲ್ಲಿದ್ದ ಗಜಪಡೆಗಳ ಜಂಬೂಸವಾರಿ ತಾಲೀಮಿಗೆ ಒಂದುದಿನದ ಮಟ್ಟಿಗೆ ಬ್ರೇಕ್ ನೀಡಲಾಗಿದೆ. ಅದರಂತೆ ಜಂಬೂಸವಾರಿಯಲ್ಲಿ ಭಾಗಿಯಾಗಲಿರುವ ಆನೆಗಳು ಇಂದು ಅರಮನೆ ಆವರಣದಲ್ಲೇ ವಿಶ್ರಾಂತಿಯನ್ನು ಪಡೆಯಲಿವೆ. ನಾಳೆಯಿಂದ ಎಂದಿನಂತೆ ಜಂಬೂಸವಾರಿ ತಾಲೀನು ಮುಂದುವರಿಯಲಿದೆ. ಮುಂಜಾಗ್ರತಾ ಕ್ರಮವಾಗಿ ಅಮಾವಾಸ್ಯೆಯಲ್ಲಿ ಗಜಪಡೆಗಳ ಜಂಬೂಸವಾರಿ ತಾಲೀಮನ್ನು ಸ್ಥಗಿತಗೊಳಿಸಲಾಗಿದೆ. ಸಂಜೆ ನಡೆಯುವ ತಾಲೀಮಿಗೂ ಬ್ರೇಕ್ ಹಾಕಲಾಗಿದೆ.

Read More »