BigTv News
August 27, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಅವರು ಲೈಂಗಿಕವಾಗಿ ತೊಂದರೆ ನೀಡುತ್ತಿದ್ದಾರೆ. ಇದು ಬಹಳಷ್ಟು ದಿನಗಳಿಂದ ನಡೆಯುತ್ತಿದ್ದು, ಅಲ್ಲಿ ನ್ಯಾಯ ಸಿಗುವ ವಿಶ್ವಾಸವಿಲ್ಲ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಗೆ ಮೊರೆ ಹೋಗಿದ್ದರು. ಸಂಸ್ಥೆ ನೀಡಿದ ದೂರು ಆಧರಿಸಿ ಮೈಸೂರು …
Read More »
BigTv News
August 26, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಆಯ್ಕೆಗಾಗಿ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಸೆ.6ರಂದು ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ. ಈ ಸಂಬಂಧ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ಮಹಾನಗರ ಪಾಲಿಕೆಯ 24ನೇ ಅವಧಿಗೆ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ಎ-ಮಹಿಳೆಗೆ ಮೀಸಲಾತಿಯನ್ನು ಸರ್ಕಾರದಿಂದ ನಿಗದಿ ಪಡಿಸಿದೆ ಎಂದು ತಿಳಿಸಿದ್ದಾರೆ. ಈ ಮೀಸಲಾತಿಯಂತೆ ಮೈಸೂರು …
Read More »
BigTv News
August 25, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ನಾಡಹಬ್ಬ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೆಚ್ಚಿನ ಮೆರುಗು ನೀಡಲು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಸಿದ್ಧತೆ ನಡೆದಿದೆ. ಕೋವಿಡ್ ಕಾರಣದಿಂದಾಗಿ ಕಳೆದ ಎರಡು ದಸರಾ ಮಹೋತ್ಸವವನ್ನು ಸರಳವಾಗಿ ನಡೆಸಲಾಗಿತ್ತು. ಆದರೆ, ದೀಪಾಲಂಕಾರ ಸೊರಗಿರಲಿಲ್ಲ. ಈ ಬಾರಿ ನಾಡಹಬ್ಬವನ್ನು ಅದ್ದೂರಿಯಾಗಿ ನಡೆಸಲಾಗುತ್ತಿದೆ. ಇದಕ್ಕೆ ತಕ್ಕಂತೆ ವಿದ್ಯುತ್ ದೀಪಾಲಂಕಾರದ ಪ್ರಮಾಣವನ್ನೂ ಹೆಚ್ಚಿಸಲಾಗುತ್ತಿದೆ. ನಗರದ ಹೃದಯ ಭಾಗ, ಅರಮನೆ ಸುತ್ತಮುತ್ತಲಿನ ರಸ್ತೆಗಳೊಂದಿಗೆ …
Read More »
BigTv News
August 22, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಈ ಬಾರಿಯ ದಸರಾ ಮಹೋತ್ಸ ಹಿನ್ನೆಲೆ ಮೈಸೂರು ನಗರದ ಪ್ರಮುಖ ವೃತ್ತ, ರಸ್ತೆ ಸೇರಿದಂತೆ ಒಟ್ಟು 110 ಕಿಲೋ ಮೀಟರ್ ದೀಪಾಲಂಕಾರಕ್ಕೆ ಸಿದ್ಧತೆ ಆರಂಭಿಸಲಾಗಿದೆ. ಪ್ರತಿವರ್ಷ ದಸರಾದಲ್ಲಿ ಪ್ರಮುಖ ಆಕರ್ಷಣೆಯೆಂದರೆ ಅದು ದೀಪಾಲಂಕಾರ. ಸಾವಿರಾರು ಪ್ರವಾಸಿರು, ಸ್ಥಳೀಯರು ಈ ದೃಶ್ಯದ ವೈಭವವನ್ನು ಕಣ್ತುಂಬಿಕೊಳ್ಳುತ್ತಾರೆ. ಮೈಸೂರಿನ ಹೃದಯ ಭಾಗದ ಪಾರಂಪರಿಕ ಕಟ್ಟಡಗಳು, ವಾಣಿಜ್ಯ ಸಂಕೀರ್ಣ, ವೃತ್ತಗಳು, ಮುಖ್ಯ ಜಂಕ್ಷನ್‌ಗಳನ್ನು ಒಳಗೊಂಡಂತೆ ವಿವಿಧೆಡೆ ದೀಪಾಲಂಕಾರ ಮಾಡಲಾಗುತ್ತದೆ. ದಸರಾ ಸಮಯದಲ್ಲಿ ಸಂಜೆ 7 …
Read More »
BigTv News
August 20, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಪ್ರಚೋದನಕಾರಿ ಹೇಳಿಕೆ ಆರೋಪದಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ಮುಖಂಡ ತೋಟದಪ್ಪ ಬಸವರಾಜು ಎಂಬುವವರು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ. ಕೊಡಗಿನಲ್ಲಿ ತಮ್ಮ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ, ನಮಗೂ ಮೊಟ್ಟೆ ಎಸೆಯಲು ಬರಲ್ವಾ? ಕಾಂಗ್ರೆಸ್ ಕಾರ್ಯಕರ್ತರು ಹೋರಾಟ ಶುರು ಮಾಡಿದರೆ ಸಿಎಂ ಬೊಮ್ಮಾಯಿ, …
Read More »
BigTv News
August 18, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ನಗರದ ಹೆಸರಾಂತ ವೈದ್ಯರು, ಭಾರತ್ ಕ್ಯಾನ್ಸರ್ ಆಸ್ಪತ್ರೆ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಎಂ.ಸಿ. ವಿಶ್ವೇಶ್ವರ ನಿಧನ. ಕಳೆದ ಕೆಲದಿನಗಳ ಹಿಂದಷ್ಟೆ ಅವರಿಗೆ ಪಿತ್ತಜನಕಾಂಗದ ಮರುಜೋಡಣೆ ಮಾಡಲಾಗಿತ್ತು. ಅದು ಅವರ ದೇಹಕ್ಕೆ ಹೊಂದದೆ ಆರೋಗ್ಯ ಸಮಸ್ಯೆ ಉಲ್ಭಣಿಸಿದ್ದು. ಇಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ತಮ್ಮ ಸೇವೆಯ ಮೂಲಕ ಸಾಕಷ್ಟು ಜನ ಮನ್ನಣೆ ಗಳಿಸಿದ್ದ ಅವರು ಇಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
Read More »
BigTv News
August 17, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ಗ್ರಾಮೀಣ ಭಾಗದ ಜಲಮೂಲಗಳನ್ನು ಸಂರಕ್ಷಿಸುವ ಸಲುವಾಗಿ ಮೈಸೂರು ತಾಲೂಕಿನಲ್ಲಿ ಉತ್ತಮ ಯೋಜನೆಯನ್ನು ರೂಪಿಸಲಾಗಿತ್ತು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೈಗೊಳ್ಳಲಾದ ‘ಅಮೃತ ಸರೋವರ’ ಅಭಿಯಾನದಲ್ಲಿ ನಾಲ್ಕು ಕೆರೆ ದಂಡೆಯನ್ನು ಅಭಿವೃದ್ಧಿಪಡಿಸಲಾಗಿತ್ತು.ಇದೇ ಸ್ಥಳದಲ್ಲಿ ಹುತಾತ್ಮ ಯೋಧರ ಕುಟುಂಬದವರು ಧ್ವಜಾರೋಹಣ ನೆರವೇರಿಸಿದ್ದಾರೆ. ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಡದಕಲ್ಲಹಳ್ಳಿ ಗ್ರಾಮದ ಬಚ್ಚಲಗೆರೆ, ಡಿಎಂಜಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾದಳ್ಳಿ ಕೆರೆ, ಬೀರಿಹುಂಡಿ …
Read More »
BigTv News
August 16, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಅಂದುಕೊಂಡಂತೆ ಕಾಮಗಾರಿ ಸಾಗಿದ್ದರೇ ಆಗಸ್ಟ್ 15ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಒನ್ ವೇ ಸಂಚಾರಕ್ಕೆ ಚಾಲನೆ ನೀಡಬೇಕಿತ್ತು. ಆದ್ರೇ ದಶಪಥ ಕಾಮಗಾರಿಯಿಂದಾಗಿ ಬೆಂಗಳೂರು – ಮೈಸೂರು ಹೆದ್ದಾರಿ ಮೊದಲ ಹಂತದ ಕಾಮಗಾರಿ ವಿಳಂಬವಾಗಿದೆ. ಹೀಗಾಗಿ ಕೊಟ್ಟ ಮಾತಿಗೆ ತಪ್ಪಿದ್ದೇನೆ. ದಯವಿಟ್ಟು ಕ್ಷಮಿಸಿ ಎಂಬುದಾಗಿ ಸಂಸದ ಪ್ರತಾಪ್ ಸಿಂಹ ಜನತೆಯ ಕ್ಷಮೆಯಾಚಿಸಿದ್ದಾರೆ. ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿದ್ದು, ಜುಲೈನಲ್ಲಿ ಬೆಂಗಳೂರು-ನಿಡಘಟ್ಟ ರಸ್ತೆಯನ್ನು ಸಂಚಾರಕ್ಕೆ ತೆರವು ಮಾಡಿಸುತ್ತೇನೆ …
Read More »
BigTv News
August 14, 2022
Breaking News, ಕರ್ನಾಟಕ, ಜಿಲ್ಲೆ, ಮೈಸೂರು
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ಹಿನ್ನೆಲೆ ಇಂದಿನಿಂದ ರಾಜಬೀದಿಗಳಲ್ಲಿ ದಸರಾ ಗಜಪಡೆಗಳಿಗೆ ತಾಲೀಮು ನಡೆಯಲಿದೆ. ಮೈಸೂರು ಅರಮನೆ ಆವರಣದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಪೂಜೆ ನಡೆಸಲಾಗುತ್ತದೆ. ಅರ್ಜುನ, ಗೋಪಾಲಸ್ವಾಮಿ, ಭೀಮ, ಧನುಂಜಯ, ಕಾವೇರಿ, ಚೈತ್ರ, ಲಕ್ಷ್ಮೀ, ಮಹೇಂದ್ರ ಆನೆಗೆ ಸಾಂಪ್ರಾದಾಯಿಕ ಪೂಜೆ ನಡೆಸಿದರು. ಕುಂಬಳಕಾಯಿ ಒಡೆದು ಆನೆಗಳಿಗೆ ದೃಷ್ಠಿ ತೆಗೆಯಲಾಗಿದೆ. ಡಿಸಿಎಫ್ ಕರಿಕಾಳನ್ ಸೇರಿದಂತೆ ಹಲವರು ಉಪಸ್ಥಿತಿಯಿದ್ದರು.
Read More »
BigTv News
June 10, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ಅನ್ಯ ಕೋಮಿನ ಯುವಕನನ್ನು ಪ್ರೀತಿ ಮಾಡಿದ ಹಿನ್ನೆಲೆಯಲ್ಲಿ ತಂದೆಯೇ ತನ್ನ ಅಪ್ರಾಪ್ತ ಮಗಳನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿರಿಯಾಪಟ್ಟಣ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಪ್ರಿಯಕರನಿಗೆ ಬರೆದ ಪತ್ರ ಹಾಗೂ ಆತನ ಮೊಬೈಲ್ ವಶಪಡಿಸಿಕೊಂಡು ಆತನನ್ನು ವಿಚಾರಣೆ ನಡೆಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಶಾಲಿನಿ ಎಂಬ ಅಪ್ರಾಪ್ತೆ ಅನ್ಯ ಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು ಎಂಬ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಯುವತಿಯ ತಂದೆ ಮಗಳನ್ನೇ ಕೊಲೆ ಮಾಡಿದ್ದ ಎಂಬ …
Read More »