Breaking News

ಮೈಸೂರು

ಮೈಸೂರು: ನೀರು ಪೂರೈಕೆಗೆ ಅಮೃತ್ 2.0 ಯೋಜನೆಯಡಿ ₹455 ಕೋಟಿಯಲ್ಲಿ 10 ಕಾಮಗಾರಿಗಳ ಅನುಷ್ಠಾನ

ಮೈಸೂರು: ನಗರಕ್ಕೆ ಹೊಂದಿಕೊಂಡಿರುವ ಹಾಗೂ ಹೊರವಲಯದ ಪ್ರದೇಶಗಳು ಮತ್ತು ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಕುಡಿಯುವ ನೀರು ಪೂರೈಕೆ ‘ಜಾಲ’ ಬಲಗೊಳಿಸಲು ‘ಅಮೃತ್ 2.0’ ಯೋಜನೆಯಡಿ ಅನುದಾನದ ‘ಶಕ್ತಿ’ ದೊರೆತಿದೆ. ಅಂದಾಜು ಮೊತ್ತ ₹455.66 ಕೋಟಿಯಲ್ಲಿ ಒಟ್ಟು 10 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕೇಂದ್ರ ಪುರಸ್ಕೃತವಾದ ಈ ಯೋಜನೆಯಡಿ ಲಭ್ಯ ಅನುದಾನದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಿಂದ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳು ವಿವಿಧ ಹಂತದಲ್ಲಿವೆ. ಎಲ್ಲವೂ ಅಂದುಕೊಂಡಂತೆಯೇ …

Read More »

ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ: ಸಚಿವ ಡಾ.ಎಚ್.ಸಿ ಮಹದೇವಪ್ಪ

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಅವರೇ ಮುಂದುವರಿಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಹೇಳಿದರು. ನಗರದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು ಮುಖ್ಯಮಂತ್ರಿ ಕುರ್ಚಿ ವಿಚಾರವಾಗಿ ನಮ್ಮಲ್ಲಿ ಯಾವುದೇ ಚರ್ಚೆ ಆಗುತ್ತಿಲ್ಲ. ನಾವು ಯಾರೂ ಒಬ್ಬರಿಗೊಬ್ಬರು ಗುಂಪುಗಾರಿಕೆ ಮಾಡುತ್ತಿಲ್ಲ. ಒಟ್ಟಿಗೆ ಕುಳಿತು ಊಟ ಮಾಡುವುದು ಅಪರಾಧವೇ’ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ ಬದಲಾವಣೆಗೂ ಕಾಂಗ್ರೆಸ್ ಶಾಸಕಾಂಗ …

Read More »

ಮೈಸೂರಲ್ಲಿ ವಿಮಾನ ನಿಲ್ದಾಣ ವಿಸ್ತರಣೆಗೆ ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಲು ಸಿಎಂಗೆ ಸಂಸದ ಒಡೆಯರ್ ಮನವಿ

ಮೈಸೂರು: ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ವಿಮಾನ ನಿಲ್ದಾಣ ಮೊದಲ ಹಂತದ ವಿಸ್ತರಣೆಗಾಗಿ ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ ಮಾಡಿದರು. ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಮವಾರ ಬೆಳಗ್ಗೆ ಭೇಟಿ ಮಾಡಿದ ಸಂಸದರು ಮನವಿ ಸಲ್ಲಿಸಿ, ಮೈಸೂರು ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃವೃದ್ಧಿ ಯೋಜನೆಗಳು ಹಾಗೂ ಇತರೆ …

Read More »

ಫಲಾನುಭವಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಲಾಭವನ್ನು ತಲುಪಿಸಿ: ಕೇಂದ್ರ ಸಚಿವ ಎಚ್ ಡಿ ಕೆ ಸೂಚನೆ

ಮೈಸೂರು: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಲಾಭವನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಮಾಡಬೇಕು’ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸೂಚಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ತಮ್ಮ ಅಧ್ಯಕ್ಷತೆಯಲ್ಲಿ ಮೊದಲಿಗೆ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ’ (ದಿಶಾ) ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರದಿಂದ ದೇಶದ ಪ್ರಗತಿಗೆ ಪೂರಕವಾದ ಹಲವು …

Read More »

ರಾಜ್ಯ ರೈತ ಸಂಘಟನೆಯಿಂದ ಇಂದು ಪಂಜಿನ ಪ್ರತಿಭಟನಾ ಮೆರವಣಿಗೆ: ಕುರುಬೂರು ಶಾಂತಕುಮಾರ್

ಮೈಸೂರು: ದೆಹಲಿ ಗಡಿಯಲ್ಲಿ ದೇಶದ ರೈತರ ಒಳಿತಿಗಾಗಿ ಉಪವಾಸ ನಡೆಸುತ್ತಿರುವ ಜಗಜಿತ್ ಸಿಂಗ್ ದಲೆವಾಲ ಹೋರಾಟ ಬೆಂಬಲಿಸಿ ರಾಜ್ಯಾದ್ಯಂತ ಇಂದು ಸಂಜೆ 6 ಗಂಟೆಗೆ ಪಂಜಿನ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದರು. ಮೈಸೂರು ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಕೇಂದ್ರ ಸರ್ಕಾರದ ಭಿಕ್ಷೆ ಕೇಳುತ್ತಿಲ್ಲ. ನಮ್ಮ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ …

Read More »

ಮುಂದಿನ ಸಚಿವ ಸಂಪುಟ ಸಭೆಯನ್ನು ಚಾಮರಾಜನಗರದಲ್ಲಿ ನಡೆಸಲು ಸರ್ಕಾರ ನಿರ್ಧಾರ

ಮೈಸೂರು: ಜನವರಿ ಎರಡನೇ ವಾರದಲ್ಲಿ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂದಿನ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. ಚಾಮರಾಜನಗರ ಜಿಲ್ಲೆಯ ಆದಿವಾಸಿಗಳು ಸೇರಿದಂತೆ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು 2002 ರಲ್ಲಿ ಬಿಳಿಗಿರಿರಂಗ ಬೆಟ್ಟದಲ್ಲಿ ಅಂದಿನ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು, …

Read More »

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ಆಸಕ್ತಿ ತೋರುತ್ತಿಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ

ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ಆಸಕ್ತಿ ತೋರುತ್ತಿಲ್ಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು. ಇಲ್ಲಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಇಂದು ರೈತ ಸಂಘಟನೆಗಳ ಒಕ್ಕೂಟ ಹಾಗೂ ರೈತ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ರೈತ ದಿನಾಚರಣೆ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ರೈಲ್ವೆ ಇಲಾಖೆಯಲ್ಲಿ 12 ಲಕ್ಷ ನೌಕರರಿದ್ದಾರೆ. ದಕ್ಷಿಣ ಭಾರತದಲ್ಲಿ ಶೇ 99ರಷ್ಟು ಉತ್ತರ ಭಾರತದ ಸಿಬ್ಬಂದಿಯೇ ಇದ್ದಾರೆ. ಕನ್ನಡಿಗರಿಗೂ ಅವಕಾಶ …

Read More »

ವಕ್ಫ್ ಆಸ್ತಿ ವಿವಾದ: ನ.25 ರಿಂದ ಡಿ.25 ರವರೆಗೆ ರಾಜ್ಯಾದ್ಯಂತ ಜನಾಂದೋಲನಕ್ಕೆ ಯತ್ನಾಳ ಕರೆ

ಮೈಸೂರು: ವಕ್ಫ್‌ ಆಸ್ತಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಜನಾಂದೋಲನಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ‌ ನೀಡಿದ್ದಾರೆ. ಇಂದು ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಈ ರೆಬೆಲ್‌ ಟೀಂ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ವಕ್ಫ್‌ನವರು ವಿಧಾನಸೌಧವು ನಮ್ಮದೇ, ಮೆಜೆಸ್ಟಿಕ್ ಸಹ ನಮ್ಮದೇ. ಅಲ್ಲದೇ ಹೊಯ್ಸಳರ ಕಾಲದ ದೇವಾಲಯವು ನಮ್ಮದೇ ಅನ್ನುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ …

Read More »

ಮೈಸೂರಿನಲ್ಲಿ ಡಿ.23 ರಂದು ರಾಷ್ಟ್ರೀಯ ರೈತ ಸಮಾವೇಶ ಆಯೋಜನೆ: ಕುರುಬೂರು ಶಾಂತಕುಮಾರ್

ಮೈಸೂರು: ವಿಶ್ವ ರೈತ ದಿನದ ಅಂಗವಾಗಿ ಡಿ.23ರಂದು ಮೈಸೂರಿನಲ್ಲಿ ರಾಷ್ಟ್ರೀಯ ರೈತ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದರು. ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳ ನೂರಾರು ರೈತ ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಎಲ್ಲ ಸರ್ಕಾರಗಳೂ ರೈತರಿಗೆ ಮೋಸ ಮಾಡಿವೆ, ಮಾಡುತ್ತಿವೆ. ಇದರಿಂದ ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ ಕಾರ್ಪೊರೇಟ್ ಕಂಪನಿಗಳು ಕೃಷಿ ವಲಯವನ್ನು ವಶಪಡಿಸಿಕೊಳ್ಳಲು …

Read More »

ಮುಡಾ ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಪ್ರತಿಕ್ರಿಯೆ

ಮೈಸೂರು : ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿರುವ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದು, ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ. ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಇದುವರೆಗೆ ಕಾನೂನಿನ ಪ್ರಕಾರವೇ …

Read More »