Breaking News

ಮೈಸೂರು

ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಯಲ್ಲಿ ವಿಜಯಪುರದ ಸತ್ತಿಗೆ ಕುಣಿತಕ್ಕೆ ಪ್ರಥಮ ಬಹುಮಾನ

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆದ ವಿಜಯದಶಮಿ ಮೆರವಣಿಗೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕಲಾತಂಡಗಳಿಗೆ ಬಹುಮಾನ ಘೋಷಿಸಲಾಗಿದೆ. ವಿಜಯಪುರ ಜಿಲ್ಲೆ ತಿಕೋಟಾ ತಾಲ್ಲೂಕಿನ ಸಿದ್ದಾಪುರ (ಕಾರಿಕೊಳ್ಳ)ದ ಸಂಜೀತ ಸಿ.ಕೋತ ನೇತೃತ್ವದ ರೇವಣಸಿದ್ದೇಶ್ವರ ಯುವಕ ಕಲಾಸಂಘದ ಸತ್ತಿಗೆ ಕುಣಿತಕ್ಕೆ ಪ್ರಥಮ ಬಹುಮಾನ (₹ 15 ಸಾವಿರ) ದೊರೆತಿದೆ. ಯಾದಗಿರಿಯ ವಿಶ್ವಾಸಪುರ ತಾಂಡಾದ ಮನೋಹರ ಖೇಮು ಪವಾರ ಸಾರಥ್ಯದ ಲಂಬಾಣಿ ನೃತ್ಯ ಕಲಾ ತಂಡ, ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕು ಕ್ಯಾತಘಟ್ಟದ ಕೀರ್ತಿನಿ …

Read More »

ಮೈಸೂರು ದಸರಾ: 500 ಕೋಟಿಗೂ ಅಧಿಕ ಆರ್ಥಿಕ ವಹಿವಾಟು

ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಉತ್ಸವ ಹಿನ್ನೆಲೆಯಲ್ಲಿ ಈ ಬಾರಿ 16 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಮೈಸೂರಿಗೆ ಭೇಟಿ ನೀಡಿದ್ದು ಐತಿಹಾಸಿಕ ದಾಖಲೆಯಾಗಿದೆ. ಈ ಮೂಲಕ 500 ಕೋಟಿ ರೂ.ಗೂ ಅಧಿಕ ಆರ್ಥಿಕ ವಹಿವಾಟು ನಡೆದಿದೆ ಎಂದು ಅಂದಾಜಿಸಲಾಗಿದೆ. ಅ. 3ರಂದು ಚಾಮುಂಡಿಬೆಟ್ಟದಲ್ಲಿ ದೇವಿಯ ಅಗ್ರಪೂಜೆಯೊಂದಿಗೆ ಆರಂಭವಾಗಿ ಅ.12ರಂದು ಅಭಿಮನ್ಯು ನೇತೃತ್ವದಲ್ಲಿ ನಡೆದ ಜಂಬೂ ಸವಾರಿ ಮೆರವಣಿಗೆಯವರೆಗೆ ರಾಜ್ಯದ ವಿವಿಧ ಮೂಲೆಗಳಿಂದಷ್ಟೇ ಅಲ್ಲದೆ ದೇಶ, ವಿದೇಶಗಳಿಂದ ಪ್ರವಾಸಿಗರು ಮೈಸೂರಿಗೆ ಆಗಮಿಸಿ …

Read More »

ಮೈಸೂರು ದಸರಾ: ನಂದಿಪೂಜೆ ನೆರವೇರಿಸಿದ ಸಿಎಂ, ಡಿಸಿಎಂ

ಮೈಸೂರು: ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೂ ಮುನ್ನ ನಂದಿ ಪೂಜೆ ನೆರವೇರಿಸಲಾಯಿತು, ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವರು ಹಾಗೂ ಶಾಸಕರೊಂದಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗದಲ್ಲಿ ದಸರಾ ಹಬ್ಬದ ಭಾಗವಾಗಿ ಶನಿವಾರ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಬಾರಿ ಕರ್ನಾಟಕದಲ್ಲಿ ಮಳೆ ಉತ್ತಮವಾಗಿ ಜಲಾಶಯಗಳು ತುಂಬಿವೆ. ಉತ್ತಮ ಫಸಲು ಬಂದು ಜನರ ಜೀವನ ಇನ್ನಷ್ಟು ಸುಭಿಕ್ಷವಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗಣ್ಯರು …

Read More »

ಮೈಸೂರು ದಸರಾ ವೀಕ್ಷಣೆಗೆ ವಿಶೇಷ ರೈಲು ಸೇವೆ

ಮೈಸೂರು: ನಾಡಹಬ್ಬ ದಸರಾ ಸಂಭ್ರಮವನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಗರಕ್ಕೆ ಭೇಟಿ ನೀಡುತ್ತಿದ್ದು, ದಟ್ಟಣೆ ತಪ್ಪಿಸಲು ನೈರುತ್ಯ ರೈಲ್ವೆ ಮೈಸೂರು ವಿಭಾಗವು ವಿಶೇಷ ರೈಲು ಸೇವೆ ಆರಂಭಿಸಿದೆ. ಅರಸೀಕೆರೆ- ಮೈಸೂರು ರೈಲು ಅ.10ರಿಂದ ಅ.12ರ ವರೆಗೆ ಮೂರು ಟ್ರಿಪ್‌ ಓಡಾಡಲಿದೆ. ಮಧ್ಯಾಹ್ನ 2 ಗಂಟೆಗೆ ಅರಸೀಕೆರೆಯಿಂದ ಹೊರಟು ಸಂಜೆ 6.40ಕ್ಕೆ ಮೈಸೂರು ತಲುಪಲಿದೆ. ಸಂಜೆ 6.50ಕ್ಕೆ ಮೈಸೂರಿನಿಂದ ಹೊರಟು ರಾತ್ರಿ 11.45ಕ್ಕೆ ತಲುಪಲಿದೆ. ಬೆಳಗಾವಿ- ಮೈಸೂರು ರೈಲು ಬೆಳಗಾವಿಯನ್ನು …

Read More »

ಮೈಸೂರು ದಸರಾ: ಜಂಬೂಸವಾರಿಯಲ್ಲಿ 50 ಸ್ತಬ್ಧಚಿತ್ರಗಳ ಪ್ರದರ್ಶನ

ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ 50 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಲಿದ್ದು, ಕಲೆ, ವಾಸ್ತುಶಿಲ್ಪ, ಪ್ರವಾಸೋದ್ಯಮ, ಜಾನಪದ, ಸಮಾನತೆ, ಭ್ರಾತೃತ್ವ ಹಾಗೂ ಸಂವಿಧಾನದ ಮಹತ್ವ ಮೊದಲಾದ ವಿಷಯಗಳಿಗೆ ಆದ್ಯತೆ ನೀಡಲಾಗಿದೆ ಎಂದು ದಸರಾ ಸ್ತಬ್ಧಚಿತ್ರ ಉಪ ಸಮಿತಿ ಅಧ್ಯಕ್ಷ ಪ್ರಶಾಂತ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಬಂಡೀಪಾಳ್ಯದ ಎಪಿಎಂಸಿ ಯಾರ್ಡ್‌ನಲ್ಲಿ ಸ್ತಬ್ಧಚಿತ್ರ ನಿರ್ಮಾಣ ಭರದಿಂದ ಸಾಗಿದ್ದು, ಶೇ 80ರಷ್ಟು ಮುಗಿದಿದೆ. ಅ.11ರ ರಾತ್ರಿ ಅರಮನೆ ಆವರಣ ಪ್ರವೇಶಿಸಲಿವೆ. ಪ್ರದರ್ಶನದಲ್ಲಿ ಒಂದು …

Read More »

ಸಿದ್ದರಾಮಯ್ಯನವರೆ ಸಿಎಂ ಆಗಿ ಮುಂದುವರೆಯುತ್ತಾರೆ: ಸಚಿವ ಸತೀಶ ಜಾರಕಿಹೊಳಿ

ಮೈಸೂರು: ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ, ಸಿ.ಎಂ. ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು‌. ನಗರದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.‌ ಮಹದೇವಪ್ಪ ಅವರನ್ನು ಭೇಟಿ ಮಾಡಿದ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿ ಇರುತ್ತಾರೋ, 3 ವರ್ಷ ಇರುತ್ತಾರೋ ಎನ್ನುವುದನ್ನು ಪಕ್ಷದ ಹೈಕಮಾಂಡ್ ನಲ್ಲಿ ಕೇಳಬೇಕು. ಸದ್ಯಕ್ಕಂತೂ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದರು. …

Read More »

ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ: ಡಿಸಿಎಂ ಡಿಕೆ ಶಿವಕುಮಾರ

ಮೈಸೂರು: ಸಂಸಾರವನ್ನು ಕಾಪಾಡುವವಳು ಹೆಣ್ಣು, ಈ ರಾಜ್ಯವನ್ನು ಕಾಪಾಡುತ್ತಿರುವುದು ಹೆಣ್ಣು ದೇವತೆಗಳು. ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುರುವಾರ ನಡೆದ ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಕಳೆದ ವರ್ಷ ದಸರಾ ಉದ್ಘಾಟನೆ ವೇಳೆ ಮಳೆ ಚೆನ್ನಾಗಿ ಬೀಳಲಿ ಎಂದು ಚಾಮುಂಡೇಶ್ವರಿ ಬಳಿ ಬೇಡಿಕೊಂಡಿದ್ದೆವು. ಪ್ರಯತ್ನ ಮಾಡಿ ಸೋಲಬಹುದು, ಆದರೆ ಪ್ರಾರ್ಥನೆ ಮಾಡಿ ಸೋಲಲು ಸಾಧ್ಯವಿಲ್ಲ‌. …

Read More »

ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ಮೈಸೂರು ದಸರಾ ನಾಡಹಬ್ಬಕ್ಕೆ ಚಾಲನೆ

ಮೈಸೂರು: ವಿಶ್ವ ವಿಖ್ಯಾತ ದಸರಾ ಹಬ್ಬಕ್ಕೆ ಇಂದು ಅರಮನೆ ನಗರಿಯಲ್ಲಿ ವೈಭವದ ಚಾಲನೆ ದೊರೆಯಿತು ಮೈಸೂರು ದಸರಾದ ಉದ್ಘಾಟಕರಾದ ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರು ಮಹಿಷಮರ್ಧಿನಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬಕ್ಕೆ ಚಾಲನೆ ನೀಡಿದರು. ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ದೇವಿಯ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬಕ್ಕೆ ವೈಭವದ ಚಾಲನೆ ನೀಡಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಹಿತ ರಾಜ್ಯ ಸರ್ಕಾರದ …

Read More »

ಅ.3 ರಂದು ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಕ್ಟೋಬರ್ 3ರಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. ಅಕ್ಟೋಬರ್​ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್​ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ …

Read More »

ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ತೋರುವ ಅಸಡ್ಡೆ ಮತ್ತು ಉದಾಸೀನವನ್ನು ಸಹಿಸುವುದಿಲ್ಲ: ಸಿಎಂ ಖಡಕ್ ವಾರ್ನಿಂಗ್

ಮೈಸೂರು : ಗ್ಯಾರಂಟಿ ಯೋಜನೆಗಳ ಫಲ ಜನರಿಗೆ ತಲುಪಿಸದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ ನೀಡಿದರು. ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಈ ವಿಚಾರದಲ್ಲಿ ತೋರುವ ಅಸಡ್ಡೆ ಮತ್ತು ಉದಾಸೀನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಸರಕಾರ ವರ್ಷಕ್ಕೆ ಸುಮಾರು 56 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗಾಗಿ ವಿನಿಯೋಗಿಸುತ್ತಿದೆ. ಇಷ್ಟೂ ಹಣ ಜನರಿಗೆ ತಲುಪುವಂತೆ ಮಾಡಬೇಕು ಎಂದು ಸೂಚಿಸಿದರು. ದಸರಾ ನೆಪದಲ್ಲಿ …

Read More »