Breaking News

ಮೈಸೂರು

ಪರಿಸರಸ್ನೇಹಿ ಗಣೇಶ ಸ್ಥಾಪನೆ: ಆಚೀವರ್ಸ್‌ ಅಕಾಡೆಮಿಯಿಂದ ಜಾಗೃತಿ ಜಾಥಾ

ಶ್ರೀರಂಗಪಟ್ಟಣ: ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ಸ್ಥಾಪಿಸುವಂತೆ ಆಚೀವರ್ಸ್‌ ಅಕಾಡೆಮಿ, ರೋಟರಿ ಕ್ಲಬ್‌ನಿಂದ ಪಟ್ಟಣದಲ್ಲಿ ಶುಕ್ರವಾರ ಜಾಗೃತಿ ಮೂಡಿಸಲಾಯಿತು. ಎರಡೂ ಸಂಘಟನೆಗಳ ಮುಖ್ಯಸ್ಥರು ಹಾಗೂ ಸದಸ್ಯರು ಮಣ್ಣಿನ ಗಣೇಶ ಮೂರ್ತಿಯನ್ನು ಹಿಡಿದು ಪಟ್ಟಣದ ಮುಖ್ಯ ಬೀದಿ ಸೇರಿದಂತೆ ವಿವಿಧೆಡೆ ಜಾಗೃತಿ ಜಾಥಾ ನಡೆಸಿದರು. ಹತ್ತಾರು ಮನೆ ಗಳು ಹಾಗೂ ಸಂಘ, ಸಂಸ್ಥೆಗಳಿಗೆ ಮಣ್ಣಿನ ಗಣೇಶ ಮತ್ತು ಗೌರಿ ಮೂರ್ತಿಗಳನ್ನು ಉಚಿತವಾಗಿ ವಿತರಿಸಿದರು. ರೋಟರಿ ಸಂಸ್ಥೆ ಅಧ್ಯಕ್ಷ ಮಂಜುರಾಮ್‌ ಮಾತನಾಡಿ, ರಾಸಾಯನಿಕ ಬಳಸಿ …

Read More »

ವಾಯುಮಾಲಿನ್ಯ ಹೆಚ್ಚಳ: ಗಾಳಿಯ ಗುಣಮಟ್ಟ ತೀವ್ರಗತಿಯಲ್ಲಿ ಕುಸಿತ

ಮೈಸೂರು: ನಗರದಲ್ಲಿ ವಾಯುಮಾಲಿನ್ಯ ಹೆಚ್ಚಾಗಿದ್ದು, ಗಾಳಿಯ ಗುಣಮಟ್ಟ ತೀವ್ರಗತಿಯಲ್ಲಿ ಕುಸಿಯುತ್ತಿದೆ ಎಂದು ಗ್ರೀನ್‌ ಪೀಸ್‌ ಇಂಡಿಯಾ ಸಂಸ್ಥೆಯ ಸಂಶೋಧನಾ ವರದಿಯು ತಿಳಿಸಿದೆ. ಇದು ವಾಯು ಮಾಲಿನ್ಯದಿಂದ ನಗರದ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ, ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ ಸುತ್ತುವರಿದಿರುವ ಮೈಸೂರಿನ ಗಾಳಿ ಶುದ್ಧವಾಗಿರಬೇಕಿತ್ತು. ಆದರೆ, ಮಾಲಿನ್ಯಕಾರಕ ಕಣಗಳಾದ ಪಿ.ಎಂ. ಗಾಳಿಯಲ್ಲಿರುವ ದೂಳಿನ ಕಣಗಳ ಪ್ರಮಾಣ 2.5 …

Read More »

ಮೈಸೂರು ದಸರಾ: ದೀಪಾಲಂಕಾರದಿಂದ ಉತ್ಸವದ ಅಂದ ಹೆಚ್ಚಿಸಿ

ಮೈಸೂರು: ನಾಡಹಬ್ಬ ದಸರಾ ನಮ್ಮ ಮನೆಯ ಹಬ್ಬವೆಂಬ ಮನಸ್ಥಿತಿಯೊಂದಿಗೆ ದೀಪಾಲಂಕಾರ ಮಾಡಿ ಉತ್ಸವದ ಅಂದ ಹೆಚ್ಚಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ಅಧ್ಯಕ್ಷ ರಮೇಶ್‌ ಬಂಡಿಸಿದ್ದೇಗೌಡ ಸೂಚಿಸಿದರು. ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆದ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಈ ಬಾರಿ ವಿದ್ಯುತ್ ದೀಪಾಲಂಕಾರ 21 ದಿನಗಳವರೆಗೆ ಇರಲಿದೆ. ಹೀಗಾಗಿ …

Read More »

ವಿಶ್ವವಿಖ್ಯಾತ ಅದ್ದೂರಿ ದಸರಾ ಆಚರಣೆಗೆ ಸಕಲ ಸಿದ್ಧತೆ

ಮೈಸೂರು: ವಿಶ್ವ ವಿಖ್ಯಾತ ದಸರಾ ಅದ್ದೂರಿ ಆಚರಣೆಗೆ ರಚಿಸಿರುವ 19 ಉಪಸಮಿತಿಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌ಸಿ ಮಹದೇವಪ್ಪ ತಿಳಿಸಿದರು. ಅರಮನೆ ಸಭಾಂಗಣದಲ್ಲಿ ಹಮಿ ಕೊಂಡಿದ್ದ ದಸರಾ ಉಪಸಮಿತಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಎಲ್ಲಾ ಸಮಿತಿಯ ಅಧಿಕಾರಿಗಳು ಸೂಕ್ತ ತಯಾರಿ ಮಾಡಿಕೊಂಡು ಅಚ್ಚುಕಟ್ಟಾಗಿ ದಸರಾ ಆಚರಣೆ ಮಾಡಬೇಕು ಎಂದು ಸೂಚಿಸಿದರು. ಸ್ತಬ್ಧ ಚಿತ್ರಗಳು ನಮ ಸಂಸ್ಕೃತಿಯನ್ನು ಬಿಂಬಿಸುವಂತೆ ಹಾಗೂ ಜನರಿಗೆ ಸಾಮಾಜಿಕ ಸಂದೇಶ ಸಾರುವಂತೆ …

Read More »

ಚಾಮುಂಡಿ ಬೆಟ್ಟ ಸುರಕ್ಷತೆಗೆ ಟಾಸ್ಕ್ ಫೋರ್ಸ್ ರಚನೆ

ಮೈಸೂರು: ಚಾಮುಂಡೇಶ್ವರಿ ಬೆಟ್ಟವೂ ಸೇರಿದಂತೆ ಪ್ರಾಧಿಕಾರದ ಅಧೀನದ ದೇಗುಲಗಳ ಅಭಿವೃದ್ಧಿಗೆ ಮುಂದಿನ ಐದು ವರ್ಷದ ನೀಲನಕ್ಷೆ ರೂಪಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಹದೇಶ್ವರ ಬೆಟ್ಟದಲ್ಲಿ ಈಗಾಗಲೇ ಅಭಿವೃದ್ಧಿ ಪ್ರಾಧಿಕಾರವಿದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತರುವಾಯ ಸವದತ್ತಿ ಎಲ್ಲಮ್ಮ, ಕೊಪ್ಪಳದ ಹುಲಿಗೆಮ್ಮ, ಘಾಟಿ ಸುಬ್ರಹ್ಮಣ್ಯ ದೇಗುಲಗಳಿಗೆ ಪ್ರತ್ಯೇಕ ಪ್ರಾಧಿಕಾರಗಳನ್ನು ರಚನೆ …

Read More »

ಚಾಮುಂಡಿ ಬೆಟ್ಟ ಅಭಿವೃದ್ಧಿಗೆ ಅಗತ್ಯ ಕ್ರಮ: ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಅಧಿದೇವತೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕುರಿತು ಸಭೆಯನ್ನು ನಡೆಸಿದ್ದಾರೆ. ಮೊದಲಿಗೆ ದೇವಿ ದರ್ಶನ ಪಡೆದ ಸಿಎಂ ಆ ಬಳಿಕ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪ್ರಾಧಿಕಾರದ ಸಭೆ ನಡೆಸಿದ್ದು, ಅಧಿಕಾರಿಗಳಿಂದ ಬೆಟ್ಟದ ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುವಮತೆ ಸೂಚನೆ ನೀಡಿದ್ದಾರೆ. ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. …

Read More »

ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭಿಸಲಾಗಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗಳು ರಾಜಬೀದಿಗಳಲ್ಲಿ ಗಜಗಾಂಭಿರ್ಯದಿಂದ ಹೆಜ್ಜೆ ಹಾಕಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ದಸರಾ ಗಜಪಡೆಗಳಿಗೆ ತಾಲೀಮು ಆರಂಭಿಸಲಾಗಿದೆ. ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ವೇಳೆ ದಸರಾ ಆನೆಗಳು ವಾಕಿಂಗ್ ಮಾಡುತ್ತವೆ. ಮೊದಲ ಹಂತದಲ್ಲಿ ಕಾಡಿನಿಂದ ಅರಮನೆಗೆ 9 ಆನೆಗಳು ಆಗಮಿಸಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ತಾಲೀಮು ಆರಂಭಿಸಲಾಗಿದೆ. ಅರಮನೆಯಿಂದ ಸಯ್ಯಾಜೀರಾವ್ ರಸ್ತೆ, ಆಯುವೇರ್ದಿಕ್ …

Read More »

ಮೈಸೂರುನಲ್ಲಿ ಸ್ಫೋಟಕಗಳು ಪತ್ತೆ

ಮೈಸೂರು: ಸ್ಫೋಟಕಗಳು ಪತ್ತೆಯಾಗಿರುವ ಘಟನೆ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ವೊಂದರಲ್ಲಿ ನಡೆದಿದೆ. ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್‌ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ವಸ್ತುಗಳು ಮತ್ತು ಒಂದು ನಾಡ …

Read More »

ದಸರಾ ಉತ್ಸವಕ್ಕೆ 40 ಕೋಟಿ ರೂ. ಅನುದಾನ

ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಈ ಬಾರಿ ಸರಕಾರ ದಾಖಲೆಯ 40 ಕೋಟಿ ರೂ. ಅನುದಾನ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಚ್‌.ಸಿ. ಮಹದೇವಪ್ಪ ಪ್ರಕಟಿಸಿದ್ದಾರೆ. ಈ ಪ್ರಮಾಣದ ಅನುದಾನವನ್ನು ದಸರೆಗೆ ಸರಕಾರ ನೀಡುತ್ತಿರುವುದು ಇದೇ ಮೊದಲ ಬಾರಿ. ರಾಜ್ಯ ಸರಕಾರ ನಾಡಹಬ್ಬ ದಸರಾ ಉತ್ಸವ ಹೆಸರಿನಲ್ಲಿ ನವರಾತ್ರಿಯನ್ನು ಮೈಸೂರಿನಲ್ಲಿ ಸಾಂಪ್ರದಾಯಿಕವಾಗಿ ಆಚರಣೆ ಮಾಡುತ್ತಿದೆ. ದಸರಾ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರೂ ಆದ ಮುಖ್ಯಮಂತ್ರಿಗಳು ಆಯಾ …

Read More »

ಚಾಮುಂಡೇಶ್ವರಿ ದೇವಸ್ಥಾನ ಕುರಿತು ಪ್ರಮೋದಾದೇವಿ ಒಡೆಯರ್ ಮಹತ್ವದ ಹೇಳಿಕೆ

ಮೈಸೂರು: ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ. ಅದು ಸಂಸ್ಥಾನದ ಖಾಸಗಿ ಆಸ್ತಿಗಳ ಪಟ್ಟಿಯಲ್ಲಿ ಇದೆ ಎನ್ನುವ ಮೂಲಕ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ವಿರೋಧ ವ್ಯಕ್ತಪಡಿಸಿದರು. ಮೈಸೂರು ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ ನಿರ್ವಹಣೆ ಸಂಬಂಧ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸರ್ಕಾರಕ್ಕೆ ಪತ್ರ ಬರೆದಿದ್ದರು.ನಿರ್ವಹಣೆ ಮಾಡಲು ಆಗೋದಿಲ್ಲ ಅಂತಾ ಬರೆದಿದ್ದರು. ಈಗ ನಾವು ನಿರ್ವಹಣೆ ಮಾಡೋ ಬಗ್ಗೆ ನಾನು ಹೆಚ್ಚೇನು ಮಾತಾಡೋದಿಲ್ಲ. …

Read More »