BigTv News
December 22, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಸಂಸತ್ತಿನಲ್ಲಿ 146 ಸಂಸದರು ಅಮಾನತುಗೊಂಡಿದ್ದಾರೆ. ಸದನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಅಮಾನತ್ತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದರು. ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು …
Read More »
BigTv News
December 21, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಸಂಸತ್ ನಲ್ಲಿ ಭದ್ರತಾ ಲೋಪಕ್ಕೆ ಭದ್ರತಾ ಸಿಬ್ಬಂದಿ ಕೊರತೆ ಕಾರಣ ಇದೆ. ಶೇ.40ರಷ್ಟು ಅಧಿಕಾರಿಗಳೇ ಇಲ್ಲ, ಇದೆಲ್ಲ ಹೊರಗೆ ಬರುತ್ತೆ ಅನ್ನುವ ಕಾರಣಕ್ಕೆ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಪ್ರಧಾನ ಮಂತ್ರಿಗೆ ಮಾಧ್ಯಮಗಳ ಮುಂದೆ ಬರುವ ತಾಕತ್ತು ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಕಿಡಿಕಾರಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಸಂಸತ್ ಅಧಿವೇಶನದಿಂದ ಸಂಸದರ ಅಮಾನತು ವಿಚಾರವಾಗಿ ಮಾತನಾಡಿ, ಲೋಕಸಭೆ, ರಾಜ್ಯಸಭೆಯ ಒಟ್ಟು 142 ಸಂಸದರನ್ನು …
Read More »
BigTv News
December 11, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಅಂಬಾರಿ ಆನೆ ಅರ್ಜುನನ ಸಾವಿಗೆ ಇಡೀ ಕರುನಾಡೇ ಕಂಬನಿ ಮಿಡಿದಿದೆ. ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಶಿಸ್ತುಬದ್ಧವಾಗಿ ಕಾರ್ಯಾಚರಣೆ ನಡೆಸದ ಪರಿಣಾಮ ಅರ್ಜುನ ಮೃತಪಡಬೇಕಾಗಿ ಬಂತು ಎಂಬ ಮಾತುಗಳು ಕೇಳಿ ಬರುತ್ತಿದೆ. ಇದೀಗ ಅಂದು ಕಾರ್ಯಾಚರಣೆಯಲ್ಲಿದ್ದ ಪಶು ವೈದ್ಯ ಡಾ.ರಮೇಶ್, ಅರ್ಜುನನ ಮೇಲೆ ಕಾಡಾನೆ ದಾಳಿಯನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಗುಂಡೇಟಿನಿಂದ ಆತ ಮೃತಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅರ್ಜುನ ಆನೆ ನನ್ನ ನೆಚ್ಚಿನ ಆನೆ. ಕಾರ್ಯಾಚರಣೆ ವೇಳೆ ಹಠಾತ್ತನೆ ಕಾಡಾನೆ …
Read More »
BigTv News
December 6, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಗತ್ತು, ಗೈರತ್ತು, ಗಾಂಭೀರ್ಯದ ನಡಿಗೆ ಮೂಲಕ ಜನಮನ ಗೆದ್ದಿದ್ದ ಸಾಕಾನೆ ಅರ್ಜುನನ ಯುಗಾಂತ್ಯವಾಗಿದೆ. ಇಡೀ ನಾಡು ಆತನ ಸಾವಿಗೆ ಕಣ್ಣೀರಿಟ್ಟಿದೆ. ಅದರಲ್ಲೂ ವಾಸಸ್ಥಾನವಾದ ಹೆಚ್.ಡಿ.ಕೋಟೆ ತಾಲೂಕಿನ ಬಳ್ಳೆ ಆನೆ ಶಿಬಿರದಲ್ಲಂತೂ ದುಃಖ ಮಡುಗಟ್ಟಿದೆ. ಈ ಆನೆ ಶಿಬಿರದಿಂದ ಅರ್ಜುನನ ನೆನಪು ಮಾಸಲು ಸಾಧ್ಯವೇ ಇಲ್ಲದಂತಾಗಿದೆ. ಬಳ್ಳೆ ಆನೆ ಶಿಬಿರ ದೈತ್ಯ ಗಜರಾಜರ ತಾಣ ಎಂದರೂ ತಪ್ಪಾಗುವುದಿಲ್ಲ. ಇವತ್ತಿಗೂ ಅರ್ಜುನ ಸೇರಿದಂತೆ ಈ ಹಿಂದೆ ಅಂಬಾರಿ ಹೊತ್ತಿದ್ದ ದ್ರೋಣ ಮತ್ತು …
Read More »
BigTv News
December 5, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್, ಕನ್ನಡಿಗ ರಾಹುಲ್ ದ್ರಾವಿಡ್ ಅವರು ಭಾನುವಾರ ಚಾಮುಂಡಿಬೆಟ್ಟಕ್ಕೆ ದಂಪತಿ ಸಹಿತ ಭೇಟಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಬೆಳಗ್ಗೆ ಪತ್ನಿ ಡಾ. ವಿಜೇತಾ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ರಾಹುಲ್ ದ್ರಾವಿಡ್ ತಾಯಿ ದರ್ಶನ ಪಡೆದರು. ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ 19 ವರ್ಷದೊಳಗಿನವರ ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯು ಉತ್ತರಾಖಂಡದ ವಿರುದ್ಧ ನಡೆಯುತ್ತಿದೆ. ಈ ಪಂದ್ಯದಲ್ಲಿ …
Read More »
BigTv News
December 5, 2023
ಕರ್ನಾಟಕ, ಮೈಸೂರು, ಸುದ್ದಿ
ದಸರಾ ಆನೆ ಅರ್ಜುನ ಸಾವು ಕನ್ನಡಿಗರನ್ನ ದುಃಖದ ಕಡಲಲ್ಲಿ ಮುಳುಗುವಂತೆ ಮಾಡಿದೆ. ಅದರಲ್ಲೂ 8 ಬಾರಿ ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಬಗ್ಗೆ ಕನ್ನಡಿಗರು ಪ್ರೀತಿಯನ್ನ ಹೊಂದಿದ್ದರು. ನಿನ್ನೆ ಕಾಡಾನೆ ಜೊತೆ ಸೆಣೆಸಾಟ ನಡೆಸಿ, ಕನ್ನಡ ನಾಡಿನ ಜನರ ರಕ್ಷಣೆ ಮಾಡುವಾಗ ಅರ್ಜುನ ಮೃತಪಟ್ಟಿದ್ದಾನೆ. ಹೀಗಿದ್ದಾಗ ಮಾವುತರು, ಅರ್ಜುನನ ಜೊತೆ ನಮ್ಮನ್ನೂ ಮಣ್ಣು ಮಾಡಿ’ ಎಂದು ಹಠ ಹಿಡಿದಿದ್ದಾರೆ. ನಿನ್ನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಸಳೂರು, …
Read More »
BigTv News
December 4, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿಯಾಗಿದ್ದು, ಈ ವೇಳೆ ಭವಾನಿ ರೇವಣ್ಣ ಬೈಕ್ ಸವಾರನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮದ ಬಳಿ ನಡೆದಿದೆ. ಬೈಕ್ ಸವಾರ ಶಿವಣ್ಣ ಎಂಬಾತ ಭವಾನಿ ರೇವಣ್ಣ ಅವರ KA-03-NK-5 ನಂಬರ್‌ನ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ರೋಷವೇಷಗೊಂಡ ಭವಾನಿ ರೇವಣ್ಣ ಅವರು, ಬೋರ್ಡು …
Read More »
BigTv News
December 2, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಮೈಸೂರು ತಾಲೂಕು ಆರೋಗ್ಯಾಧಿಕಾರಿ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮೈಸೂರು ಮಾತಾ ಆಸ್ಪತ್ರೆ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸರಕಾರಿ ಅತಿಥಿಗೃಹದಲ್ಲಿ ಮೈಸೂರು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. …
Read More »
BigTv News
December 1, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ರಾಜಧಾನಿ ಬೆಂಗಳೂರು ನಂತರ ಮೈಸೂರು ಅತಿ ವೇಗವಾಗಿ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ರೈಲ್ವೇ ನಿಲ್ದಾಣಕ್ಕೆ ಮೂರನೇ ಪ್ರವೇಶ ದ್ವಾರ ನಿರ್ಮಿಸಲು ನೈರುತ್ಯ ರೈಲ್ವೆ ಮೈಸೂರು ವಿಭಾಗ ಮುಂದಾಗಿದೆ.ಇದರಿಂದ ಬನ್ನಿಮಂಟಪದಿಂದ ಬರುವ ಜನರಿಗೆ ಅನುಕೂಲವಾಗಲಿದೆ. ಸುಮಾರು 1.5 ಕಿ.ಮೀ ಉಳಿತಾಯವಾಗುತ್ತದೆ. ಅಲ್ಲದೆ, ಅಶೋಕಪುರಂ ರೈಲ್ವೆ ನಿಲ್ದಾಣ ಬೇರೆ ಆಗಿರುವುದರಿಂದ ಜೆ.ಪಿ.ನಗರ, ಶ್ರೀರಾಂಪುರ ಸೇರಿದಂತೆ ಇತರರು ಅಲ್ಲಿಂದಲೇ ಪ್ರಯಾಣಿಸುತ್ತಾರೆ. ಹೀಗಾಗಿ ಹೊಸ ಪ್ರವೇಶ ದ್ವಾರವೂ ಟ್ರಾಫಿಕ್ ತಡೆಗಟ್ಟಲು ಕೂಡ ಸಹಕಾರಿಯಾಗಲಿದೆ.ಎಲ್ಲಿ …
Read More »
BigTv News
December 1, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಜಿಲ್ಲೆಗೊಂದು ವಿವಿ ಸ್ಥಾಪನೆಯಾದ ಪರಿಣಾಮ ಈ ವರ್ಷ ಮೈಸೂರು ವಿಶ್ವವಿದ್ಯಾಲಯದಲ್ಲಿ 10 ಸಾವಿರ ಪ್ರವೇಶಾತಿ ಕುಸಿತ ಕಂಡಿದೆ. ಮೈಸೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳು ಸೇರ್ಪಡೆ ಆಗಿದ್ದವು. ಆದರೆ, ಈ ಮೂರು ಜಿಲ್ಲೆಗಳಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯ ತೆರೆದ ಕಾರಣ ಈ ವರ್ಷ ಮೈಸೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಪ್ರವೇಶಾತಿ ಕಡಿಮೆ ಆಗಿದೆ. ಆಯಾ ಜಿಲ್ಲೆಯ ವಿದ್ಯಾರ್ಥಿಗಳು ಹೊಸ ವಿವಿಯಲ್ಲೇ ಪ್ರವೇಶ ಪಡೆದುಕೊಂಡಿದ್ದಾರೆ. ಕಳೆದ ವರ್ಷ ವಿವಿಧ ಸ್ನಾತಕ …
Read More »