BigTv News
March 20, 2025
Breaking News, ಚಿಕ್ಕಮಗಳೂರು, ಮಂಗಳೂರು
ವಿದ್ಯಾರ್ಥಿಗಳು ಮಾರ್ಚ್ 3ರಂದು ವಸತಿ ಶಾಲೆಯಿಂದ ನಾಪತ್ತೆಯಾಗಿದ್ದರು. ಮಂಗಳೂರಿನ ಹೋಟೆಲ್ವೊಂದರಲ್ಲಿ ಕೆಲಸಕ್ಕೆ ಸೇರಲು ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಯಶ್ವಿತ್, ತರುಣ್ ಉತ್ತಮ ಸ್ನೇಹಿತರಾಗಿದ್ದಾರೆ. ಓದಿನಲ್ಲಿ ಆಸಕ್ತಿ ಇಲ್ಲದೆ ಇದ್ದರೂ ವಸತಿ ಶಾಲೆಯಲ್ಲಿ ಒಳ್ಳೆಯ ಹೆಸರು ಪಡೆದಿದ್ದರ.ಮಕ್ಕಳು ನಾಪತ್ತೆಯಾಗುತ್ತಿದ್ದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ದಾಖಲಿಸಿಕೊಂಡ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು, ವಿದ್ಯಾರ್ಥಿಗಳ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಿದ್ದಾರೆ.ಅನುಮಾನಗೊಂಡು ಮಂಗಳೂರಿನಲ್ಲೂ ಹುಡುಕಾಟ ನಡೆಸಿದಾಗ ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ. ಪೊಲೀಸರು …
Read More »
BigTv News
March 17, 2025
Breaking News, ಮಂಗಳೂರು
ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ಮಂಗಳೂರಿನ ಮೇರಿಹಿಲ್‌ನಲ್ಲಿರುವ ಮಾತಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಈ ದುರಂತ ಸಂಭವಿಸಿದೆ.ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Read More »
BigTv News
March 14, 2025
Breaking News, Crime, ಮಂಗಳೂರು
2023ರಿಂದ ಅಕ್ಕಪಕ್ಕದ ಮನೆಯವರ ನಡುವೆ ತಕರಾರು ಇದ್ದು, ಇದೇ ವಿಚಾರಕ್ಕೆ ಮುರಳಿ ಪ್ರಸಾದ್ನನ್ನು ಕೊಲ್ಲಲು ಸತೀಶ್ ಕುಮಾರ್ ಸ್ಕೆಚ್ ಹಾಕಿದ್ದ. ಅದರಂತೆ ಇಂದು ಪ್ರಸಾದ್ ಬೈಕ್ನಲ್ಲಿ ಹೋಗುತ್ತಿರುವುದನ್ನು ನೋಡಿ ಸತೀಶ್ ಕುಮಾರ್ ಕಾರಿನಿಂದ ಗುದ್ದಲು ಪ್ರಯತ್ನಿಸಿದ್ದಾನೆ. ಆದ್ರೆ, ರಸ್ತಯಲ್ಲಿ ನಡೆದುಕೊಂಡು ಬರುತ್ತಿದ್ದ ಮಹಿಳೆಗೆ ಗುದ್ದಿದ್ದಾನೆ. ಈ ಸಂಬಂಧ ಕಾರು ಚಾಲಕ ಸತೀಶ್ ಕುಮಾರ್ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಕೇಸ್ ದಾಖಲಾಗಿದೆ. ಮಂಗಳೂರು ಪಶ್ಚಿಮ ಸಂಚಾರಿ ಠಾಣೆಯಲ್ಲೂ …
Read More »
BigTv News
March 10, 2025
Breaking News, Crime, ಮಂಗಳೂರು
ಇದು ಮಂಗಳೂರು ಜೈಲಿನ ಕರ್ಮಕಾಂಡದ ಕೇಸ್ . ಕೈದಿಗಳಿಗೆ ಕಳ್ಳ ಮಾರ್ಗದಲ್ಲಿ ಗಾಂಜಾ ಸಪ್ಲಯ್ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಜೈಲಿನ ಹೊರಗಿನಿಂದ ಗಾಂಜಾ ಪ್ಯಾಕೆಟ್ ಎಸೆದು ಎಸ್ಕೇಪ್ ಆದರೂ ಅಪರಾಧಿಗಳು. ಈ ಬಗ್ಗೆ ಮಾತನಾಡಿದ ಕಮಿಷನರ್ ಅನುಪಮ ಅಗರ್ವಾಲ್ ಹೇಳಿಕೆ ಬೈಕ್ ನಂಬರ್ ಪ್ಲೇಟ್ ಇರಲಿಲ್ಲ ಅಪರಾಧಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿದ್ದೇವೆ ಎಂದು ಹಾರಿಕೆ ಉತ್ತರ ನೀಡಿದ್ದಾರೆ . 15 ದಿನಗಳಾದರು ಗಾಂಜಾ ಗಿರಾಕಿಗಳ ಸುಳಿವಿಲ್ಲ. ಈ ನಡೆ …
Read More »
BigTv News
March 5, 2025
Crime, ಕರ್ನಾಟಕ, ಮಂಗಳೂರು
ಮಂಗಳೂರಿನ ಕಾರಾಗೃಹದಲ್ಲಿರುವ ಕೈದಿಗಳಿಗೆ ಫುಡ್ ಪಾಯಿಸನ್ ಇಂದ ಅಸ್ವಸ್ಥರಾಗಿದ್ದು ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಂದು ನಡೆದಿದೆ 40ಕ್ಕೆ ಹೆಚ್ಚು ಕೈದಿಗಳು ಫುಡ್ ಪಾಯಿಸನ್ ಕಾರಣದಿಂದಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಜೊತೆಗೆ ವಾಂತಿ ಭೇದಿ ಕೂಡ ಆಗಿದ್ದು ಕೆಲವು ಕೈದಿಗಳ ಆರೋಗ್ಯ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮಧ್ಯಾಹ್ನ ಊಟದ ಬಳಿಕ ಈ ಘಟನೆ ಸಂಭವಿಸಿದೆ.
Read More »
BigTv News
February 4, 2025
Breaking News, ಮಂಗಳೂರು
ಮಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವಾಗ ಮೊಗೇರರನ್ನು ನಾಲ್ಕನೇ ಗುಂಪಿನ ಬದಲು ಎರಡನೇ ಗುಂಪಿನಲ್ಲಿ ಸೇರಿಸಬೇಕು ಎಂದು ರಾಜ್ಯ ಮೊಗೇರರ ಸಂಘವು ಒತ್ತಾಯಿಸಿದೆ. ಇಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಸಂಘದ ಅಧ್ಯಕ್ಷ ನಂದರಾಜ್ ಸಂಕೇಶ್, ‘ಮೊಗೇರ ಜಾತಿಯು ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳಲ್ಲಿನ ಹೊಲೆಯ ಸಮುದಾಯದ ಉಪ ವಿಭಾಗ. ಮೊಗೇರರು ಅಸ್ಪೃಶ್ಯತೆಯ ಪಿಡುಗಿನಿಂದ ಬಳಲುತ್ತಿರುವುದು ಕುಲಶಾಸ್ತ್ರೀಯ ಅಧ್ಯಯನದಲ್ಲೂ ಸಾಬೀತಾಗಿದೆ. ವೃತ್ತಿಯಲ್ಲಿ ಮೊಲ ಬೇಟೆಗಾರರಾಗಿರುವ ಮೊಗೇರರು ಸಾಮಾಜಿಕ, …
Read More »
BigTv News
January 7, 2025
Breaking News, ಮಂಗಳೂರು
ಮಂಗಳೂರು : ಉಪರಾಷ್ಟ್ರಪತಿ ಜಗದೀಶ್ ಧನ್ ಕರ್ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಿದರು. ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಉಪ ರಾಷ್ಟ್ರ ಪತಿ ಧನಕರ್ ಅವರು ತನ್ನ ಪತ್ನಿಯನ್ನು ಹತ್ತಿರಕ್ಕೆ ಕರೆದು ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಪರಿಚಯಿಸಿ ಮುಂದಕ್ಕೆ ಧರ್ಮಸ್ಥಳಕ್ಕೆ ಹೋಗುವಾಗಲೂ ಚೌಟ ಅವರನ್ನು ತಮ್ಮ ಹೆಲಿಕಾಪ್ಟರ್ ನಲ್ಲಿ ಬರುವಂತೆ ಕೈ ಹಿಡಿದು …
Read More »
BigTv News
January 6, 2025
Breaking News, ಮಂಗಳೂರು
ಮಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಇಂದು ನಗರದಲ್ಲಿ ‘ಸಂವಿಧಾನ ಸಂರಕ್ಷಣಾ ಜಾಥಾ ನಡೆಯಿತು. ವೇಳೆ ಅಮಿತ್ ಶಾ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು ರಾಜೀನಾಮೆಗೆ ಒತ್ತಾಯಿಸಿದರು. ಬೆಳಗ್ಗೆ ನಗರದ ಅಂಬೇಡ್ಕರ್ ವೃತ್ತದಿಂದ (ಹಳೆ ಜ್ಯೋತಿ ಸರ್ಕಲ್) ಮಿನಿ ವಿಧಾನಸೌಧದ ವರೆಗೆ ‘ಸಂವಿಧಾನ ಸಂರಕ್ಷಣಾ …
Read More »
BigTv News
December 13, 2024
Breaking News, ಮಂಗಳೂರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳಿಕೆಯಾದ166 ಎಕ್ರೆ ಡಿ.ಸಿ. ಮನ್ನಾ (ಡಿಪ್ರಸ್ಡ್ ಕ್ಲಾಸ್) ಜಮೀನನ್ನು ಪ. ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ನೀಡುವಂತೆ ದಲಿತ ನಾಯಕರು ಆಗ್ರಹಿಸಿದ್ದು, ಈ ಬಗ್ಗೆ ಪಿಟಿಸಿಎಲ್ ಕಾಯ್ದೆಯಡಿ ನಿಯಮ ರೂಪಿಸಲು ಸರಕಾರಕ್ಕೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಗುರುವಾರ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ /ಪಂಗಡದ ಮುಖಂಡರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಸಂಸ ಮುಖಂಡ ದೇವದಾಸ್ ಎಂ. …
Read More »
BigTv News
October 24, 2024
Breaking News, ಮಂಗಳೂರು
ಮಂಗಳೂರು: ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್ಗಳನ್ನು ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ನಡೆದ ಕನೆಕ್ಟ್ 2024ನಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆವಿ, ಬೀಚ್‌ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದರು. ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ …
Read More »