Breaking News

ಮಂಗಳೂರು

ಮಹಿಳೆಯರಿಬ್ಬರನ್ನು ಉಪಾಯದಿಂದ ಗುಡ್ಡಕ್ಕೆ ಕರೆದುಕೊಂಡು ಹೋಗಿ ಕತ್ತು ಬಿಗಿದು ಹತ್ಯೆಗೆ ಯತ್ನ……

ಮಂಗಳೂರು (ದಕ್ಷಿಣ ಕನ್ನಡ): ವ್ಯಕ್ತಿಯೊಬ್ಬ ಮಹಿಳೆಯರಿಬ್ಬರನ್ನು ಉಪಾಯದಿಂದ ಗುಡ್ಡಕ್ಕೆ ಕರೆದುಕೊಂಡು ಹೋಗಿ ಕತ್ತು ಬಿಗಿದು ಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ನೇರೋಳ್ತಡ್ಕ ಸಮೀಪ ಮಂಗಳವಾರ ನಡೆದಿದೆ. ಈ ಸಂಬಂಧ ಸುಳ್ಯದ ಆರೋಪಿ ಸುರೇಶ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಸಂಪ್ಯ ಠಾಣೆ ಪೊಲೀಸರು ತಿಳಿಸಿದ್ದಾರೆ. ಬಡಗನ್ನೂರು ಗ್ರಾಮದ ನೇರೋಳ್ತಡ್ಕ ಮೂಲೆಗದ್ದೆ ಬಾಣಪದವಿನ ಶಿಕ್ಷಕ ದಿವಂಗತ ವಾಸು ನಾಯ್ಕ ಅವರ ಪತ್ನಿ ಸುರೇಖಾ (54) ಮತ್ತು ಗೋಳಿತ್ತೊಟ್ಟುವಿನ ಗಿರಿಜಾ …

Read More »

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ….

ಮಂಗಳೂರು(ದಕ್ಷಿಣಕನ್ನಡ):ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 298 ಮಂದಿಯ ಚಾಲನಾ ಪರವಾನಗಿ (ಡಿಎಲ್ )ರದ್ದು ಮಾಡುವಂತೆ ನಗರ ಪೊಲೀಸ್ ಕಮಿಷನರ್ ಸಾರಿಗೆ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ. ನಿರಂತರ ಸಂಚಾರ ನಿಯಮ ಉಲ್ಲಂಘನೆ, ಅಜಾಗರೂಕತೆ, ನಿರ್ಲಕ್ಷ್ಯದಿಂದ ಚಾಲನೆ ಆರೋಪದ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮಂಗಳೂರು ನಗರ ಪೊಲೀಸ್ ಇಲಾಖೆ ಮುಂದಾಗಿದೆ. ಸುಪ್ರೀಂ ಕೋರ್ಟ್​ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದಂತೆ ನಿತ್ಯ ಭಾರತೀಯ ದಂಡ ಸಂಹಿತೆ 1860 …

Read More »

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಲೈಂಗಿಕ ದೌರ್ಜನ್ಯ ಎಸಗಿದ ಉಪನ್ಯಾಸಕ….

ಮಂಗಳೂರು:ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಅಸ್ವಾಭಾವಿಕ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ ಅಪರಾಧಿ ಉಪನ್ಯಾಸಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಕುಳಾಯಿಯ ಪೃಥ್ವಿರಾಜ್ (33) ಶಿಕ್ಷೆಗೊಳಗಾದ ವ್ಯಕ್ತಿ. 2014ರ ಆ.1ರಿಂದ 2016ರ ಸೆ.2ರವರೆಗೆ ಪ್ರೌಢ ಶಾಲೆಯ ವಿದ್ಯಾರ್ಥಿಗೆ ಅಸ್ವಾಭಾವಿಕ ರೀತಿಯ ಲೈಂಗಿಕ ಕ್ರಿಯೆ ಮೂಲಕ …

Read More »

ಮಂಗಳೂರಿನ ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಗರ್ಭಿಣಿ ಮಹಿಳೆ ಸಾವು…

ಮಂಗಳೂರು:ಮಂಗಳೂರಿನ ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಗರ್ಭಿಣಿ ಮಹಿಳೆ ಸಾವಿಗೀಡಾಗಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆಗೆ ಕುಟುಂಬಸ್ಥರು ಮತ್ತು ವಿಶ್ವಕರ್ಮ ಸಮುದಾಯದ ಮುಖಂಡರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಮೂಡಬಿದಿರೆ ಮೂಲದ ಶಿಲ್ಪಾ ಆಚಾರ್ಯ ಮೃತಪಟ್ಟ ಗರ್ಭಿಣಿ. ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು. ಶಿಲ್ಪಾ ಅವರನ್ನು ಪರೀಕ್ಷೆ ನಡೆಸುತ್ತಿದ್ದ ವೈದ್ಯರು ಭಾನುವಾರ ರಜೆ ಇದ್ದಿದ್ದರಿಂದ ಬೇರೊಬ್ಬರು ಹೆರಿಗೆ ಮಾಡಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೀಗಾಗಿ ಮಹಿಳೆಗೆ ಬೇರೊಬ್ಬ …

Read More »

ಮುಳುಗುತ್ತಿದ್ದ ದೋಣಿಯಿಂದ ಐವರು ಮೀನುಗಾರ ರಕ್ಷಣೆ..

ಮಲ್ಪೆ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಿಂದ ಐವರು ಮೀನುಗಾರರನ್ನು ಹಾಗೂ ಲಕ್ಷಾಂತರ ಮೌಲ್ಯದ ಸ್ವತ್ತುಗಳನ್ನು ರಕ್ಷಿಸಿರುವ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ.ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಮಧ್ಯಾಹ್ನ ದ ಹೊತ್ತಿಗೆ ಸಮುದ್ರದ ಅಲೆಗಳ ಆರ್ಭಟಕ್ಕೆ ಒಡೆದು ನೀರು ತುಂಬಿ ದೋಣಿಯು ಮುಳುಗುವ ಸ್ಥಿತಿಗೆ ತಲುಪಿತ್ತು. ದೋಣಿಯು ಮುಳುಗುತ್ತಿರುವ ವಿಷಯ ತಿಳಿದು ತಕ್ಷಣ ಕಾರ್ಯಪ್ರವ್ರತ್ತರಾದ ಆಪತ್ಭಾಂಧವ ಈಶ್ವರ್ ಮಲ್ಪೆ ಅವರ ತಂಡ ದೋಣಿಯ ಮೂಲಕ ತೆರಳಿ ಐದು ಜನ ಮೀನುಗಾರರನ್ನು ರಕ್ಷಿಸಿದ್ದರು.ಮತ್ತೆ ಮತ್ತೊಂದು …

Read More »

ತುಳುವರ ಆಷಾಡ ಆಟಿ ಅಮವಾಸ್ಯೆ.

ಮಂಗಳೂರು: ಆಷಾಢ ಮಾಸವನ್ನು ತುಳುವರು ಆಟಿ ಎನ್ನುವರು. ಈ ಆಟಿ ತಿಂಗಳಲ್ಲಿ ಬರುವ ಅಮವಾಸ್ಯೆಯಂದು ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಆಟಿ ಕಷಾಯ ಸೇವನೆ ಮಾಡುವ ಸಂಪ್ರದಾಯವಿದೆ. ಆಟಿ ಅಮಾವಾಸ್ಯೆಯಂದು ಕುಡಿಯುವ ಆಟಿ ಕಷಾಯದ ಬಗ್ಗೆ ನಿಮಗೆ ಗೊತ್ತೇ? ತುಳುವರು ಆಹಾರದಲ್ಲಿಯೇ ಔಷಧವನ್ನು ಸೇವಿಸುತ್ತಾರೆ.‌ ಯಾವ ವಸ್ತುವಿನಲ್ಲಿ ಯಾವ ರೀತಿಯ ಔಷಧೀಯ ಗುಣವಿದೆ ಎನ್ನುವ ಸಂಗತಿ ಪೂರ್ವಜರಿಂದ ಬಳುವಳಿಯಾಗಿ ಬಂದಿದೆ.‌ ಮರ, ತೊಗಟೆ, ಹುಲ್ಲು, ಪಥ್ಯ ಹಾಗು …

Read More »

ದಕ್ಷಿನ ಕನ್ನಡದಲ್ಲಿ ಆಝಾನ್ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಧ್ಯೆ ಆರಂಭವಾದ ಆಝಾನ್‍ಗೆ ಮಾಜಿ ಸಚಿವ ಈಶ್ವರಪ್ಪ ಕೋಪಗೊಂಡ ಘಟನೆ ನಡೆದಿದೆ. ಈಶ್ವರಪ್ಪನವ್ರು ಭಾಷಣ ಮಾಡ್ತಿದ್ದಾಗ ಸ್ಥಳೀಯ ಮಸೀದಿಯಿಂದ ಆಝಾನ್ ಕೇಳಿಬಂತು. ಇದಕ್ಕೆ ಸಿಟ್ಟಾದ ಈಶರಪ್ಪ ನನಗೆ ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಅಂತ ಹೇಳಿದ್ರು. ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ …

Read More »

ಲಾಡ್ಜ್  ನಗ್ನ ಸ್ಥಿತಿಯಲ್ಲಿ ಮೃತದೇಹ   ಪತ್ತೆ

ಮಂಗಳೂರು: ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ. ನಗರದಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದ ಇವರು ಸೋಮವಾರ ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ರೂಮ್ ಪಡೆದಿದ್ದರು. ಅವರ ರೂಮ್ ನಿಂದ ಮೊಬೈಲ್ ಪೋನ್ ನಿರಂತರವಾಗಿ ರಿಂಗ್ ಆಗುತ್ತಿರುವುದನ್ನು ಗಮನಿಸಿದ ಲಾಡ್ಜ್ …

Read More »

ಕುಕ್ಕರ್ ಬಾಂಬ್ ಸ್ಪೋಟ : ಶಾರೀಖ್ ಆರೋಗ್ಯ ಸ್ಥಿತಿ ಸುಧಾರಿಸದ ಹಿನ್ನೆಲೆ ತನಿಖೆ ಹಿನ್ನಡೆ

ಮಂಗಳೂರು : ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದ ಪ್ರಮುಖ ಆರೋಪಿ ಶಾರೀಖ್ ಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾರೀಖ್ ಆರೋಗ್ಯ ಸ್ಥಿತಿ ಸುಧಾರಿಸದ ಹಿನ್ನೆಲೆ ತನಿಖೆಗೆ ಭಾರೀ ಹಿನ್ನಡೆಯಾಗಿದೆ. ಕುಕ್ಕರ್ ಬಾಂಬ್ ಸ್ಪೋಟದಿಂದ ಶಾರೀಖ್ ಮೈಗೆ ತೀವ್ರತರಹದ ಸುಟ್ಟ ಗಾಯಗಳಾಗಿದ್ದು, ವೈದ್ಯರಿಂದ ನಿರಂತರ ಚಿಕಿತ್ಸೆ ನಡೆಯುತ್ತಿದೆ. ಶಾರೀಖ್ ಆರೋಗ್ಯ ಸ್ಥಿತಿ ಸುಧಾರಿಸದ ಬಳಿಕ ಆತನನ್ನು ಬೆಂಗಳೂರಿನ ಎನ್ ಐ ಎ ಕಚೇರಿಗೆ ಶಿಫ್ಟ್ ಮಾಡಲು ಸಿದ್ದತೆ ನಡೆಸಲಾಗಿದೆ ಎಂದು …

Read More »

ಬಿಸಿಸಿಐ ಯುಎಇ ಘಟಕದ ಅಧ್ಯಕ್ಷ ನಿಧನ

ಮಂಗಳೂರು: ಮೂಲತಃ ಬಿ.ಸಿ.ರೋಡ್ ಸಮೀಪದ ಶಾಂತಿ ಅಂಗಡಿಯ ಪ್ರಸಕ್ತ ದುಬೈಯಲ್ಲಿ ನೆಲೆಸಿದ್ದ ಎಸ್.ಎಂ.ಬಶೀರ್ (50) ಇಂದು ಮಧ್ಯಾಹ್ನ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬರು ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.ಕಳೆದೊಂದು ವರ್ಷದಿಂದ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಕೆಲವು ದಿನಗಳ ಹಿಂದೆ ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಕುವೈತ್‌ನಲ್ಲಿ ಉದ್ಯೋಗಿಯಾಗಿದ್ದ ಅವರು ಬಳಿಕ ದುಬೈಯ ಕಂಪೆನಿಯೊಂದರಲ್ಲಿ ಉನ್ನತ …

Read More »