BigTv News
May 16, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಕ್ರಿಕೆಟ್ ಆಡುತ್ತಿರುವಾಗ ಕ್ಯಾಚ್ ಹಿಡಿಯಲು ಹೋದ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಉರ್ವ ಮೈದಾನದಲ್ಲಿ ನಿನ್ನೆ ಕ್ರಿಕೆಟ್ ಪಂದ್ಯ ನಡೆದ ವೇಳೆ ಘಟನೆ ಸಂಭವಿಸಿದೆ. ಉರ್ವದ ಕ್ರಿಕೆಟ್ ಆಟಗಾರ ಸಂದೀಪ್ ಗೆ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂದೀಪ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ನೂತನ್ ಫ್ರೆಂಡ್ಸ್ ವತಿಯಿಂದ ನಿನ್ನೆ ಉರ್ವ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.
Read More »
admin
May 8, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
Read More »
admin
April 21, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಸೈಕಲ್ ನಲ್ಲಿ ಆಡುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ನಗರದ ಬಜಾಲ್ ನಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತ ಬಾಲಕನನ್ನು ಬಜಾಲ್ ನಿವಾಸಿ ಹಿದಾಯತುಲ್ಲ ಎಂಬವರ ಪುತ್ರ ಮೊಹಮ್ಮದ್ ಜೀಶನ್ (6) ಎಂದು ಗುರುತಿಸಲಾಗಿದೆ. ಮೃತ ಬಾಲಕ ಬಜಾಲ್ ಕಟ್ಟೆಪುಣಿ ಕೋರ್ದಬ್ಬು ದೈವಸ್ಥಾನದ ಹಿಂಭಾಗದ ರಸ್ತೆಯ ಕೆರೆಯ ಬಳಿ ಸೈಕಲ್‌ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬಾಲಕ ಆಸ್ಪತ್ರೆಗೆ …
Read More »
admin
April 19, 2022
Breaking News, ಮಂಗಳೂರು
ಮಂಗಳೂರು: ಡಿಕೆ ಶಿವಕುಮಾರ್ಗೆ ನಿಂದಿಸಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದ ಜಡ್ಜ್ ಸೋಮಶೇಖರ್ ಅವರು ಮಹತ್ವದ ತೀರ್ಪು ನೀಡಿದ್ದಾರೆ. ನಾಲ್ಕು ಅಪರಾಧಗಳಲ್ಲಿಯೂ 2 ವರ್ಷ ಜೈಲು ಶಿಕ್ಷೆಯಾಗಿದ್ದು. ಒಂದು ಪ್ರಕರಣದಲ್ಲಿ 5 ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ
Read More »
admin
April 13, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು:ಬಿಜೆಪಿ ಸರಕಾರವನ್ನು ಕಿತ್ತೆಸೆಯರಿ ಎಂದು ಕಾಂಗ್ರೆಸ್ ಪಕ್ಷದ ನಾಯಕರಾದ ಸಿದ್ದ ರಾಮಯ್ಯನವರು ಹೇಳುತ್ತಿದ್ದಾರೆ. ಹಾಗೆ ಕಿತ್ತೂಸೆಯಲು ಇದೇನು ಕೊತ್ತಂಬರಿ ಸೊಪ್ಪಾ? ಎಂದು ಸಾರಿಗೆ ಸಚಿವ ಹಾಗೂ ಬಿಜೆಪಿ ರಾಜ್ಯ ಕೋರ್ ಕಮಿಟಿ ಸದಸ್ಯ ಶ್ರೀರಾಮುಲು ಅವರು ಸಿದ್ದರಾಮಯ್ಯನವರಿಗೆ ಎದರೇಟು ನೀಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಹಾಗೂ ಜಿಲ್ಲಾ ಪ್ರಮುಖರ ಸಭೆಯ ಸಂದರ್ಭದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಇತ್ತೀಚೆಗೆ ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ.ಅವರ …
Read More »
admin
April 6, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಎದೆನೋವಿಗೆ ಒಳಗಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಇಂದು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಿನ್ನೆ ಸಂಜೆಯ ಸುಮಾರಿಗೆ ಎದೆನೋವು ಉಂಟಾಗಿದೆ.ಹೀಗಾಗಿ ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಜ್ಞ ವೈದ್ಯರಿಂದ ಪ್ರಭಾಕರ್ ಭಟ್ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರಿಂದ ಮಾಹಿತಿ ಲಭಿಸಿಿಿದೆ
Read More »
admin
March 31, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕೊಡುಗೆ ನೀಡಿ ಬಲಿದಾನ ಮಾಡಿರುವ ಚರಿತ್ರೆ ಕಾಂಗ್ರೆಸ್ ಪಕ್ಷಕ್ಕೆ ಇದೆ. ‘ಕಾಂಗ್ರೆಸ್ ಮುಕ್ತ ಭಾರತ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ’ ಎಂದು ಕಾಂಗ್ರೆಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿಶ್ವಾಸ ವ್ಯಕ್ತಪಡಿಸಿದರು. ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮೇಲೆ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದ ಅವರು, …
Read More »
admin
March 24, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಸತತವಾಗಿ ಸುಮಾರು ಒಂದು ವರ್ಷ ಕಾಲ ಅತ್ಯಾಚಾರ ಎಸಗಿದವನ ಮೇಲಿನ ಆರೋಪ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಲಾಗಿದೆ. ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಬೊಳ್ಳರ ಮಜಲು ಮನೆಯ ಪ್ರಸಾದ್ (31) ಶಿಕ್ಷೆಗೊಳಗಾದ ಆರೋಪಿ.
Read More »
admin
March 15, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು : ಹಿಜಾಬ್ ಕುರಿತಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪು ಅತ್ಯಂತ ದುರದೃಷ್ಟಕರ ಮತ್ತು ಮಹಿಳೆಯರ ಶಿಕ್ಷಣದ ಮೇಲೆ ದೂರಗಾಮಿ ಪರಿಣಾಮ ಬೀರಲಿದೆ ಎಂದು ನ್ಯಾಷನಲ್ ವಿಮೆನ್ಸ್ ಫ್ರಂಟ್ ಕರ್ನಾಟಕ ಇದರ ರಾಜ್ಯಾಧ್ಯಕ್ಷೆ ಫರ್ಝಾನಾ ಮುಹಮ್ಮದ್ ತಿಳಿಸಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘಪರಿವಾರ ಪ್ರೇರಿತ ಸಮಸ್ಯೆಯನ್ನು ಸಾಂವಿಧಾನಿಕ ನೆಲೆಗಟ್ಟಿನಲ್ಲಿ ಬಗೆಹರಿಸಬೇಕಿದ್ದ ಸರಕಾರವು ದ್ವೇಷ ಭಾವನೆಯಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವೆಂದು ಆದೇಶ ಹೊರಡಿಸಿತ್ತು. ವಿದ್ಯಾರ್ಥಿನಿಯರ ಶೈಕ್ಷಣಿಕ ಹಿತವನ್ನು ಕಡೆಗಣಿಸಿ …
Read More »
admin
March 8, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ನಗರದ ಕಾರ್ ಸ್ಟ್ರೀಟ್ನಲ್ಲಿರುವ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಸಂಘರ್ಷಕ್ಕೆ ಸಂಬಂಧಿಸಿದಂತೆ 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ವಿದ್ಯಾರ್ಥಿನಿ ಹಿಬಾ ಶೇಖ್ ನೀಡಿದ ದೂರಿನ ಅನ್ವಯ ಸಾಯಿ ಸಂದೇಶ್, ನಿತೇಶ್ ಶೆಟ್ಟಿ, ಸಮಂತ್ ಆಳ್ವ, ಸನತ್ ಶೆಟ್ಟಿ ಸೇರಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
Read More »